HomeDAKSHINA KANNADANMPA ಹೆಲಿಪ್ಯಾಡ್‌ನಲ್ಲಿ ಕೋರ್ ಕಮಿಟಿ ಸದಸ್ಯರೊಂದಿಗೆ ಪ್ರಧಾನಿ ಅನೌಪಚಾರಿಕ ಚರ್ಚೆ

NMPA ಹೆಲಿಪ್ಯಾಡ್‌ನಲ್ಲಿ ಕೋರ್ ಕಮಿಟಿ ಸದಸ್ಯರೊಂದಿಗೆ ಪ್ರಧಾನಿ ಅನೌಪಚಾರಿಕ ಚರ್ಚೆ

ಮಂಗಳೂರು: ರಾಜ್ಯದಲ್ಲಿ ವಿಧಾನಸಭಾ ಚುನಾವಣೆ ಸಮೀಪಿಸುತ್ತಿರುವ ಹಿನ್ನೆಲೆಯಲ್ಲಿ ಮುಂದಿನ ದಿನಗಳಲ್ಲಿ ತಾನು ಕರ್ನಾಟಕಕ್ಕೆ ನಿರಂತರವಾಗಿ ಭೇಟಿ ನೀಡುತ್ತೇನೆ ಎಂದು ಪ್ರಧಾನಿ ನರೇಂದ್ರ ಮೋದಿ ಅವರು ತಿಳಿಸಿದ್ದಾರೆ.


ನಿನ್ನೆ ಮಂಗಳೂರಿನ ಗೋಲ್ಡ್‌ ಫಿಂಚ್‌ ಮೈದಾನಿನಲ್ಲಿ ಸಮಾವೇಶದ ಬಳಿಕ ಹೆಲಿಪ್ಯಾಡ್‌ ಬಳಿ ಪಕ್ಷದ ಕೋರ್‌ ಕಮಿಟಿ ಸದಸ್ಯರ ಜತೆಗೆ ಸುಮಾರು 45 ನಿಮಿಷ ಚರ್ಚೆ ನಡೆಸಿದ ಅವರು, ರಾಜ್ಯದಲ್ಲಿನ ಪ್ರಸ್ತುತ ರಾಜಕೀಯ ಬೆಳವಣಿಗೆಗಳು, ಪಕ್ಷದಿಂದ ನಡೆಯುತ್ತಿರುವ ಸಂಘಟನಾತ್ಮಕ ಕಾರ್ಯಕ್ರಮಗಳ ಬಗ್ಗೆ ಮಾಹಿತಿ ಪಡೆದರು.

ಮಂಗಳೂರಿನ ಸಮಾವೇಶದಲ್ಲಿ ಸೇರಿದ್ದ ಜನಸ್ತೋಮ ಹಾಗೂ ಬಿಜೆಪಿ ಕಾರ್ಯಕರ್ತರ ಉತ್ಸಾಹದ ಬಗ್ಗೆ ಅವರು ಮೆಚ್ಚುಗೆ ವ್ಯಕ್ತಪಡಿಸಿದರು.

ರಾಜ್ಯದೆಲ್ಲೆಡೆ ಶಕ್ತಿ ಪ್ರದರ್ಶನ ನೀಡುವ ಮೂಲಕ ಮುಂದಿನ ಚುನಾವಣೆಯಲ್ಲಿ 150 ಸ್ಥಾನ ಗೆಲ್ಲಲು ಈಗಿಂದಲೇ ಕಾರ್ಯೋನ್ಮುಖರಾಗುವಂತೆ ಮೋದಿ ಸೂಚಿಸಿದರು.

ಕೇಂದ್ರ ಮತ್ತು ರಾಜ್ಯ ಸರಕಾರಗಳ ಯೋಜನೆಗಳ ಅನುಷ್ಠಾನದ ಬಗ್ಗೆ ವಿವರ ಪಡೆದ ಅವರು ಯೋಜನೆಗಳ ಬಗ್ಗೆ ವ್ಯಾಪಕ ಪ್ರಚಾರ ನೀಡ ಬೇಕು, ಜಿಲ್ಲಾ ಮತ್ತು ವಿಭಾಗವಾರು ಸಮಾವೇಶ ಆಯೋಜಿಸ ಬೇಕು. ಸರಕಾರದ ಸಾಧನೆಯನ್ನು ಮನೆಮನೆಗೆ ತಲುಪಿಸಲು ಸೂಕ್ತ ಕಾರ್ಯ ಯೋಜನೆ ರೂಪಿಸಬೇಕು.

ಗುಜರಾತ್‌ ಚುನಾವಣೆ ಬಳಿಕ‌ ನಮ್ಮ ಗುರಿ ಕರ್ನಾಟಕ. ಅಭಿವೃದ್ಧಿಯ ಮಂತ್ರದೊಂದಿಗೆ ನಾವು ಚುನಾವಣೆಗೆ ಹೋಗಬೇಕಿದೆ.

