Connect with us

BELTHANGADY

ಭರದಿಂದ ಸಾಗುತ್ತಿದೆ ಧರ್ಮಸ್ಥಳ ಲಕ್ಷದೀಪೋತ್ಸವಕ್ಕೆ ಸಕಲ ಸಿದ್ಧತೆ

Published

on

ಬೆಳ್ತಂಗಡಿ: ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಇದೇ ನವೆಂಬರ್‌ 19 ರಂದ 23 ರ ವರೆಗೆ ಲಕ್ಷದೀಪೋತ್ಸವ ಜರಗಲಿದ್ದು, ಕ್ಷಣ ಗಣನೆ ಆರಂಭವಾಗಿದೆ. ಪೂರ್ವ ಸಿದ್ಧತೆಗಳು ಭರದಿಂದ ನಡೆಯುತ್ತಿವೆ.

ವಿವಿಧ ಸ್ಟಾಲ್ ಗಳ ವ್ಯವಸ್ಥೆ, ಅವುಗಳಿಗೆ ವಿದ್ಯುತ್‌ ಸಂಪರ್ಕ ಇತ್ಯಾದಿಗಳನ್ನು ಕಲ್ಪಿಸುವ ಕೆಲಸಗಳಾಗುತ್ತಿವೆ.

ಶ್ರೀ ಕ್ಷೇತ್ರದಲ್ಲಿ ಕಾರ್ತಿಕ ಮಾಸದಲ್ಲಿ ಮಂಜುನಾಥ ಸ್ವಾಮಿಯ ಸನ್ನಿಧಾನದಲ್ಲಿ ಧರ್ಮಾಧಿಕಾರಿ ಡಾ| ಡಿ.ವೀರೇಂದ್ರ ಹೆಗ್ಗಡೆ ಅವರ ಉಪಸ್ಥಿತಿಯಲ್ಲಿ ಶ್ರೀ ಮಂಜುನಾಥ ಸ್ವಾಮಿಯ ಲಕ್ಷದೀಪೋತ್ಸವ ಹಾಗೂ ಸರ್ವಧರ್ಮ ಮತ್ತು ಸಾಹಿತ್ಯ ಸಮ್ಮೇಳನ ಪ್ರತೀ ವರ್ಷ ನಡೆಯುತ್ತಿದ್ದು, 90ನೇ ಅಧಿವೇಶನ ಈ ವರ್ಷ ನಡೆಯುತ್ತಿದೆ.


ನ.19ರಂದು ಹೊಸ ಕಟ್ಟೆ ಉತ್ಸವ ಹಾಗೂ ವಸ್ತು ಪ್ರದರ್ಶನ ಉದ್ಘಾಟನೆ, ನ. 20ರಂದು ಕರೆ ಕಟ್ಟೆ ಉತ್ಸವ, ನ. 21ರಂದು ಲಲಿತೋದ್ಯಾನ ಉತ್ಸವ ಹಾಗೂ ಲಲಿತಕಲಾ ಗೋಷ್ಠಿ, ನ.22ರಂದು ಕಂಚಿಮಾರು ಕಟ್ಟೆ ಉತ್ಸವ ಹಾಗೂ ಸರ್ವಧರ್ಮ ಸಮ್ಮೇಳನ ನಡೆಯಲಿದೆ.


ನ.23ರಂದು ಗೌರಿಮಾರುಕಟ್ಟೆ ಉತ್ಸವ ಮತ್ತು ಸಾಹಿತ್ಯ ಸಮ್ಮೇಳನ ನ.24ರಂದು ಶ್ರೀ ಚಂದ್ರನಾಥ ಸ್ವಾಮಿಯ ಸಮವಸರಣ ಪೂಜೆ ನೆರವೇರಲಿದೆ.

ನ. 22ರಂದು ಸಂಜೆ 5ಕ್ಕೆ ಅಮೃತವರ್ಷಿಣಿ ಸಭಾಭವನದಲ್ಲಿ ನಡೆಯುವ ಸರ್ವಧರ್ಮ ಸಮ್ಮೇಳನವನ್ನು ಕೇಂದ್ರದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವಾಲಯದ ಸಚಿವೆ ಸ್ಮತಿ ಇರಾನಿ ಉದ್ಘಾಟಿಸುವರು. ಶಿವಮೊಗ್ಗದ ವಕೀಲ ಎಂ.ಆರ್‌. ಸತ್ಯನಾರಾಯಣ ಅಧ್ಯಕ್ಷತೆ ವಹಿಸಲಿದ್ದು, ಫಾ| ಮಾರ್ಸೆಲ್‌ ಪಿಂಟೋ, ಹಾಸಿಂಪೀರ ಇ. ವಾಲೀಕಾರ ಮತ್ತು ಮುನಿರಾಜ ರೆಂಜಾಳ ಉಪನ್ಯಾಸ ನೀಡಲಿದ್ದಾರೆ.


