ಸುಳ್ಯ: ತನ್ನ ಕಚೇರಿಯಲ್ಲೇ ಉದ್ಯೋಗ ನೀಡಿದ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿಯವರನ್ನು ಭೇಟಿ ಮಾಡಿ ದಿವಂಗತ ಪ್ರವೀಣ್ ನೆಟ್ಟಾರು ಪತ್ನಿ ನೂತನಾ ಅವರು ಧನ್ಯವಾದ ಸಮರ್ಪಿಸಿದ್ದಾರೆ.
ಅನುಕಂಪದ ನೆಲೆಯಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಒತ್ತಾಯದ ಹಿನ್ನಲೆಯಲ್ಲಿ ಹತ್ಯೆಗೊಳಗಾದ ಸುಳ್ಯದ ಬೆಳ್ಳಾರೆಯ ಬಿಜೆಪಿ ಯುವ ಮುಖಂಡ ಪ್ರವೀಣ್ ನೆಟ್ಟಾರು ಪತ್ನಿ ನೂತನ ಅವರಿಗೆ ಸಿಎಂ ಬೊಮ್ಮಾಯಿ ‘ಸಿ ಗ್ರೂಪ್’ ಗೆ ಗುತ್ತಿಗೆ ಆಧಾರದಲ್ಲಿ ಉದ್ಯೋಗವನ್ನು ಕಲ್ಪಿಸಿಕೊಟ್ಟಿದ್ದಾರೆ.
ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಜೊತೆ ಮುಖ್ಯಮಂತ್ರಿಯನ್ನು ಭೇಟಿ ಮಾಡಿದ ಸಂದರ್ಭದಲ್ಲಿ ಪ್ರವೀಣ್ ನೆಟ್ಟಾರು ಕುಟುಂಬಸ್ಥರೂ ಭಾಗಿಯಾಗಿದ್ದರು.