DAKSHINA KANNADA
ಅಕ್ರಮ ಮರಳುಗಾರಿಕೆ ತಡೆ; ಕೇಸು ಹಾಕುವಂತೆ ಗ್ರಾಮಸ್ಥರಿಂದ ಒತ್ತಾಯ
Published
2 hours agoon
ಕಡಬ: ಚಾರ್ವಾಕ ಗ್ರಾಮದ ಕುಮಾರಧಾರ ನದಿಯಲ್ಲಿ ಮರಳುಗಾರಿಕೆ ವಿರುದ್ಧ ಗ್ರಾಮಸ್ಥರು ಸಿಡಿದೆದ್ದಿರುವ ಘಟನೆ ಕಡಬ ತಾಲೂಕಿನಲ್ಲಿ ನಡೆದಿದೆ.
ಇದೀಗ ಬೋಟ್ ಕಟ್ಟಿ ಹಾಕಿದವರ ವಿರುದ್ದ ಕೇಸು ದಾಖಲಿಸುವ ಬಗ್ಗೆ ಬಂದ ಸುದ್ದಿಯ ಹಿನ್ನೆಲೆ ಶುಕ್ರವಾರ (ನ.29) ಸಂಜೆ ಭಾರೀ ಸಂಖ್ಯೆಯಲ್ಲಿ ಗ್ರಾಮಸ್ಥರು ಕಡಬ ಠಾಣೆಗೆ ಆಗಮಿಸಿದ್ದಾರೆ.
ಚಾರ್ವಾಕ ಕುಂಬ್ಲಾಡಿ ಕುಕ್ಕೆನಾಥ ಬಾಲಸುಬ್ರಹ್ಮಣ್ಯ ದೇವಸ್ಥಾನದ ಪ್ರಮುಖರು ಊರವರು ಸೇರಿ ಚಾರ್ವಾಕ ಗ್ರಾಮದ ಭಾಗದಲ್ಲಿ ಮರಳುಗಾರಿಕೆಗೆ ತೀವ್ರ ವಿರೋಧ ವ್ಯಕ್ತಪಡಿಸಿದಲ್ಲದೆ, ನಿರ್ಣಯವನ್ನೂ ಮಾಡಿದ್ದರು.ಮರಳುಗಾರಿಕೆಯಿಂದ ದೈವಸಾನಿಧ್ಯ ನಾಶ ಮತ್ತು ಪ್ರಕೃತಿ ನಾಶವಾದ ಕಾರಣ ಊರವರು ಮರಳುಗಾರಿಕೆಗೆ ವಿರೋಧ ವ್ಯಕ್ತಪಡಿಸಿ ಸಂಬಂಧಪಟ್ಟ ಕಾಣಿಯೂರು ಗ್ರಾಮ ಪಂಚಾಯತಿಗೂ ಮನವಿ ಸಲ್ಲಿಸಿ ಇಲಾಖೆಗಳಿಗೆಲ್ಲ ಮರಳುಗಾರಿಕೆ ನಡೆಸದಂತೆ ಪತ್ರ ಬರೆದಿದ್ದಾರೆ.
ಎರಡು ದಿನದ ಹಿಂದೆ ಚಾರ್ವಾಕ ಭಾಗದಲ್ಲಿ ಮರಳುಗಾರಿಕೆಗೆ ಬಂದ ತಂಡಕ್ಕೆ ಊರವರು ಪ್ರತಿರೋಧ ವ್ಯಕ್ತಪಡಿಸಿದ್ದರು. ನ.29ರಂದು ಮತ್ತೆ ಬೋಟ್ ಮೂಲಕ ತಂಡ ಬಂದಾಗ ಬೋಟನ್ನು ಹಿಡಿದು ಚಾರ್ವಾಕ ಭಾಗದಲ್ಲಿ ಕಟ್ಟಿ ಹಾಕಲಾಗಿತ್ತು. ಬೋಟ್ ನಲ್ಲಿದ್ದ ಮರಳು ಕಾರ್ಮಿಕರು ಈಜಿ ಆಚೆ ಬದಿಗೆ ಪರಾರಿಯಾಗಿದ್ದರು. ಅಕ್ರಮ ಮರಳುಗಾರಿಕೆ ನಡೆಯುತ್ತಿದ್ದರೂ ಕಡಬದ ತಹಶೀಲ್ದಾರ್ ಆಗಲಿ, ಕಂದಾಯ ನಿರೀಕ್ಷಕರೀಗಲೀ,ಕಡಬದ ಪೊಲೀಸರಾಗಲಿ ಯಾವುದೇ ಕ್ರಮ ಕೈಗೊಳ್ಳದೆ ಮೌನಕ್ಕೆ ಶರಣಾಗಿದ್ದಾರೆ ಎಂದು ಗ್ರಾಮಸ್ಥರು ಆರೋಪಿಸಿದ್ದಾರೆ .
