Connect with us

    LATEST NEWS

    ಸಂಸತ್‌ ಬಜೆಟ್ ಅಧಿವೇಶನಕ್ಕೆ ಸಿದ್ಧತೆ..! ಆರಂಭದಲ್ಲೇ ಒಕ್ಕೂಟದಲ್ಲಿ ಅಸಮಾಧಾನ..!

    Published

    on

    ನವದೆಹಲಿ : ಮೋದಿ ಕ್ಯಾಬಿನೆಟ್‌ನ ಪ್ರಮಾಣ ವಚನ ಸ್ವೀಕಾರ ಮುಗಿದಿದ್ದು, ಸಂಸತ್‌ ಬಜೆಟ್ ಅಧಿವೇಶನಕ್ಕೆ ಸಿದ್ಧತೆ ನಡೆದಿದೆ. ಜೂನ್ 24 ರಂದು ಬಜೆಟ್ ಅಧಿವೇಶನ ನಡೆಯುವ ಸಾಧ್ಯತೆ ಇದ್ದು, ಜೂನ್ 26 ರಂದು ಸ್ಪೀಕರ್ ಆಯ್ಕೆ ನಡೆಯುವ ಸಾಧ್ಯತೆ ಇದೆ. ಮೂಲಗಳ ಪ್ರಕಾರ, ಸಂಸತ್ತಿನ 8 ದಿನಗಳ ಅಧಿವೇಶನ ಜೂನ್ 24 ರಿಂದ ಜುಲೈ 3 ರ ವರೆಗೆ ನಡೆಯುವ ಸಾಧ್ಯತೆ ಇದೆ.


    2024 ರ ಲೋಕಸಭಾ ಚುನಾವಣೆಯ ಫಲಿತಾಂಶ ಜೂನ್‌ 4 ರಂದು ಪ್ರಕಟವಾಗಿದ್ದು, ಬಿಜೆಪಿ ನೇತೃತ್ವದ ಎನ್‌ಡಿಎ ಮೈತ್ರಿ ಕೂಟ 293 ಸ್ಥಾನಗಳನ್ನು ಗಳಿಸಿತ್ತು. ಹೀಗಾಗಿ ನರೇಂದ್ರ ಮೋದಿ ನೇತೃತ್ವದ ಎನ್‌ಡಿಎ ಸರ್ಕಾರ ರಚನೆ ಮಾಡಲಿದ್ದು, ಜೂನ್ 9 ರಂದು ಮೋದಿ ಪ್ರಮಾಣ ವಚನ ಸ್ವೀಕರಿಸಿದ್ದು, ಅವರು ಜೊತೆ 72 ಸಂಸದರು ಕ್ಯಾಬಿನೆಟ್‌ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ. ಜೂನ್ 10 ರಂದು ಸಚಿವರಿಗೆ ಖಾತೆ ಹಂಚಿಕೆ ಕೂಡಾ ಮಾಡಲಾಗಿದೆ. ಮೈತ್ರಿ ಪಕ್ಷಗಳಿಗೆ 13 ಖಾತೆಯನ್ನು ಹಂಚಿಕೆ ಮಾಡಲಾಗಿದೆ.

    ಇದನ್ನೂ ಓದಿ : ಅರ್ಜುನ ಸಾವಿನ ಬೆನ್ನಲ್ಲೇ ದಸರಾ ಆನೆ ಅಶ್ವತ್ಥಾಮ ದುರಂತ ಸಾವು..!

