Thursday, September 29, 2022

ಪ್ರವೀಣ್ ಹತ್ಯೆ ಖಂಡಿಸಿದ ಸಿಎಂ ಬೊಮ್ಮಾಯಿ, ಸಿದ್ದರಾಮಯ್ಯ, ಎಚ್‌ಡಿಕೆ

ಮಂಗಳೂರು: ಬಿಜೆಪಿ ಯುವಮೋರ್ಚಾ ಮುಖಂಡ ಪ್ರವೀಣ್ ನೆಟ್ಟಾರ್ ಹತ್ಯೆಯನ್ನು ಸಿಎಂ ಬಸವರಾಜ ಬೊಮ್ಮಾಯಿ, ವಿರೋಧ ಪಕ್ಷದ ನಾಯಕ ಮಾಜಿ ಸಿಎಂ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್‌, ಹೆಚ್‌.ಡಿ ಕುಮಾರಸ್ವಾಮಿ ಸೇರಿ ಹಲವು ನಾಯಕರು ಖಂಡಿಸಿದ್ದು, ಆರೋಪಿಗಳನ್ನು ಬಂಧಿಸಿ ಕಠಿಣ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿದರು.

ಸಿಎಂ ಬಸವರಾಜ ಬೊಮ್ಮಾಯಿ ಟ್ವೀಟ್‌ ಮಾಡಿ, ದಕ್ಷಿಣ ಕನ್ನಡ ಜಿಲ್ಲೆ ಸುಳ್ಯದ ನಮ್ಮ ಪಕ್ಷದ ಕಾರ್ಯಕರ್ತ ಪ್ರವೀಣ್ ನೆಟ್ಟಾರು ಅವರ ಬರ್ಬರ ಹತ್ಯೆ ಖಂಡನೀಯ. ಇಂಥ ಹೇಯಕೃತ್ಯ ಎಸಗಿರುವ ದುಷ್ಕರ್ಮಿಗಳನ್ನು ಶೀಘ್ರವಾಗಿ ಬಂಧಿಸಿ ಕಾನೂನಿನ ಅಡಿಯಲ್ಲಿ ಶಿಕ್ಷಿಸಲಾಗುವುದು. ಪ್ರವೀಣ ಆತ್ಮಕ್ಕೆ ಶಾಂತಿ ಸಿಗಲಿ, ಈ ನೋವನ್ನು ಭರಿಸುವ ಶಕ್ತಿಯನ್ನು ದೇವರು ಅವರ ಕುಟುಂಬಕ್ಕೆ ಕರುಣಿಸಲಿ. ಓಂ ಶಾಂತಿಃ ಎಂದು ಟ್ವೀಟ್‌ ಮಾಡಿದ್ದಾರೆ.
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಡೆದಿರುವ ಬಜರಂಗದಳದ ನಾಯಕ ಪ್ರವೀಣ್ ನೆಟ್ಟಾರ್ ಹತ್ಯೆ ಖಂಡನೀಯ. ಪೊಲೀಸರು ತಕ್ಷಣ ಕೊಲೆಗಡುಕರನ್ನು ಬಂಧಿಸಿ ಊಹಾಪೋಹಗಳಿಂದ ಶಾಂತಿ-ಸುವ್ಯವಸ್ಥೆ ಕದಡುವುದನ್ನು ತಪ್ಪಿಸಬೇಕು ಎಂದು ಸಿದ್ದರಾಮಯ್ಯ ಟ್ವೀಟ್‌ ಮಾಡಿದ್ದಾರೆ.
ಕೆಪಿಸಿಸಿ ಅಧ್ಯಕ್ಷ ಟ್ವೀಟ್‌ ಮಾಡಿ, ದಕ್ಷಿಣ ಕನ್ನಡ ಜಿಲ್ಲೆಯ, ಸುಳ್ಯ ತಾಲ್ಲೂಕಿನ ಬಿಜೆಪಿ ಯುವಮೋರ್ಚಾ ಮುಖಂಡ ಪ್ರವೀಣ್‌ ನೆಟ್ಟಾರು ಅವರು ಭೀಕರವಾಗಿ ಹತ್ಯೆಗೀಡಾಗಿರುವುದು ಬೇಸರದ ಸಂಗತಿ. ಅವರ ಕುಟುಂಬ ಹಾಗೂ ಸ್ನೇಹಿತ ವರ್ಗಕ್ಕೆ ಸಂತಾಪಗಳು. ಈ ಪ್ರಕರಣದಲ್ಲಿ ಯಾರೇ ಭಾಗಿಯಾಗಿದ್ದರೂ ಪೊಲೀಸರು ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳಬೇಕು ಎಂದು ಮನವಿ ಮಾಡುತ್ತೇನೆ ಎಂದಿದ್ದಾರೆ.
ಬಿಜೆಪಿ ರಾಜ್ಯಾಧ್ಯಕ್ಷ ನಳಿನ್‌ ಕುಮಾರ್‌ ಕಟೀಲು ಟ್ವೀಟ್‌ ಮಾಡಿ, ನಮ್ಮ ಯುವನಾಯಕ ಪ್ರವೀಣ್ ನೆಟ್ಟಾರು ಅವರನ್ನು ದುಷ್ಕರ್ಮಿಗಳು ಹತ್ಯೆ ಮಾಡಿರುವ ಸುದ್ದಿ ಮನಸ್ಸಿಗೆ ಆಘಾತ ನೀಡಿದೆ. ಮೃತರ ಆತ್ಮಕ್ಕೆ ಸದ್ಗತಿ ಹಾಗೂ ಅವರ ಕುಟುಂಬಕ್ಕೆ, ಬಂಧು, ಮಿತ್ರರಿಗೆ, ಪಕ್ಷದ ಕಾರ್ಯಕರ್ತರಿಗೆ ದು:ಖ ಭರಿಸುವ ಶಕ್ತಿ ಭಗವಂತ ನೀಡಲಿ ಎಂದು ಪ್ರಾರ್ಥನೆ ಎಂದಿದ್ದಾರೆ.

