DAKSHINA KANNADA
ಮೂಡುಬಿದಿರೆ ಆಳ್ವಾಸ್ನಲ್ಲಿ ನಡೆಯಲಿರೋ ಜಾಂಬೂರಿ ಉತ್ಸವಕ್ಕೆ ಸಜ್ಜು-4 ಎಕರೆ ಜಾಗದಲ್ಲಿ ಬರೀ ತರಕಾರಿ ಹಣ್ಣುಗಳದ್ದೇ ಕಾರುಬಾರು
ಮೂಡುಬಿದಿರೆ: ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ವತಿಯಿಂದ ಡಿಸೆಂಬರ್ 21ರಿಂದ 27ರವರೆಗೆ ನಡೆಯುವ ಅಂತಾರಾಷ್ಟ್ರೀಯ ಸ್ಕೌಟ್ಸ್ ಗೈಡ್ಸ್ ಸಾಂಸ್ಕೃತಿಕ ಜಾಂಬೂರಿ ಉತ್ಸವದ ಕೊನೆ ಹಂತದ ತಯಾರಿ ಭರದಿಂದ ನಡೆದಿದ್ದು, ಈಗಾಗಲೇ ಮೂಡುಬಿದಿರೆಗೆ ಸಾಹಸ್ರ ಸಂಖ್ಯೆಯಲ್ಲಿ ವಿದ್ಯಾರ್ಥಿಗಳು, ಶಿಕ್ಷಕರು ಆಗಮಿಸತೊಡಗಿದ್ದಾರೆ.
ಜಾಂಬೂರಿ ಉತ್ಸವದಲ್ಲಿ ಆಳ್ವಾಸ್ ಶಿಕ್ಷಣಪ್ರತಿಷ್ಠಾನದ ಅಧ್ಯಕ್ಷ ಮೋಹನ್ ಆಳ್ವಾ ಅವರ ಪರಿಕಲ್ಪನೆಯಲ್ಲಿ ಕೃಷಿ ಮೇಳವೂ ನಡೆಯಲಿದ್ದು, ಈಗಾಗಲೇ ಕೃಷಿ ತೋಟ ನಿರ್ಮಾಣಗೊಂಡಿದೆ. ದೇಶದ ಮೂರನೇ ಎರಡರಷ್ಟು ಜನ ಕೃಷಿಯಲ್ಲಿ ತೊಡಗಿಕೊಂಡಿದ್ದು, ಜಾಂಬೂರಿಗೆ ದೇಶ ವಿದೇಶಗಳಿಂದ ಬರುವ ಸುಮಾರು 50 ಸಾವಿರ ಮಂದಿ ವಿದ್ಯಾರ್ಥಿಗಳಿಗೆ ಕೃಷಿಯನ್ನು ಪರಿಚಯಿಸುವ ಕೃಷಿಕರ ಬದುಕಿನ ಬಗೆಯನ್ನು ತಿಳಿಸುವ ಉದ್ದೇಶ ಹೊಂದಲಾಗಿದೆ.
ಒಟ್ಟು 12 ಎಕ್ರೆ ಪ್ರದೇಶದಲ್ಲಿ 4 ಎಕ್ರೆಯನ್ನು ಕೇವಲ ತರಕಾರಿ ಬೆಳೆಯಲು ಮೀಸಲು ಇರಿಸಲಾಗಿದೆ. ಮೂರ್ನಾಲ್ಕು ತಿಂಗಳ ಹಿಂದಿನಿಂದಲೇ ತಯಾರಿ ನಡೆದಿದ್ದು, ಕುಂಬಳಕಾಯಿ, ಚೀನಿ ಕಾಯಿ, ಸೋರೆಕಾಯಿ, ಹಾಗಲ ಕಾಯಿ, ಮುಳ್ಳು ಸೌತೆ, ಅಡುಗೆ ಸೌತೆ, ಹೀರೆಕಾಯಿ, ಪಡುವಲ ಕಾಯಿ, ಕನ್ನಡ ಪೀರೆ ಅಂದರೆ ಹೀರೆ, ಬದನೆ, ಬೆಂಡೆ, ಸಿಮ್ಲಾ ಮೆಣಸು, ದೊಣ್ಣೆ ಮೆಣಸು, ವಿವಿಧ ಬಗೆಯ ಸೊಪ್ಪು, ನವಿಲು ಕೋಸು, ಟೊಮೇಟೊ, ತೊಂಡೆ ಕಾಯಿ, ಜೋಳದ ತೆನೆ ಇತ್ಯಾದಿ ಈಗಾಗಲೇ ಬೆಳೆದು ಕಂಗೊಳಿಸುತ್ತಿವೆ.
