ಸುಳ್ಯ: ಪ್ರವೀಣ್ ನೆಟ್ಟಾರು ಹತ್ಯೆಗೆ ಸಂಬಂಧಿಸಿ ಬಂಧಿತರಾದ ಮೂವರು ಮುಖ್ಯ ಆರೋಪಿಗಳನ್ನು ಸುಳ್ಯ ನ್ಯಾಯಾಲಯ ಆರು ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ಒಪ್ಪಿಸಿದೆ.
ಬಂಧಿತ ಆರೋಪಿಗಳಾದ ಸುಳ್ಯದ ಶಿಹಾಬುದ್ದೀನ್ (33), ರಿಯಾಝ್ ಅಂಕತ್ತಡ್ಕ (27), ಬಶೀರ್ ಎಲಿಮಲೆ (28) ಅವರನ್ನು ಸುಳ್ಯ ಸರ್ಕಾರಿ ಆಸ್ಪತ್ರೆಯಲ್ಲಿ ವೈದ್ಯಕೀಯ ಪರೀಕ್ಷೆಗೆ ಒಳಪಡಿಸಿದ ಬಳಿಕ ಸುಳ್ಯ ನ್ಯಾಯಾಲಯಕ್ಕೆ ಹಾಜರುಪಡಿಸಲಾಯಿತು.
ತನಿಖಾಧಿಕಾರಿಗಳು ಸಲ್ಲಿಸಿದ ಅರ್ಜಿಯಂತೆ ಆಗಸ್ಟ್ 16 ರವರೆಗೆ ಆರು ದಿನಗಳ ಕಾಲ ಆರೋಪಿಗಳನ್ನು ಪೊಲೀಸ್ ಕಸ್ಟಡಿಗೆ ನೀಡಿ ನ್ಯಾಯಧೀಶರು ಆದೇಶ ಹೊರಡಿಸಿದರು.