    ಸ್ಪೀಕರ್ ಸ್ಥಾನವನ್ನು ಕೇಳಿರುವ ಟಿಡಿಪಿ ಮುಖ್ಯಸ್ಥ ಚಂದ್ರ ಬಾಬು ನಾಯ್ಡು ಸದ್ಯಕ್ಕೆ ತನ್ನ ಪಟ್ಟು ಸಡಿಲಿಸಿಲ್ಲ ಎಂದು ಮೂಲಗಳು ತಿಳಿಸಿದೆ. ಅದೇ ರೀತಿ ಎರಡು ಸ್ಥಾನ ಗೆದ್ದ ಜೆಡಿಎಸ್‌ಗೆ ಸಚಿವ ಸ್ಥಾನ ನೀಡಲಾಗಿದ್ದು, 7 ಸ್ಥಾನ ಗೆದ್ದ ಶಿವಸೇನೆ ಶಿಂಧೆ ಬಣಕ್ಕೆ ಒಂದು ರಾಜ್ಯ ಖಾತೆ ನೀಡಿದ ಬಗ್ಗೆಯೂ ಅಪಸ್ವರ ಕೇಳಿ ಬಂದಿದೆ. ಹೀಗಾಗಿ ಎನ್‌ಡಿಎ ನಲ್ಲಿ ಸಣ್ಣ ಗೊಂದಲಗಳು ಆರಂಭವಾಗಿದ್ದು, ಜೂನ್‌ 24 ರ ಬಳಿಕ ಎಲ್ಲಾ ಗೊಂದಲಗಳಿಗೆ ಎನ್‌ಡಿಎ ತೆರೆ ಎಳೆಯುವ ಸಾಧ್ಯತೆ ಕೂಡಾ ಇದೆ.

    DAKSHINA KANNADA

    ಉಳ್ಳಾಲ : ಟಿಪ್ಪರ್‌ – ಸ್ಕೂಟರ್‌ ಅಪಘಾ*ತ; ಚಿಕಿತ್ಸೆ ಫಲಕಾರಿಯಾಗದೆ ಸವಾರ ಸಾ*ವು

    Published

    on

    ಉಳ್ಳಾಲ : ಟಿಪ್ಪರ್‌ ಹಾಗೂ ಸ್ಕೂಟರ್‌ ನಡುವೆ ಸಂಭವಿಸಿದ ಅಪಘಾತದಲ್ಲಿ ಗಂ*ಭೀರ ಗಾ*ಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದ ಸ್ಕೂಟರ್ ಸವಾರ ಇಹಲೋಕ ತ್ಯಜಿಸಿದ್ದಾರೆ. ಪಾವೂರು ಮಲಾರು ಅಕ್ಷರನಗರ ನಿವಾಸಿ ವಿಶ್ವನಾಥ್‌ ಆಚಾರ್ಯ ಎಂಬವರ ಪುತ್ರ ಗಣೇಶ್‌ ಆಚಾರ್ಯ ( 27) ಇಂದು ಚಿಕಿತ್ಸೆ ಫಲಕಾರಿಯಾಗದೆ ಕೊ*ನೆಯುಸಿರೆಳೆದಿದ್ದಾರೆ.

    ಫಸ್ಟ್‌ ನ್ಯುರೋ ಆಸ್ಪತ್ರೆಯಲ್ಲಿ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯಲು ಸಹಕರಿಸಿದ ಹಿತೈಷಿಗಳ, ಸಂಬಂಧಿಕರ, ಸ್ನೇಹಿತರ ಪ್ರಾರ್ಥನೆ ಕೊನೆಗೂ ಈಡೇರಲಿಲ್ಲ.

    ಜೂ.೨೮ ರಂದು ಗಣೇಶ ಪಾವೂರು ಹರೇಕಳ ಕಡೆಯಿಂದ ಕೊಣಾಜೆ ಕಡೆಗೆ ತೆರಳುವ ಸಂದರ್ಭ ಬೆಳಿಗ್ಗೆ ೧೧.೫೦ರ ವೇಳೆಗೆ ಹರೇಕಳ ಗ್ರಾಮ ಪಂಚಾಯತ್‌ ಕಚೇರಿಯ ಎದುರುಗಡೆ ಅಪ*ಘಾತ ಸಂಭವಿಸಿದೆ. ಟಿಪ್ಪರ್‌ ವಾಹನ ಚಾಲಕನ ದುಡುಕುತನ ಹಾಗೂ ನಿರ್ಲಕ್ಷ್ಯತನದ ಚಾಲನೆ ನಡೆಸಿ ಹಠಾತ್‌ ಬ್ರೇಕ್‌ ಹಾಕಿದ ಪರಿಣಾಮ ಹಿಂಬದಿಯಲ್ಲಿದ್ದ ಸ್ಕೂಟರ್‌ ಡಿ*ಕ್ಕಿ ಹೊಡೆದು ಸ್ಕೂಟರ್‌ ಸಮೇತ ಸವಾರ ರಸ್ತೆಗೆಸೆಯಲ್ಪಟ್ಟು ಗಂಭೀ*ರವಾಗಿ ಗಾ*ಯಗೊಂಡಿದ್ದರು.