ಸಾಹಿತ್ಯ ಸಮ್ಮೇಳನವನ್ನು ನ. 23 ರಂದು ಸಂಜೆ 5ಕ್ಕೆ ರಾಷ್ಟ್ರಪ್ರಶಸ್ತಿ ವಿಜೇತ ಶ್ರೇಷ್ಠ ಚಲನಚಿತ್ರ ನಿರ್ದೇಶಕ ಪಿ.ಶೇಷಾದ್ರಿ ಉದ್ಘಾಟಿಸಲಿದ್ದು, ರಾಷ್ಟ್ರಪ್ರಶಸ್ತಿ ಪುರಸ್ಕೃತ ವಿದ್ವಾಂಸ ಡಾ| ಎಚ್‌.ವಿ. ನಾಗರಾಜ ರಾವ್‌ ಅಧ್ಯಕ್ಷತೆ ವಹಿಸಲಿದ್ದಾರೆ. ಸತ್ಯೇಶ್‌ ಎನ್‌. ಬೆಳ್ಳೂರು, ರವೀಂದ್ರ ಭಟ್‌ ಐನಕೈ, ಮತ್ತು ಡಾ| ಗೀತಾ ವಸಂತ ಮತ್ತಿತರರು ಉಪನ್ಯಾಸ ನೀಡುವರು.

ವಸ್ತು ಪ್ರದರ್ಶನದಲ್ಲಿ 198 ಮಳಿಗೆಗಳಿರುತ್ತವೆ. ವಸ್ತುಪ್ರದರ್ಶನ ಮಂಟಪ ಮತ್ತು ಅಮೃತವರ್ಷಿಣಿ ಸಭಾಭವನದಲ್ಲಿ ಪ್ರತಿ ದಿನವೂ ವೈವಿಧ್ಯಮಯ ಸಾಂಸ್ಕೃತಿಕ ಕಾರ್ಯಕ್ರಮಗಳು ಜರಗಲಿವೆ.

ನ. 24ರಂದು ಸಂಜೆ 6.30 ರಿಂದ ಶ್ರೀ ಚಂದ್ರನಾಥ ಸ್ವಾಮಿಯ ಬಸದಿಯಲ್ಲಿ ಬಾಹುಬಲಿ ಸೇವಾ ಸಮಿತಿ ಶ್ರಾವಕರಿಂದ ಶ್ರೀ ಚಂದ್ರನಾಥ ಸ್ವಾಮಿಯ ಸಮವಸರಣ ಪೂಜೆ ನಡೆಯಲಿದೆ.

ಶ್ರೀಮತ್‌ ಪುಷ್ಪದಂತ ಭೂತಬಲಿ ವಿರಚಿತ ಷಟ್ಖಂಡಾಗಮಾಧಾರಿತ ಸಿದ್ಧಾಂತ ಚಿಂತಾಮಣಿ-3 ಪುಸ್ತಕ ಬಿಡುಗಡೆ ಕಾರ್ಯಕ್ರಮ, ಜೈನಸಾಹಿತ್ಯವಿಶಾರದೆ ವೀಣಾ ರಘುಚಂದ್ರ ಶೆಟ್ಟಿ ಸಮ್ಮಾನ ಕಾರ್ಯಕ್ರಮ ನಡೆಯಲಿದೆ. ಬಳಿಕ ಶ್ರಾವಕ-ಶ್ರಾವಕಿಯರಿಂದ ಜಿನ ಭಜನ ಕಾರ್ಯಕ್ರಮವಿದೆ.

 

BELTHANGADY

ಸಾಕುನಾಯಿಯನ್ನು ಹೊತ್ತೊಯ್ದ ಚಿರತೆ..!! ಭಯ ಭೀತರಾದ ಜನತೆ

Published

on

ಬೆಳ್ತಂಗಡಿ: ಇತ್ತೀಚೆಗೆ ಕಾಡಿನಲ್ಲಿರುವ ಪ್ರಾಣಿಗಳು ನಾಡಿಗೆ ಬರೋದು ಕಾಮನ್‌ ಆಗಿ ಬಿಟ್ಟಿದೆ. ಹೆಚ್ಚಾಗಿ ಕಾಡಾನೆಗಳು ಊರಿಗೆ ಬಂದು ಕೃಷಿಗಳನ್ನು ನಾಶ ಮಾಡ್ತಾಇತ್ತು. ಆದರೆ ಈಗೀಗ ಹುಲಿ ಚಿರತೆಗಳು ಕೂಡ ನಾಡಿನತ್ತ ಮುಖ ಮಾಡ್ತಾ ಇದೆ.

chitha

ಮುಂದೆ ಓದಿ..; ಕಾಗೆ ನಿಜಕ್ಕೂ ನಮ್ಮ ಪಿತೃನಾ..?

