Tuesday, January 31, 2023

ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣ: ಇನ್ನೋರ್ವ ಆರೋಪಿ NIA ಬಲೆಗೆ

ಮಂಗಳೂರು: ಬಿಜೆಪಿ ಮುಖಂಡ ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತೋರ್ವ ಆರೋಪಿಯನ್ನು ಎನ್‌ಐಎ ಅಧಿಕಾರಿಗಳು ಬಂಧಿಸಿದ್ದಾರೆ.

ಬೆಳ್ಳಾರೆ ನಿವಾಸಿ ಶಾಹಿದ್(40) ಬಂಧಿತ ಆರೋಪಿ.


ಎನ್‌ಐಎ ಅಧಿಕಾರಿಗಳ ಅಧಿಕೃತ ಮಾಹಿತಿಯಂತೆ ಎಸ್‌ಡಿಪಿಐ ಮುಖಂಡರಾದ ಶಾಫಿ ಬೆಳ್ಳಾರೆ ಮತ್ತು ಇಕ್ಬಾಲ್ ಬೆಳ್ಳಾರೆಯ ತಂಗಿಯ ಗಂಡ ಬಂಧಿತ ಶಾಹಿದ್ ಎಂದು ತಿಳಿದುಬಂದಿದೆ.

ಆರೋಪಿಯನ್ನು ಬಂಧಿಸಿ ಇದೀಗ ಎನ್‌ಐಎ ಅಧಿಕಾರಿಗಳು ಬೆಂಗಳೂರಿಗೆ ಕರೆದುಕೊಂಡು ಹೋಗಿದ್ದು ಹೋಗಿದ್ದು, ಹೆಚ್ಚಿನ ವಿಚಾರಣೆ ನಡೆಸುತ್ತಿದ್ದಾರೆ.

ನವೆಂಬರ್ 5ರಂದು ನಸುಕಿನ ಜಾವ ಏಕಾಏಕಿ ದಾಳಿ ನಡೆಸಿದ್ದ ಪೊಲೀಸರು ಎಸ್‌ಡಿಪಿಐ ರಾಜ್ಯ ಕಾರ್ಯದರ್ಶಿ ಶಾಫಿ ಬೆಳ್ಳಾರೆ, ಬೆಳ್ಳಾರೆ ಗ್ರಾಮ ಪಂಚಾಯತ್ ಸದಸ್ಯ ಇಕ್ಬಾಲ್ ಬೆಳ್ಳಾರೆ, ಸುಳ್ಯದ ಇಬ್ರಾಹಿಂ ಶಾ ಎಂಬಾತನನ್ನು ಬಂಧಿಸಿ ಕರೆದೊಯ್ದಿದ್ದರು.

ಇದೀಗ ಅವರು ಮೂವರೂ ನ್ಯಾಯಾಂಗ ಬಂಧನದಲ್ಲಿದ್ದ ವಿಚಾರಣೆ ಎದುರಿಸುತ್ತಿದ್ದಾರೆ. ಮೂವರ ಬಂಧನದ ಬಳಿಕ ಮತ್ತೆ ಕಾರ್ಯಾಚರಣೆ ಮುಂದುವರಿದಿದ್ದು, ಇದೀಗ ಮತ್ತೆ ಒಬ್ಬನ ಬಂಧನವಾಗಿದೆ.

LEAVE A REPLY

Please enter your comment!
Please enter your name here

Hot Topics

ಕಾರವಾರ : ಕಾಡುಹಂದಿ ಮಾಂಸ ಎಂದು ನಂಬಿಸಿ ನಾಯಿ ಮಾಂಸ ಮಾರಾಟ..! ಇಬ್ಬರ ಬಂಧನ

ಕಾಡುಹಂದಿ ಮಾಂಸ ಎಂದು ನಂಬಿಸಿ ಊರು ಹಂದಿ, ನಾಯಿ ಮಾಂಸ ಮಾರಾಟ ಮಾಡುತ್ತಿದ್ದ ವ್ಯಾಪಾರಿಗಳನ್ನು ಹಿಡಿದು ಸಾರ್ವಜನಿಕರು ಥಳಿಸಿರುವ ಘಟನೆ ಉತ್ತರ ಕನ್ನಡ ಜಿಲ್ಲೆ ಅಂಕೋಲಾ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.ಕಾರವಾರ:...

ಮಂಗಳೂರು: ಪಾಳುಬಾವಿಗೆ ಬಿದ್ದ 4 ಬೃಹತ್ ಹೆಬ್ಬಾವುಗಳ ರಕ್ಷಣೆ..!

ಮಂಗಳೂರು ನಗರದ ಕೊಟ್ಟಾರದ ಪೃಥ್ವಿ ಅಪಾರ್ಟ್‌ಮೆಂಟ್ ಬಳಿಯ ಪಾಳು ಬಾವಿಗೆ ಬಿದ್ದಿದ್ದ ನಾಲ್ಕು ಬೃಹತ್ ಗಾತ್ರದ ಹೆಬ್ಬಾವುಗಳನ್ನು ಪರಿಸರ ಪ್ರೇಮಿಗಳು ರಕ್ಷಿಸಿದ್ದಾರೆ.ಮಂಗಳೂರು: ಮಂಗಳೂರು ನಗರದ ಕೊಟ್ಟಾರದ ಪೃಥ್ವಿ ಅಪಾರ್ಟ್‌ಮೆಂಟ್ ಬಳಿಯ ಪಾಳು...

“ನಾಯಿ ಥರ ಅವರ ಹಿಂದೆ ಹೋಗ್ತಾರಲ್ವಾ..ನಾಚಿಕೆ ಇಲ್ವಾ.!?” ಉಳ್ಳಾಲ ಪೊಲೀಸರಿಗೆ ಶಾಸಕ ಖಾದರ್ ಕ್ಲಾಸ್..!

ಮಂಗಳೂರು: ಜನ ಸಾಮಾನ್ಯರ ಮನೆಯ ತಳಪಾಯ ಬಿದ್ದುಹೋಗುವ ಸ್ಥಿತಿ ನಿರ್ಮಾಣ ಮಾಡಿದ ಮರಳು ಮಾಫಿಯಾ ವಿರುದ್ದ ಉಳ್ಳಾಲ ಶಾಸಕ ಯು ಟಿ. ಖಾದರ್ ಗರಂ ಆಗಿದ್ದಾರೆ.ಈ ಹಿನ್ನೆಲೆಯಲ್ಲಿ ಕ್ರಮಕ್ಕೆ ಮುಂದಾಗದ ಉಳ್ಳಾಲ ಪೊಲೀಸರು...