Wednesday, September 28, 2022

ಪ್ರವೀಣ್ ಹತ್ಯೆ ಪ್ರಕರಣ: ಪ್ರಮುಖ ಮೂವರು ಆರೋಪಿಗಳ ಬಂಧನ-ಗೌಪ್ಯ ಸ್ಥಳದಲ್ಲಿ ತೀವ್ರ ವಿಚಾರಣೆ

ಪುತ್ತೂರು: ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಪ್ರಮುಖ ಆರೋಪಿಗಳನ್ನು ಕೊನೆಗೂ ಪೊಲೀಸರು ಬಂಧಿಸಿದ್ದು, ಗೌಪ್ಯ ಸ್ಥಳದಲ್ಲಿ ಅವರನ್ನು ತೀವ್ರ ವಿಚಾರಣೆ ನಡೆಸುತ್ತಿದ್ದಾರೆ ಎಂದು ತಿಳಿದು ಬಂದಿದೆ.


ಶಿಯಾಬ್, ಬಶೀರ್, ರಿಯಾಝ್ ಎಂದು ಗುರುತಿಸಲಾಗಿದೆ.
ಈ ಮೂವರನ್ನು ವಿಶೇಷ ತನಿಖಾ ತಂಡ ಕೇರಳದಲ್ಲಿ ಬಂಧಿಸಿದ್ದು, ಈಗಾಗಲೇ ಸ್ಥಳ ಮಹಜರು ನಡೆಸಿ ವಿಚಾರಣೆ ನಡೆಸುತ್ತಿದ್ದಾರೆ. ಈ ಪ್ರಕರಣದಲ್ಲಿ ಈ ಹಿಂದೆ ಒಟ್ಟು 7 ಜನರನ್ನು ಬಂಧಿಸಿದ್ದರು. ಅವರು ಪ್ರವೀಣ್‌ ನೆಟ್ಟಾರು ಚಲನವಲನ, ಕೃತ್ಯಕ್ಕೆ ಬೈಕ್‌ ನೀಡಿದ್ದು ಸೇರಿದಂತೆ ಆರೋಪಿಗಳಿಗೆ ಆಶ್ರಯ ನೀಡಿದ್ದರ ಹಿನ್ನೆಲೆಯಲ್ಲಿ ಬಂಧಿಸಲಾಗಿತ್ತು. ಇದೀಗ ಬಂಧಿತ ಮೂವರು ಕೃತ್ಯದಲ್ಲಿ ನೇರವಾಗಿ ಪಾಲ್ಗೊಂಡಿದ್ದರು ಎಂದು ತಿಳಿದು ಬಂದಿದೆ. ಇವರೂ ಕೂಡಾ ಉಳಿದವರಂತೆ ಸ್ಥಳೀಯರೇ ಎಂಬ ಬಗ್ಗೆ ಖಚಿತ ಮಾಹಿತಿ ಇಲ್ಲ.
ಸದ್ಯ ಈ ಪ್ರಕರಣವನ್ನು ಎನ್‌ಐಎಗೆ ಹಸ್ತಾಂತರಿಸಲಾಗಿದ್ದು, ನಿನ್ನೆ ಹಾಸನ, ಚಿಕ್ಕಮಗಳೂರು ಸೇರಿದಂತೆ ಒಟ್ಟು 6 ಜಿಲ್ಲೆಗಳ ಎಸ್ಪಿಗಳ ಸಭೆಯನ್ನು ಬೆಳ್ಳಾರೆಯಲ್ಲಿ ಎಡಿಜಿಪಿ ಅಲೋಕ್‌ ಕುಮಾರ್‌ ನಡೆಸಿದ್ದರು.
ಈ ಬಗ್ಗೆ ಇಂದು ಮಧ್ಯಾಹ್ನ ದಕ್ಷಿಣ ಕನ್ನಡ ಜಿಲ್ಲಾ ವರಿಷ್ಠಾಧಿಕಾರಿ ಖುಷಿಕೇಶ್‌ ಸೋನಾವಣೆ ಮಹತ್ವದ ಸುದ್ದಿಗೋಷ್ಠಿ ಕರೆದಿದ್ದು, ಈ ಬಗ್ಗೆ ಅಧಿಕೃತ ಮಾಹಿತಿ ನೀಡಲಿದ್ದಾರೆ ಎಂದು ತಿಳಿದು ಬಂದಿದೆ.
ಜುಲೈ 26 ರಂದು ಪ್ರವೀಣ್ ನೆಟ್ಟಾರುವನ್ನು ಬರ್ಬರವಾಗಿ ಹತ್ಯೆಗೈದು ಆರೋಪಿಗಳು ಪರಾರಿಯಾಗಿದ್ದರು, ಇದೀಗ ಆರೋಪಿಗಳನ್ನು ಕೇರಳದಲ್ಲಿ ಪೊಲೀಸರು ಬಂಧಿಸಿದ್ದಾರೆ. ಸದ್ಯ ಪೊಲೀಸರು ಗೌಪ್ಯ ಸ್ಥಳದಲ್ಲಿರಿಸಿ ಆರೋಪಿಗಳನ್ನು ವಿಚಾರಣೆ ಮಾಡುತ್ತಿದ್ದಾರೆ.