ಸಾಂಪ್ರದಾಯಿಕ ಭತ್ತದ 550 ತಳಿಗಳು ಇಲ್ಲಿವೆ. ವಿದೇಶಿ ತರಕಾರಿಗಳಲ್ಲಿ ಲೆಟ್ಯುಸ್, ಬ್ರುಕೋಲಿ ಸೊಪ್ಪು, ಝುಚಿನಿ, ಪಂಪ್ ಕಿನ್, 6 ಬಗೆಯ ಸೋರೆ ಕಾಯಿ, 70 ವಿಧದ ಬಾಳೆ, 700 ದೇಶೀಯ ಭತ್ತದ ತಳಿಗಳು, ಸಿರಿ ಧಾನ್ಯ, ಎಣ್ಣೆ ಕಾಳುಗಳು, 40 ಬಗೆಯ ಪುರಾತನ ಸಾಂಪ್ರದಾಯಿಕ ಗೆಡ್ಡೆ, ಗೆಣಸು, 150ಕ್ಕೂ ಅಧಿಕ ತೆಂಗಿನ ಕಾಯಿ ಕಲಾಕೃತಿಗಳೂ ಸಿದ್ಧಗೊಂಡಿವೆ.
ಇದಲ್ಲದೇ 200 ಬಗೆಯ ಆಯುರ್ವೇದೀಯ ಔಷಧ ಭರಿತ ಹಣ್ಣು ಮತ್ತು ಕಾಯಿ, 20 ಬಗೆಯ ಅಡಿಕೆಗಳು, 110 ಬಗೆಯ ವಿದೇಶಿ ಹಣ್ಣುಗಳಲ್ಲದೇ, 100 ಬಗೆಯ ಅಕ್ಕಿ, ತರಕಾರಿ ಮತ್ತು ಹಣ್ಣುಗಳಲ್ಲಿ ಕರಾವಳಿ ಸಂಸ್ಕೃತಿ ಬಿಂಬಿಸುವ ಕಲಾಕೃತಿಗಳು ಇರಲಿವೆ. ಗುಲಾಬಿ, ಸೂರ್ಯಕಾಂತಿ, ಜೀನ್ಯಾ, ಡೇಲಿಯಾ ಸೇರಿದಂತೆ ವಿವಿಧ ಬಗೆಯ ಹೂಗಳೂ ಇಲ್ಲಿವೆ.
ಇದರ ಜೊತೆಗೆ ಸುಮಾರು 600 ಮಳಿಗೆಗಳಲ್ಲಿ ಯಂತ್ರೋಪಕರಣಗಳು, ನರ್ಸರಿ, ಕೃಷಿಗೆ ಪೂರಕವಾದ ಗುಡಿ ಕೈಗಾರಿಕೆ ಅಡಿಕೆ ಸುಲಿಯುವ ಯಂತ್ರ, ಬಹುಬಗೆಯ ಬುಟ್ಟಿ, ಕರಕುಶಲ ವಸ್ತುಗಳ ಪ್ರದರ್ಶನ, ಮಾರಾಟ ಸಂಯೋಜಿಸಲಾಗಿದೆ.
