Connect with us

LATEST NEWS

ಬ್ಯಾಂಕಿಂಗ್ ವಂಚನೆಯಿಂದ ಬಚಾವಾಗಬೇಕೆ ಇಲ್ಲಿದೆ ಎಸ್ ಬಿ ಐ ಇಂಡಿಯಾ ನೀಡಿರುವ ಮುನ್ನೆಚ್ಚರಿಕಾ ಕ್ರಮ..!

Published

on

ಬ್ಯಾಂಕಿಂಗ್ ವಂಚನೆಯಿಂದ ಬಚಾವಾಗಬೇಕೆ ಇಲ್ಲಿದೆ ಎಸ್ ಬಿ ಐ ಇಂಡಿಯಾ ನೀಡಿರುವ ಮುನ್ನೆಚ್ಚರಿಕಾ ಕ್ರಮ..!

ನವದೆಹಲಿ: ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ (ಎಸ್ ಬಿಐ) ತನ್ನ ಗ್ರಾಹಕರಿಗೆ ಬ್ಯಾಂಕಿಂಗ್ ವಂಚನೆ ತಪ್ಪಿಸಲು ಎಚ್ಚರಿಕೆಗಳನ್ನ ನೀಡಿದೆ.

ಯಾವುದೇ ಬ್ಯಾಂಕಿಂಗ್ ವಂಚನೆಯನ್ನ ತಪ್ಪಿಸಲು ಗ್ರಾಹಕರು ತಮ್ಮ ಎಟಿಎಂಗಳನ್ನ ಸಂಪೂರ್ಣ ಗೋಪ್ಯವಾಗಿ ವ್ಯವಹರಿಸಬೇಕು ಎಂದು ಎಸ್ ಬಿಐ ಗ್ರಾಹಕರಿಗೆ ಸಲಹೆ ನೀಡಿದೆ.

ಎಟಿಎಂನಿಂದ ಹಣ ಡ್ರಾ ಮಾಡುವುದು ಸುಲಭ ಮತ್ತು ಅನುಕೂಲಕರ. ಆದರೆ, ವಂಚನೆಯ ಸುದ್ದಿಗಳು ಸದಾ ಸುದ್ದಿ ಮಾಡುತ್ವೆ. ಇಂತಹ ಸನ್ನಿವೇಶದಲ್ಲಿ, ಸುರಕ್ಷಿತ ರೀತಿಯಲ್ಲಿ ಡೆಬಿಟ್ ಅಥವಾ ಎಟಿಎಂ ಕಾರ್ಡ್ ಬಳಸುವುದು ಮತ್ತು ಎಟಿಎಂನಿಂದ ವಹಿವಾಟು ನಡೆಸುವಾಗ ಎಚ್ಚರ ವಹಿಸುವುದು ಬಹಳ ಮುಖ್ಯ.

ದೇಶದ ಅತಿದೊಡ್ಡ ಬ್ಯಾಂಕ್ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ (ಎಸ್ ಬಿಐ) ತನ್ನ ಗ್ರಾಹಕರನ್ನ ಸುರಕ್ಷಿತವಾಗಿಡಲು ಕೆಲವು ಮಾರ್ಗಗಳನ್ನು ನೀಡಿದೆ.

ಈ ಬಗ್ಗೆ ಟ್ವೀಟ್ ಮಾಡಿದ ಎಸ್ ಬಿಐ, ‘ನಿಮ್ಮ ಎಟಿಎಂ ಕಾರ್ಡ್ ಮತ್ತು ಪಿನ್ ಬಹಳ ಮುಖ್ಯ. ನಿಮ್ಮ ಹಣವನ್ನ ಸುರಕ್ಷಿತವಾಗಿಡಲು ಕೆಲವು ಸಲಹೆಗಳು ಇಲ್ಲಿವೆ.’

