Saturday, July 2, 2022

ಎದೆ ನೋವಿನ ಹಿನ್ನೆಲೆ ಆಸ್ಪತ್ರೆಗೆ ರಾಷ್ಟ್ರಪತಿಗಳು ದಾಖಲು..! ಆರೋಗ್ಯ ಸ್ಥಿರ..

ನವದೆಹಲಿ : ರಾಷ್ಟ್ರಪತಿ ರಾಮ್ ನಾಥ್ ಕೋವಿಂದ್ ಅವರನ್ನು ಸೇನಾ ಆಸ್ಪತ್ರೆಗೆ ದಾಖಲಿಸಲಾಗಿದೆ. ಇಂದು ಬೆಳಿಗ್ಗೆ ತೀವ್ರ ಎದೆ ನೋವು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ದೆಹಲಿಯ ಸೇನಾ ಸಂಶೋಧನಾ ಮತ್ತು ರೆಫರಲ್  ಆಸ್ಪತ್ರೆಗೆ ಅವರನ್ನು ದಾಖಲಿಸಲಾಗಿದೆ.

ಸದ್ಯ ರಾಷ್ಟ್ರಪತಿಗಳ ಅರೋಗ್ಯ ಸ್ಥಿರವಾಗಿದೆ. ಸಂಪೂರ್ಣ ವೈದ್ಯಕೀಯ ಪ್ರಕ್ರಿಯೆ ಪೂರ್ಣಗೊಳ್ಳುವವರೆಗೆ ರಾಷ್ಟ್ರಪತಿಯವರು ಆಸ್ಪತ್ರೆಯಲ್ಲಿಯೇ ಇರುತ್ತಾರೆ.

ವೈದ್ಯರು  ರಾಷ್ಟ್ರಪತಿಗಳ ಸಂಪೂರ್ಣ ನಿಗಾ ವಹಿಸಿದ್ದಾರೆ ಎಂದು ಆಸ್ಪತ್ರೆಯ ಅಧಿಕಾರಿಗಳು ತಿಳಿಸಿದ್ದಾರೆ.

ವಿಷಯ ತಿಳಿಯುತ್ತಲೇ ಬಾಂಗ್ಲಾ ಪ್ರವಾಸದಲ್ಲಿರುವ ಪ್ರಧಾನಿ ಮೋದಿ  ರಾಮ್ ನಾಥ್ ಕೋವಿಂದ್ ಅವರ ಪುತ್ರನಿಗೆ ದೂರವಾಣಿ ಕರೆ ಮಾಡಿ ವಿಚಾರಿಸಿರುವ ಪ್ರಧಾನಿ ನರೇಂದ್ರ ಮೋದಿ, ಶೀಘ್ರವೇ ಗುಣಮುಖರಾಗಲೆಂದು ಹಾರೈಸಿದ್ದಾರೆ.

LEAVE A REPLY

Please enter your comment!
Please enter your name here

Hot Topics

ಸುಳ್ಯದಲ್ಲಿ ಆರನೇ ಭಾರಿ ಲಘು ಭೂಕಂಪನ-ಆತಂಕದಲ್ಲಿ ಜನತೆ

ಸುಳ್ಯ: ದಕ್ಷಿಣ ಕನ್ನಡ-ಕೊಡಗು ಜಿಲ್ಲೆಯ ಗಡಿಭಾಗದಲ್ಲಿ ಆರನೇ ಭಾರಿ ಲಘು ಭೂಕಂಪನ ಉಂಟಾಗಿದ್ದು, ಇಂದು ಮುಂಜಾನೆ ಮೂರು ಗಂಟೆಯ ವೇಳೆಗೆ ಭೂಮಿ ಲಘು ಕಂಪಿಸಿದೆ ಎಂಬ ಸುದ್ದಿ ವಾಟ್ಸಪ್‌ನಲ್ಲಿ ಹರಿದಾಡುತ್ತಿದೆ.ಕಲ್ಲುಗುಂಡಿ, ಸಂಪಾಜೆ ಭಾಗಗಳಲ್ಲಿ...

ಅಗ್ನಿಪಥ್‌ ರಾಜಕೀಯ ಪ್ರೇರಿತ ಬಿಜೆಪಿ ಅಸ್ತ್ರ-ಮಾಜಿ ಶಾಸಕ ಲೋಬೋ

ಮಂಗಳೂರು: ಮಂಗಳೂರು ದಕ್ಷಿಣ ವಿಧಾನ ಸಭಾ ಕ್ಷೇತ್ರದ ನಗರ ಹಾಗು ದಕ್ಷಿಣ ಬ್ಲಾಕ್ ಕಾಂಗ್ರೆಸ್ ಸಮಿತಿ ವತಿಯಿಂದ ಕೇಂದ್ರ ಸರಕಾರದ ಅಗ್ನಿಪಥ್‌ ಯೋಜನೆ ವಿರುದ್ದ ಮಂಗಳೂರು ಮಿನಿ ವಿಧಾನ ಸೌಧದ ಮುಂಭಾಗ ಇಂದು...

ರೈತ ಪರ ಹೋರಾಟಗಾರ ಬಿ.ವಿ.ಪೂಜಾರಿ ಪೆರ್ಡೂರು ವಿಧಿವಶ

ಉಡುಪಿ: ಪ್ರಗತಿಪರ ರೈತ, ರೈತರ ಪರವಾಗಿ ಹಲವು ಹೋರಾಟಗಳನ್ನು ನಡೆಸಿದ್ದ, ಭಾರತೀಯ ಕಿಸಾನ್ ಸಂಘದ ಉಡುಪಿ ಜಿಲ್ಲಾ ಅಧ್ಯಕ್ಷರಾಗಿದ್ದ ಬಿ.ವಿ. ಪೂಜಾರಿ ಪೆರ್ಡೂರು ಅವರು ವಯೋಸಹಜ ಅನಾರೋಗ್ಯದಿಂದ ನಿಧನರಾಗಿದ್ದಾರೆ.ಅವರಿಗೆ 78 ವರ್ಷ ವಯಸ್ಸಾಗಿತ್ತು.ಉಡುಪಿ...