DAKSHINA KANNADA
ಮತದಾನದ ವೇಳೆ ಮತಗಟ್ಟೆಗೆ ಮೊಬೈಲ್ ಕೊಂಡುಯ್ಯುತ್ತೀರಾ? ಹಾಗಿದ್ರೆ ಇದನ್ನು ಗಮನಿಸಿ
ಮಂಗಳೂರು: ಲೋಕಸಭಾ ಚುನಾವಣಾ ಹಿನ್ನೆಲೆ ಕರ್ನಾಟಕದ 14 ಕ್ಷೇತ್ರಗಳಲ್ಲಿ ಎ.26ರಂದು ಮತದಾನ ನಡೆಯಲಿದೆ. ಈ ಬಾರಿ ಚುನಾವಣೆಯ ಸಂದರ್ಭ ಮೊಬೈಲ್ ಫೋನ್ಗಳನ್ನು ಮತಗಟ್ಟೆಗಳಿಗೆ ತೆಗೆದುಕೊಂಡು ಹೋಗುವ ಮೊದಲು ಯೋಚಿಸಿ. ಏಕೆಂದರೆ, ಬೂತ್ಗಳ ಆವರಣದಲ್ಲಿ ಅವುಗಳ ಬಳಕೆಗೆ ನಿರ್ಬಂಧ ವಿಧಿಸಲಾಗಿದೆ. ಬೂತ್ಗಳಿಗೆ ಹೋಗುವ ಜನರನ್ನು ಕೂಲಂಕುಷವಾಗಿ ತಪಾಸಣೆ ಮಾಡಲಾಗುವುದು. ಮತದಾರರು ಮತ ಚಲಾಯಿಸಲು ಹೋಗುವ ಮೊದಲು ಫೋನ್ಗಳನ್ನು ಇಡಲು ವಿಶೇಷ ವ್ಯವಸ್ಥೆ ಮಾಡಲಾಗಿರುತ್ತದೆ ಎಂದು ಕರ್ನಾಟಕ ಮುಖ್ಯ ಚುನಾವಣಾಧಿಕಾರಿ ಕಚೇರಿಯ ಅಧಿಕಾರಿಗಳು ತಿಳಿಸಿದ್ದಾರೆ.
ಈ ಹಿಂದೆ ಮತಗಟ್ಟೆಗೆ ಮೊಬೈಲ್ ಕೊಂಡೊಯ್ದು ಫೊಟೊ ಹಾಗೂ ವೀಡಿಯೋಗಳನ್ನು ಮಾಡಿದ್ದ ಘಟನೆ ನಡೆದಿತ್ತು. ಹಾಗಾಗಿ ಈ ಬಾರಿ ಮೊಬೈಲ್ ಫೋನ್ ಗಳನ್ನು ಮತಗಟ್ಟೆಯ ಒಳಗಡೆ ಪ್ರವೇಶಿಸುವ ಮೊದಲು ಪ್ರಿಸೈಡಿಂಗ್ ಆಫೀಸರ್ ಬಳಿ ಟ್ರೇಯಲ್ಲಿ ಇಡುವ ವ್ಯವಸ್ಥೆ ಮಾಡಲು ನಿರ್ಧರಿಸಲಾಗಿದೆ. ಆ ಟ್ರೇಯನ್ನು ಪೊಲೀಸರು ಅಥವಾ ಚುನಾವಣಾ ಅಧಿಕಾರಿಗಳು ಕಾವಲು ಕಾಯುತ್ತಾರೆ ಎಂದು ಅಧಿಕಾರಿ ತಿಳಿಸಿದ್ದಾರೆ.
ಮುಂದೆ ಓದಿ..; ಚುನಾವಣಾ ಮತದಾನ ಹಿನ್ನೆಲೆ ಜಿಲ್ಲೆಯಲ್ಲಿ ಮೂರು ದಿನ ಮದ್ಯ ನಿಷೇಧ
ಮತದಾನ ಮಾಡುವಾಗ ಫೋನ್ಗಳನ್ನು ಟ್ರೇನಲ್ಲಿ ಇಡಲು ಸೂಚಿಸಬೇಕೇ ಅಥವಾ ಅವುಗಳನ್ನು ಸೈಲೆಂಟ್ ಮೋಡ್ನಲ್ಲಿ ಇಡುವಂತೆ ಹೇಳಬೇಕೇ ಎಂಬ ನಿರ್ಧಾರ ಕೈಗೊಳ್ಳುವುದನ್ನು ಪ್ರಿಸೈಡಿಂಗ್ ಆಫೀಸರ್ ವಿವೇಚನೆಗೆ ಬಿಡಲಾಗಿದೆ. ಕೆಲವು ಸಂದರ್ಭಗಳಲ್ಲಿ, ಮತಗಟ್ಟೆಯೊಳಗೆ ಫೋನ್ಗಳನ್ನು ಅನುಮತಿಸದಿರಲು ಚುನಾವಣಾಧಿಕಾರಿಗಳು ನಿರ್ಧರಿಸಿದ್ದಾರೆ. ಇದು ಕೆಲವೇ ಸೆಕೆಂಡುಗಳ ವಿಷಯವಷ್ಟೆ. ಮತದಾನದ ಸಮಯದಲ್ಲಿ ಗೋಪ್ಯತೆಯನ್ನು ಗಮನದಲ್ಲಿಟ್ಟುಕೊಂಡು ಈ ಕ್ರಮ ಕೈಗೊಳ್ಳಲಾಗಿದೆ ಎಂದು ಅಧಿಕಾರಿ ತಿಳಿಸಿದ್ದಾರೆ.
