LATEST NEWS
ಹೆಡ್ ಕಾನ್ಸ್‌ಸ್ಟೆಬಲ್ ಶಿವಾನಂದ ಅವರಿಗೆ ರಾಷ್ಟ್ರಪತಿ ಪದಕ
Published
23 hours agoon
By
NEWS DESK3ಉಡುಪಿ : ಉಡುಪಿ ಜಿಲ್ಲಾ ಪೊಲೀಸ್ ಕಚೇರಿಯಲ್ಲಿ ಹೆಡ್ ಕಾನ್ಸ್‌ಸ್ಟೇಬಲ್ ಆಗಿ ಕರ್ತವ್ಯ ನಿರ್ವಹಿಸುತ್ತಿರುವ ಶಿವಾನಂದ ಬಿ. ಅವರು ಗಣರಾಜ್ಯೋತ್ಸವ ಸಂದರ್ಭದಲ್ಲಿ ಅತ್ಯುನ್ನತ ಸೇವೆಗಾಗಿ ನೀಡುವ ರಾಷ್ಟ್ರಪತಿ ಅವರ ಶ್ಲಾಘನೀಯ ಸೇವಾ ಪದಕಕ್ಕೆ ಭಾಜನರಾಗಿದ್ದಾರೆ.
2005ರಲ್ಲಿ ಪೊಲೀಸ್ ಇಲಾಖೆಗೆ ಸೇರ್ಪಡೆಗೊಂಡ ಅವರು, 2009ರಿಂದ ಜಿಲ್ಲಾ ಪೊಲೀಸ್ ಕಚೇರಿಯ ಅಪರಾಧ ವಿಭಾಗ ಮತ್ತು ಚುನಾವಣೆ ಕೋಶದಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ. ಅವರು 2019ರಲ್ಲಿ ಮುಖ್ಯಮಂತ್ರಿ ಪದಕವನ್ನು ಪಡೆದಿದ್ದರು.
ಇದನ್ನೂ ಓದಿ: ನಟ ಅನಂತ್‌ನಾಗ್ ಸೇರಿ ರಾಜ್ಯದ 9 ಸಾಧಕರಿಗೆ ಪದ್ಮ ಪ್ರಶಸ್ತಿ ಗೌರವ
ಏಳು ವರ್ಷಗಳ ಹಿಂದೆ ಅವರು ಹೆಡ್‌ಕಾನ್ಸ್‌ಸ್ಟೇಬಲ್ ಆಗಿ ಪದೋನ್ನತಿ ಹೊಂದಿದ್ದರು. ಪೊಲೀಸ್ ಕರ್ತವ್ಯ ಕೂಟದಲ್ಲಿ ಎರಡು ಬಾರಿ ರಾಷ್ಟ್ರಮಟ್ಟದಲ್ಲಿ ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯನ್ನು ಪ್ರತಿನಿಧಿಸಿದ್ದರು.
You may like
LATEST NEWS
ಅಲೆವೂರು : ಗೋಡೌನ್‌ನಲ್ಲಿ ಭಾರೀ ಅ*ಗ್ನಿ ಅವಘ*ಡ
Published
9 seconds agoon
27/01/2025By
NEWS DESK4ಉಡುಪಿ : ಅಲೆವೂರು ಗುಡ್ಡೆಯಂಗಡಿಯಲ್ಲಿನ ಈವೆಂಟ್ ಮ್ಯಾನೇಜ್‌ಮೆಂಟ್ ಕಂಪನಿಯೊಂದರ ಗೋಡೌನ್‌ನಲ್ಲಿ ಭಾರೀ ಅಗ್ನಿ ಅವಘಡ ಸಂಭವಿಸಿದೆ. ಈ ದುರಂತದಿಂದ ಅಂದಾಜು 40 ಲಕ್ಷ ರೂಪಾಯಿ ನಷ್ಟವಾಗಿದೆ.
