BANTWAL
ಬಂಟ್ವಾಳ: ಅಂಬ್ಯುಲೆನ್ಸ್ನಲ್ಲೇ ಹೆಣ್ಣು ಮಗುವಿಗೆ ಜನ್ಮ ನೀಡಿದ ಗರ್ಭಿಣಿ
ಬಂಟ್ವಾಳ: ಹೆರಿಗೆ ನೋವು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಆಸ್ಪತ್ರೆಗೆ ತೆರಳಲೆಂದು 108 ಅಂಬ್ಯುಲೆನ್ಸ್ ವಾಹನದಲ್ಲಿ ಮಂಗಳೂರಿಗೆ ಹೋಗುವ ವೇಳೆ ದಾರಿ ಮಧ್ಯೆ ಹೆಣ್ಣು ಮಗುವಿಗೆ ಜನ್ಮ ನೀಡಿದ ಘಟನೆ ಮಂಗಳೂರು ಹೊರವಲಯದ ಪಡೀಲ್ ನ ಅಡ್ಯಾರ್ ಕಣ್ಣೂರು ಬಳಿ ನಡೆದಿದೆ.
ವೇಣೂರು ನಿವಾಸಿ ರಮೇಶ್ ಅವರ ಪತ್ನಿ ಗೌರಮ್ಮ ಅವರು ಹೆಣ್ಣು ಮಗುವಿಗೆ ಜನ್ಮ ನೀಡಿದ ಮಹಿಳೆಯಾಗಿದ್ದಾರೆ.
ಗೌರಮ್ಮನವರಿಗೆ ಇಂದು ಬೆಳಗ್ಗೆ ಹೆರಿಗೆ ನೋವು ಉಂಟಾದ ಹಿನ್ನೆಲೆ ಡೆಲಿವರಿಗೆಂದು ಬೆಳ್ತಂಗಡಿಯಿಂದ ಒಮ್ನಿ ಕಾರಿನಲ್ಲಿ ಬಂಟ್ವಾಳದ ಪುಂಜಾಲಕಟ್ಟೆ ವರೆಗೆ ಕರೆದುಕೊಂಡು ಬರಲಾಗಿದೆ. ಆ ಬಳಿಕ ಅವರನ್ನು 108 ಅಂಬ್ಯುಲೆನ್ಸ್ ನ ಮೂಲಕ ಮಂಗಳೂರು ಲೇಡಿಗೋಶನ್ ಆಸ್ಪತ್ರೆಗೆ ದಾಖಲಿಸಲು ಹೋಗುತ್ತಿದ್ದಂತೆ ದಾರಿ ಮಧ್ಯೆ ಕಣ್ಣೂರು ಎಂಬಲ್ಲಿ ನೋವು ಹೆಚ್ಚಾಗಿ ಹೆರಿಗೆಯಾಗಿದೆ.
ತಕ್ಷಣ ಅಂಬುಲೆನ್ಸ್ನಲ್ಲಿದ್ದ ಆರೋಗ್ಯ ಸಿಬ್ಬಂದಿ ಉಮೇಶ್ ಶೆಟ್ಟಿ ಅವರ ನೇತೃತ್ವದಲ್ಲಿ ಹೆರಿಗೆ ಮಾಡಲಾಯಿತು. ಸದ್ಯ ತಾಯಿ ಮಗುವನ್ನು ಲೇಡಿಗೋಶನ್ ಆಸ್ಪತ್ರೆಗೆ ಸೇರಿಸಲಾಗಿದ್ದು ಆರೋಗ್ಯದಿಂದ ಇದ್ದಾರೆ. ಚಾಲಕ ಜಗನ್ನಾಥ ಶೆಟ್ಟಿ ಅವರು ಸಹಕಾರ ನೀಡಿದ್ದಾರೆ.
BANTWAL
ಚುನಾವಣಾ ಮತದಾನ ಹಿನ್ನೆಲೆ ಜಿಲ್ಲೆಯಲ್ಲಿ ಮೂರು ದಿನ ಮದ್ಯ ನಿಷೇಧ
ದ.ಕ: ಲೋಕಸಭಾ ಚುನಾವಣಾ ಹಿನ್ನೆಲೆಯಲ್ಲಿ ಮೊದಲ ಹಂತದ ಮತದಾನ ಹಾಗೂ ಚುನಾವಣಾ ಮತ ಎಣಿಕಾ ಕಾರ್ಯ ನಡೆಯಲಿರುವ ಹಿನ್ನೆಲೆ ದ.ಕ ಕ್ಷೇತ್ರ ಸೇರಿದಂತೆ 14 ಕ್ಷೇತ್ರಗಳಲ್ಲಿ ಎ.24ರ ಸಂಜೆ 6 ಗಂಟೆಯಿಂದ ಮದ್ಯ ನಿಷೇಧ ಮಾಡಲಾಗಿದೆ.
