ಪುತ್ತೂರು : ಬೆಳ್ಳಾರೆಯ ಬಿಜೆಪಿ ಯುವ ನಾಯಕ ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣದ ತನಿಖೆಯನ್ನು ರಾಷ್ಟ್ರೀಯ ತನಿಖಾ ಸಂಸ್ಥೆ (NIA) ನಡೆಸುತ್ತಿದೆ ಆದ್ರೂ ಇನ್ನು ದಡ ತಲುಪಿಲ್ಲ .
ಇದೀಗ ಪ್ರಕರಣದಲ್ಲಿ ಭಾಗಿಯಾಗಿದ್ದ ಮತ್ತಿಬ್ಬರು ಪ್ರಮುಖ ಆರೋಪಿಗಳ ಸುಳಿವು ನೀಡಿದವರಿಗೆ ತಲಾ 5 ಲಕ್ಷ ರೂ ನಗದು ಬಹುಮಾನ ಘೋಷಿಸಿದೆ.
ಕಳೆದ ವರ್ಷದ ಜುಲೈ 26ರಂದು ಸಂಜೆ ಬೆಳ್ಳಾರೆಯಲ್ಲಿ ತಮ್ಮ ಕೋಳಿ ಅಂಗಡಿಯ ಮುಂದೆಯೇ ದುಷ್ಕರ್ಮಿಗಳು ಪ್ರವೀಣ್ ಅವರನ್ನು ಬರ್ಬರವಾಗಿ ಹತ್ಯೆ ಮಾಡಿ ಪರಾರಿಯಾಗಿದ್ದರು.
ಈ ಪ್ರಕರಣ ಸಂಬಂಧ ನಿಷೇಧಿತ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ pFI ಸಂಘಟನೆಯ ಸದಸ್ಯರಾಗಿರುವ ಬಂಟ್ವಾಳ ತಾಲ್ಲೂಕಿನ ಕೊಡಾಜೆಯ ಅದ್ದ ಎಂಬವರ ಮಗ, ಮೊಹಮ್ಮದ್ ಶರೀಫ್ (53) ಮತ್ತು ನೆಕ್ಕಿಲಾಡಿಯ ಅಗ್ನಾಡಿ ಅಬೂಬಕರ್ ಎಂಬವರ ಮಗ ಕೆ.ಎ ಮಸೂದ್ (40) ಎಂಬವರ ಸುಳಿವು ನೀಡಿದರೆ ತಲಾ 5 ಲಕ್ಷ ರೂ. ಬಹುಮಾನ ನೀಡುವುದಾಗಿ ಎನ್‌ಐಎ ಘೋಷಣೆ ಮಾಡಿದೆ,
ಮಾಹಿತಿದಾರರು ಮಾಹಿತಿಯನ್ನು ಅಥವಾ ದೂರವಾಣಿ ಸಂಖ್ಯೆ 080-29510900/8904241100 ಅಥವಾ ಪೊಲೀಸ್ ಅಧೀಕ್ಷಕರು, ರಾಷ್ಟ್ರೀಯ ತನಿಖಾ ದಳ (NIA ), 8ನೇ ಮಹಡಿ, ಸರ್.ಎಂ.ವಿಶ್ವೇಶ್ವರಯ್ಯ ಕೇಂದ್ರೀಯ ಸದನ, ದೊಮ್ಮಲೂರು, ಬೆಂಗಳೂರು 560071 ಈ ವಿಳಾಸಕ್ಕೆ ನೀಡಬಹುದಾಗಿದ್ದು ಮಾಹಿತಿ ನೀಡುವವರ ವಿವರ ಗೌಪ್ಯವಾಗಿಡಲಾಗುವುದು ಎಂದು ಎನ್‌ಐಎ ಹೇಳಿದೆ.