1) ಎಟಿಎಂ-ಕಮ್-ಡೆಬಿಟ್ ಕಾರ್ಡ್ ವಂಚನೆಯನ್ನ ತಪ್ಪಿಸಲು ಎಟಿಎಂ ವಹಿವಾಟುಗಳನ್ನ ಸಂಪೂರ್ಣ ಗೋಪ್ಯವಾಗಿ ಮಾಡಬೇಕು.

2) ಎಟಿಎಂ ಅಥವಾ ಪಿಓಎಸ್ ಮಷೀನ್ʼನಲ್ಲಿ ಎಟಿಎಂ ಕಾರ್ಡ್ ಬಳಸುವಾಗ ಕೈಯಿಂದ ಕೀಪ್ಯಾಡ್ ಕವರ್ ಮಾಡಿ.

3) ನಿಮ್ಮ ಪಿನ್ ಅಥವಾ ಕಾರ್ಡ್ ವಿವರಗಳನ್ನ ಎಂದಿಗೂ ಹಂಚಿಕೊಳ್ಳಬೇಡಿ.

4) ನಿಮ್ಮ ಕಾರ್ಡ್ʼನಲ್ಲಿ ಪಿನ್ ಬರೆಯಬೇಡಿ. ಕಾರ್ಡ್ ವಿವರಗಳು ಅಥವಾ ಪಿನ್ʼಗಳನ್ನು ಕೇಳಲಾಗುವ ಪಠ್ಯ ಸಂದೇಶಗಳು, ಇಮೇಲ್ʼಗಳು ಮತ್ತು ಕರೆಗಳಿಗೆ ಉತ್ತರಿಸಬೇಡಿ.

5) ನಿಮ್ಮ ಪ್ರಸಕ್ತ ಮೊಬೈಲ್ ಸಂಖ್ಯೆ ಬ್ಯಾಂಕಿನಲ್ಲಿ ನೋಂದಾಯಿಸಲಾಗಿದೆ ಎಂಬುದನ್ನ ಖಚಿತಪಡಿಸಿಕೊಳ್ಳಿ, ಇದರಿಂದ ನಿಮ್ಮ ಎಲ್ಲಾ ವ್ಯವಹಾರಗಳಿಗೆ ನೀವು ಎಚ್ಚರಿಕೆಗಳನ್ನ ಸ್ವೀಕರಿಸಬಹುದು.

6) ಎಟಿಎಂ / ಡೆಬಿಟ್ ಕಾರ್ಡ್ ಕಳೆದು ಹೋದರೆ ಅಥವಾ ಕಳುವಾದರೆ, ಕೂಡಲೇ ಬ್ಯಾಂಕಿಗೆ ಮಾಹಿತಿ ನೀಡಿ, ಯಾವುದೇ ಅನಧಿಕೃತ ವಹಿವಾಟುಗಳನ್ನ ವರದಿ ಮಾಡಿ.

7) ವಹಿವಾಟಿನ ಎಸ್ ಎಂಎಸ್ ಮತ್ತು ಬ್ಯಾಂಕ್ ಸ್ಟೇಟ್ ಮೆಂಟ್ ಅನ್ನ ನಿಯಮಿತವಾಗಿ ಪರಿಶೀಲಿಸಿ.

8) ಡೆಬಿಟ್ ಮೊತ್ತಕ್ಕಾಗಿ ನಿಮ್ಮ ಫೋನ್ʼಗೆ ಎಸ್ ಎಂಎಸ್ ಹೋಗುತ್ತೆ ಅದನ್ನ ತಕ್ಷಣ ಪರೀಕ್ಷಿಸಿ.

9) ಎಟಿಎಂ ಬಳಸಲು ಯಾರ ಸಹಾಯವನ್ನೂ ತೆಗೆದುಕೊಳ್ಳಬೇಡಿ ಅಥವಾ ನಿಮ್ಮ ಕಾರ್ಡ್ʼನ್ನ ಯಾರಿಗೂ ಕೊಡಬೇಡಿ.

