Monday, July 4, 2022

ಯಶಸ್ವೀ ಹೃದಯ ಚಿಕಿತ್ಸೆಗೊಳಗಾದ ರಾಷ್ಟ್ರಪತಿ ರಾಮನಾಥ್ ಕೋವಿಂದ್..!

ನವದೆಹಲಿ: ರಾಷ್ಟ್ರಪತಿ ರಾಮನಾಥ್ ಕೋವಿಂದ್ರಿಗೆ ಯಶಸ್ವಿ ಹೃದಯದ ಶಸ್ತ್ರ ಚಿಕಿತ್ಸೆ ನಡೆದಿದೆ. ಕಳೆದ ಶನಿವಾರ ಅವರನ್ನು ದೆಹಲಿಯ ಏಮ್ಸ್​ ಆಸ್ಪತ್ರೆಗೆ ದಾಖಲಿಸಲಾಗಿತ್ತು.ಈ ಕುರಿತು ಟ್ವೀಟ್  ಮಾಡಿರುವ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರು ಈ ವಿಷಯ ತಿಳಿಸಿದ್ದಾರೆ. ಸಧ್ಯಕ್ಕೆ ಆರೋಗ್ಯ ಸ್ಥಿತಿ ಉತ್ತಮವಾಗಿರುವುದಾಗಿ ದೆಹಲಿಯ ಏಮ್ಸ್ ಆಸ್ಪತ್ರೆ ಮೂಲಗಳು ತಿಳಿಸಿವೆ.

ರಾಷ್ಟ್ರಪತಿ ರಾಮನಾಥ ಕೋವಿಂದ್ ಅವರಿಗೆ ಯಶಸ್ವಿಯಾಗಿ ಶಸ್ತ್ರ ಚಿಕಿತ್ಸೆ ನಡೆಸಿದ್ದಕ್ಕೆ ದೆಹಲಿಯ ಏಮ್ಸ್​ ವೈದ್ಯರಿಗೆ ರಾಜನಾಥ್ ಸಿಂಗ್ ಅವರು ಧನ್ಯವಾದ ತಿಳಿಸಿದ್ದು, ಬೇಗನೇ ಗುಣಮುಖರಾಗುವಂತೆ ವೈದ್ಯಾಧಿಕಾರಿಗಳು ಹಾರೈಸಿದ್ದಾರೆ.

ಕಳೆದ ಮಂಗಳವಾರ ಅವರು ವೈದ್ಯಕೀಯ ತಪಾಸಣೆಗಾಗಿ ದೆಹಲಿಯ ಸೇನಾ ಆಸ್ಪತ್ರೆಗೆ ದಾಖಲಾಗಿದ್ದರು. ಆ ವೇಳೆ ಅವರ ಹೃದಯದ ಕಾರ್ಯವಿಧಾನದಲ್ಲಿ ವ್ಯತ್ಯಾಸ ಕಂಡು ಬಂದಿದ್ದರಿಂದ ಸೇನಾ ಆಸ್ಪತ್ರೆ ವೈದ್ಯರು ಹೆಚ್ಚಿನ ಚಿಕಿತ್ಸೆಗೆ ಸೂಚಿಸಿದ್ದರು.

ಹೀಗಾಗಿ ಅವರು ಶನಿವಾರ ಮಧ್ಯಾಹ್ನ ಏಮ್ಸ್​​ ಆಸ್ಪತ್ರೆಗೆ ದಾಖಲಾಗಿದ್ದರು. ರಾಷ್ಟ್ರಪತಿಗಳ ಆರೋಗ್ಯ ಸ್ಥಿರವಾಗಿದ್ದು, ಅವರು ಸದ್ಯಕ್ಕೆ ವಿಶ್ರಾಂತಿ ಪಡೆಯುತ್ತಿದ್ದಾರೆ ಎಂದು ರಾಷ್ಟ್ರಪತಿ ಭವನದ ಪ್ರಕಟಣೆ ತಿಳಿಸಿದೆ.