BELTHANGADY
ಧರ್ಮವನ್ನು ಅಂಗಿಯಂತೆ ಧರಿಸಿ ಕಳಚಬೇಡಿ : ವೀರೇಂದ್ರ ಹೆಗ್ಗಡೆ
Published
58 minutes agoon
30/11/2024ಧರ್ಮಸ್ಥಳ: ಶ್ರೀ ಕ್ಷೇತ್ರ ಧರ್ಮಸ್ಥಳ ಶ್ರೀ ಮಂಜುನಾಥ ಕ್ಷೇತ್ರದಲ್ಲಿ ಲಕ್ಷದೀಪೋತ್ಸವ ಸಂಭ್ರಮ ಜರುಗುತ್ತಿದ್ದು, ಲಕ್ಷಾಂತರ ಮಂದಿ ಭಕ್ತರು ಕ್ಷೇತ್ರಕ್ಕೆ ಆಗಮಿಸಿ ಶ್ರೀ ಮಂಜುನಾಥ ಸ್ವಾಮಿ ದೇವರ ದರ್ಶನ ಪಡೆದು ಪುನೀತರಾಗುತ್ತಿದ್ದಾರೆ. ಶುಕ್ರವಾರ ಕ್ಷೇತ್ರದ ಅಮೃತವರ್ಷಿಣಿ ಸಭಾಭವನದಲ್ಲಿ 92ನೇ ವರ್ಷದ ಸರ್ವ ಧರ್ಮ ಸಮ್ಮೇಳನ ನಡೆಯಿತು. ಉದ್ಘಾಟನೆಯನ್ನು ನೆರವೇರಿಸಲು ಆಗಮಿಸಿದ್ದ ರಾಜ್ಯ ಗೃಹ ಸಚಿವ ಡಾ ಜಿ ಪರಮೇಶ್ವರ್, ಅಧ್ಯಕ್ಷತೆಯನ್ನು ವಹಿಸಿದ್ದ ರಾಜರಾಜೇಶ್ವರಿ ನಗರದ ಶ್ರೀ ಕೈಲಾಸ ಆಶ್ರಮದ ಶ್ರೀ ಜಯೇಂದ್ರ ಪುರಿ ಸ್ವಾಮೀಜಿ ಮತ್ತು ಕ್ಷೇತ್ರದ ಧರ್ಮಾಧಿಕಾರಿ ಡಾ ಡಿ ವೀರೇಂದ್ರ ಹೆಗ್ಗಡೆ ಸಹಿತ ಗಣ್ಯರನ್ನು ಮೆರವಣಿಗೆಯಲ್ಲಿ ಕರೆತರಲಾಯಿತು. ರಾಜ್ಯ ಗೃಹ ಸಚಿವ ಡಾ ಜಿ ಪರಮೇಶ್ವರ್ ದೀಪ ಬೆಳಗಿ ಉದ್ಘಾಟಿಸಿದರು. ಧರ್ಮಸ್ಥಳ ಮಂಜೂಷಾ ವಸ್ತು ಸಂಗ್ರಹಾಲಯಕ್ಕೆ ವಿಶ್ವಮಾನ್ಯತೆ ದೊರಕಿದ ಹಿನ್ನೆಲೆಯಲ್ಲಿ ಡಾ ವೀರೇಂದ್ರ ಹೆಗ್ಗಡೆ ಅವರಿಗೆ ಇಂಡಿಯಾ ಬುಕ್ ಆಫ್ ರೆಕಾರ್ಡ್ ಪ್ರಮಾಣ ಪತ್ರ ಪ್ರದಾನ ಮಾಡಲಾಯಿತು.