ಘಟನೆಯಲ್ಲಿ ಗೋಡೌನ್‌ನಲ್ಲಿ ಸಂಗ್ರಹಿಸಲಾಗಿದ್ದ ವಿವಿಧ ವಸ್ತುಗಳು ಮತ್ತು ಉಪಕರಣಗಳು ಸಂಪೂರ್ಣ ಸುಟ್ಟು ಭಸ್ಮವಾಗಿದೆ. ಕೂಡಲೇ ಘಟನಾ ಸ್ಥಳಕ್ಕೆ ಧಾವಿಸಿದ ಅಗ್ನಿಶಾಮಕ ಮತ್ತು ತುರ್ತು ಸೇವಾ ಸಿಬ್ಬಂದಿ ಸ್ಥಳೀಯರ ನೆರವಿನೊಂದಿಗೆ ಬೆಂಕಿಯನ್ನು ಹತೋಟಿಗೆ ತಂದಿದ್ದು, ಸಂಭವನೀಯ ಭಾರೀ ಅನಾಹುತ ತಪ್ಪಿಸಿದ್ದಾರೆ. ಅಗ್ನಿ ಅವಘಡಕ್ಕೆ ನಿಖರ ಕಾರಣ ತಿಳಿದುಬಂದಿಲ್ಲ.
FILM
ವಶಿಷ್ಠ ದಂಪತಿ ಮನೆಗೆ ಹೊಸ ಅಥಿತಿ ಆಗಮನ; ಮುದ್ದಾದ ಮಗುವಿಗೆ ಜನ್ಮ ನೀಡಿದ ನಟಿ
Published
2 minutes agoon
27/01/2025ಮಂಗಳೂರು/ಬೆಂಗಳೂರು : ಸ್ಯಾಂಡಲ್‌ವುಡ್ ಕ್ಯೂಟ್ ಸ್ಟಾರ್ ಜೋಡಿ ವಸಿಷ್ಠ ಸಿಂಹ ಹಾಗೂ ಹರಿಪ್ರಿಯಾ ಮನೆಗೆ ಹೊಸ ಅತಿಥಿ ಆಗಮನವಾಗಿದೆ. ನಿನ್ನೆ (ಜ 26) ವಸಿಷ್ಠ ಸಿಂಹ ಹಾಗೂ ಹರಿಪ್ರಿಯಾ ತಮ್ಮ ಮದುವೆಯ ವಾರ್ಷಿಕೋತ್ಸವದ ದಿನವೇ ಸಿಹಿ ಸುದ್ದಿ ನೀಡಿದ್ದಾರೆ.
ಬೆಂಗಳೂರಿನ ಅಕ್ಷಯ್ ಆಸ್ಪತ್ರೆಯಲ್ಲಿ ನಟಿ ಹರಿಪ್ರಿಯಾ ಮೊದಲ ಮಗುವಿಗೆ ಜನ್ಮ ನೀಡಿದ್ದಾರೆ. ತಾಯಿ-ಮಗು ಇಬ್ಬರೂ ಆರೋಗ್ಯವಾಗಿದ್ದಾರೆ. ಈ ಜೋಡಿ 2023ರ ಜನವರಿ 26ರಂದು ಅಂದರೆ 2 ವರ್ಷದ ಹಿಂದೆ ಮದುವೆ ಆಗಿದ್ದು. 2025ರ ಜನವರಿ 26ರಂದು ಪುತ್ರ ಜನಿಸಿದ್ದಾನೆ.
ಇದನ್ನೂ ಓದಿ : ಬಿಗ್ ಬಾಸ್ ಸ್ಪರ್ಧಿ ಗೌತಮಿ ಜಾದವ್ ಸಂಸಾರದಲ್ಲಿ ಬಿರುಕು?
