Thursday, December 1, 2022

ಪ್ರವೀಣ್ ನೆಟ್ಟಾರು ಪತ್ನಿಗೆ ಒಲಿದು ಬಂತು ಸರ್ಕಾರಿ ಕೆಲಸ: ಅಧಿಕೃತ ಆದೇಶ ಹೊರಡಿಸಿದ ಸರ್ಕಾರ

ಬೆಂಗಳೂರು: ದುಷ್ಕರ್ಮಿಗಳಿಂದ ಹತ್ಯೆಗೊಳಗಾಗಿದ್ದ ಬೆಳ್ಳಾರೆಯ ಬಿಜೆಪಿ ಯುವ ಮೋರ್ಚಾ ಮುಖಂಡ ಪ್ರವೀಣ್ ನೆಟ್ಟಾರು ಅವರ ಪತ್ನಿ ನೂತನ ಅವರಿಗೆ ಸಿಎಂ ಸಚಿವಾಲಯದಲ್ಲಿ ಗುತ್ತಿಗೆ ಆಧಾರದ ನೆಲೆಯಲ್ಲಿ ನೇಮಕಾತಿ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.


ಈ ನೇಮಕ ಆದೇಶವನ್ನು ಬಿಜೆಪಿ ಕರ್ನಾಟಕದ ಅಫಿಶಿಯಲ್ ಟ್ವಿಟ್ಟರ್ ಪೇಜ್ ನಲ್ಲಿ ಶೇರ್‌ ಮಾಡಿಕೊಂಡಿದ್ದು, ಮತಾಂಧರಿಂದ ಹತ್ಯೆಗೊಳಗಾದ ಬಿಜೆಪಿ ಕಾರ್ಯಕರ್ತ ದಿವಂಗತ ಪ್ರವೀಣ್ ನೆಟ್ಟಾರ್ ಅವರ ಪತ್ನಿ ಶ್ರೀಮತಿ ನೂತನ ಕುಮಾರಿ ಎಂ. ಅವರನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಮುಖ್ಯಮಂತ್ರಿ ಸಚಿವಾಲಯದಲ್ಲಿನ ಗ್ರೂಪ್ ಸಿ ಹುದ್ದೆಗೆ ನೇಮಕಗೊಳಿಸಿ ಆದೇಶ ಹೊರಡಿಸಿದ್ದಾರೆ.


ಬಿಜೆಪಿ ಕಾರ್ಯಕರ್ತರ ಹಿತರಕ್ಷಣೆಗೆ ಬದ್ಧವಾಗಿದೆ ಎಂದು ಹೇಳಿಕೊಂಡಿದೆ.ದಿವಂಗತ ಪ್ರವೀಣ್‌ ನೆಟ್ಟಾರು ಅವರ ಪತ್ನಿಗೆ ಮುಖ್ಯಮಂತ್ರಿ ಸಚಿವಾಲಯದಲ್ಲಿ ಉದ್ಯೋಗ ಕೊಡಿಸುವುದಾಗಿ ಸ್ವತಃ ಸಿಎಂ ಬಸವರಾಜ ಬೊಮ್ಮಾಯಿ ಇತ್ತೀಚೆಗೆ ದೊಡ್ಡಬಳ್ಳಾಪುರದಲ್ಲಿ ನಡೆದ ಬಿಜೆಪಿ ಸಮಾವೇಶದಲ್ಲಿ ಪ್ರಕಟಿಸಿದ್ದರು.

ಅದರಂತೆ ಇದೀಗ ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆಯ ಅಧೀನ ಕಾರ್ಯದರ್ಶಿ ಈ ಸಂಬಂಧ ಅಧಿಕೃತ ಆದೇಶ ಹೊರಡಿಸಿದ್ದಾರೆ.ಸುಳ್ಯ ತಾಲೂಕು ಬೆಳ್ಳಾರೆಯ ನೆಟ್ಟಾರು ನಿವಾಸಿ ನೂತನಾ ಕುಮಾರಿ ಅವರಿಗೆ ಮುಖ್ಯಮಂತ್ರಿಗಳ ಸಚಿವಾಲಯದಲ್ಲಿ ಗುತ್ತಿಗೆ ಆಧಾರದಲ್ಲಿ ಸಿ ಗ್ರೂಪ್‌ ನೌಕರ ಹುದ್ದೆ ನೀಡಲಾಗುತ್ತದೆ.

ಮುಖ್ಯಮಂತ್ರಿಯವರ ಪದಾಧಿಕಾರದವರೆಗೆ ಅಥವಾ ಮುಂದಿನ ಆದೇಶದವರೆಗೆ ಈ ಹುದ್ದೆ ಇರುತ್ತದೆ. ಗುತ್ತಿಗೆ ಆಧಾರದ ಹುದ್ದೆಗಳ ನಿಯಮಾವಳಿಗಳಿಗೆ ಇದು ಒಳಪಟ್ಟಿರುತ್ತದೆ. ವೇತನ ಮಾಸಿಕ 30 ಸಾವಿರದ 350 ರೂಪಾಯಿ ಇರಲಿದೆ.

LEAVE A REPLY

Please enter your comment!
Please enter your name here

Hot Topics

ಬೆಳ್ತಂಗಡಿ: ಅಡಿಕೆ ಮರ ಕಡಿಯುತ್ತಿದ್ದಾಗ ತಲೆಗೆ ಬಿದ್ದು ವೃದ್ಧ ಸಾವು

ಬೆಳ್ತಂಗಡಿ: ಹಳೆ ಅಡಕೆ ಮರ ಕಡಿಯುತ್ತಿರುವಾಗ ಆಕಸ್ಮಿಕವಾಗಿ ವೃದ್ಧನ ತಲೆ ಮೇಲೆ ಬಿದ್ದು ಸಾವನ್ನಪ್ಪಿದ ಘಟನೆ ಬೆಳ್ತಂಗಡಿಯ ಇಂದಬೆಟ್ಟುವಿನಲ್ಲಿ ನಡೆದಿದೆ.ಮುಂಡಾಜೆ ಗ್ರಾಮದ ಮಂಜು ಶ್ರೀ ನಗರದ ಕುಂಟಾಲಪಲ್ಕೆ ನಿವಾಸಿ ಅಣ್ಣು ನಾಲ್ಕೆ(66) ಮೃತ...

ಲವ್ ಜಿಹಾದ್ ವಿರುದ್ಧ ಎಚ್ಚರಿಕೆ ನೀಡಿದ ಹಿಂದೂ ಮುಖಂಡ..! ಪುನೀತ್ ಅತ್ತಾವರ ಪೋಸ್ಟರ್ ವೈರಲ್..

ಮಂಗಳೂರು: ಲವ್ ಜಿಹಾದ್ ವಿರುದ್ದ ರಕ್ತಪಾತದ ಎಚ್ಚರಿಕೆ ನೀಡಿದ ಹಿಂದೂ ಮುಖಂಡನ ಪೋಸ್ಟರ್ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು ಸಂಚಲನ ಸೃಷ್ಟಿಸಿದೆ.ಮಂಗಳೂರು ಭಜರಂಗದಳದ ಜಿಲ್ಲಾ ಸಂಚಾಲಕ ಪುನೀತ್ ಅತ್ತಾವರ ಈ ಪೋಸ್ಟರನ್ನು ತನ್ನ...