Thursday, September 29, 2022

ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣ :ಬಂಧಿತ ಆರೋಪಿಗಳಿಬ್ಬರಿಗೆ 14 ದಿನಗಳ ನ್ಯಾಯಾಂಗ ಬಂಧನ

ಪುತ್ತೂರು: ಬೆಳ್ಳಾರೆಯಲ್ಲಿ ನಡೆದ ಬಿಜೆಪಿ ಯುವಮೋರ್ಚಾದ ಜಿಲ್ಲಾ ಕಾರ್ಯಕಾರಿಣಿ ಸದಸ್ಯ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತ ಆರೋಪಿಗಳಿಬ್ಬರಿಗೆ ಪುತ್ತೂರು ನ್ಯಾಯಾಲಯ ಅ.11 ರ ತನಕ 14 ದಿನಗಳ ಕಾಲ ನ್ಯಾಯಾಂಗ ಬಂಧನ ವಿಧಿಸಿದೆ.


ಕಡಬ ತಾಲೂಕಿನ ಸವಣೂರಿನಲ್ಲಿ ಫಾಸ್ಟ್ಫುಡ್ ಅಂಗಡಿ ವ್ಯವಹಾರ ನಡೆಸುತ್ತಿರುವ ಮಹಮ್ಮದ್ ಝಾಕೀರ್ ಮತ್ತು ಬೆಳ್ಳಾರೆಯವನಾಗಿದು,ಸುಳ್ಯ ತಾಲೂಕಿನ ಗುತ್ತಿಗಾರಿನ ಅಡಿಕೆ ಖರೀದಿ ಅಂಗಡಿಯೊಂದರಲ್ಲಿ ಕೆಲಸಕ್ಕಿರುವ ಶಫೀಕ್ ನ್ಯಾಯಾಂಗ ಬಂಧನಕ್ಕೊಳಗಾದವರು.

ಆರೋಪಿಗಳಾದ ಝಾಕೀರ್ ಮತ್ತು ಶಫೀಕ್‌ನನ್ನು ಬೆಳ್ಳಾರೆ ಠಾಣೆಯ ಪೊಲೀಸರು ಗುರುವಾರ ಸಂಜೆ ಪುತ್ತೂರಿನ ಪ್ರಧಾನ ಹಿರಿಯ ವ್ಯಾಪಹಾರಿಕ ನ್ಯಾಯಾಧೀಶರು ಮತ್ತು ಹೆಚ್ಚುವರಿ ನ್ಯಾಯಿಕ ದಂಡಾಧಿಕಾರಿಗಳ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, ನ್ಯಾಯಾಧೀಶ ಗೌಡ.ಆರ್.ಪಿ ಅವರು ಆರೋಪಿಗಳಿಗೆ 14 ದಿನಗಳ ನ್ಯಾಯಾಂಗ ಬಂಧನ ವಿಧಿಸಿದ್ದಾರೆ.

ಪ್ರವೀಣ್ ನೆಟ್ಟಾರ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕಲಂ 302 ಅಡಿಯಲ್ಲಿ ಬಂಧಿತರಾಗಿರುವ ಆರೋಪಿಗಳಿಗೆ ನ್ಯಾಯಾಲಯ 14 ದಿನಗಳ ಕಾಲ ನ್ಯಾಯಾಂಗ ಬಂಧನ ವಿಧಿಸಿದೆ. ಕೊಲೆ ಪ್ರಕರಣದ ತನಿಖೆಗೆ ಅಗತ್ಯವಿದ್ದಲ್ಲಿ ಪೊಲೀಸರು ಮತ್ತೆ ಆರೋಪಿಗಳನ್ನು ಪೊಲೀಸ್ ಕಸ್ಟಡಿಗೆ ಪಡೆದುಕೊಳ್ಳಲಿದ್ದಾರೆ ಎಂದು ಸರ್ಕಾರಿ ಸಹಾಯಕ ಅಭಿಯೋಜಕಿ ಕವಿತಾ ಅವರು ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

Hot Topics

ಉಡುಪಿ: ಮೀನುಗಾರಿಕಾ ಜೆಟ್ಟಿ ಕುಸಿತ-ಅವೈಜ್ಞಾನಿಕ ಕಾಮಗಾರಿ ವಿರುದ್ಧ ಮೀನುಗಾರರ ಆರೋಪ

ಉಡುಪಿ: ಮೀನುಗಾರಿಕಾ ಬಂದರು ಪ್ರದೇಶದಲ್ಲಿ ನೂತನ ಜೆಟ್ಟಿ ನಿರ್ಮಾಣವಾಗುತ್ತಿರುವ ತಾಣದಲ್ಲಿ 150 ಮೀಟರಿಗೂ ಅಧಿಕ ಉದ್ಧದ ಮೀನುಗಾರಿಕಾ ಜೆಟ್ಟಿ ಕುಸಿತವಾದ ಘಟನೆ ಉಡುಪಿ ಜಿಲ್ಲೆಯ ಗಂಗೊಳ್ಳಿಯಲ್ಲಿ ಇಂದು ನಡೆದಿದೆ.ಇದರಿಂದ ಮೀನುಗಾರರು ಸಂಕಷ್ಟ ಎದುರಿಸುವಂತಾಗಿದೆ....

ಮಂಗಳೂರು: ರಥಬೀದಿಯ ಶಾರದಾ ಮಹೋತ್ಸವದಲ್ಲಿ ಸಾಮೂಹಿಕ ಕುಂಕುಮಾರ್ಚನೆ

ಮಂಗಳೂರು: ನಗರದ ರಥಬೀದಿಯಲ್ಲಿ 100ನೇ ವರ್ಷಾಚರಣೆ ಸಂಭ್ರಮ ಆಚರಿಸುತ್ತಿರುವ ಮಂಗಳೂರು ಶ್ರೀ ಶಾರದಾ ಮಹೋತ್ಸವ ಸಮಿತಿಯ ವತಿಯಿಂದ ಸಹಸ್ರ ಚಂಡಿಕಾ ಮಹಾಯಾಗವನ್ನು ಆಯೋಜಿಸಲಾಗಿದೆ.ಇದರ ಅಂಗವಾಗಿ ಸಾಮೂಹಿಕ ಕುಂಕುಮಾರ್ಚನೆ ಕೂಡಾ ನೆರವೇರಿಸುತ್ತಿದ್ದು ನೂರಾರು ಮಾತೃವರ್ಗ...

ಮಂಗಳೂರು: ಚಿಟ್ ಫಂಡ್ ಹೆಸರಲ್ಲಿ ಕೋಟ್ಯಾಂತರ ರೂ. ಪಂಗನಾಮ-ಆರೋಪಿಗಳಿಗೆ ನ್ಯಾಯಾಂಗ ಬಂಧನ

ಮಂಗಳೂರು: ಮಂಗಳೂರು ನಗರ ಹೊರವಲಯದ ಸುರತ್ಕಲ್‌ನಲ್ಲಿ ಭಾರ್ಗವಿ ಫೈನಾನ್ಸ್‌ ಮತ್ತು ಚಿಟ್ ಫಂಡ್ ನಡೆಸಿ ಅಮಾಯಕರಿಗೆ ವಂಚಿಸಿದ ಪ್ರಕರಕ್ಕೆ ಸಂಬಂಧಿಸಿ ಭಾರ್ಗವಿ ಫೈನಾನ್ಸ್‌ ಮಾಲಕ ಅಶೋಕ್ ಭಟ್ ಮತ್ತು ಆತನ‌ ಪತ್ನಿ ವಿದ್ಯಾಭಟ್...