ಮಾಜಿ ಸಿಎಂ ಕುಮಾರಸ್ವಾಮಿ ಈ ಬಗ್ಗೆ ಸರಣಿ ಟ್ವೀಟ್‌ ಮಾಡಿ, ರಾಜ್ಯದಲ್ಲಿ ಯುವಕರ ಕೊಲೆಗಳ ಸರಣಿಯೇ ಮುಂದುವರಿದಿದ್ದು, ಇನ್ನೊಂದು ಜೀವ ಹೋಗಿದೆ. ಈ ಹತ್ಯಾಕಾಂಡಕ್ಕೆ ಕೊನೆಯೇ ಇಲ್ಲವೇ? ಕೊಲೆ ಅದ ಮೇಲೆ ನಡೆಯುವ ಹೇಳಿಕೆಗಳ ಭರಾಟೆ, ಕೂಗಾಟದಿಂದ ಪ್ರಯೋಜನ ಏನು? ಶಿವಮೊಗ್ಗದಲ್ಲಿ ಹರ್ಷ ಕೊಲೆ ಅದ ಮೇಲೆ ಸರಕಾರ ಮೈಮರೆತಿದ್ದು ಯಾಕೆ?

ಅಂಕೆಯೇ ಇಲ್ಲದ ಹಂತಕರ ಆಟಕ್ಕೆ ಇತಿಶ್ರೀ ಹಾಡಿ, ಹೆಡೆಮುರಿ ಕಟ್ಟಬೇಕು. ಅದು ಬಿಟ್ಟು ಅಬ್ಬರದ ಹೇಳಿಕೆಗಳಿಂದ ಉಪಯೋಗವೇನು? ಪ್ರತಿ ಕೊಲೆಗೂ ಕೋಮು ಬಣ್ಣ ಹಚ್ಚುವ ನಾಯಕರ ರಾಜಕೀಯ ತಲೆಯಲ್ಲಿ ಭಯಂಕರ ದುರುದ್ದೇಶವೇ ಅಡಗಿದೆ.

