Thursday, October 21, 2021

ವಿವಾಹ ಪೂರ್ವ ಸಮ್ಮತಿಯ ಲೈಂಗಿಕ ಸಂಬಂಧ ಅತ್ಯಾಚಾರವಲ್ಲ: ಮಹತ್ವದ ತೀರ್ಪು

ಚಾಮರಾಜನಗರ: ವಿವಾಹ ಪೂರ್ವದಲ್ಲಿ ಪರಸ್ಪರ ಸಮ್ಮತಿಯ ಮೇರೆಗೆ ನಡೆಸುವ ಲೈಂಗಿಕ ಸಂಬಂಧ ಅತ್ಯಾಚಾರವಲ್ಲ ಎಂದು ಚಾಮರಾಜನಗರ ಜಿಲ್ಲಾ ಸೆಷನ್ಸ್ ನ್ಯಾಯಾಲಯ ಮಹತ್ವದ ತೀರ್ಪು ನೀಡಿದ್ದು, ತಡವಾಗಿ ಬೆಳಕಿಗೆ ಬಂದಿದೆ.


ಮಲೆ ಮಹದೇಶ್ವರ ಬೆಟ್ಟ ಪೊಲೀಸ್ ಠಾಣೆಯಲ್ಲಿ ಕಾನ್‌ಸ್ಟೇಬಲ್‌ ಆಗಿದ್ದ ಓರ್ವ ಯುವಕ ವಿರುದ್ಧ ಅದೇ ಠಾಣೆಯ ಮಹಿಳಾ ಕಾನ್‌ಸ್ಟೇಬಲ್‌ ಒಬ್ಬರು ತನ್ನನ್ನು ಪ್ರೀತಿಸಿ,

ಮದುವೆಯಾಗುವುದಾಗಿ ನಂಬಿಸಿ ಲೈಂಗಿಕ ಸಂಬಂಧ ಬೆಳೆಸಿ ವಂಚನೆ ಮಾಡಿದ್ದಾರೆ ಎಂದು 2018ರ ಜೂನ್‌ 6ರಂದು ಮಲೆಮಹದೇಶ್ವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದರು.
ಪ್ರಕರಣದ ವಿಚಾರಣೆ ಕೈಗೆತ್ತಿಕೊಂಡ ಜಿಲ್ಲಾ ಸೆಷನ್ಸ್‌ ನ್ಯಾಯಾಲಯದ ನ್ಯಾಯಾಧೀಶರಾದ ಸದಾಶಿವ ಎಸ್‌. ಸುಲ್ತಾನಪುರಿ ಅವರು,

ಮದುವೆಯಾಗುವ ಭರವಸೆ ನೀಡಿ ಲೈಂಗಿಕ ಸಂಪರ್ಕಕ್ಕೆ ಒಪ್ಪಿಗೆ ಪಡೆದಿದ್ದ ಆರೋಪಿಯು ಆ ವೇಳೆ ಅಪರಾಧಿಕ ಮನಸ್ಥಿತಿ ಹೊಂದಿರಲಿಲ್ಲ.

ಅಪರಾಧ ಎಸಗುವ ಉದ್ದೇಶದಿಂದಲೇ ಲೈಂಗಿಕ ಸಂಬಂಧ ಬೆಳೆಸಿಲ್ಲ. ಆರೋಪಿ ಹಾಗೂ ಸಂತ್ರಸ್ತಳ ವೈವಾಹಿಕ ಪೂರ್ವ ಸಂಬಂಧದ ಸಾಂಪ್ರದಾಯಿಕ ಆಚರಣೆಗಳಲ್ಲಿ ತೊಡಕು ಉಂಟಾಗಿ ಮದುವೆಯಾಗಲು ಅಡ್ಡಿಯಾದರೆ ಅದು ಅಪರಾಧಿಕ ಮನಸ್ಥಿತಿಯಲ್ಲ.

ಹೀಗಾಗಿ ಆರೋಪಿ ವರ್ತನೆ ಅಪರಾಧವೆಂದು ಪರಿಗಣಿಸಲು ಸಾಧ್ಯವಿಲ್ಲ ಎಂದು ಆದೇಶ ನೀಡಿ ಪ್ರಕರಣವನ್ನು ವಜಾಗೊಳಿಸಿದ್ದಾರೆ.
ಆರೋಪಿ ಪರ ವಕೀಲರು ದೋಷರೋಪ ಪಟ್ಟಿ ರಚಿಸಲು ಇದು ಸೂಕ್ತ ಪ್ರಕರಣವಲ್ಲ.

ಆರೋಪಿಯು ಸಂತ್ರಸ್ತೆಗಿಂತ 10 ವರ್ಷ ಚಿಕ್ಕವನಾಗಿದ್ದು, ಸ್ನೇಹಿತರಾಗಿದ್ದರು. ಆರೋಪಿ ಬೇರೆ ಮದುವೆಯಾದ ಕಾರಣ ಸಂತ್ರಸ್ತೆಯು ಸುಳ್ಳು ಪ್ರಕರಣ ದಾಖಲಿಸಿದ್ದಾರೆ.