ಡಾ ವೀರೇಂದ್ರ ಹೆಗ್ಗಡೆ ಅವರು ಸ್ವಾಗತಿಸಿದರು. ತನ್ನ ಅಜ್ಜ ಮಂಜಯ್ಯ ಹೆಗ್ಗಡೆ ಅವರು ಆರಂಭಿಸಿದ ಈ ಸಮ್ಮೇಳನವನ್ನು ತಂದೆ ರತ್ನವರ್ಮ ಹೆಗ್ಗಡೆ ಮುನ್ನಡೆಸಿದ್ದು, ಇದೀಗ 91 ವರ್ಷಗಳು ಸಂದು ಹೋದವು ಎಂದರು. ಈ ವೇದಿಕೆಯಲ್ಲಿ ಹಲವು ಮಂದಿ ಹಿರಿಯ ವಿದ್ವಾಂಸರು, ಮಾನವೀಯ, ಆದರ್ಶದ ಹಾದಿಯನ್ನು ನಾವು ಮುನ್ನಡೆಯಬೇಕೆಂದು ಹಿತವಚನ ನಿಡಿದರು. ಜನವರಿ 1ರಿಂದ ಉಜಿರೆ ಎಸ್‌ಡಿಎಂ ಆಸ್ಪತ್ರೆಯಲ್ಲಿ ಡಯಾಲಿಸಿಸ್ ಸೇವೆ ಉಚಿತವಾಗಿ ಸಿಗಲಿದೆ. ವರ್ಷಕ್ಕೆ 10,000 ಬಡ ರೋಗಿಗಳಿಗೆ ನೆರವಾಗಲಿದೆ ಎಂದರು.
ಗೃಹ ಮಂತ್ರಿ ಜಿ ಪರಮೇಶ್ವರ, ಸ್ವಾಮೀಜಿ ಮತ್ತು ಅತಿಥಿಗಳಿಗೆ ಹೆಗ್ಗಡೆ ಗೌರವಾಭಿನಂದನೆ ಸಲ್ಲಿಸಿದರು. ಡಾ ಪರಮೇಶ್ವರ ಮಾತನಾಡಿ, ಸರಕಾರಗಳು ಮಾಡದಿರುವ ಕೆಲಸಗಳನ್ನು ಇಂದು ಧರ್ಮಾಧಿಕಾರಿ ವಿರೇಂದ್ರ ಹೆಗ್ಡೆ ಮಾಡಿದ್ದಾರೆ. ಸರ್ವಧರ್ಮದ ಸಂದೇಶ ಇಂದಿನ ದಿನ ಬಹಳ ಅಗತ್ಯವಿದೆ. ದೇಶಕ್ಕೆ ಸಂವಿಧಾನ ಬರುವ ಮುಂಚೆಯೇ ಧರ್ಮಸ್ಥಳದಲ್ಲಿ ಸರ್ವಧರ್ಮ ಸಂದೇಶ ಸಾರುವ ಕಾರ್ಯ ನಡೆಯುತ್ತಿದೆ ಎಂದರು.
