ಸುಳ್ಯ: ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣದ ತನಿಖೆಯ ಭಾಗವಾಗಿ ಎನ್ಐಎ ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯದ ಪಿಎಫ್‌ಐ ಕಚೇರಿಯನ್ನು ಜಪ್ತಿ ಮಾಡಿದೆ.
ದಕ್ಷಿಣ ಕನ್ನಡ ಬೆಳ್ಳಾರೆಯ ಬಿಜೆಪಿ ಯುವ ಮುಖಂಡ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣದ ತನಿಖೆಯ ಭಾಗವಾಗಿ ಎನ್ಐಎ ಸುಳ್ಯದ ಗಾಂಧಿ ನಗರದಲ್ಲಿರುವ ಆಲೆಟ್ಟಿ ರಸ್ತೆಯ ತಾಹಿರಾ ಕಾಂಪ್ಲೆಕ್ಸ್‌ನ ಮೊದಲ ಮಹಡಿಯಲ್ಲಿರುವ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾದ ಕಚೇರಿಯನ್ನು ಕಾನೂನು ಪ್ರಕಾರ ಜಪ್ತಿ ಮಾಡಿದೆ.
ಪಿಎಫ್‌ಐ ಕಚೇರಿ ಸ್ವಾಧೀನಕ್ಕೆ ಪಡಿಸಿಕೊಂಡ ಎನ್ಐಎ ಆರೋಪಿಗಳು ಪ್ರವೀಣ್ ನೆಟ್ಟಾರು ಅವರ ಹತ್ಯೆ ಸಲುವಾಗಿ ಸಂಚು ಸಭೆಗಳನ್ನು ನಡೆಸಲು ಈ ಕಚೇರಿಯನ್ನು ಬಳಸುತ್ತಿದ್ದರು ಎಂಬುದನ್ನು ಎನ್ಐಎ ತನ್ನ ಪತ್ರದಲ್ಲಿ ಉಲ್ಲೇಖಿಸಿದೆ.
ಜಪ್ತಿಗೊಳಗಾದ ಎನ್‌ಐಎ ಕಚೇರಿ
ಬೆಂಗಳೂರು ವಿಭಾಗದ ಎನ್ಐಎಯ ಮುಖ್ಯ ತನಿಖಾಧಿಕಾರಿ ಷಣ್ಮುಗಂ ಎಂ ಅವರು ಈ ಬಗ್ಗೆ ನೋಟೀಸ್ ಜಾರಿಗೊಳಿಸಿ ಆದೇಶಿಸಿದ್ದಾರೆ ಈ ಆದೇಶದ ಪ್ರತಿಯನ್ನು ದಕ್ಷಿಣ ಕನ್ನಡ ಜಿಲ್ಲೆಯ ಜಿಲ್ಲಾಧಿಕಾರಿ, ಪೊಲೀಸ್ ಅಧೀಕ್ಷಕರು, ಠಾಣಾಧಿಕಾರಿಗಳು ಮತ್ತು ಸುಳ್ಯ ಪೊಲೀಸ್ ಠಾಣೆಗೆ ರವಾನೆ ಮಾಡಿದ್ದಾರೆ.
ಈ ಹಿಂದೆ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಮಿತ್ತೂರಿನಲ್ಲಿರುವ ಫ್ರೀಡಂ ಕಮ್ಯೂನಿಟ್ ಹಾಲ್ ಅನ್ನು ಕೂಡ ಉಗ್ರ ಚಟುವಟಿಕೆಗೆ ತರಬೇತಿ ನೀಡಿದ ಆರೋಪದಡಿ ಹಾಲ್‌ನ ಜಪ್ತಿಗೆ ಎನ್ಐಎ ಕೋರ್ಟ್ ಆದೇಶಿಸಿತ್ತು.