    ಗಾ*ಯಾಳುವನ್ನು ತಕ್ಷಣ ಟಿಪ್ಪರ್‌ ಚಾಲಕ ಸೇರಿದಂತೆ ಸ್ಥಳೀಯರು ನಾಟೆಕಲ್‌ ಕಣಚೂರು ಆಸ್ಪತ್ರೆಗೆ ದಾಖಲಿಸಿದ್ದು, ಅಲ್ಲಿಂದ ಹೆಚ್ಚಿನ ಚಿಕಿತ್ಸೆಗೆ ಅಡ್ಯಾರ್‌ ಫಸ್ಟ್‌ ನ್ಯುರೋ ಆಸ್ಪತ್ರೆಗೆ ದಾಖಲಿಸಲಾಗಿತ್ತು.

    ಮಂಗಳೂರಿನಲ್ಲಿ ಎ.ಸಿ ಮೆಕ್ಯಾನಿಕ್‌ ಆಗಿದ್ದ ಗಣೇಶ್‌, ಮನೆಯ ಹಿರಿಯ ಪುತ್ರನಾಗಿದ್ದು, ಜೀವನಾಧಾರವಾಗಿದ್ದರು. ಮೃ*ತರು ತಾಯಿ, ತಂದೆ, ಸಹೋದರ, ಸಹೋದರಿಯನ್ನು ಅಗಲಿದ್ದಾರೆ.

    ಇದನ್ನೂ ಓದಿ : ಮಂಗಳೂರು ಸಬ್ ಜೈಲಿನಲ್ಲಿ ಮಾರಾಮಾರಿ..! ಇಬ್ಬರು ಆಸ್ಪತ್ರೆಗೆ ದಾಖಲು

    ಟಿಪ್ಪರ್‌ ಲಾರಿ ಚಾಲಕನ ವಿರುದ್ಧ ಪ್ರಕರಣ ದಾಖಲಾಗಿದೆ. ಮೃ*ತ ಗಣೇಶ್‌ ಆಚಾರ್ಯ ಶಸ್ತ್ರಚಿಕಿತ್ಸೆಗೆ ರೂ.10 ಲಕ್ಷ ಖರ್ಚಾಗುವುದರಿಂದ ಸ್ನೇಹಿತರು ವಾಟ್ಸ್ಯಾಪ್‌ ಮೂಲಕ ದಾನಿಗಳ ಸಹಕಾರವನ್ನು ಕೋರಿದ್ದರು.

    Continue Reading

    FILM

    ತಾಯಿಯಾಗುವ ಸಂಭ್ರಮದಲ್ಲಿ ಹರ್ಷಿಕಾ ಪೂಣಚ್ಚ..! ಹೊಸ ಅತಿಥಿ ಆಗಮನ ಯಾವ್ಯಾಗ?

    Published

    on

    ಕೊಡಗು/ಮಂಗಳೂರು: ಹರ್ಷಿಕಾ ಪೂಣಚ್ಚ ಕನ್ನಡದ ಕ್ಯೂಟ್ ನಟಿ. ಕಳೆದ ವರ್ಷ ಭುವನ್ ಜೊತೆ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದರು. ಇದೀಗ ಈ ಕ್ಯೂಟ್ ಕಪಲ್ ಗುಡ್ ನ್ಯೂಸ್ ನೀಡಿದೆ. ಮೊದಲ ಮಗುವಿನ ನಿರೀಕ್ಷೆಯಲ್ಲಿರುವ ಹರ್ಷಿಕಾ ಫೋಟೋಶೂಟ್ ಮಾಡಿಕೊಂಡಿದ್ದು ಸೋ಼ಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ.