ಶ್ರೀ ಕೈಲಾಸ ಆಶ್ರಮದ ಶ್ರೀ ಜಯೇಂದ್ರ ಪುರಿ ಸ್ವಾಮೀಜಿ ಆಶೀರ್ವಚನ ನೀಡಿ, ಇಡೀ ಜಗತ್ತೇ ಪರಮೇಶ್ವರ ಮಯ. ಈ ಜ್ಞಾನ ಇರುವವರು ಸಮಾನತೆ ಅನುಸರಿಸುತ್ತಾರೆ. ಇಲ್ಲದದವರು ದ್ವೇಷ ಸಾಧಿಸುತ್ತಾರೆ. ಸಹಬಾಳ್ವೆ ದೂರ ಮಾಡುವ ಯಾವುದಾದರೂ ಮತವಿದ್ದರೆ ಅದಕ್ಕೆ ಭೂಮಿಯಲ್ಲಿರುವಅಧಿಕಾರವೇ ಇಲ್ಲ. ಅಂತಹ ಮತವನ್ನು ಪರಿಷ್ಕರಿಸಬೇಕು ಎಂದರು.
ಸಂಶೋಧಕ ಡಾ ಜಿ ಬಿ ಹರೀಶ್, ಮಾಜಿ ಪ್ರಾಂಶುಪಾಲ ಡಾ ಜೋಸೆಫ್ ಎನ್ ಎಂ, ವಿಜಯಪುರದ ಮೆಹತಾಬಾ ಇಬ್ರಾಹಿಂ ಸಾಬ ಕಾಗವಾಡ ಉಪನ್ಯಾಸ ನೀಡಿದರು. ಡಿ ಸುರೇಂದ್ರ ಕುಮಾರ್, ಡಿ. ಹರ್ಷೇoದ್ರ ಕುಮಾರ್, ಹೇಮಾವತಿ ವೀ. ಹೆಗ್ಗಡೆ, ಶ್ರದ್ದಾ ಅಮಿತ್, ಸುಪ್ರಿಯಾ ಹರ್ಷೇoದ್ರ ಕುಮಾರ್, ಅನಿತಾ ಸುರೇಂದ್ರ ಕುಮಾರ್, ಸುನೀಲ್ ಪಂಡಿತ್ ಮೊದಲಾದವರಿದ್ದರು. ರುಡ್ ಸೆಟ್ ನಿರ್ದೇಶಕ ಅಜಯ್ ವಂದಿಸಿದರು. ಪ್ರಾಧ್ಯಾಪಕ ಡಾ ಶ್ರೀಧರ್ ಭಟ್ ಕಾರ್ಯಕ್ರಮ ನಿರೂಪಿಸಿದರು.
DAKSHINA KANNADA
ಪುತ್ತೂರು: `50ರ ದಾಂಪತ್ಯಕ್ಕೊಂದು ಸನ್ಮಾನ’ ವಿಶಿಷ್ಠ ಕಾರ್ಯಕ್ರಮ
Published
4 hours agoon
30/11/2024ಪುತ್ತೂರು: ಹಿಂದೂ ಸಮಾಜದಲ್ಲಿ ಕೌಟುಂಬಿಕ ಪರಂಪರೆಗಳು ಮರೆಯಾಗುತ್ತಿರುವ ಸ್ಥಿತಿ ನಿರ್ಮಾಣವಾಗಿದೆ. ಇದರ ಫಲವಾಗಿಯೇ ವೃದ್ದಾಶ್ರಮಗಳ ಸಂಖ್ಯೆ ಹೆಚ್ಚಾಗುತ್ತಿದೆ. ಈ ಸ್ಥಿತಿ ಕೃಷಿ ಬದುಕನ್ನೇ ನಂಬಿಕೊಂಡು ಬಂದ ಗೌಡ ಸಮುದಾಯಕ್ಕೆ ಬರಬಾರದು.