ಈ ಮೊದಲು ಕೊಲೆಯಾಗಿದ್ದ ಮಸೂದ್ ಕೂಡ ಬಡವ, ಈಗ ಕೊಲೆಯಾದ ಪ್ರವೀಣ್ ನೆಟ್ಟಾರು ಕೂಡ ಬಡ ಕುಟುಂಬದವರೇ. ಶ್ರಮಜೀವಿಗಳ ಕುಟುಂಬದ ಮಕ್ಕಳೇ ಸಾವಿಗೆ ತುತ್ತಾಗುತ್ತಿದ್ದಾರೆ! ರಾಜಕಾರಣಿಗಳು, ಸಂಘಟನೆಗಳ ಮುಖಂಡರ ಮಕ್ಕಳು ಇಂಥ ಗಲಾಟೆಗಳಲ್ಲಿ ಕಾಣೋದೇ ಇಲ್ಲ!

LEAVE A REPLY

Please enter your comment!
Please enter your name here

Hot Topics

ಉಡುಪಿ: ಗಿರಿಜಾ ಹೆಲ್ತ್‌ಕೇರ್ & ಸರ್ಜಿಕಲ್ಸ್‌ನಲ್ಲಿ ‘ಫಾರ್ಮಾಸಿಸ್ಟ್‌ ಡೇ’ ಆಚರಣೆ

ಉಡುಪಿ: ಗಿರಿಜಾ ಹೆಲ್ತ್‌ಕೇರ್ ಆ್ಯಂಡ್ ಸರ್ಜಿಕಲ್ಸ್‌ನಲ್ಲಿ ಗಿರಿಜಾ ಗ್ರೂಪ್ ಆಫ್ ಕನ್ಸರ್ನ್ಸ್‌ ವತಿಯಿಂದ ಫಾರ್ಮಾಸಿಸ್ಟ್‌ ದಿನವನ್ನು ಉಡುಪಿಯಲ್ಲಿ ಆಚರಿಸಲಾಯಿತು.ಉಡುಪಿಯ ಸೀನಿಯರ್ ಸಿಟಿ ಲೀಗನ್ ಸಹಕಾರದೊಂದಿಗೆ ಉಡುಪಿ ಭಾಗದ ಕೆಲ ಹಿರಿಯ ಫಾರ್ಮಸಿಸ್ಟ್ ಗಳನ್ನು...

‘ಪುರಾಣ ಜ್ಞಾನ ನೀಡುವ ಅದ್ಭುತವಾದ ಕಲೆ ಯಕ್ಷಗಾನ’

ಮಂಗಳೂರು: ಶ್ರೀ ವಾಗೀಶ್ವರಿ ಯಕ್ಷಗಾನ ಕಲಾವರ್ಧಕ ಸಂಘದ ಶತಮಾನೋತ್ಸವದ 29 ನೆಯ ಸರಣಿ ಕಾರ್ಯಕ್ರಮದಲ್ಲಿ ಲೆಕ್ಕ ಪರಿಶೋಧಕ CA ಗಿರಿಧರ ಕಾಮತ್ ಯಕ್ಷಗಾನ ಕಲೆಯು ಪುರಾಣ ಜ್ಞಾನ ನೀಡುವಷ್ಟು ಬೇರೆ ಯಾವ ಮಾಧ್ಯಮವೂ...

ಉಡುಪಿ: ರಸ್ತೆ ಅವ್ಯವಸ್ಥೆ-ಕೋಣಗಳ ಜೊತೆ ಕಾಂಗ್ರೆಸ್ ಕಾರ್ಯಕರ್ತರ ವಿನೂತನ ಪ್ರತಿಭಟನೆ

ಉಡುಪಿ: ಮಲ್ಪೆಗೆ ಹೋಗುವ ರಾಷ್ಟ್ರೀಯ ಹೆದ್ದಾರಿ ಸಂಪೂರ್ಣ ಹದಗೆಟ್ಟಿದ್ದು ಪ್ರವಾಸಿಗರ ಸಂಚಾರಕ್ಕೆ ತೊಡಕು ಉಂಟಾಗುತ್ತಿದೆ. ಸದ್ಯ ಪ್ರವಾಸಿಗರ ಸಂಖ್ಯೆ ಹೆಚ್ಚಳದಿಂದ ದಿನನಿತ್ಯ ಟ್ರಾಫಿಕ್ ಜಾಮ್ ಆಗುತ್ತಿದೆ. ಪ್ರವಾಸಿಗರು ಹಾಗೂ ಸ್ಥಳೀಯರು ಅನುಭವಿಸುತ್ತಿರುವ ಕಷ್ಟವನ್ನು...