10) ವ್ಯವಹಾರ ಮಾಡುವಾಗ ಮೊಬೈಲ್ ಫೋನ್ʼನಲ್ಲಿ ಮಾತನಾಡಬೇಡಿ.

ಡೆಬಿಟ್ ಕಾರ್ಡ್ ಬಳಕೆದಾರರಿಗಾಗಿ ಬ್ಯಾಂಕ್ ಇತ್ತೀಚೆಗೆ ಹೊಸ ಸೌಲಭ್ಯವನ್ನ ಪರಿಚಯಿಸಿದೆ. ನಿಮ್ಮ ವಹಿವಾಟುಗಳನ್ನ ಸುರಕ್ಷಿತವಾಗಿರಸುವ ಸಲುವಾಗಿ ಎಸ್ ಬಿಐ 2020ರ ಸೆಪ್ಟೆಂಬರ್ 18ರಿಂದ ದೇಶದ ಎಲ್ಲ ಎಟಿಎಂಗಳಲ್ಲಿ 10 ಸಾವಿರ ಮತ್ತು ಅದಕ್ಕಿಂತ ಹೆಚ್ಚಿನ ಹಣ ಹಿಂತೆಗೆತಕ್ಕೆ ಒನ್ ಟೈಮ್ ಪಾಸ್ ವರ್ಡ್ (ಒಟಿಪಿ) ಸೌಲಭ್ಯವನ್ನು ಪರಿಚಯಿಸಿದೆ.

FILM

ಕುಟುಂಬ ಸಹಿತರಾಗಿ ಬಂದು ಮತದಾನ ಮಾಡಿದ ಸಿಂಪಲ್ ಸ್ಟಾರ್ ರಕ್ಷಿತ್ ಶೆಟ್ಟಿ

Published

on

ಉಡುಪಿ: ಇಂದು ಬೆಳಂಬೆಳಗ್ಗೆ ರಾಜಕೀಯ ನಾಯಕರು,  ಜನಸಾಮಾನ್ಯರು ಮತಗಟ್ಟೆಗೆ ಬಂದು ಮತ ಚಲಾಯಿಸಿದರೆ ಉಡುಪಿಯ ಮತಗಟ್ಟೆಯಲ್ಲಿ ಸಿಂಪಲ್ ಸ್ಟಾರ್ ರಕ್ಷಿತ್ ಶೆಟ್ಟಿ ಮತದಾನ ಮಾಡಿದ್ದಾರೆ.

ಕುಕ್ಕಿಕಟ್ಟೆ ಅನುದಾನಿತ ಖಾಸಗಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಮತಗಟ್ಟೆ ಸಂಖ್ಯೆ 197 ಕ್ಕೆ ಆಗಮಿಸಿ ಮತ ಚಲಾಯಿಸಿದರು. ರಕ್ಷಿತ್ ಶೆಟ್ಟಿ ಮನೆಯ ಮುಂಭಾಗದಲ್ಲೇ ಇರುವ ಮತಗಟ್ಟೆಗೆ ಕುಟುಂಬ ಸಹಿತರಾಗಿ ಬಂದು ಮತದಾನ ಮಾಡಿದರು. ರಕ್ಷಿತ್ ಶೆಟ್ಟಿ ಈ ಸಂದರ್ಭದಲ್ಲಿ ಸೆಲೆಬ್ರೆಟಿಯನ್ನು ಕಂಡ ಇತರ ಮತದಾರರು ಹರ್ಷಚಿತ್ತರಾಗಿ ಸೆಲ್ಫೆ ಕ್ಲಿಕಿಸಲು ಮುಂದಾದ ಘಟನೆ ನಡೆಯಿತು.

