Thursday, February 9, 2023

ದ.ಕ ಡಿಸಿ ಕಚೇರಿಯಲ್ಲಿ ಕರ್ತವ್ಯಕ್ಕೆ ಹಾಜರಾದ ಪ್ರವೀಣ್ ನೆಟ್ಟಾರು ಪತ್ನಿ ನೂತನಾ…

ಮಂಗಳೂರು: ದುಷ್ಕರ್ಮಿಗಳಿಂದ ಹತ್ಯೆಗೊಳಗಾಗಿದ್ದ ಬಿಜೆಪಿ ಯುವ ಮುಖಂಡ ದಿ.ಪ್ರವೀಣ್ ನೆಟ್ಟಾರು ಪತ್ನಿ ನೂತನ ಕುಮಾರಿ ಅವರು ದಕ್ಷಿಣಕನ್ನಡ ಜಿಲ್ಲಾಧಿಕಾರಿ ಕಚೇರಿಯಲ್ಲಿ ತನ್ನ ಕರ್ತವ್ಯಕ್ಕೆ ಹಾಜರಾಗಿ ತನ್ನ ನೂತನ ವೃತ್ತಿಯನ್ನು ಆರಂಭಿಸಿದರು.


ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ ಅವರಿಂದ ನೇಮಕಾತಿ ಆದೇಶಪತ್ರವನ್ನು ಅವರು ಸ್ವೀಕರಿಸಿದರು. ಜಿಲ್ಲಾಧಿಕಾರಿ ಕಚೇರಿಯ ಮುಖ್ಯಮಂತ್ರಿಗಳ ಪರಿಹಾರ ನಿಧಿ ವಿಭಾಗದಲ್ಲಿ ಸಹಾಯಕಿಯಾಗಿ ಅವರು ಕಾರ್ಯನಿರ್ವಹಿಸಲಿದ್ದಾರೆ.

ನೂತನಕುಮಾರಿ ಅವರಿಗೆ ಬೆಂಗಳೂರಿನ ಮುಖ್ಯಮಂತ್ರಿ ಕಚೇರಿಯಲ್ಲಿ ಗ್ರೂಪ್ ‘ಸಿ’ ಹುದ್ದೆಗೆ ಗುತ್ತಿಗೆ ಆಧಾರದಲ್ಲಿ ನೇಮಕ ಮಾಡಲಾಗಿತ್ತು.

ಆದರೆ, ಅವರು ಮಂಗಳೂರಿನಲ್ಲೇ ಕರ್ತವ್ಯ ನಿರ್ವಹಿಸಲು ಅವಕಾಶ ನೀಡುವಂತೆ ಮುಖ್ಯಮಂತ್ರಿ ಅವರಲ್ಲಿ ವಿನಂತಿಸಿಕೊಂಡ ಕಾರಣ, ಅವರ ಆಸೆಯಂತೆ ಮಂಗಳೂರಿನಲ್ಲಿರುವ ಜಿಲ್ಲಾಧಿಕಾರಿ ಕಚೇರಿಯಲ್ಲಿ ಅವಕಾಶ ಕಲ್ಪಿಸಿಕೊಡಲಾಗಿದೆ.

LEAVE A REPLY

Please enter your comment!
Please enter your name here

Hot Topics

ಸುರತ್ಕಲ್ ‌ಫಾಝಿಲ್ ಕೊಲೆ ಆರೋಪಿಯಿಂದ ಹಣಕ್ಕಾಗಿ ಬೆದರಿಕೆ: ಉಳ್ಳಾಲ ಠಾಣೆಯಲ್ಲಿ ‌ಪ್ರಕರಣ ದಾಖಲು

ಕೇಳಿದ ಹಣ ನೀಡಲಿಲ್ಲ ಎಂಬ ಕಾರಣಕ್ಕೆ ವ್ಯಕ್ತಿಯೊಬ್ಬರಿಗೆ ಜೀವ ಬೆದರಿಕೆಯೊಡ್ಡಿದ ಘಟನೆ ಉಳ್ಳಾಲ ಠಾಣಾ ವ್ಯಾಪ್ತಿಯ ಮಾಡೂರು ಬಳಿ ನಡೆದಿದೆ.ಉಳ್ಳಾಲ: ಕೇಳಿದ ಹಣ ನೀಡಲಿಲ್ಲ ಎಂಬ ಕಾರಣಕ್ಕೆ ವ್ಯಕ್ತಿಯೊಬ್ಬರಿಗೆ ಜೀವ ಬೆದರಿಕೆಯೊಡ್ಡಿದ ಘಟನೆ...

ಚಾರ್ಮಾಡಿಯಲ್ಲಿ ಶಿಕಾರಿಗಳ ಗುಂಡೇಟಿಗೆ ಕಡವೆ ಬಲಿ..!

ದುಷ್ಕರ್ಮಿಗಳ ಗುಂಡೇಟಿಗೆ ಕಡವೆಯೊಂದು ಬಲಿಯಾದ ಘಟನೆ ಚಿಕ್ಕಮಗಳೂರು ಸಮೀಪದ ಕೊಟ್ಟಿಗೆಹಾರ ಸಮೀಪದ ಚಾರ್ಮಾಡಿ ಘಾಟ್‌ನ ಮಲಯಮಾರುತ ಬಳಿ ನಿನ್ನೆ ನಡೆದಿದೆ.ಬೆಳ್ತಂಗಡಿ : ದುಷ್ಕರ್ಮಿಗಳ ಗುಂಡೇಟಿಗೆ ಕಡವೆಯೊಂದು ಬಲಿಯಾದ ಘಟನೆ ಚಿಕ್ಕಮಗಳೂರು ಸಮೀಪದ ಕೊಟ್ಟಿಗೆಹಾರ...

ಭೂಕಂಪಕ್ಕೆ ನಲುಗಿದ ಟರ್ಕಿ-ಸಿರಿಯಾ: 15,000 ದಾಟಿದ ಮೃತರ ಸಂಖ್ಯೆ-ಏರುತ್ತಲೇ ಇದೆ ಸಾವಿನ ಲೆಕ್ಕ..!

ಟರ್ಕಿ: ಭೂಕಂಪದಿಂದ ನಲುಗಿರುವ ಟರ್ಕಿ ಹಾಗೂ ಸಿರಿಯಾದಲ್ಲಿ ಈ ವರೆಗೆ ಸಾವಿಗೀಡಾದವರ ಸಂಖ್ಯೆ 15,000ಕ್ಕೆ ಏರಿಕೆಯಾಗಿ. ಈ ಪೈಕಿ ಟರ್ಕಿಯಲ್ಲಿ ಒಂದರಲ್ಲಿಯೇ 12,391 ಮಂದಿ ಸಾವನ್ನಪ್ಪಿದ್ದರೆ, ಸಿರಿಯಾದಲ್ಲಿ 2,992 ಮಂದಿ ಸಾವನ್ನಪ್ಪಿದ್ದಾರೆ.ಈ ಅಂಕಿ...