ಬೆಳ್ತಂಗಡಿಯ ವೇಣೂರು ಪಚ್ಚೇರಿ ಪರಿಸರದಲ್ಲಿ ಚಿರತೆಯೊಂದು ರಾತ್ರಿ ಹೊತ್ತು ಓಡಾಡುವುದು ಕಂಡು ಬಂದಿದೆ. ಈ ಘಟನೆಯಿಂದ ಊರಿನ ಜನ ಭಯಭೀತರಾಗಿದ್ದಾರೆ. ಹಚ್ಚೇರಿ ಗೋಳಿದಡ್ಕ ನಿವಾಸಿ ಕೃಷ್ಣಾನಂದ ಭಟ್ ಅವರ ಸಾಕುನಾಯಿಯನ್ನು ಚಿರತೆ ಕಚ್ಚಿ ಕೊಂಡೊಯ್ಯುವ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಕೃಷ್ಣಾನಂದ ಅವರು ಚಿರತೆಯಿಂದ ರಕ್ಷಣೆ ಕೋರಿ ವೇಣೂರು ಅರಣ್ಯ ಇಲಾಖಾಧಿಕಾರಿಗಳಿಗೆ ಮನವಿ ಸಲ್ಲಿಸಿದ್ದಾರೆ.

Continue Reading

BANTWAL

ಚುನಾವಣಾ ಮತದಾನ ಹಿನ್ನೆಲೆ ಜಿಲ್ಲೆಯಲ್ಲಿ ಮೂರು ದಿನ ಮದ್ಯ ನಿಷೇಧ

Published

on

ದ.ಕ: ಲೋಕಸಭಾ ಚುನಾವಣಾ ಹಿನ್ನೆಲೆಯಲ್ಲಿ ಮೊದಲ ಹಂತದ ಮತದಾನ ಹಾಗೂ ಚುನಾವಣಾ ಮತ ಎಣಿಕಾ ಕಾರ್ಯ ನಡೆಯಲಿರುವ ಹಿನ್ನೆಲೆ ದ.ಕ ಕ್ಷೇತ್ರ ಸೇರಿದಂತೆ 14 ಕ್ಷೇತ್ರಗಳಲ್ಲಿ ಎ.24ರ ಸಂಜೆ 6 ಗಂಟೆಯಿಂದ ಮದ್ಯ ನಿಷೇಧ ಮಾಡಲಾಗಿದೆ.

drinks ban for 3 days

ಮುಂದೆ ಓದಿ..; ಉಡುಪಿ : ಕರಾವಳಿ ಜನರ ರಕ್ತದಲ್ಲೇ ಹಿಂದುತ್ವ ಇದೆ : ಬಿ.ವೈ.ವಿಜಯೇಂದ್ರ

ಏ. 24ರ ಸಂಜೆ 6ಗಂಟೆಯಿಂದ ಏಪ್ರಿಲ್ 26ರ ಮಧ್ಯರಾತ್ರಿವರೆಗೆ ಎಲ್ಲಾ ಹೋಟೆಲ್, ರೆಸ್ಟೋರೆಂಟ್ ಮತ್ತು ಪರವಾನಿಗೆ ಹೊಂದಿರುವ ಅಂಗಡಿಗಳಲ್ಲಿ ಯಾವುದೇ ರೀತಿಯ ಮದ್ಯಪಾನ, ಮಾರಾಟವನ್ನು ನಿಷೇಧ ಮಾಡಲಾಗಿದೆ, ಪರವಾನಗಿ ಪಡೆಯದ ಆವರಣಗಳಲ್ಲಿ ಮದ್ಯ ಶೇಖರಣೆಯನ್ನು ನಿಷೇಧ ಮಾಡಲಾಗಿದೆ. ಜಿಲ್ಲೆಯಾದ್ಯಂತ ಸಿಆರ್ಪಿಸಿ ಕಲಂ 144ರ ಅನ್ವಯ ಏಪ್ರಿಲ್ 24ರ ಸಂಜೆ 6ರಿಂದ ಪ್ರಾರಂಭಿಸಿ ಏಪ್ರಿಲ್ 26ರ ಮತದಾನ ಮುಕ್ತಾಯದ ವರೆಗೂ ಸೆಕ್ಷನ್ 144 ರಡಿ ಪ್ರತಿಬಂಧಕಾಜ್ಞೆಯನ್ನು ಜಿಲ್ಲೆಯಾದ್ಯಂತ ಹೊರಡಿಸಲಾಗಿದೆ. ಅದೇ ರೀತಿ ಏ. 24ರ ಸಂಜೆ 6 ರಿಂದ‌ ಮತದಾನ ಕೊನೆಗೊಳ್ಳುವ ಏ.26ರ ಅವಧಿಯಲ್ಲಿ ಧ್ವನಿವರ್ಧಕಗಳನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ ಎಂದು ದ.ಕ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಆದೇಶ ನಿಡಿದ್ದಾರೆ.