ಆ ನಿಟ್ಟಿನಲ್ಲಿ ರಾಜ್ಯ ಸರಕಾರ ಎಲ್ಲ ರೀತಿಯಲ್ಲೂ ಸಜ್ಜಾಗಬೇಕೆಂದರು.
ಸಂಸದ ಹಾಗೂ ಬಿಜೆಪಿ ರಾಜ್ಯ ಅಧ್ಯಕ್ಷ ನಳಿನ್‌ ಕುಮಾರ್‌ ಕಟೀಲು, ಕೋರ್‌ ಕಮಿಟಿ ಸದಸ್ಯರಾದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಬಿ.ಎಸ್‌. ಯಡಿಯೂರಪ್ಪ, ಪ್ರಹ್ಲಾದ್‌ ಜೋಷಿ, ಜಗದೀಶ್‌ ಶೆಟ್ಟರ್‌, ಗೋವಿಂದ ಕಾರ ಜೋಳ, ಡಿ.ವಿ. ಸದಾನಂದ ಗೌಡ, ಅರುಣ್‌ ಸಿಂಗ್‌, ಸಿ.ಟಿ.ರವಿ. ಕೆ.ಎಸ್‌.ಈಶ್ವರಪ್ಪ, ಶ್ರೀರಾಮುಲು, ಆರ್‌.ಅಶೋಕ್‌ ,ಡಾ| ಅಶ್ವಥ್‌ ನಾರಾಯಣ್‌, ರಾಜೇಶ್‌ ಜಿ.ವಿ, ಡಿ.ಕೆ.ಅರುಣಾ, ನಿರ್ಮಲ್‌ ಕುಮಾರ್‌ ಸುರಾನಾ ಮತ್ತಿತರಿದ್ದರು.

Latest articles

ಮಂಗಳೂರು: ಮಹಿಳಾ ಕುಸ್ತಿಪಟುಗಳಿಗೆ ಬೆಂಬಲ ಸೂಚಿಸಿ ಮಂಗಳೂರಿನಲ್ಲಿ ಪ್ರತಿಭಟನೆ-ಬೃಜ್‌ ಭೂಷಣ್‌ ಬಂಧನಕ್ಕೆ ಆಗ್ರಹ

ಮಹಿಳಾ ಕುಸ್ತಿ ಪಟುಗಳ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಅರೋಪ ಹೊತ್ತ ಎಸಗಿದ ಉತ್ತರ ಪ್ರದೇಶದ ಬಿಜೆಪಿ ಸಂಸದ...

ಮಂಗಳೂರು: ಬೀದಿಬದಿ ವ್ಯಾಪಾರಿಗಳ ಮೇಲಿನ ಕಿರುಕುಳ, ಕೇಸುಗಳಿಗೆ ಖಂಡನೆ – ಸುಳ್ಳು ಮೊಕದ್ದಮೆ ವಾಪಾಸ್ ಪಡೆಯಲು ಒತ್ತಾಯಿಸಿ ಪ್ರತಿಭಟನೆ

ಜನಪರ ಹೋರಾಟಗಾರ, ಬೀದಿ ವ್ಯಾಪಾರಿಗಳ ಮುಂದಾಳು ಬಿ ಕೆ ಇಮ್ತಿಯಾಝ್‌ ಮತ್ತು ಮುಖಂಡರ ಮೇಲಿನ ಸುಳ್ಳು ಮೊಕದ್ದಮೆಗಳನ್ನು ವಾಪಾಸ್...

ರಾಮನಗರ: ಟೋಲ್ ವಿಚಾರಕ್ಕೆ ಸಂಬಂಧಿಸಿ ಗಲಾಟೆ- ಯುವಕರ ತಂಡದಿಂದ ಸಿಬಂದಿ ಹತ್ಯೆ..!

ಟೋಲ್ ಕಟ್ಟುವ ವಿಚಾರಕ್ಕೆ ಸಂಬಂಧಿಸಿ ಯುವಕರ ತಂಡವೊಂದು ಗಲಾಟೆ ಮಾಡಿದ ಹಿನ್ನಲೆಯಲ್ಲಿ ಟೋಲ್ ಸಿಬ್ಬಂದಿಯ ಕೊಲೆಯಾಗಿದೆ. ಈ ಘಟನೆ...

ಊರಿಗೆ ಹೋಗಲು ನಿಲ್ದಾಣದಲ್ಲಿ ಕಾದು ಸುಸ್ತಾಗಿ ತಾನೇ ಸರ್ಕಾರಿ ಬಸ್ ಚಲಾಯಿಸಿದ ಭೂಪನ ಮೇಲೆ ಪೊಲೀಸ್ ಕೋಪ..!

ವ್ಯಕ್ತಿಯೊಬ್ಬ ತನ್ನ ಊರಿಗೆ ಬಸ್ ಇಲ್ಲವೆಂದು ನಿಲ್ದಾಣದಲ್ಲಿ ನಿಲ್ಲಿಸಿದ್ದ ಸಾರಿಗೆ ಸಂಸ್ಥೆಯ ಬಸ್ಸನ್ನೇ ಚಲಾಯಿಸಿ ನಿಲ್ದಾಣದಿಂದ ಹೊರಗಿರುವ ಡಿವೈಡರ್...