ನಮ್ಮ ಪಾರಂಪರಿಕ ಸಂಸ್ಕøತಿಗೆ ಬದುಕಿಗೆ ಅಗತ್ಯವಾಗಿದೆ ಎಂದು ಪುತ್ತೂರಿನ ಮಾಜಿ ಶಾಸಕ ಸಂಜೀವ ಮಠಂದೂರು ಅವರು ಹೇಳಿದರು. ಶುಕ್ರವಾರ ನಡ್ಪ ಹೊಸಮನೆ ಗುಡ್ಡಪ್ಪ ಗೌಡ ಅವರ ಮನೆಯಲ್ಲಿ ನಡೆದ ಒಕ್ಕಲಿಗ ಸ್ವಸಹಾಯ ಸಂಘ ಟ್ರಸ್ಟ್ ಪುತ್ತೂರು ಇದರ ದಶಮಾನೋತ್ಸವ ಸಂಭ್ರಮದ ಹಿನ್ನಲೆಯಲ್ಲಿ ಬಜತ್ತೂರು ಗ್ರಾಮದ 50ರ ದಾಂಪತ್ಯದ ಬದುಕಿಗೊಂದು ಸನ್ಮಾನ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
ದಶಮಾನೋತ್ಸವ ಸಂಭ್ರಮ ಸಮಿತಿ ಅಧ್ಯಕ್ಷ ಗೋಪಾಲಕೃಷ್ಣ ಪಟೇಲ್ ಮಾತನಾಡಿದರು. ಇದೆ ಸಂದರ್ಭದಲ್ಲಿ 13 ದಂಪತಿಗೆ ಸನ್ಮಾನ ಕಾರ್ಯಕ್ರಮ ನಡೆಯಿತು. ಅಧ್ಯಕ್ಷತೆಯನ್ನು ಗ್ರಾಮಸಮಿತಿ ಅಧ್ಯಕ್ಷ ದೇರಣ್ಣ ಗೌಡ ಓಮಂದೂರು ವಹಿಸಿದ್ದರು. ಮಾಜಿ ತಾಪಂ ಸದಸ್ಯ ಮುಕುಂದ ಗೌಡ ಬಜತ್ತೂರು, ಒಕ್ಕಲಿಗ ಸ್ವಸಹಾಯ ಟ್ರಸ್ಟ್ ಅಧ್ಯಕ್ಷ ಡಿ.ವಿ.ಮನೋಹರ್ ಮೊದಲಾದವರಿದ್ದರು.
DAKSHINA KANNADA
ಮಂಗಳೂರು: ಕ್ಷುಲ್ಲಕ ಕಾರಣ ಮುಂದಿಟ್ಟು ಬೂತ್ ಅಧ್ಯಕ್ಷರಿಗೆ ಹಲ್ಲೆ
Published
4 hours agoon
30/11/2024ಮಂಗಳೂರು: ಹರೇಕಳ ಬೂತ್ ಅಧ್ಯಕ್ಷ ಶರತ್ ಕುಮಾರ್ ಗಟ್ಟಿ ಎಂಬವರ ಮೇಲೆ ಗುಂಪೊಂದು ನಡೆಸಿರುವ ಹಲ್ಲೆ ಪ್ರಕರಣವನ್ನು ವಿಧಾನ ಪರಿಷತ್ ಸದಸ್ಯ ಕಿಶೋರ್ ಕುಮಾರ್ ಪುತ್ತೂರು ಖಂಡಿಸಿದ್ದಾರೆ.
ಗಾಯಾಳು ಶರತ್ ಕುಮಾರ್ ಭೇಟಿಯಾಗಿ ಧೈರ್ಯ ತುಂಬಿದ ಅವರು, ಮತಾಂಧ ಗುಂಪು ನಡೆಸಿರುವ ದಾಳಿಯ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.