    ಹರ್ಷಿಕಾ ಪೂಣಚ್ಚ ಹಾಗೂ ಭುವನ್  ಪೊನ್ನಣ್ಣ ಇಬ್ಬರೂ ಪ್ರೀತಿಯಲ್ಲಿದ್ದರು. ಕೊಡಗಿನ ವಿರಾಜಪೇಟೆಯ ಅಮ್ಮತ್ತಿಯಲ್ಲಿ ತಮ್ಮದೇ ಕೊಡವ ಶೈಲಿಯಲ್ಲಿ ಕುಟುಂಬಸ್ಥರು ಹಾಗೂ ಆಪ್ತರ ಸಮ್ಮುಖದಲ್ಲಿ ಅದ್ದೂರಿಯಾಗಿ ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದರು. ಈ ಜೋಡಿಯ ಮದುವೆಗೆ ಸ್ಯಾಂಡಲ್‌ವುಡ್‌ನ ತಾರೆಯರು ಕೂಡ ಸಾಕ್ಷಿಯಾಗಿದ್ದರು. ಈಗ ಇಬ್ಬರೂ ಮೊದಲ ಮಗುವಿನ ನಿರೀಕ್ಷೆಯಲ್ಲಿದ್ದಾರೆ. ಈ ಖುಷಿ ವಿಷಯವನ್ನು ಫೋಟೊಶೂಟ್ ಮಾಡಿಸುವ ಮೂಲಕ ಹಂಚಿಕೊಂಡಿದ್ದಾರೆ.

    ಒಂದೇ ವರ್ಷದೊಳಗೆ ಸಿಹಿಸುದ್ದಿ ಕೊಟ್ಟ ನಟ-ನಟಿ:

    23 ಆಗಸ್ಟ್ 2023ರಂದು ದಾಂಪತ್ಯ ಜೀವನಕ್ಕೆ ಕಾಲಿಟ್ಟ ಈ ದಂಪತಿ ಇದೀಗ ಒಂದೇ ವರ್ಷದಲ್ಲಿ ಗುಡ್ ನ್ಯೂಸ್ ಕೊಟ್ಟಿದ್ದಾರೆ. ಫ್ಯಾಮಿಲಿ ಜೊತೆ ಸಾಂಪ್ರದಾಯವಾಗಿ ಫೊಟೋಶೂಟ್ ಮಾಡಿಕೊಂಡಿದ್ದಾರೆ.  ಈ ಪೋಸ್ಟ್‌ ಅನ್ನು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ. ಪೋಸ್ಟ್ ಜೊತೆಗೆ ಹೀಗೆ ಬರೆದುಕೊಂಡಿದ್ದಾರೆ. ‘ಗೆಳೆಯರೆ, ಇಂದಿನವರೆಗೂ ನಮ್ಮಿಬ್ಬರಿಗೆ ಸದಾ ಆಶೀರ್ವಾದಿಸುತ್ತಾ ಬಂದಿದ್ದೀರಿ, ಇನ್ನು ಮುಂದೆ ನಿಮ್ಮ ಪ್ರೀತಿ ಆಶೀರ್ವಾದ ನಮ್ಮ ಈ ಇನ್ನೊಂದು ಪುಟ್ಟ ಜೀವನದ ಮೇಲೆ ಇರಲಿ. ಅಕ್ಟೋಬರ್‌ಗೆ ಕಾತುರದಿಂದ ಕಾಯುತ್ತಿದ್ದೇವೆ’ ಎಂದು ಭುವನ್ ಬರೆದುಕೊಂಡಿದ್ದಾರೆ. ಈ ಪೋಸ್ಟ್‌ ಅನ್ನು ಹರ್ಷಿಕಾ ಪೂಣಚ್ಚ ಕೂಡಾ ಶೇರ್ ಮಾಡಿಕೊಂಡಿದ್ದಾರೆ.

