Tuesday, July 5, 2022

ಸುಳ್ಯದ ಛತ್ರಪ್ಪಾಡಿ ಎಂಬಲ್ಲಿ ಅಕ್ರಮ ಬಂದೂಕು ತಯಾರು; ನಾಲ್ವರು ಆರೋಪಿಗಳು ಪೊಲೀಸರ ವಶಕ್ಕೆ..!

ಸುಳ್ಯ: ತಾಲೂಕಿನ ನಾಲ್ಕೂರು ಗ್ರಾಮದ ಛತ್ರಪ್ಪಾಡಿ ಎಂಬಲ್ಲಿ ಯಾವುದೇ ಪರವಾನಿಗೆ ಇಲ್ಲದೇ ಅಕ್ರಮವಾಗಿ ಬಂದೂಕು ತಯಾರಿಸಿ ಮಾರಾಟ ಮಾಡುತ್ತಿದ್ದ ನಾಲ್ವರು ಆರೋಪಿಗಳನ್ನು ಸುಬ್ರಹ್ಮಣ್ಯ ಪೊಲೀಸರು ವಶಕ್ಕೆ ಪಡೆದ ಘಟನೆ ನಡೆದಿದೆ. ಮಾರಾಟ ಮಾಡುವ ಉದ್ದೇಶದಿಂದ ಅಕ್ರಮವಾಗಿ ಬಂದೂಕು ತಯಾರಿಸುತ್ತಿದ್ದಾರೆ ಎಂಬ ಖಚಿತ ಮಾಹಿತಿ ಮೇರೆಗೆ
ಸುಳ್ಯ ಪೊಲೀಸ್ ವೃತ್ತ ನಿರೀಕ್ಷಕ ನವೀನ್ ಚಂದ್ರ ಜೋಗಿ ಅವರು ಹಾಗೂ ಸುಬ್ರಹ್ಮಣ್ಯ ಠಾಣಾಧಿಕಾರಿ ಓಮನಾ ಅವರ ನೇತೃತ್ವದ ಪೊಲೀಸರ ತಂಡವು ದಾಳಿ ಮಾಡಿ ಆರೋಪಿಗಳನ್ನು ಬಂಧಿಸಿದರು. ಸುಳ್ಯದ ಛತ್ರಪ್ಪಾಡಿ (52), ದಿವಾಕರ ಆಚಾರಿ ಕಡಬ ತಾಲೂಕಿನ ನೂಜಿಲ ನಿವಾಸಿ (25), ಕಾರ್ತಿಕ್ ಕಡಬದ ನೆಟ್ಟಣ ಸಮೀಪದ ಚಿದ್ಗಲ್ ನಿವಾಸಿ (35)ಅಶೋಕ್ ಹಾಸನ ಜಿಲ್ಲೆಯ ಹನುಮಂತಪುರದ ಚಂದನ್(32) ಎಂಬವರನ್ನು ವಶಕ್ಕೆ ಪಡೆದ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.ಇವರಲ್ಲಿ ದಿವಾಕರ ಆಚಾರಿ ಎಂಬವನ ಮನೆಯ ಪಕ್ಕದ ಕಬ್ಬಿಣದ ಕೆಲಸ ಮಾಡುವ ಶೆಡ್ಡಿನಲ್ಲಿ ಅಕ್ರಮವಾಗಿ ಬಂದೂಕು ನಿರ್ಮಿಸಿ ಮಾರಾಟಕ್ಕೆ ಯತ್ನಿಸಿದರು.

ಆರೋಪಿಗಳಿಂದ ನಾಡ ಬಂದೂಕು ಮತ್ತು ತೋಟೆ ವಶಪಡಿಸಿಕೊಳ್ಳಲಾಗಿದೆ. ಈ ಬಗ್ಗೆ ನಾಲ್ವರು ಆರೋಪಿಗಳ ವಿರುದ್ಧ ಅಕ್ರಮ ಶಸ್ತ್ರಾಸ್ತ್ರಗಳ ನಿರ್ಮಾಣ ಮತ್ತು ದಾಸ್ತಾನು ಕಾಯ್ದೆಯಡಿ ಪ್ರಕರಣ ದಾಖಲಿಸಲಾಗಿದ್ದು,ತನಿಖೆ ಮುಂದುವರೆದಿದೆ.

LEAVE A REPLY

Please enter your comment!
Please enter your name here

Hot Topics

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭಾರಿ ಮಳೆ : ಶಾಲಾ- ಕಾಲೇಜುಗಳಿಗೆ ಇಂದು (ಜು5) ರಜೆ ಘೋಷಿಸಿದ ಜಿಲ್ಲಾಧಿಕಾರಿ..!

ಮಂಗಳೂರು " ಜಿಲ್ಲೆಯಾದ್ಯಂತ ನಿರಂತರ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಹಾಗೂ ಹವಾಮಾನ ಇಲಾಖಾ ಮುನ್ಸೂಚನೆಯನ್ನು ಗಮನದಲ್ಲಿರಿಸಿ, ಮಕ್ಕಳ ಸುರಕ್ಷತೆಯನ್ನು ಗಮನದಲ್ಲಿರಿಸಿಕೊಂಡು, ದಿನಾಂಕ 05/07/ 2022ರಂದು ಜಿಲ್ಲೆಯ ಎಲ್ಲಾ ಅಂಗನವಾಡಿ, ಪ್ರಾಥಮಿಕಶಾಲೆ ಪ್ರೌಢಶಾಲೆ, ಪದವಿ ಪೂರ್ವ...