ನಿನ್ನೆ ಸಂಜೆ ವೇಳೆಗೆ ಹರಿಪ್ರಿಯಾ ಅವರು ತಾಯಿಯಾದ ಸುದ್ದಿ ಸಿಕ್ಕಿದೆ. ಮೊದಲ ಮಗುವಿನ ಆಗಮನದಿಂದ ಹರಿಪ್ರಿಯಾ ಮತ್ತು ವಸಿಷ್ಠ ಸಿಂಹ ಕುಟುಂಬದಲ್ಲಿ ಸಂತಸ ಮೂಡಿದೆ. ನಟಿ ಹರಿಪ್ರಿಯಾ ತಾಯಿಯಾದ ವಿಚಾರವನ್ನು ವಸಿಷ್ಠ ಸಿಂಹ ತಮ್ಮ ಇನ್‌ಸ್ಟಾಗ್ರಾಮ್ ಪೋಸ್ಟ್ ಮೂಲಕ ರಿವೀಲ್ ಮಾಡಿದ್ದಾರೆ. ತಮ್ಮ ಆನಿವರ್ಸರಿ ದಿನವೇ ಮಗ ಬಂದಿದ್ದು ಖುಷಿ ತಂದಿದೆ ಎಂದು ತಿಳಿಸಿದ್ದಾರೆ. ನೆಟ್ಟಿಗರು, ಅಭಿಮಾನಿಗಳು, ಸಿನಿರಂಗದವರು ಅಭಿನಂದನೆ ತಿಳಿಸುತ್ತಿದ್ದಾರೆ.
LATEST NEWS
ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪಿ ಬಂಧನ
Published
7 minutes agoon
27/01/2025By
NEWS DESK3ಉಡುಪಿ : ಉಡುಪಿಯಲ್ಲಿ ಮೂರು ದಿನಗಳ ಹಿಂದೆ ಐದು ವರ್ಷದ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ಪ್ರಕರಣದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.
ಬಾಗಲಕೋಟೆ ಜಿಲ್ಲೆಯ ಹುನಗುಂದ ತಾಲೂಕಿನ ಸೂಳೆಬಾವಿ ಗ್ರಾಮದ ಮುತ್ತು (35) ಬಂಧಿತ ಆರೋಪಿ. ಜನವರಿ 23ರಂದು ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದಲ್ಲಿ ಉಡುಪಿ ಮಹಿಳಾ ಪೊಲೀಸ್ ಠಾಣೆಯಲ್ಲಿ ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಿಸಿ ತನಿಖೆ ಕೈಗೊಳ್ಳಲಾಗಿತ್ತು.
ಇದನ್ನೂ ಓದಿ: ಉಡುಪಿ ನಗರದಲ್ಲಿ ಬೆಚ್ಚಿ ಬೀಳಿಸುವ ಘಟನೆ; ಐದು ವರ್ಷದ ಮಗುವಿಗೆ ಲೈಂಗಿಕ ಕಿರುಕುಳ
ಈ ಪ್ರಕರಣದಲ್ಲಿ ಆರೋಪಿ ಅಪರಿಚಿತನಾಗಿದ್ದರಿಂದ ಆತನ ಪತ್ತೆಗೆ ಪೊಲೀಸರ ಐದು ತಂಡಗಳನ್ನು ರಚಿಸಲಾಗಿತ್ತು. ಹಲವಾರು ಸಿಸಿಟಿವಿ ಕ್ಯಾಮೆರಾ ದೃಶ್ಯಾವಳಿಗಳನ್ನು ಪರಿಶೀಲನೆ ಮಾಡಿ ಆರೋಪಿಯ ಮಾಹಿತಿಯನ್ನು ಸಾರ್ವಜನಿಕರಿಗೂ ಪ್ರಚಾರಪಡಿಸಲಾಗಿತ್ತು.