    ‘ಸಾಂಕೇತ್’ ಟ್ರೈಲರ್ ರಿಲೀಸ್…ವ್ಹಾವ್!ಥ್ರಿಲ್ಲಿಂಗ್ ಅಂದ್ರು ವೀಕ್ಷಕರು

    ಸದ್ಯ ಸಿನೆಮಾ ನಟನೆಗಳಿಂದ ದೂರವಿರುವ ಹರ್ಷಿಕಾ ತನ್ನ ಯೂಟ್ಯೂಬ್ ಚಾನೆಲ್‌ನಲ್ಲಿ ಬ್ಯುಸಿಯಾಗಿದ್ದರು. ಒಂದಲ್ಲಾ ಒಂದು ಕೊಡಗು ಶೈಲಿಯ ಅಡುಗೆಗಳನ್ನು ಮಾಡಿ ವೀಕ್ಷಕರಿಗೆ ಪರಿಚಯಿಸುತ್ತಿದ್ದರು. ಈ ಗ್ಯಾಪ್‌ನಲ್ಲೇ ತಮ್ಮ ಫ್ಯಾನ್ಸ್‌ಗೆ ಖುಷಿ ವಿಚಾರ ನೀಡಿದ್ದಾರೆ.

    Continue Reading

    DAKSHINA KANNADA

    ಮಂಗಳೂರು: ಕೆಎಸ್‌ಆರ್‌ಟಿಸಿ ಬಸ್‌ನಲ್ಲಿ 67.75 ಲ.ರೂ. ಮೌಲ್ಯದ ಚಿನ್ನಾಭರಣವಿದ್ದ ಹ್ಯಾಂಡ್‌ಬ್ಯಾಗ್‌ ಕಳವು…!

    Published

    on

    ಮಂಗಳೂರು: ಕೆಎಸ್‌ಆರ್‌ಟಿಸಿ ಬಸ್‌ನಲ್ಲಿ ಸುಮಾರು 67.75 ಲ.ರೂ. ಮೌಲ್ಯದ ಚಿನ್ನಾಭರಣವಿದ್ದ ಹ್ಯಾಂಡ್‌ಬ್ಯಾಗ್‌ ಕಳವಾಗಿದೆ ಎಂದು ಮಾಹಿತಿ ತಿಳಿದು ಬಂದಿದೆ.
    ಮಹಿಳೆಯೋರ್ವರು ನಗರದ ಬ್ಯಾಂಕ್‌ನ ಲಾಕರ್‌ನಲ್ಲಿದ್ದ 110 ಗ್ರಾಂ ತೂಕದ ವಜ್ರದ ಹರಳುಗಳಿರುವ ವಿವಿಧ ನಮೂನೆಯ ಚಿನ್ನದ ಒಡವೆಗಳನ್ನು ಕೌಟುಂಬಿಕ ಕಾರ್ಯಕ್ರಮದ ಹಿನ್ನೆಲೆಯಲ್ಲಿ ಮನೆಗೆ ತಂದು ಹ್ಯಾಂಡ್‌ಬ್ಯಾಗ್‌ನಲ್ಲಿ ಹಾಕಿ ಬೆಳಗ್ಗೆ 7 ಗಂಟೆಗೆ ಮಂಗಳೂರಿನಿಂದ ಕೆಎಸ್‌ಆರ್‌ಟಿಸಿ ಐರಾವತ ಬಸ್‌ನಲ್ಲಿ ಇತರ ಲಗೇಜ್‌ ಜತೆ ತೆಗೆದುಕೊಂಡು ಬೆಂಗಳೂರಿಗೆ ಪ್ರಯಾಣಿಸಿದ್ದರು ಎನ್ನಲಾಗಿದೆ.
    ಹಾಸನ ತಲುಪಿದಾಗ ಅವರ ಹ್ಯಾಂಡ್‌ಬ್ಯಾಗ್‌ ಪರಿಶೀಲಿಸಿದಾಗ ಚಿನ್ನಾಭರಣಗಳು ಕಳವಾಗಿದ್ದವು. ಮಂಗಳೂರು – ಹಾಸನ ನಡುವೆ ಅವರ ಪಕ್ಕದಲ್ಲಿ ಕುಳಿತು ಪ್ರಯಾಣಿಸುತ್ತಿದ್ದ ನಡು ವಯಸ್ಸಿನ ಮಹಿಳೆ ಕಳವು ಮಾಡಿರಬಹುದೆಂದು ಉರ್ವ ಪೊಲೀಸರಿಗೆ ನೀಡಿರುವ ದೂರಿನಲ್ಲಿ ತಿಳಿಸಿದ್ದಾರೆ.
    Continue Reading

    LATEST NEWS

    Trending