ಮುಂದೆ ಓದಿ..; ಉಡುಪಿ : ಕರಾವಳಿ ಜನರ ರಕ್ತದಲ್ಲೇ ಹಿಂದುತ್ವ ಇದೆ : ಬಿ.ವೈ.ವಿಜಯೇಂದ್ರ
ಏ. 24ರ ಸಂಜೆ 6ಗಂಟೆಯಿಂದ ಏಪ್ರಿಲ್ 26ರ ಮಧ್ಯರಾತ್ರಿವರೆಗೆ ಎಲ್ಲಾ ಹೋಟೆಲ್, ರೆಸ್ಟೋರೆಂಟ್ ಮತ್ತು ಪರವಾನಿಗೆ ಹೊಂದಿರುವ ಅಂಗಡಿಗಳಲ್ಲಿ ಯಾವುದೇ ರೀತಿಯ ಮದ್ಯಪಾನ, ಮಾರಾಟವನ್ನು ನಿಷೇಧ ಮಾಡಲಾಗಿದೆ, ಪರವಾನಗಿ ಪಡೆಯದ ಆವರಣಗಳಲ್ಲಿ ಮದ್ಯ ಶೇಖರಣೆಯನ್ನು ನಿಷೇಧ ಮಾಡಲಾಗಿದೆ. ಜಿಲ್ಲೆಯಾದ್ಯಂತ ಸಿಆರ್ಪಿಸಿ ಕಲಂ 144ರ ಅನ್ವಯ ಏಪ್ರಿಲ್ 24ರ ಸಂಜೆ 6ರಿಂದ ಪ್ರಾರಂಭಿಸಿ ಏಪ್ರಿಲ್ 26ರ ಮತದಾನ ಮುಕ್ತಾಯದ ವರೆಗೂ ಸೆಕ್ಷನ್ 144 ರಡಿ ಪ್ರತಿಬಂಧಕಾಜ್ಞೆಯನ್ನು ಜಿಲ್ಲೆಯಾದ್ಯಂತ ಹೊರಡಿಸಲಾಗಿದೆ. ಅದೇ ರೀತಿ ಏ. 24ರ ಸಂಜೆ 6 ರಿಂದ ಮತದಾನ ಕೊನೆಗೊಳ್ಳುವ ಏ.26ರ ಅವಧಿಯಲ್ಲಿ ಧ್ವನಿವರ್ಧಕಗಳನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ ಎಂದು ದ.ಕ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಆದೇಶ ನಿಡಿದ್ದಾರೆ.
BANTWAL
ಬಂಟ್ವಾಳ : ಬಾವಿಯೊಳಗೆ ರಿಂಗ್ ಅಳವಡಿಸಲು ಇಳಿದ ಇಬ್ಬರು ಸಾ*ವು
ಬಂಟ್ವಾಳ : 30 ಅಡಿ ಇರುವ ಆಳದ ಬಾವಿಗೆ ರಿಂಗ್ ಅಳವಡಿಸಲು ಇಳಿದ ಇಬ್ಬರು ಕೂಲಿ ಕಾರ್ಮಿಕರು ಬಾವಿಯೊಳಗೆ ಆಕ್ಸಿಜನ್ ಸಿಗದೇ ಸಾ*ವನ್ನಪ್ಪಿದ ಘಟನೆ ಬಂಟ್ವಾಳ ತಾಲೂಕಿನ ಕೇಪು ಗ್ರಾಮದ ಪಡಿಬಾಗಿಲಿನಲ್ಲಿ ನಡೆದಿದೆ.
ಮೃ*ತರನ್ನು ಪರ್ತಿಪ್ಪಾಡಿ ನಿವಾಸಿ ಇಬ್ರಾಹಿಂ(40) ಹಾಗೂ ಮಲಾರ್ ನಿವಾಸಿ ಆಲಿ (24) ಎಂದು ಗುರುತಿಸಲಾಗಿದೆ.
