Friday, August 12, 2022

ಮಂಗಳೂರು: ಪತ್ರಿಕಾ ದಿನಾಚರಣೆ ಹಾಗೂ ಹರ್ಮನ್ ಮೊಗ್ಲಿಂಗ್ ಸ್ಮರಣೆ

ಮಂಗಳೂರು: ಕರ್ನಾಟಕ ಜರ್ನಲಿಸ್ಟ್ ಯೂನಿಯನ್ ದ.ಕ.ಜಿಲ್ಲಾ ಸಮಿತಿಯ ವತಿಯಿಂದ ಪತ್ರಿಕಾ ದಿನಾಚರಣೆ ಹಾಗೂ ರೆವರೆಂಡ್ ಹರ್ಮನ್ ಮೊಗ್ಲಿಂಗ್ ಸ್ಮರಣೆ ಕಾರ್ಯಕ್ರಮ ಇಂದು ಮಂಗಳೂರು ಬಲ್ಮಠದ ಕರ್ನಾಟಕ ಥಿಯೋಲಾಜಿಕಲ್ ಕಾಲೇಜಿನಲ್ಲಿ ನಡೆಯಿತು.


ಕನ್ನಡದ ಪ್ರಥಮ ಪತ್ರಿಕೆ ಮಂಗಳೂರ ಸಮಾಚಾರ ಪತ್ರಿಕೆಯ ಸಂಸ್ಥಾಪಕ ಸಂಪಾದಕ ರೆ.ಹೆರ್ಮನ್ ಮೋಗ್ಲಿಂಗ್ ಅವರ ಪ್ರತಿಮೆಗೆ ಮಾಜಿ ಶಾಸಕ ಜೆ.ಆರ್.ಲೊಬೋ ಅವರು ಮಾಲಾರ್ಪಣೆ ಮಾಡುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.

ಕಾರ್ಯಕ್ರಮದಲ್ಲಿ ಮಾತನಾಡಿದ ಜೆ.ಆರ್.‌ಲೋಬೋ ಅವರು, ಕನ್ನಡದ ಪ್ರಥಮ ಪತ್ರಿಕೆ ಹುಟ್ಟು ಹಾಕಿದ ಹರ್ಮನ್ ಮೊಗ್ಲಿಂಗ್ ಅವರ ಸ್ಮರಣೆ ನಡೆಸುವುದು ಅತ್ಯಂತ ಸ್ತುತ್ಯಾರ್ಹ ಕಾರ್ಯಕ್ರಮವಾಗಿದೆ.

ಪತ್ರಿಕಾ ಲೋಕ ಹಾಗೂ ಕನ್ನಡ ಸಾಹಿತ್ಯ, ದಾಸ ಸಾಹಿತ್ಯ ಕ್ಕೆ ಮೊಗ್ಲಿಂಗ್ ಅವರ ಕೊಡುಗೆ ಅಪಾರವಾಗಿದೆ. ಈ ವಿಚಾರವನ್ನು ನಾವು ಮುಂದಿನ ಪೀಳಿಗೆಗೆ ತಿಳಿಸುವ ಕಾರ್ಯಕ್ರಮ ನಡೆಯಬೇಕಾಗಿದೆ ಎಂದು ತಿಳಿಸಿದರು.


ಕಾರ್ಯಕ್ರಮದಲ್ಲಿ ಮಾತನಾಡಿದ ಕರ್ನಾಟಕ ಥಿಯೋಲಾಜಿಕಲ್ ಕಾಲೇಜು ಪ್ರಾಂಶುಪಾಲ ವಂ.ಡಾ.ಎಚ್.ಎಂ.ವಾಟ್ಸನ್ ಅವರು ಮಾತನಾಡಿ, ನಿಘಂಟು ಕರ್ತ ಕಿಟೆಲ್ ಅವರ ರೀತಿಯಲ್ಲೇ ಹರ್ಮನ್ ಮೊಗ್ಲಿಂಗ್ ಅವರ ಪ್ರತಿಮೆಯನ್ನು ಕರ್ನಾಟಕದ ಹಲವೆಡೆ ಪ್ರತಿಷ್ಠಾಪಿಸಬೇಕೆಂದು ಹೇಳಿದರು.

ಕರ್ನಾಟಕ ಜರ್ನಲಿಸ್ಟ್ ಯೂನಿಯನ್ ದ.ಕ.ಜಿಲ್ಲಾ ಸಮಿತಿ ಅಧ್ಯಕ್ಷ ಹರೀಶ್ ಬಂಟ್ವಾಳ್ ಪತ್ರಿಕಾ ದಿನಾಚರಣೆಯ ಶುಭಕೋರಿ ಮಾತನಾಡಿದರು. ಸಂಘದ ಪ್ರಧಾನ ಕಾರ್ಯದರ್ಶಿ ತಾರಾನಾಥ್ ಗಟ್ಟಿ ಕಾಪಿಕಾಡ್ ಸ್ವಾಗತಿಸಿದರು.