ಗೃಹ ಇಲಾಖೆ ಆರೋಪಿಗಳನ್ನು ಬಂಧಿಸಲು ಪೊಲೀಸರಿಗೆ ಸೂಚನೆ ನೀಡಬೇಕು. ಇಲ್ಲದೇ ಹೋದಲ್ಲಿ ಹಿಂದೂ ಸಮಾಜಕ್ಕೆ ಇದಕ್ಕೆ ತಕ್ಕ ಪ್ರತಿಕ್ರಿಯೆ ನೀಡಲಿದೆ ಎಂದು ಎಚ್ಚರಿಸಿದ್ದಾರೆ. ಸುಮಾರು 15-20 ಜನರಿದ್ದ ಗುಂಪೊಂದು ಶುಕ್ರವಾರ ಮಸೀದಿಯಿಂದ ನೇರವಾಗಿ ಶರತ್ ಕುಮಾರ್ ಗಟ್ಟಿ ಅವರ ಮನೆಗೆ ನುಗ್ಗಿ ಕ್ಷುಲ್ಲಕ ಕಾರಣ ಮುಂದಿಟ್ಟು ಹಲ್ಲೆ ನಡೆಸಿದೆ. ಈ ವೇಳೆ ತಡೆಯಲು ಬಂದ ಶರತ್ ಕುಮಾರ್ ಅವರ ಅಜ್ಜಿಯನ್ನು ದೂಡಿ ದಬ್ಬಾಳಿಕೆ ನಡೆಸಿದ್ದಾರೆ ಎಂದು ಕಿಶೋರ್ ಕುಮಾರ್ ಆರೋಪಿಸಿದ್ದಾರೆ.
LATEST NEWS
ಆರ್ಸಿಬಿಗೆ ರಾಜ್ಯ ಸರ್ಕಾರದಿಂದ ಎಚ್ಚರಿಕೆ !
ಕಟಪಾಡಿ: ಪತ್ನಿ ನಿ*ಧನದ ಬೆನ್ನಲ್ಲೇ ಆಘಾತದಿಂದ ಪತಿ ಸಾ*ವು
ಪುತ್ರಿಯೊಂದಿಗೆ ಶ್ರೀಕೃಷ್ಣ ಮಠಕ್ಕೆ ನಟಿ ಮಾಲಾಶ್ರೀ ಭೇಟಿ; ಕೋಟಿ ಗೀತಾ ಲೇಖನ ಯಜ್ಞ ದೀಕ್ಷೆ ಸ್ವೀಕಾರ
ಬೈಕ್ ಡಿಕ್ಕಿ ಹೊಡೆಯುವುದನ್ನು ತಪ್ಪಿಸಲು ಹೋಗಿ ಬಸ್ ಡ್ರೈವರ್ ಎಡವಟ್ಟು: 12 ಮಂದಿಯ ದುರಂತ ಅಂತ್ಯ
ಓವರ್ಟೇಕ್ ಮಾಡಲು ಹೋಗಿ ಬೈಕ್ಗೆ ಕಾರು ಡಿ*ಕ್ಕಿ; ಇಬ್ಬರ ದುರ್ಮ*ರಣ
ಇನ್ಮುಂದೆ ವಿಶ್ವವಿದ್ಯಾಲಯಗಳಿಗೆ ಮುಖ್ಯಮಂತ್ರಿಯೇ ಕುಲಪತಿ!
Trending
- BIG BOSS7 days ago
BBK11: ಕಿಚ್ಚನ ಪಂಚಾಯ್ತಿಯಲ್ಲಿ ರಜತ್ಗೆ ಫುಲ್ ಕ್ಲಾಸ್; ಹೊರ ಹೋಗೋಕೆ ಬಾಗಿಲು ಓಪನ್ ಇದೆ ಎಂದ ಬಾದ್ ಷಾ!
- BANTWAL2 days ago
ಅನಾರೋಗ್ಯದಿಂದ ಬಳಲುತ್ತಿದ್ದ ಯುವತಿ ಸಾವು
- Baindooru7 days ago
3ಕ್ಕೆ 3 ಸೋಲು.. ಮನೆಯಲ್ಲಿನ TV ಒಡೆದು ಹಾಕಿದ ಬಿಜೆಪಿ ನಿಷ್ಠಾವಂತ ಕಾರ್ಯಕರ್ತ
- FILM20 hours ago
ಪುತ್ರಿಯೊಂದಿಗೆ ಶ್ರೀಕೃಷ್ಣ ಮಠಕ್ಕೆ ನಟಿ ಮಾಲಾಶ್ರೀ ಭೇಟಿ; ಕೋಟಿ ಗೀತಾ ಲೇಖನ ಯಜ್ಞ ದೀಕ್ಷೆ ಸ್ವೀಕಾರ