Thursday, September 29, 2022

ಸ್ಥಳೀಯರೇ ಪ್ರವೀಣ್‌ನನ್ನು ಹತ್ಯೆಗೈದಿದ್ದು, ಆರೋಪಿಗಳಿಗೆ ಎಸ್‌ಡಿಪಿಐ ಲಿಂಕ್‌ ಎಂದ ಎಡಿಜಿಪಿ

ಮಂಗಳೂರು: ಪ್ರವೀಣ್‌ ನೆಟ್ಟಾರು ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಪ್ರಮುಖ ಆರೋಪಿಗಳನ್ನು ಬಂಧಿಸಲಾಗಿದೆ. ಇವರೆಲ್ಲರೂ ಸ್ಥಳೀಯರೇ ಆಗಿದ್ದಾರೆ ಎಂದು ಎಡಿಜಿಪಿ ಅಲೋಕ್‌ ಕುಮಾರ್‌ ತಿಳಿಸಿದ್ದಾರೆ.


ಈ ಬಗ್ಗೆ ಮಂಗಳೂರಿನ ಎಸ್‌ಪಿ ಕಚೇರಿಯಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಇಂದು ಬೆಳಗ್ಗೆ ಖಚಿತ ಮಾಹಿತಿ ಮೇರೆಗೆ ಮಂಗಳೂರು ಹೊರವಲಯದ ತಲಪಾಡಿ ಬಳಿ ಮೂವರನ್ನು ಬಂಧಿಸಿದ್ದೇವೆ.

ಬಂಧಿತರನ್ನು ಶಿಯಾಬುದ್ದೀನ್‌(33), ರಿಯಾಜ್‌ ಅಂಕತ್ತಡ್ಕ (27), ಬಶೀರ್‌ ಏಳಿಮಲೆ (28) ಎಂದು ಗುರುತಿಸಲಾಗಿದೆ. ಇವರೆಲ್ಲರೂ ಸ್ಥಳೀಯರೇ ಆಗಿದ್ದು, ಜು.28 ರಂದು ಬೆಳ್ಳಾರೆಯಲ್ಲಿ ಕಪ್ಪು ಬಣ್ಣದ ಸ್ಪ್ಲೆಂಡರ್‌ ಬೈಕ್‌ನಲ್ಲಿ ಬಂದ ಆರೋಪಿಗಳು ಅಂದು ಕಾಸರಗೋಡಿನ ಬೇಕಲಫೋರ್ಟ್‌ಗೆ ತೆರಳಿದ್ದರು.

ಕೃತ್ಯದಲ್ಲಿ 5 ಬೈಕ್‌ ಹಾಗೂ 1 ಆಲ್ಟೋ ಕಾರು ಬಳಸಿದ್ದರು. ಆರೋಪಿಗಳಿಗೆ ಎಸ್‌ಡಿಪಿಐ ಲಿಂಕ್‌ ಇದೆ. ಇದೀಗ ಈ ಪ್ರಕರಣದಲ್ಲಿ ಒಟ್ಟು 10 ಮಂದಿಯ ಬಂಧನವಾಗಿದೆ. ಈ ಹಿಂದೆ 7 ಜನರನ್ನು ಬಂಧಿಸಿದ್ದರು. ಅವರು ಈ ಕೃತ್ಯಕ್ಕೆ ಪರೋಕ್ಷ ಸಹಾಯ ನೀಡಿದ್ದರು.

ಇನ್ನು ಆರೋಪಿಗಳಿಗೆ ಆಶ್ರಯ ಸೇರಿ ಹಲವು ರೀತಿಯಲ್ಲಿ ಸಹಕಾರ ಮಾಡಿದವರನ್ನು ಬಂಧಿಸುತ್ತೇವೆ ಎಂದು ತಿಳಿಸಿದರು.