ಮತದಾರರು ಮತದಾನ ಮಾಡುವಾಗ ಅವುಗಳನ್ನು ಬಳಸಬಾರದು ಎಂದು ಮಾತ್ರ ನಾವು ಹೇಳುತ್ತಿದ್ದೇವೆ ಎಂದು ಅಧಿಕಾರಿ ಹೇಳಿದ್ದಾರೆ. ಸಿಇಒ, ಜಿಲ್ಲಾಧಿಕಾರಿಗಳು ಮತ್ತು ಇತರ ಚುನಾವಣಾಧಿಕಾರಿಗಳು ಭಾಗವಹಿಸಿದ್ದ ಸಭೆಯಲ್ಲಿ ಈ ವಿಷಯ ಚರ್ಚಿಸಲಾಗಿದೆ ಎಂದು ಅವರು ಮಾಹಿತಿ ನೀಡಿದ್ದಾರೆ.
BELTHANGADY
ಸಾಕುನಾಯಿಯನ್ನು ಹೊತ್ತೊಯ್ದ ಚಿರತೆ..!! ಭಯ ಭೀತರಾದ ಜನತೆ
ಬೆಳ್ತಂಗಡಿ: ಇತ್ತೀಚೆಗೆ ಕಾಡಿನಲ್ಲಿರುವ ಪ್ರಾಣಿಗಳು ನಾಡಿಗೆ ಬರೋದು ಕಾಮನ್ ಆಗಿ ಬಿಟ್ಟಿದೆ. ಹೆಚ್ಚಾಗಿ ಕಾಡಾನೆಗಳು ಊರಿಗೆ ಬಂದು ಕೃಷಿಗಳನ್ನು ನಾಶ ಮಾಡ್ತಾಇತ್ತು. ಆದರೆ ಈಗೀಗ ಹುಲಿ ಚಿರತೆಗಳು ಕೂಡ ನಾಡಿನತ್ತ ಮುಖ ಮಾಡ್ತಾ ಇದೆ.
ಮುಂದೆ ಓದಿ..; ಕಾಗೆ ನಿಜಕ್ಕೂ ನಮ್ಮ ಪಿತೃನಾ..?
ಬೆಳ್ತಂಗಡಿಯ ವೇಣೂರು ಪಚ್ಚೇರಿ ಪರಿಸರದಲ್ಲಿ ಚಿರತೆಯೊಂದು ರಾತ್ರಿ ಹೊತ್ತು ಓಡಾಡುವುದು ಕಂಡು ಬಂದಿದೆ. ಈ ಘಟನೆಯಿಂದ ಊರಿನ ಜನ ಭಯಭೀತರಾಗಿದ್ದಾರೆ. ಹಚ್ಚೇರಿ ಗೋಳಿದಡ್ಕ ನಿವಾಸಿ ಕೃಷ್ಣಾನಂದ ಭಟ್ ಅವರ ಸಾಕುನಾಯಿಯನ್ನು ಚಿರತೆ ಕಚ್ಚಿ ಕೊಂಡೊಯ್ಯುವ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಕೃಷ್ಣಾನಂದ ಅವರು ಚಿರತೆಯಿಂದ ರಕ್ಷಣೆ ಕೋರಿ ವೇಣೂರು ಅರಣ್ಯ ಇಲಾಖಾಧಿಕಾರಿಗಳಿಗೆ ಮನವಿ ಸಲ್ಲಿಸಿದ್ದಾರೆ.