Continue Reading

DAKSHINA KANNADA

ಬೈಕ್-ಕಾರು ನಡುವೆ ಅಪ*ಘಾತ; ಓರ್ವ ಮೃ*ತ್ಯು

Published

on

ಅರಂತೋಡು: ಬೈಕ್ ಹಾಗೂ ಕಾರಿನ ನಡುವೆ ಸಂಭವಿಸಿದ ಭೀಕರ ರಸ್ತೆ ಅಪ*ಘಾತದಲ್ಲಿ ಬೈಕ್‌ನ ಹಿಂಬದಿ ಸವಾರ ಮೃ*ತಪಟ್ಟ ಘಟನೆ ಸಂಪಾಜೆ ಕಲ್ಲುಗುಂಡಿ ಸಮೀಪ ದೊಡ್ಡಡ್ಕ ಎಂಬಲ್ಲಿ ಗುರುವಾರ ತಡರಾತ್ರಿ ಸಂಭವಿಸಿದೆ.


ಮತದಾನ ಮಾಡಲು ಊರಿಗೆ ಬರುತ್ತಿದ್ದರು ಎಂದು ಹೇಳಲಾಗುತ್ತಿದ್ದು ಡಿ*ಕ್ಕಿಯ ರಭಸಕ್ಕೆ ಬೈಕ್‌ನ ಹಿಂಬದಿ ಸವಾರನಿಗೆ ಗಂಭೀರ ಗಾಯಗೊಂಡು ಮೃ*ತಪಟ್ಟರೆ ಇನ್ನೋರ್ವನಿಗೆ ಗಾಯವಾಗಿದ್ದು ಆತನನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

ಮೃ*ತರ ವಿವರ ಇನ್ನಷ್ಟೇ ತಿಳಿದುಬರಬೇಕಾಗಿದೆ.

Continue Reading

LATEST NEWS

ಅಯೋಧ್ಯೆಯ ಅಂಗಳದಲ್ಲಿ ಶೂಟಿಂಗ್ ಮಾಡಿದ ಮೊಟ್ಟ ಮೊದಲ ಕನ್ನಡ ಸೀರಿಯಲ್ ಇದು?

Published

on

ಮಹಿಳೆಯರಿಗೆ ಸೀರಿಯಲ್ ನೋಡುವುದಂದರೆ ಒಂತಾರ ಹುಚ್ಚು. ಮನೆಯಲ್ಲೇ ಇರುವ ಮಹಿಳೆಯರು ಕೆಲವೊಮ್ಮೆ ಬೆಳಗ್ಗೆಯಿಂದ ಸಂಜೆಯವರೆಗೆ ಟಿವಿಯಲ್ಲಿ ಸೀರಿಯಲ್ ನೋಡುತ್ತಾ ಇರುತ್ತಾರೆ. ಸೀರಿಯಲ್ ನೋಡೊದು ಮಾತ್ರ ಅಲ್ಲ ಅದರ ಬಗ್ಗೆ ಸಂವಾದ ಕೂಡ ಮನೆಯವರಲ್ಲಿ ಮಾಡುತ್ತಾ ಇರುತ್ತಾರೆ.

ಈ ನಡುವೆ ಅಯೋಧ್ಯೆ ರಾಮಮಂದಿರ ನಿರ್ಮಾಣದ ನಂತರ ದೇಶದ ಜನರು ತುಂಬಾ ಸಂತೋಷದಲ್ಲಿದ್ದಾರೆ. ಅದೆಷ್ಟೋ ಜನ ಹಿಂದೂಗಳ ಕನಸು ನನಸಾದ ಕ್ಷಣ ಎಂದು ಹೇಳಬಹುದು. ಒಮ್ಮೆಯಾದ್ರೂ ಅಯೋಧ್ಯೆಗೆ ಹೋಗಿಬರಬೇಕು ಅಂತಾ ಪ್ಲಾನ್ ಅಂತೂ ಮಾಡ್ತಾ ಇರೋದು ಕಂಡಿತ. ಕೆಲವರು ಹೋಗಿ ಬಂದಿದ್ದಾರೆ ಕೂಡ ಆದರೆ ಇನ್ನು ಕೆಲವರು ಇನ್ನು ಹೋಗಬೇಕು. ಇದುವರೆಗೆ ಅಯೋಧ್ಯೆ ರಾಮಮಂದಿರದಲ್ಲಿ ಯಾವೂದೇ ರೀತಿದ ಫಿಲ್ಮ್ ಶೂಟಿಂಗ್, ಸೀರಿಯಲ್, ಕಿರುಚಿತ್ರ ಯಾವೂದು ಶೂಟಿಂಗ್ ಆಗಲಿಲ್ಲ. ಆದರೇ ಇದೇ ಮೊದಲ ಬಾರಿಗೇ ಕನ್ನಡ ಸೀರಿಯಲ್ ಇಂಡಸ್ಟ್ರಿಯಲ್ಲಿ ಕನ್ಯಾದಾನ ಸೀರಿಯಲ್ ಹೊಸ ದಾಖಲೆ ಬರೆದಿದೆ.