ಇನ್ನು ಖ್ಯಾತ ಮರಳು ಶಿಲ್ಪಕಾರ ಸುದರ್ಶನ್ ಪಟ್ನಾಯಕ್ ಅವರು ಮರಳಿನ ಶಿಲ್ಪ ರಚನೆ ಮಾಡಿ ಶೀಘ್ರ ರಾಷ್ಟ್ರ ಪತಿಗಳು ಗುಣಮುಖರಾಗಲಿ ಎಂದು ಶುಭ ಹಾರೈಸಿದ್ದಾರೆ.

LEAVE A REPLY

Please enter your comment!
Please enter your name here

Hot Topics

ಮಂಗಳೂರು: ಮಿಲಾಗ್ರಿಸ್‌ ಚರ್ಚ್‌ನ ಒಳಭಾಗದಲ್ಲಿ ಸಮಾಧಿ ಕುಸಿತ-ಶತಮಾನದ ಕಟ್ಟಡಕ್ಕೆ ಹಾನಿ ಭೀತಿ

ಮಂಗಳೂರು: ಶತಮಾನದ ಇತಿಹಾಸವಿರುವ ನಗರದ ಹೃದಯಭಾಗದಲ್ಲಿರುವ ಮಿಲಾಗ್ರಿಸ್‌ ಚರ್ಚ್‌ನ ಒಳಭಾಗದಲ್ಲಿ ಎರಡು ಹೊಂಡ ನಿರ್ಮಾಣವಾಗಿದೆ.ಮಿಲಾಗ್ರಿಸ್ ಚರ್ಚ್‌ನ ಕಟ್ಟಡಕ್ಕೆ 125 ವರ್ಷಗಳ ಇತಿಹಾಸವಿದ್ದು, ಚರ್ಚ್‌ನ ಒಳಗೆ 108 ಜನರ ಮೃತ ದೇಹಗಳನ್ನು ಸಮಾಧಿ ಮಾಡಲಾಗಿದೆ.ಕಳೆದ...

ಬಂಟ್ವಾಳದ ವಿಶ್ವ ಹಿಂದು ಪರಿಷತ್ ವತಿಯಿಂದ ರಕ್ತದಾನ ಶಿಬಿರ

ಬಂಟ್ವಾಳ: ವಿಶ್ವಹಿಂದುಪರಿಷತ್ ಬಜರಂಗದಳ ಪರಶುರಾಮ ಶಾಖೆ ಬಂಟ್ವಾಳ ಪ್ರಖಂಡದ ವತಿಯಿಂದ ಕೆಎಮ್‌ಸಿ ಮಂಗಳೂರು ಮತ್ತು ವೆನ್ಲಾಕ್ ಆಸ್ಪತ್ರೆ ಮಂಗಳೂರು ಇವರ ಸಹಯೋಗದೊಂದಿಗೆ ರಕ್ತದಾನ ಶಿಬಿರ ನಡೆಯಿತು.ರಕ್ತದಾನ ಶಿಬಿರದಲ್ಲಿ 180 ಯೂನಿಟ್ ರಕ್ತ ಸಂಗ್ರಹ...

ಬೆಳ್ತಂಗಡಿ: ತೋಟಕ್ಕೆ ಹೋದವ ನದಿ ದಡದಲ್ಲಿ ಪತ್ತೆಯಾದ

ಬೆಳ್ತಂಗಡಿ: ನಾಪತ್ತೆಯಾಗಿದ್ದ ವ್ಯಕ್ತಿಯೊಬ್ಬರು ಶವವಾಗಿ ಪತ್ತೆಯಾದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ಸಮೀಪದ ಪುದುವೆಟ್ಟು ಗ್ರಾಮದ ಅಡ್ಯ ಎಂಬಲ್ಲಿ ನಡೆದಿದೆ.ಪುದುವೆಟ್ಟು ಗ್ರಾಮದ ಅಡ್ಯ ನಿವಾಸಿ ಲಿಂಗಪ್ಪ ಪೂಜಾರಿ (65) ಎಂಬವರು ಮೃತಪಟ್ಟ...