BANTWAL
ಚುನಾವಣಾ ಮತದಾನ ಹಿನ್ನೆಲೆ ಜಿಲ್ಲೆಯಲ್ಲಿ ಮೂರು ದಿನ ಮದ್ಯ ನಿಷೇಧ
ದ.ಕ: ಲೋಕಸಭಾ ಚುನಾವಣಾ ಹಿನ್ನೆಲೆಯಲ್ಲಿ ಮೊದಲ ಹಂತದ ಮತದಾನ ಹಾಗೂ ಚುನಾವಣಾ ಮತ ಎಣಿಕಾ ಕಾರ್ಯ ನಡೆಯಲಿರುವ ಹಿನ್ನೆಲೆ ದ.ಕ ಕ್ಷೇತ್ರ ಸೇರಿದಂತೆ 14 ಕ್ಷೇತ್ರಗಳಲ್ಲಿ ಎ.24ರ ಸಂಜೆ 6 ಗಂಟೆಯಿಂದ ಮದ್ಯ ನಿಷೇಧ ಮಾಡಲಾಗಿದೆ.
ಮುಂದೆ ಓದಿ..; ಉಡುಪಿ : ಕರಾವಳಿ ಜನರ ರಕ್ತದಲ್ಲೇ ಹಿಂದುತ್ವ ಇದೆ : ಬಿ.ವೈ.ವಿಜಯೇಂದ್ರ
ಏ. 24ರ ಸಂಜೆ 6ಗಂಟೆಯಿಂದ ಏಪ್ರಿಲ್ 26ರ ಮಧ್ಯರಾತ್ರಿವರೆಗೆ ಎಲ್ಲಾ ಹೋಟೆಲ್, ರೆಸ್ಟೋರೆಂಟ್ ಮತ್ತು ಪರವಾನಿಗೆ ಹೊಂದಿರುವ ಅಂಗಡಿಗಳಲ್ಲಿ ಯಾವುದೇ ರೀತಿಯ ಮದ್ಯಪಾನ, ಮಾರಾಟವನ್ನು ನಿಷೇಧ ಮಾಡಲಾಗಿದೆ, ಪರವಾನಗಿ ಪಡೆಯದ ಆವರಣಗಳಲ್ಲಿ ಮದ್ಯ ಶೇಖರಣೆಯನ್ನು ನಿಷೇಧ ಮಾಡಲಾಗಿದೆ. ಜಿಲ್ಲೆಯಾದ್ಯಂತ ಸಿಆರ್ಪಿಸಿ ಕಲಂ 144ರ ಅನ್ವಯ ಏಪ್ರಿಲ್ 24ರ ಸಂಜೆ 6ರಿಂದ ಪ್ರಾರಂಭಿಸಿ ಏಪ್ರಿಲ್ 26ರ ಮತದಾನ ಮುಕ್ತಾಯದ ವರೆಗೂ ಸೆಕ್ಷನ್ 144 ರಡಿ ಪ್ರತಿಬಂಧಕಾಜ್ಞೆಯನ್ನು ಜಿಲ್ಲೆಯಾದ್ಯಂತ ಹೊರಡಿಸಲಾಗಿದೆ. ಅದೇ ರೀತಿ ಏ. 24ರ ಸಂಜೆ 6 ರಿಂದ ಮತದಾನ ಕೊನೆಗೊಳ್ಳುವ ಏ.26ರ ಅವಧಿಯಲ್ಲಿ ಧ್ವನಿವರ್ಧಕಗಳನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ ಎಂದು ದ.ಕ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಆದೇಶ ನಿಡಿದ್ದಾರೆ.
- DAKSHINA KANNADA7 days ago
ಮಂಗಳೂರು : ಬೈಕ್ಗೆ ಕಾರು ಡಿಕ್ಕಿ; ಇಹಲೋಕ ತ್ಯಜಿಸಿದ ವಿದ್ಯಾರ್ಥಿ
- DAKSHINA KANNADA7 days ago
ಸೀರೆ ಉಟ್ರೆ ಕ್ಯಾನ್ಸರ್ ಬರುತ್ತಂತೆ..! ಏನಿದು ಸೀರೆ ಕ್ಯಾನ್ಸರ್?
- DAKSHINA KANNADA6 days ago
“ಸೆಕ್ಸ್” ನನ್ನ ಸಾಮರ್ಥ್ಯದ ರಹಸ್ಯ…! ಮಾಜಿ ಸಂಸದೆಯ ಹೇಳಿಕೆ ವೈರಲ್..!
- DAKSHINA KANNADA6 days ago
ಕೊರಗಜ್ಜನ ಫೋಟೋವನ್ನು ಮನೆಯಲ್ಲಿ ಇಟ್ಟು ಆರಾಧಿಸಬಹುದಾ?