Thursday, September 29, 2022

ಕಡಬ: ನೆಲ್ಯಾಡಿ ಸೈಂಟ್ ಜಾರ್ಜ್ ವಿದ್ಯಾಸಂಸ್ಥೆಯಲ್ಲಿ ಪತ್ರಿಕಾ ದಿನ ಆಚರಣೆ

ಕಡಬ: ತಾಲೂಕು ಪತ್ರಕರ್ತರ ಸಂಘದ ಆಶ್ರಯದಲ್ಲಿ ಪತ್ರಿಕಾ ದಿನಾಚರಣೆ, ಉಪನ್ಯಾಸ ಹಾಗೂ ಸನ್ಮಾನ ಕಾರ್ಯಕ್ರಮವು ಸೋಮವಾರದಂದು ನೆಲ್ಯಾಡಿ ಸೈಂಟ್ ಜಾರ್ಜ್ ವಿದ್ಯಾಸಂಸ್ಥೆಯಲ್ಲಿ ನಡೆಯಿತು.

ಕಡಬ ತಹಸೀಲ್ದಾರ್ ಅನಂತಶಂಕರ್ ಬಿ. ಕಾರ್ಯಕ್ರಮವನ್ನು ಉದ್ಘಾಟಿಸಿ ಶುಭ ಹಾರೈಸಿದರು. ಕಡಬ ತಾಲೂಕು ಪತ್ರಕರ್ತರ ಸಂಘದ ಅಧ್ಯಕ್ಷ ನಾಗರಾಜ್ ಎನ್‌.ಕೆ. ಅಧ್ಯಕ್ಷತೆ ವಹಿಸಿ ಪ್ರಾಸ್ತಾವಿಕವಾಗಿ ಮಾತನಾಡಿದರು.


ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಹಿರಿಯ ಪತ್ರಕರ್ತ ಪಿ.ಬಿ. ಹರಿಪ್ರಸಾದ್ ರೈ ಅವರು ಸೈಂಟ್ ಜಾರ್ಜ್ ವಿದ್ಯಾಸಂಸ್ಥೆಯ ವಿದ್ಯಾರ್ಥಿಗಳಿಗೆ ಹಾಗೂ ಮಂಗಳೂರು ವಿಶ್ವವಿದ್ಯಾನಿಲಯದ ನೆಲ್ಯಾಡಿ ಘಟಕದ ವಿದ್ಯಾರ್ಥಿಗಳಿಗೆ ಉಪನ್ಯಾಸ ನೀಡಿದರು.

ಈ ಸಂದರ್ಭದಲ್ಲಿ ಪಿ.ಬಿ.ಹರಿಪ್ರಸಾದ್ ರೈ ಅವರನ್ನು ಕಡಬ ತಾಲೂಕು ಪತ್ರಕರ್ತರ ಸಂಘದ ವತಿಯಿಂದ ಸನ್ಮಾನಿಸಿ ಗೌರವಿಸಲಾಯಿತು.


ತಾಲೂಕು ಪತ್ರಕರ್ತರ ಸಂಘದ ಸ್ಥಾಪಕಾಧ್ಯಕ್ಷ ಬಾಲಕೃಷ್ಣ ಕೊಯಿಲ ಸನ್ಮಾನಿತರನ್ನು ಪರಿಚಯಿಸಿದರು.

ವೇದಿಕೆಯಲ್ಲಿ ದ.ಕ. ಜಿಲ್ಲಾ ಕಾರನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶ್ರೀನಿವಾಸ ನಾಯಕ್ ಇಂದಾಜೆ, ಸೈಂಟ್ ಜಾರ್ಜ್ ವಿದ್ಯಾ ಸಂಸ್ಥೆಯ ಸಂಚಾಲಕ ಅಬ್ರಹಾಂ ವರ್ಗೀಸ್ ಉಪಸ್ಥಿತರಿದ್ದರು.