ಇದನ್ನೂ ಓದಿ : ಡಿವೈಡರ್ ಗೆ ಡಿ*ಕ್ಕಿ ಹೊಡೆದ ಬೈಕ್; ಸವಾರ ಸ್ಥಳದಲ್ಲೇ ಸಾ*ವು
ಮೃ*ತ ಇಬ್ರಾಹಿಂ ಎಂಬವರು ಸುಮಾರು 20 ವರ್ಷಗಳಿಂದ ಬಾವಿಗೆ ರಿಂಗ್ ಹಾಕುವಲ್ಲಿ ಪರಿಣಿತರಾಗಿದ್ದರು. ಮೃ*ತ ದೇಹವನ್ನು ಬಾವಿಯಿಂದ ಮೇಲಕ್ಕೆತ್ತಲಾಗಿದೆ.
BANTWAL
ಪುತ್ತೂರು ಜಾತ್ರೆಯಿಂದ ಹಿಂದಿರುಗುವ ವೇಳೆ ಜವರಾಯನ ಅಟ್ಟಹಾಸ; ಜೀಪ್ ಡಿಕ್ಕಿ; ಬೈಕ್ ಸವಾರ ಸಾ*ವು
ಪುತ್ತೂರು : ಜೀಪೊಂದು ಬೈಕ್ ಗೆ ಡಿ*ಕ್ಕಿಯಾಗಿ ಬೈಕ್ ಸವಾರ ಸ್ಥಳದಲ್ಲೇ ಮೃ*ತಪಟ್ಟು, ಅವರ ಇಬ್ಬರು ಮಕ್ಕಳು ಗಂಭೀ*ರ ಗಾ*ಯಗೊಂಡ ಘಟನೆ ಬುಧವಾರ ರಾತ್ರಿ ಪುತ್ತೂರು ಸುಬ್ರಹ್ಮಣ್ಯ ರಸ್ತೆಯಲ್ಲಿನ ನರಿಮೊಗರು ಗ್ರಾಮದ ಪಾಪೆತ್ತಡ್ಕ ಎಂಬಲ್ಲಿ ನಡೆದಿದೆ. ಪುತ್ತೂರು ತಾಲೂಕಿನ ಬಡಕ್ಕೋಡಿ ಕಡ್ಯ ನಿವಾಸಿ ಪ್ರಸ್ತುತ ಮಂಗಳೂರಿನಲ್ಲಿ ಲಾರಿ ಚಾಲಕರಾಗಿರುವ ಲೋಕೇಶ್ (48) ಮೃ*ತಪಟ್ಟವರು. ಅವರ ಇಬ್ಬರು ಮಕ್ಕಳು ಗಂಭೀ*ರ ಗಾಯಗೊಂಡಿದ್ದು, ಗಾ*ಯಾಳುಗಳನ್ನು ಪುತ್ತೂರಿನ ಆಸ್ಪತ್ರೆಗೆ ದಾಖಲಿಸಲಾಗಿದೆ.
ಲೋಕೇಶ್ ಅವರು ಮಕ್ಕಳೊಂದಿಗೆ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಾಲಯದಲ್ಲಿ ನಡೆಯುತ್ತಿರುವ ಜಾತ್ರೆಗೆ ಆಗಮಿಸಿ ಹಿಂದಿರುಗುತ್ತಿದ್ದ ವೇಳೆಯಲ್ಲಿ ಮುಂಭಾಗದಿಂದ ಆಗಮಿಸಿದ ಜೀಪು ಅವರು ಚಲಾಯಿಸುತ್ತಿದ್ದ ಬೈಕ್ ಗೆ ಡಿ*ಕ್ಕಿಯಾಗಿತ್ತು.
ಇದನ್ನೂ ಓದಿ : ಕರಡಿಗೂ ಕ್ಯಾಪ್ಟನ್ ಗೂ ಫೈಟ್; ಮನೆಯಂಗಳದಲ್ಲೇ ಕಾದಾಟ! ವೀಡಿಯೋ ವೈರಲ್
ಡಿ*ಕ್ಕಿಯ ರಭಸಕ್ಕೆ ಬೈಕ್ ಎರಡು ತುಂಡಾಗಿದೆ. ಸುಮಾರು 50 ಮೀಟರ್ ದೂರದ ತನಕ ಬೈಕನ್ನು ಜೀಪ್ ಎಳೆದುಕೊಂಡು ಹೋಗಿದೆ. ಈ ಸಂದರ್ಭದಲ್ಲಿ ರಸ್ತೆಗೆ ಎಸೆಯಲ್ಪಟ್ಟ ಲೋಕೇಶ್ ಅವರು ಸ್ಥಳದಲ್ಲಿಯೇ ಸಾ*ವನ್ನಪ್ಪಿದ್ದಾರೆ. ಪುತ್ತೂರು ಸಂಚಾರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.