Wednesday, October 5, 2022

ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ : ಮತ್ತಿಬ್ಬರು ಆರೋಪಿಗಳ ಬಂಧನ..!

ಪುತ್ತೂರು: ದಕ್ಷಿಣ ಕನ್ನಡ ಜಿಲ್ಲೆಯ ಬಿಜೆಪಿ ಮುಖಂಡ ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣ ಸಂಬಂಧ ಮತ್ತಿಬ್ಬರು ಆರೋಪಿಗಳನ್ನು ಪೊಲೀಸರು  ಬಂಧಿಸಿದ್ದಾರೆ. 

ಬಂಧಿತ ಆರೋಪಿಗಳನ್ನು ಬೆಳ್ಳಾರೆ ಗೌರಿಹೊಳೆ ನಿವಾಸಿ ನೌಫಾಲ್ (28) ಹಾಗೂ ಸುಳ್ಯ ನಾವೂರು ನಿವಾಸಿ ಆಬಿದ್ (22) ಎಂದು ಗುರುತಿಸಲಾಗಿದೆ.

ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಸ್ತುತ ಒಟ್ಟು ಆರು ಮಂದಿಯನ್ನು ಇದುವರೆಗೆ ಬಂಧಿಸಲಾಗಿದೆ.

ಉಳಿದ ಆರೋಪಿಗಳಿಗಾಗಿ ಶೋಧ ನಡೆಯುತ್ತಿದೆ ಎಂದು ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ವರಿಷ್ಟಾಧಿಕಾರಿ ಋಷಿಕೇಶ ಸೋನವಾಣೆ ಮಾಹಿತಿ ನೀಡಿದ್ದಾರೆ.

ಪ್ರಕರಣಕ್ಕೆ ಸಂಬಂಧಿಸಿದಂತೆ ಜುಲೈ 27ರಂದು ಶಫೀಕ್ ಹಾಗೂ ಝಾಕಿರ್ ಎಂಬ ಇಬ್ಬರು ಆರೋಪಿಗಳನ್ನು ಬಂಧಿಸಲಾಗಿತ್ತು.

ಬಳಿಕ ಆಗಸ್ಟ್​ 2ರಂದು ಬೆಳ್ಳಾರೆ ನಿವಾಸಿ ಪಲ್ಲಿಮಜಲು ನಿವಾಸಿಗಳಾದ ಸದ್ದಾಂ(32) ಹಾಗೂ ಹ್ಯಾರಿಸ್ (42) ಎಂಬುವರನ್ನು ಪೊಲೀಸರು ಬಂಧಿಸಿದ್ದರು.

LEAVE A REPLY

Please enter your comment!
Please enter your name here

Hot Topics

ಎಲ್‌ಇಡಿ ಟಿ.ವಿ ಬ್ಲಾಸ್ಟ್‌..! : ಬಾಲಕ ಸಾವು-ಮನೆ ಗೋಡೆ ಕುಸಿತ

ಲಕ್ನೋ: ಎಲ್‌ಇಡಿ ಟಿ.ವಿ ಸ್ಪೋಟಗೊಂಡ ಪರಿಣಾಮ ಬಾಲಕನೊಬ್ಬ ಸಾವನಪ್ಪಿರುವ ಘಟನೆ ಉತ್ತರ ಪ್ರದೇಶದ ಗಾಜಿಯಾಬಾದ್‌ನಲ್ಲಿ ನಡೆದಿದೆ.ಮೃತ ಬಾಲಕನನ್ನು ಓಮೇಂದ್ರ (16) ಎಂದು ಗುರುತಿಸಲಾಗಿದೆ. ಮನೆಯಲ್ಲಿ ಟಿವಿ ನೋಡುತ್ತಿದ್ದ ಸಂದರ್ಭ ಎಲ್ ಐಡಿ ಟಿವಿ...

ಮಂಗಳೂರು: ಹೆಲಿಕಾಪ್ಟರ್‌ನಲ್ಲಿ ವೈಷ್ಣೋದೇವಿ ಮಂದಿರಕ್ಕೆ ಕರೆದೊಯ್ಯುವುದಾಗಿ 38 ಸಾವಿರ ರೂ. ವಂಚನೆ

ಮಂಗಳೂರು: ವೈಷ್ಣೋದೇವಿ ಮಂದಿರ ಯಾತ್ರೆಗೆ ಹೆಲಿಕಾಪ್ಟರ್ ಬುಕ್ಕಿಂಗ್ ಮಾಡುತ್ತೇನೆಂದು ನಂಬಿಸಿ ಮಂಗಳೂರು ಮೂಲದ ವ್ಯಕ್ತಿಯೊಬ್ಬರಿಗೆ ರೂ.38 ಸಾವಿರ ವಂಚನೆಗೈದ ಬಗ್ಗೆ ಸೆನ್‌ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.ವಂಚನೆಗೊಳಗಾದ ವ್ಯಕ್ತಿ ಬೆಂಗಳೂರಿನಲ್ಲಿ IT consultant...

ಮಹಾನವಮಿ ಸಂಭ್ರಮ: ಕಟೀಲು ಕ್ಷೇತ್ರದಲ್ಲಿ ಮಹಾ ರಂಗ ಪೂಜೆ

ಮಂಗಳೂರು: ಪುರಾಣ ಪ್ರಸಿದ್ಧ ಕಟೀಲು ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನದಲ್ಲಿ ಮಹಾನವಮಿ ಪ್ರಯುಕ್ತ ಮಹಾ ರಂಗ ಪೂಜೆ ನಡೆಯಿತು. ಆರು ನೂರಕ್ಕೂ ಹೆಚ್ಚು ವಿಶಿಷ್ಟ ಆರತಿಗಳಿಂದ ಸುಮಾರು ಒಂದೂಕಾಲು ಗಂಟೆಗಳ ಕಾಲ ನಡೆದ ಮಹಾಪೂಜೆಯನ್ನು...