ಉದಯ ಟಿವಿಯಲ್ಲಿ ಪ್ರಸಾರವಾಗೋ ಕನ್ಯಾದಾನ ಧಾರಾವಾಹಿ ಈಗ ಹೊಸ ದಾಖಲೆ ಬರೆದಿದ್ದಾರೆ. ಕನ್ನಡ ಟೆಲಿವಿಷನ್ ಇತಿಹಾಸದಲ್ಲಿ ಪ್ರಪ್ರಥಮ ಬಾರಿಗೆ ಅಯೋಧ್ಯೆಯಲ್ಲಿ ಚಿತ್ರೀಕರಣಗೊಂಡ ಮೊಟ್ಟ ಮೊದಲ ಸೀರಿಯಲ್ ಎಂಬ ಹೆಗ್ಗಳಿಕೆಗೆ ಕನ್ಯಾದಾನ ಧಾರಾವಾಹಿ ಪಾತ್ರವಾಗಿದೆ.

ಜನವರಿ 22ರಂದು ಅಂದ್ರೆ ರಾಮಮಂದಿರದಲ್ಲಿ ಪ್ರಾಣ ಪ್ರತಿಷ್ಠಾಪನೆಯಾದ ನಂತರ ಇಲ್ಲಿಯವೆರೆಗೂ ಯಾವುದೇ ಸಿನಿಮಾವಾಗ್ಲಿ, ಅಥವಾ ಸೀರಿಯಲ್ ಆಗ್ಲಿ ಶೂಟ್ ಮಾಡಿರಲಿಲ್ಲ. ಆದ್ರೆ, ಕನ್ಯಾದಾನ ಧಾರವಾಹಿ ತಂಡ ಫಸ್ಟ್‌ಟೈಮ್‌ ಅಯೋಧ್ಯೆಗೆ ಹೋಗಿ ಚಿತ್ರೀಕರಣ ಮಾಡಿದೆ.

ಈ ಸೀರಿಯಲ್‌ನಲ್ಲಿ ಬಹುತೇಕ ಪಾತ್ರಗಳು ಒಂದಲ್ಲ ಒಂದು ಸಮಸ್ಯೆ ಎದುರಿಸ್ತಿವೆ. ಹಾಗಾಗಿ ರಾಮನ ದರ್ಶನ ಪಡೆದು ಆ ಕಷ್ಟಗಳಿಂದ ಹೊರಬರಬೇಕು ಎಂದು ನಿರ್ಧರಿಸಿ, ರಾಮಮಂದಿರಕ್ಕೆ ಹೋಗಿ ಬಾಲರಾಮನ ದರ್ಶನ ಪಡೆದಿದ್ದಾರೆ. ಅಯೋಧ್ಯೆಯಲ್ಲಿ ಶೂಟಿಂಗ್ ಮಾಡಿರೋ ಬಗ್ಗೆ ಸೀರಿಯಲ್​ ತಂಡ ಸಂತಸ ಹಂಚಿಕೊಂಡಿದೆ.

Continue Reading

LATEST NEWS

Trending