ಸಾರ್ವಜನಿಕರ ಸಹಾಯ ಮತ್ತು ಪೊಲೀಸ್ ಅಧಿಕಾರಿ, ಸಿಬ್ಬಂದಿಗಳ ಸತತ ಪ್ರಯತ್ನದಿಂದ, ಜನವರಿ 26ರಂದು ಸಂಜೆ ಆರೋಪಿ ಮುತ್ತುನನ್ನು ಶ್ರೀಕೃಷ್ಣ ಮಠದ ಪರಿಸರದ ವಾದಿರಾಜ 3ನೇ ಕ್ರಾಸ್ ಬಳಿ ಬಂಧಿಸಲಾಯಿತು. ಆರೋಪಿ ಉಡುಪಿಯಲ್ಲಿ ಯಾವುದೇ ವಿಳಾಸವನ್ನು ಹೊಂದದೆ ಅಲೆಮಾರಿಯಾಗಿದ್ದನು ಎಂದು ಪೊಲೀಸರು ತಿಳಿಸಿದ್ದಾರೆ.
LATEST NEWS
ಮಂಗಳೂರು ಉದ್ಯಮಿಗೆ ಭೂ*ಗತ ಪಾ*ತಕಿಯಿಂದ ಬೆ*ದರಿಕೆ ಕರೆ!
ಗೀಸರ್ ರಿಪೇರಿಗಂತ ಬಂದ ರಹಸ್ಯ ಕ್ಯಾಮರಾ ಇಟ್ಟ…ಮಹಿಳೆಗೆ ಬ್ಲ್ಯಾಕ್ ಮೇಲ್ ಮಾಡುತ್ತಿದ್ದಾತ ಸಿಕ್ಕಿ ಬಿದ್ದಿದ್ಹೇಗೆ?
ಹಿರಿಯ ಪತ್ರಕರ್ತ ಗುರುವಪ್ಪ ಬಾಳೆಪುಣಿ ನಿಧನ
ಮನೆಯ ಕಪಾಟಿನಿಂದ ಬಟ್ಟೆಗಳು ಕೆಳಗೆ ಬೀಳುತ್ತದೆಯೇ? ಈ ಟಿಪ್ಸ್ ಸಹಾಯದಿಂದ ಕಬೋರ್ಡ್ ಈ ರೀತಿ ಜೋಡಿಸಿ
ಗೃಹಲಕ್ಷ್ಮಿ ಹಣ ಕೂಡಿಟ್ಟು ಶೌಚಾಲಯ ನಿರ್ಮಿಸಿದ ಮಹಿಳೆ
ಮಂಗಳೂರಿನಲ್ಲಿ ಜಿಲ್ಲೆಯ ಮೊದಲ ಮಕ್ಕಳ ಮಾದರಿ ಸಂಸತ್ ಅಧಿವೇಶನ
Trending
- BIG BOSS5 days ago
ಗೌತಮಿ-ಧನರಾಜ್ ಬೆನ್ನಲ್ಲೇ ಈ ವಾರ ಫಸ್ಟ್ ಎಲಿಮಿನೇಟ್ ಆಗೋದ್ಯಾರು ?
- BIG BOSS7 days ago
ಬಿಗ್ ಬಾಸ್ ತೊರೆಯುವ ಬಗ್ಗೆ ಮತ್ತೊಮ್ಮೆ ಘೋಷಣೆ ಮಾಡಿದ ಕಿಚ್ಚ
- BIG BOSS4 days ago
ಭಾವನೆಗಳ ಮಹಾಪೂರ ನೀನು, ಕನಸುಗಳ ಶಿಖರ ನೀನು: ಭವ್ಯಾಗೆ ತ್ರಿವಿಕ್ರಮ್ ಪ್ರಪೋಸ್
- BIG BOSS7 days ago
ಬಿಗ್ ಬಾಸ್ ಸೀಸನ್ 11ರ ವಿನ್ನರ್ ಒಬ್ಬರಲ್ಲ ಇಬ್ಬರು… ಅಷ್ಟಕ್ಕೂ ಟ್ರೋಫಿ ನೀಡಿದ ಸುಳಿವೇನು ?