ಸ್ವಾತಿ ಬಾಳ್ತಿಲ್ಲಾಯ ವಂದಿಸಿದರು. ದಯಾನಂದ ಕಲ್ನಾರ್ ಕಾರ್ಯಕ್ರಮ ನಿರೂಪಿಸಿದರು.

LEAVE A REPLY

Please enter your comment!
Please enter your name here

Hot Topics

ಕಡಬ: ಕಾನ್ವೆಂಟ್‌ಗೆ ನುಗ್ಗಿ ಹಲ್ಲೆಗೆ ಯತ್ನ-ಇಬ್ಬರು ಯುವಕರು ಅರೆಸ್ಟ್

ಕಡಬ: ಕಾನ್ವೆಂಟ್‌ವೊಂದಕ್ಕೆ ಅಕ್ರಮವಾಗಿ ಪ್ರವೇಶ ಮಾಡಿ ಅವಾಚ್ಯ ಶಬ್ದಗಳಿಂದ ಬೈದು ಹಲ್ಲೆಗೆ ಯತ್ನಿಸಿದ ಆರೋಪದಲ್ಲಿ ಇಬ್ಬರು ಆರೋಪಿಗಳನ್ನು ಉಪ್ಪಿನಂಗಡಿ ಪೊಲೀಸರು ಬಂಧಿಸಿದ ಘಟನೆ ಕಡಬದ ನೆಲ್ಯಾಡಿಯಲ್ಲಿ ನಡೆದಿದೆ.ಕಡಬ ತಾಲೂಕಿನ ಪೇರಡ್ಕ ನಿವಾಸಿಗಳಾದ ಸದಾಂ...

ಮೂರು ದಿನ ಕಳೆದರೂ ಇನ್ನೂ ಪತ್ತೆಯಾಗದ ಫಾದರ್ ಮುಲ್ಲರ್ ಆಸ್ಪತ್ರೆ ಡೀನ್ ಉರ್ಬನ್ ಡಿಸೋಜಾ..!

ಮಂಗಳೂರು : ಮಂಗಳೂರಿನ ಫಾದರ್ ಮುಲ್ಲರ್  ಮೆಡಿಕಲ್ ಕಾಲೇಜ್ ಆಸ್ಪತ್ರೆಯ ಡೀನ್ ಉರ್ಬನ್ ಡಿಸೋಜಾ ನಾಪತ್ತೆಯಾಗಿ ಮೂರು ದಿನ ಕಳೆದಿದೆ.ಆದ್ರೆ ಇದುವರೆಗೂ ಅವರ ಇರುವಿಕೆ ಖಾತ್ರಿ ಪಡಿಸಲು ಮಂಗಳೂರು ಪೊಲೀಸರಿಗೆ ಸಾಧ್ಯವಾಗಿಲ್ಲ.ಮಂಗಳೂರು ನಗರದ ಪಾಂಡೇಶ್ವರ...

ಮಂಗಳೂರು: ರಥಬೀದಿಯ ಶಾರದಾ ಮಹೋತ್ಸವದಲ್ಲಿ ಸಾಮೂಹಿಕ ಕುಂಕುಮಾರ್ಚನೆ

ಮಂಗಳೂರು: ನಗರದ ರಥಬೀದಿಯಲ್ಲಿ 100ನೇ ವರ್ಷಾಚರಣೆ ಸಂಭ್ರಮ ಆಚರಿಸುತ್ತಿರುವ ಮಂಗಳೂರು ಶ್ರೀ ಶಾರದಾ ಮಹೋತ್ಸವ ಸಮಿತಿಯ ವತಿಯಿಂದ ಸಹಸ್ರ ಚಂಡಿಕಾ ಮಹಾಯಾಗವನ್ನು ಆಯೋಜಿಸಲಾಗಿದೆ.ಇದರ ಅಂಗವಾಗಿ ಸಾಮೂಹಿಕ ಕುಂಕುಮಾರ್ಚನೆ ಕೂಡಾ ನೆರವೇರಿಸುತ್ತಿದ್ದು ನೂರಾರು ಮಾತೃವರ್ಗ...