ಕಾರ್ಯಕ್ರಮದಲ್ಲಿ ಕರ್ನಾಟಕ ಜರ್ನಲಿಸ್ಟ್ ಯೂನಿಯನ್ ಉಪಾಧ್ಯಕ್ಷ ಲಕ್ಷ್ಮಣ್ ಕುಂದರ್ ಪದಾಧಿಕಾರಿಗಳಾದ ಕೆನ್ಯೂಟ್ ಪಿಂಟೊ , ಗಿರಿಧರ್ ಶೆಟ್ಟಿ, ಹಿರಿಯ ಪತ್ರಕರ್ತ ಮೋಹನ್ ಬೋಳಂಗಡಿ, ರಿಚ್ಚಿ ಲಸ್ರಾದೋ, ಹಮೀದ್ ವಿಟ್ಲ, ಈಶ್ವರ ವಾರಣಾಶಿ, ರಮೇಶ್ ನೀರಬಿದಿರೆ, ಸುಳ್ಯ ತಾಲೂಕು ಸಮಿತಿಯ ಅಧ್ಯಕ್ಷ ಜೆ.ಕೆ. ರೈ, ಶಿವಪ್ರಸಾದ್ ಆಲೆಟ್ಟಿ, ಶಿವರಾಮ ಕಜೆಮೂಲೆ, ಶ್ರೀಧರ್ ಕಜೆಗದ್ದೆ, ರಮೇಶ ನೀರಬಿದಿರೆ, ಜಯಶ್ರೀ ಕೊಯಿಂಗೋಡಿ, ಕೀರ್ತಿ ಹೊದ್ದೆಟ್ಟಿ ಮೊದಲಾದವರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

Hot Topics

ಸಂಸದ ಡಾ. ಡಿ.ವಿ ಹೆಗ್ಗಡೆಯವರ ನೂತನ ಕಾರ್ಯಾಲಯ ಉದ್ಘಾಟನೆ

ಧರ್ಮಸ್ಥಳ: ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥನ ಕ್ಷೇತ್ರದ ಧರ್ಮಾಧಿಕಾರಿಗಳು ಆಗಿರುವ ಹಾಗು ರಾಜ್ಯ ಸಭೆಯ ಸಂಸದರಾಗಿ ಆಯ್ಕೆಯಾದ ಡಾ.ಡಿ.ವೀರೇಂದ್ರ ಹೆಗ್ಗಡೆಯವರ ನೂತನ 'ಸಂಸದರ ಕಾರ್ಯಾಲಯ'ವು ಧರ್ಮಸ್ಥಳದ ಮಂಜೂಷಾ ವಸ್ತು ಸಂಗ್ರಹಾಲಯದ ಬಳಿ ಉದ್ಘಾಟನೆಗೊಂಡಿತು.ಸ್ಥಳೀಯ...

ಶಿವಳ್ಳಿ ಸ್ಪಂದನ ಅಧ್ಯಕ್ಷರಾಗಿ ಯಕ್ಷಗುರು ರಾಮಚಂದ್ರ ಭಟ್‌ ಎಲ್ಲೂರು ಆಯ್ಕೆ

ಮಂಗಳೂರು: ಕದ್ರಿ ವಲಯ ಶಿವಳ್ಳಿ ಸ್ಪಂದನ ಅಧ್ಯಕ್ಷರಾಗಿ ಯಕ್ಷಗುರು ರಾಮಚಂದ್ರ ಭಟ್‌ ಎಲ್ಲೂರು ಸರ್ವಾನುಮತದಿಂದ ಆಯ್ಕೆಯಾಗಿದ್ದಾರೆ.ಕದ್ರಿ ಮಲ್ಲಿಕಟ್ಟೆ ಶ್ರೀಕೃಷ್ಣ ಮಂದಿರದಲ್ಲಿ ನಡೆದ ಮಹಾಸಭೆಯಲ್ಲಿ ಆಯ್ಕೆ ಪ್ರಕ್ರಿಯೆ ಘೋಷಿಸಲಾಯಿತು.ಅದರಲ್ಲಿ ಶಿವಳ್ಳಿ ಸ್ಪಂದನ ಉಪಾಧ್ಯಕ್ಷರು- ಸದಾನಂದ...

ಹರ್ ಘರ್ ತಿರಂಗಾ ಅಭಿಯಾನದಲ್ಲಿ ರಾಷ್ಟ್ರಧ್ವಜ ಸಂಹಿತೆ ಪಾಲಿಸಲು ದ.ಕ ಡಿಸಿ ಸೂಚನೆ

ಮಂಗಳೂರು: ಆಗಸ್ಟ್ 13 ರಿಂದ 15ರ ವರೆಗೆ ದೇಶದ ಪ್ರತೀ ಮನೆಯಲ್ಲೂ ರಾಷ್ಟ್ರ ಧ್ವಜವನ್ನು ಹಾರಿಸಿ ದೇಶಭಕ್ತಿ ಬಿಂಬಿಸುವ ಮೂಲಕ ರಾಷ್ಟ್ರ ಪ್ರೇಮವನ್ನು ಅಭಿವ್ಯಕ್ತಗೊಳಿಸುವಂತೆ ಅಭಿಯಾನವನ್ನು ಹಮ್ಮಿಕೊಂಡಿದೆ.ಈ ಅಭಿಯಾನದ ಹಿನ್ನೆಲೆ ಸರ್ಕಾರಿ ಕಟ್ಟಡಗಳ...