LEAVE A REPLY

Please enter your comment!
Please enter your name here

Hot Topics

5 ವರ್ಷ PFI ಬ್ಯಾನ್ : ಮಂಗಳೂರಿನ ಕಚೇರಿಗಳಿಗೆ ಬೀಗ ಜಡಿದು ಸೀಲ್ ಡೌನ್ ಮಾಡಿದ ಪೊಲೀಸರು..!

ಮಂಗಳೂರು : ಪಿಎಫ್‌ಐ ಮತ್ತು ಅದರ ಅಂಗ ಸಂಘಟನೆಗಳನ್ನು 5 ವರ್ಷ ಕೇಂದ್ರ ಸರ್ಕಾರ ನಿಷೇಧ ಹೇರಿದೆ. ಈ ಹಿನ್ನೆಲೆಯಲ್ಲಿ ದೇಶಾದ್ಯಂತ ಕೇಂದ್ರ ಸರ್ಕಾರದ ನಿರ್ದೇಶನದ ಮೇಲೆ ಪಿಎಫ್‌ಐ ಕಚೇರಿಗಳನ್ನು ಸೀಲ್ ಡೌನ್...

ಕೇರಳದಲ್ಲಿ ಸಿನಿಮಾ ಪ್ರಚಾರಕ್ಕೆ ತೆರಳಿದ ನಟಿಯರ ಮೇಲೆ ಅಭಿಮಾನಿಯಿಂದ ಲೈಂಗಿಕ ದೌರ್ಜನ್ಯ : ನಟಿಯಿಂದ ಅಭಿಮಾನಿಗೆ ದಂಡಂ ದಶಗುಣಂ..!

ಅಭಿಮಾನಿಯೋರ್ವ ನಟಿಯನ್ನು ಎಳೆದುಕೊಂಡು ಖಾಸಗಿ ಭಾಗಗಳನ್ನು ಮುಟ್ಟಿದ್ದಾನೆ. ಈ ಬಗ್ಗೆ ನಟಿಯರು ಸೋಶಿಯಲ್ ಮೀಡಿಯಾದಲ್ಲಿ ಬರೆದುಕೊಂಡಿದ್ದು ಮುಟ್ಟಬಾರದ ಜಾಗಗಳಿಗೆ ಕೈ ಹಾಕಿದ್ದಾರೆ ಎಂದು ಆರೋಪಿಸಿದ್ದಾರೆ. ಕೋಯಿಕ್ಕೋಡ್ : ಸಿನಿಮಾ ಪ್ರಚಾರಕ್ಕೆ ತೆರಳಿದ ಮಲಯಾಳಂ ನಟಿಯರ...

PFI ಬ್ಯಾನ್‌ಗೆ ಕೇಂದ್ರ ಕೊಟ್ಟ ಕಾರಣಗಳೇನು ಗೊತ್ತಾ…?

ಹೊಸದಿಲ್ಲಿ: ಕೇಂದ್ರ ಸರ್ಕಾರ ಪಾಪ್ಯುಲರ್ ಫ್ರಂಟ್‌ ಆಫ್‌ ಇಂಡಿಯಾ ಹಾಗೂ ಅದರ ಸಹ ಸಂಘಟನೆಗಳ ಮೇಲೆ ಐದು ವರ್ಷಗಳ ಕಾಲ ನಿಷೇಧ ಹೇರಿ ಇಂದು ಬೆಳಿಗ್ಗೆ ಆದೇಶ ಹೊರಡಿಸಿದ ಬೆನ್ನಲ್ಲೇ ಪಿಎಫ್‌ಐ ಬ್ಯಾನ್‌ಗೆ...