Continue Reading

BELTHANGADY

ಬೆಳ್ತಂಗಡಿ: ಕೆರೆಗೆ ಬಿದ್ದು ಕಾಡುಕೋಣ ಸಾ*ವು.. ಸಾರ್ವಜನಿಕರಿಂದ ಅಂತ್ಯಸಂಸ್ಕಾರ

Published

on

ಬೆಳ್ತಂಗಡಿ: ಇಲ್ಲಿನ ಬೆಳಾಲು ಗ್ರಾಮಕ್ಕೆ ಸಂಬಂಧಪಟ್ಟಂತೆ ಕೊಯ್ಯೂರು ರಸ್ತೆಯ ಬದ್ಯಾರು ಎಂಬಲ್ಲಿ ಹೆಚ್ ಪದ್ಮ‌ಗೌಡ ಎಂಬವರ ತೋಟದ ಕೆರೆಯಲ್ಲಿ ಬೃಹತ್ ಗಾತ್ರದ ಕಾಡುಕೋಣದ ಮೃತ*ದೇಹ ಪತ್ತೆಯಾಗಿದೆ.

bison

ಮುಂದೆ ನೋಡಿ..; ಆರು ವರ್ಷಗಳ ಕಾಲ ಚುನಾವಣೆಗೆ ಸ್ಪರ್ಧಿಸದಂತೆ ಕೆಎಸ್ ಈಶ್ವರಪ್ಪ ಬಿಜೆಪಿ ಪಕ್ಷದಿಂದ ಉಚ್ಛಾಟನೆ..!

ಈ ಕೆರೆಗೆ ಸುತ್ತ ಕಾಂಕ್ರೀಟ್ ರಿಂಗ್ ಅಳವಡಿಸಿದ್ದು ನೀರು ಕುಡಿಯಲು ಬಂದ ಕಾಡುಕೋಣ ಮೂರ್ನಾಲ್ಕು ದಿನಗಳ ಹಿಂದೆಯೇ ಬಿದ್ದು ಸಾವನ್ನಪ್ಪಿರುವ ಸಾಧ್ಯತೆ ಇದೆ. ಹೆಚ್ಚೂ ಕಮ್ಮಿ 10 ಕ್ವಿಂಟಾಲ್ ತೂಕ ಹೊಂದಿರಬಹುದೆಂದು ಅಂದಾಜಿಸಲಾಗಿದ್ದು, ಕೊಳೆತು ವಾಸನೆ ಬೀರುತ್ತಿತ್ತು. ಶೌರ್ಯ ವಿಪತ್ತು ತಂಡಕ್ಕೆ ಬಂದ ಮಾಹಿತಿಯಂತೆ ಉಜಿರೆ- ಬೆಳಾಲು ಘಟಕದ ಸಂಯೋಜಕ ಸುಲೈಮಾನ್ ಬೆಳಾಲು, ಮುಳುಗು ಪರಿಣತ ಹರೀಶ ಕೂಡುಗೆ, ಮುಹಮ್ಮದ್ ಶರೀಫ್ ಬೆಳಾಲು, ಅವಿನಾಶ್ ಭಿಡೆ ಅರಸಿಮನಕ್ಕಿ, ರವೀಂದ್ರ ಉಜಿರೆ, ಸುರೇಂದ್ರ ಉಜಿರೆ, ಅನಿಲ್ ಚಾರ್ಮಾಡಿ, ಶೌರ್ಯ ಘಟಕದ ಮಾಸ್ಟರ್ ಪ್ರಕಾಶ್ ಧರ್ಮಸ್ಥಳ, ನಳಿನ್ ಕುಮಾರ್ ಧರ್ಮಸ್ಥಳ ಮೊದಲಾದವರು ಸಾರ್ವಜನಿಕರ ನೆರವಿನೊಂದಿಗೆ ಕಾರ್ಯಾಚರಣೆ ನಡೆಸಿ ಕಾಡುಕೋಣದ ಕಳೇಬರವನ್ನು ಮೇಲೆತ್ತಿದ್ದಾರೆ. ಬಳಿಕ ಪಶುವೈದ್ಯಾಧಿಕಾರಿ ಮರಣೋತ್ತರ ಪರೀಕ್ಷೆ ಪ್ರಕ್ರೀಯೆ ನಡೆಸಿದ್ದು, ತೋಟದಲ್ಲೇ ಹೊಂಡ ತೋಡಿ ಅಂತ್ಯಸಂಸ್ಕಾರ ನಡೆಸಲಾಗಿದೆ.

Continue Reading

LATEST NEWS

Trending