ಅಂತಿಮ ವರದಿಯ ಜತೆ ಸಲ್ಲಿಸಿರುವ ಸಾಕ್ಷ್ಯಾಧಾರಗಳ ಆಧಾರದ ಮೇಲೆ ವಿಚಾರಣೆ ನಡೆಸಲು ಸಾಧ್ಯವಿಲ್ಲ ಎಂಬ ಆರೋಪಿ ಪರ ವಕೀಲರು ವಾದವನ್ನು ಪುರಸ್ಕರಿಸಿದ ನ್ಯಾಯಾಲಯ,

ಆರೋಪಿಗಳಾದ ನಂದಕುಮಾರ್‌, ಶ್ರೀನಿವಾಸ, ನಾಗೇಶ್, ಸೆಲ್ವಿ ಅವರನ್ನು ದೋಷಮುಕ್ತರೆಂದು ಘೋಷಿಸಿ ಖುಲಾಸೆಗೊಳಿಸಿದೆ.

ಆರೋಪಿಯಾಗಿದ್ದ ಕಾನ್‌ಸ್ಟೇಬಲ್‌ ಅವರು ಸದ್ಯ ಚಾಮರಾಜನಗರ ಪೂರ್ವ ಪೊಲೀಸ್‌ ಠಾಣೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ.

ಆರೋಪಿಗಳ ಪರ ಬಿ. ಪ್ರಸನ್ನಕುಮಾರ್‌ ವಕಾಲತ್ತು ವಹಿಸಿ ವಾದ ಮಂಡಿಸಿದ್ದರು.

Hot Topics

ಸಾಲದ ಹೊರೆ ತಾಳಲಾರದೆ ವೀಡಿಯೋ ಮೂಲಕ ಗುಡ್​ಬೈ ಹೇಳಿ ಶಿಕ್ಷಕ ದಂಪತಿ ಆತ್ಮಹತ್ಯೆ

ವಿಜಯವಾಡ: ಶಾಲೆ ನಡೆಸುತ್ತಿದ್ದ ಶಿಕ್ಷಕ ದಂಪತಿ ಸಾಲದ ಹೊರೆ ತಡೆಯಲಾರದೇ ವಿಷಸೇವಿಸಿ ಆತ್ಮಹತ್ಯೆ ಹಾದಿ ಹಿಡಿರುವ ದಾರುಣ ಘಟನೆ ಆಂಧ್ರ ಪ್ರದೇಶದ ಕರ್ನೂಲ್​ ಜಿಲ್ಲೆಯಲ್ಲಿ ನಡೆದಿದೆ. ಸಾವಿಗೂ ಮುನ್ನ ಶಿಕ್ಷಕ ದಂಪತಿ ತಮ್ಮ...

ಕಾಪುವಿನಲ್ಲಿ ಕಾರು ಅಪಘಾತ ಗಂಭೀರವಾಗಿ ಗಾಯಗೊಂಡಿದ್ದ ಯುವತಿ ಸಾವು..!

ಕಾಪುವಿನಲ್ಲಿ ಕಾರು ಅಪಘಾತ ಗಂಭೀರವಾಗಿ ಗಾಯಗೊಂಡಿದ್ದ ಯುವತಿ ಸಾವು..! ಉಡುಪಿ : ಉಡುಪಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಭಾರಿ ಮಳೆಯ ನಡುವೆ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಚಾಲಕನ ನಿಯಂತ್ರಣ ತಪ್ಪಿದ ಕಾರೊಂದು ಕಾಪು ಬಳಿ...

ಮಗು ಸೇರಿದಂತೆ ದಂಪತಿ ಸಾಮೂಹಿಕ ಆತ್ಮಹತ್ಯೆ ಹಳೆಯಂಗಡಿಯಲ್ಲಿ ಹೃದಯ ವಿದ್ರಾವಕ ಘಟನೆ..!

ಮಗು ಸೇರಿದಂತೆ ದಂಪತಿ ಸಾಮೂಹಿಕ ಆತ್ಮಹತ್ಯೆ ಹಳೆಯಂಗಡಿಯಲ್ಲಿ ಹೃದಯ ವಿದ್ರಾವಕ ಘಟನೆ..! ಮಂಗಳೂರು:  ಎಂಟು ವರ್ಷದ ಮಗು ಸೇರಿದಂತೆ ದಂಪತಿ ಸಾಮೂಹಿಕ ಆತ್ಮಹತ್ಯೆ ಮಾಡಿರುವ ದಾರುಣ ಘಟನೆ ಹಳೆಯಂಗಡಿ ಬಳಿಯ ಕಲ್ಲಾಪು ರೈಲ್ವೇ ಗೇಟ್...