Thursday, September 29, 2022

ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ: ಮತ್ತಿಬ್ಬರ ಬಂಧನ-ಸ್ಥಳ ಮಹಜರು

ಮಂಗಳೂರು: ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತಿಬ್ಬರು ಆರೋಪಿಗಳನ್ನು ಬೆಳ್ಳಾರೆ ಪೊಲೀಸರು ಭಾನುವಾರ ಬಂಧಿಸಿದ್ದಾರೆ. ಇದೀಗ ಬಂಧಿತರ ಸಂಖ್ಯೆ ಆರಕ್ಕೆ ಏರಿಕೆಯಾಗಿದೆ.


ಬಂಧಿತರನ್ನು ಸುಳ್ಯ ನಾವೂರು ನಿವಾಸಿ ಹಬೀದ್(22), ಬೆಳ್ಳಾರೆ ಗೌರಿಹೊಳೆ ನಿವಾಸಿ ನೌಫಲ್ (28) ಎಂದು ಗುರುತಿಸಲಾಗಿದೆ.

ಘಟನೆ ವಿವರ

ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ಪೇಟೆಯ ಗಾಂಧಿನಗರದ ಅಲೆಟ್ಟಿ ರಸ್ತೆಯಲ್ಲಿರೋ ಪಿಎಫ್‌ಐ ಕಚೇರಿ ಇಂದು ಆರೋಪಿಗಳನ್ನು ಸ್ಥಳ ಮಹಜರಿಗಾಗಿ ಕರೆತಂದಿದ್ದರು.

ಇದೇ ಕಚೇರಿಯಲ್ಲಿ ಪ್ರವೀಣ್‌ ಹತ್ಯೆಯ ಸ್ಕೆಚ್‌ ನಡೆದಿತ್ತು. ಸದ್ಯ ಆರೋಪಿಗಳನ್ನು ನ್ಯಾಯಾಲಯಕ್ಕೆ ಹಾಜರು ಪಡಿಸಲಾಗಿದ್ದು, ಹೆಚ್ಚಿನ ವಿಚಾರಣೆಗಾಗಿ ಪೊಲೀಸ್‌ ಕಸ್ಟಡಿಗೆ ನೀಡುವಂತೆ ಕೋರ್ಟ್‌ಗೆ ಪೊಲೀಸರು ಮನವಿ ಮಾಡಲಿದ್ದಾರೆ. ತನಿಖೆಯ ಕ್ಷಣ ಕ್ಷಣದ ಮಾಹಿತಿಯನ್ನು ಎಡಿಜಿಪಿ ಅಲೋಕ್ ಕುಮಾರ್ ಪಡೆಯುತ್ತಿದ್ದಾರೆ ಎಂದು ತಿಳಿದು ಬಂದಿದೆ.

LEAVE A REPLY

Please enter your comment!
Please enter your name here

Hot Topics

ಪುತ್ತೂರು: PFI ಪ್ರಧಾನ ಕಛೇರಿಗೆ ಬೆಳಿಗ್ಗೆಯಿಂದಲೇ ಬೀಗ-ಗುಪ್ತಸಭೆ ನಡೆಸುತ್ತಿದ್ದ ಆರೋಪ

ಪುತ್ತೂರು: ದೇಶದಾದ್ಯಂತ ಪಿಎಫ್ಐ ಹಾಗೂ ಅದರ ಬೆಂಬಲಿತ ಸಂಘಟನೆಗಳಿಗೆ ಕೇಂದ್ರ ಗೃಹ ಸಚಿವಾಲಯ ನಿಷೇಧ ಹೇರಿರುವ ಮಧ್ಯೆ ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ನಗರದ ಹೃದಯ ಭಾಗದಲ್ಲಿ ಕಾರ್ಯಾಚರಿಸುತ್ತಿರುವ ಪಿಎಫ್ಐ ನ ಪ್ರಧಾನ...

5 ವರ್ಷ PFI ಬ್ಯಾನ್ : ಮಂಗಳೂರಿನ ಕಚೇರಿಗಳಿಗೆ ಬೀಗ ಜಡಿದು ಸೀಲ್ ಡೌನ್ ಮಾಡಿದ ಪೊಲೀಸರು..!

ಮಂಗಳೂರು : ಪಿಎಫ್‌ಐ ಮತ್ತು ಅದರ ಅಂಗ ಸಂಘಟನೆಗಳನ್ನು 5 ವರ್ಷ ಕೇಂದ್ರ ಸರ್ಕಾರ ನಿಷೇಧ ಹೇರಿದೆ. ಈ ಹಿನ್ನೆಲೆಯಲ್ಲಿ ದೇಶಾದ್ಯಂತ ಕೇಂದ್ರ ಸರ್ಕಾರದ ನಿರ್ದೇಶನದ ಮೇಲೆ ಪಿಎಫ್‌ಐ ಕಚೇರಿಗಳನ್ನು ಸೀಲ್ ಡೌನ್...

ಸುಳ್ಯ: ಮಾಡರ್ನ್‌ಯುಗಕ್ಕೆ ಹೊಂದಿಕೊಂಡ ಕಾಗೆ ತನ್ನ ಗೂಡು ಹೆಣೆದಿದ್ದು ಕಬ್ಬಿಣದ ತಂತಿಯಲ್ಲಿ..!

ಸುಳ್ಯ: ಕಾಗೆಯೊಂದು ಕಬ್ಬಿಣದ ತಂತಿಗಳನ್ನೇ ಬಳಸಿ ಗೂಡು ಹೆಣೆದಿರುವ ಅದ್ಭುತ ಘಟನೆ ಸುಳ್ಯದ ಚೊಕ್ಕಾಡಿಯಲ್ಲಿ ನಡೆದಿದೆ.ಚೊಕ್ಕಾಡಿಯ ಭಗವಾನ್ ಶ್ರೀ ಸತ್ಯಸಾಯಿ ವಿದ್ಯಾಕೇಂದ್ರದ ಆವರಣದಲ್ಲಿ ಸ್ವಚ್ಚತೆ ಕಾರ್ಯ ಕೈಗೊಂಡ ವೇಳೆ ಮರವೊಂದರ ಕೊಂಬೆಯಲ್ಲಿ ಈ...