LEAVE A REPLY

Please enter your comment!
Please enter your name here

Hot Topics

ಸುಳ್ಯ: ಮಾಡರ್ನ್‌ಯುಗಕ್ಕೆ ಹೊಂದಿಕೊಂಡ ಕಾಗೆ ತನ್ನ ಗೂಡು ಹೆಣೆದಿದ್ದು ಕಬ್ಬಿಣದ ತಂತಿಯಲ್ಲಿ..!

ಸುಳ್ಯ: ಕಾಗೆಯೊಂದು ಕಬ್ಬಿಣದ ತಂತಿಗಳನ್ನೇ ಬಳಸಿ ಗೂಡು ಹೆಣೆದಿರುವ ಅದ್ಭುತ ಘಟನೆ ಸುಳ್ಯದ ಚೊಕ್ಕಾಡಿಯಲ್ಲಿ ನಡೆದಿದೆ.ಚೊಕ್ಕಾಡಿಯ ಭಗವಾನ್ ಶ್ರೀ ಸತ್ಯಸಾಯಿ ವಿದ್ಯಾಕೇಂದ್ರದ ಆವರಣದಲ್ಲಿ ಸ್ವಚ್ಚತೆ ಕಾರ್ಯ ಕೈಗೊಂಡ ವೇಳೆ ಮರವೊಂದರ ಕೊಂಬೆಯಲ್ಲಿ ಈ...

ಉಡುಪಿ: ಗಿರಿಜಾ ಹೆಲ್ತ್‌ಕೇರ್ & ಸರ್ಜಿಕಲ್ಸ್‌ನಲ್ಲಿ ‘ಫಾರ್ಮಾಸಿಸ್ಟ್‌ ಡೇ’ ಆಚರಣೆ

ಉಡುಪಿ: ಗಿರಿಜಾ ಹೆಲ್ತ್‌ಕೇರ್ ಆ್ಯಂಡ್ ಸರ್ಜಿಕಲ್ಸ್‌ನಲ್ಲಿ ಗಿರಿಜಾ ಗ್ರೂಪ್ ಆಫ್ ಕನ್ಸರ್ನ್ಸ್‌ ವತಿಯಿಂದ ಫಾರ್ಮಾಸಿಸ್ಟ್‌ ದಿನವನ್ನು ಉಡುಪಿಯಲ್ಲಿ ಆಚರಿಸಲಾಯಿತು.ಉಡುಪಿಯ ಸೀನಿಯರ್ ಸಿಟಿ ಲೀಗನ್ ಸಹಕಾರದೊಂದಿಗೆ ಉಡುಪಿ ಭಾಗದ ಕೆಲ ಹಿರಿಯ ಫಾರ್ಮಸಿಸ್ಟ್ ಗಳನ್ನು...

ಉಡುಪಿ: ಮೊಬೈಲ್‌ ಶಾಪ್‌ನಲ್ಲಿ 1 ಲಕ್ಷ ರೂ ಮೌಲ್ಯದ ಸೊತ್ತು ಕದ್ದ ಕಳ್ಳ-ಪ್ರಕರಣ ದಾಖಲು

ಉಡುಪಿ: ಮೊಬೈಲ್ ಅಂಗಡಿಗೆ ರಾತ್ರಿ ವೇಳೆ ನುಗ್ಗಿದ ಕಳ್ಳನೊಬ್ಬ ಮೊಬೈಲ್ ಮತ್ತಿತರ ವಸ್ತುಗಳನ್ನು ಕಳವುಗೈದ ಘಟನೆ ಉಡುಪಿಯ ಮಲ್ಪೆಯ ಬಸ್ ನಿಲ್ದಾಣ ಸಮೀಪದ ಅಂಗಡಿಯಲ್ಲಿ ನಡೆದಿದೆ.ಇತ್ತೀಚಿನ ದಿನಗಳಲ್ಲಿ ಉಡುಪಿಯಲ್ಲಿ ಕಳ್ಳಕಾಕರ ಹಾವಳಿ ಮತ್ತೆ...