Saturday, March 6, 2021

ಇತಿಹಾಸ ಪುಟದಲ್ಲಿ ಪ್ರಧಾನಿ ಜೋಕರ್; ರವಿಕಿರಣ್ ಗುಡುಗು..!

ಇತಿಹಾಸ ಪುಟದಲ್ಲಿ ಪ್ರಧಾನಿ ಜೋಕರ್; ರವಿಕಿರಣ್ ಗುಡುಗು..!

Prime Minister Joker in history page Ravikiran Anger..!

ಮಂಗಳೂರು: ರೈತ ತಿದ್ದುಪಡಿ ಕಾಯ್ದೆಯನ್ನು ವಿರೋಧಿಸಿ ದೆಹಲಿಯಲ್ಲಿ ನಡೆಯುತ್ತಿರುವ ಪ್ರತಿಭಟನೆಗೆ ಬೆಂಬಲ ವ್ಯಕ್ತಪಡಿಸಿ ಮಂಗಳೂರಿನಲ್ಲಿ ವಿವಿಧ ರೈತಪರ ಸಂಘಟನೆಗಳಿಂದ ಮಂಗಳೂರಿನ ನೆಹರೂ ಮೈದಾನದಲ್ಲಿ  ಪ್ರತಿಭಟನೆ ನಡೆಯಿತು.ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಕಛೇರಿಯಿಂದ  ಹೊರಟ ಕಾಲ್ನಡಿಗೆ ಜಾಥ ಹಾಗೂ ವಾಹನ ಜಾಥ ರಾವ್ ಆ್ಯಂಡ್ ರಾವ್ ಸರ್ಕಲ್ ಆಗಿ ಕ್ಲಾಕ್ ಟವರ್ವರೆಗೆ ಸಾಗಿ  ನೆಹರೂ ಮೈದಾನದಲ್ಲಿ ಜಾಥಾ ಸಮಾಪ್ತಿಗೊಂಡಿತು.ಬಳಿಕ  ಪ್ರತಿಭಟನೆಯನ್ನುದ್ದೇಶಿಸಿ ನಡೆದ ಸಭಾ ಕಾರ್ಯಕ್ರಮದಲ್ಲಿ ರೈತ  ಹೋರಾಟಗಾರ ರವಿಕಿರಣ್ ಪುಣಚ ಮಾತನಾಡಿ ಜನರ ಕಷ್ಟ ಅರ್ಥ ಮಾಡಿಕೊಳ್ಳದ ಪ್ರಧಾನಿ ಇತಿಹಾಸ ಪುಟದಲ್ಲಿ ಜೋಕರ್ ಆಗಿ ಇರುತ್ತಾರೆ..

ರೈತ ವಿರೋಧಿ ಕಾಯ್ದೆ ಜಾರಿಗೊಳಿಸುವ ರೈತ ಕಾರ್ಮಿಕ ಜೀವನ ಹಾಳು ಮಾಡುತ್ತಿರುವ ಬಿಜೆಪಿ ನಾಯಕರೆ ಹಾಗು ಸಂಘ ಪರಿವಾರದವರೆ ನಿಮ್ಮ ನಾಯಕ ಪ್ರಧಾನಿ ಮೋದಿಯನ್ನು ಸರಿ ಮಾಡಿ ಅಂತ ಕೇಂದ್ರ ಬಿಜೆಪಿ ಸರ್ಕಾರದ ವಿರುದ್ಧ ಗುಡುಗಿದರು. ಪ್ರತಿಭಟನೆಯಲ್ಲಿ  ರೈತ ವಿರೋಧಿ ಕಾಯ್ದೆ ಜಾರಿಗೊಳಿಸಿದ ಕೇಂದ್ರ ಸರ್ಕಾರದ ಪ್ರತಿಭನಾ ನಿರತರು ಘೋಷಣೆ ಕೂಗಿದರು. ಪ್ರತಿಭಟನೆಯಲ್ಲಿ ವಿವಿಧ ಸಂಘಟನೆಗಳ ಮುಖ್ಯಸ್ಥರು ಸದಸ್ಯರು ಪಾಲ್ಗೊಂಡಿದ್ದರು.

Hot Topics

ಕಾಪುವಿನಲ್ಲಿ ಕಾರು ಅಪಘಾತ ಗಂಭೀರವಾಗಿ ಗಾಯಗೊಂಡಿದ್ದ ಯುವತಿ ಸಾವು..!

ಕಾಪುವಿನಲ್ಲಿ ಕಾರು ಅಪಘಾತ ಗಂಭೀರವಾಗಿ ಗಾಯಗೊಂಡಿದ್ದ ಯುವತಿ ಸಾವು..! ಉಡುಪಿ : ಉಡುಪಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಭಾರಿ ಮಳೆಯ ನಡುವೆ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಚಾಲಕನ ನಿಯಂತ್ರಣ ತಪ್ಪಿದ ಕಾರೊಂದು ಕಾಪು ಬಳಿ...

ಮಗು ಸೇರಿದಂತೆ ದಂಪತಿ ಸಾಮೂಹಿಕ ಆತ್ಮಹತ್ಯೆ ಹಳೆಯಂಗಡಿಯಲ್ಲಿ ಹೃದಯ ವಿದ್ರಾವಕ ಘಟನೆ..!

ಮಗು ಸೇರಿದಂತೆ ದಂಪತಿ ಸಾಮೂಹಿಕ ಆತ್ಮಹತ್ಯೆ ಹಳೆಯಂಗಡಿಯಲ್ಲಿ ಹೃದಯ ವಿದ್ರಾವಕ ಘಟನೆ..! ಮಂಗಳೂರು:  ಎಂಟು ವರ್ಷದ ಮಗು ಸೇರಿದಂತೆ ದಂಪತಿ ಸಾಮೂಹಿಕ ಆತ್ಮಹತ್ಯೆ ಮಾಡಿರುವ ದಾರುಣ ಘಟನೆ ಹಳೆಯಂಗಡಿ ಬಳಿಯ ಕಲ್ಲಾಪು ರೈಲ್ವೇ ಗೇಟ್...

ಫೋನಿನಲ್ಲಿ ಮಾತಾಡುತ್ತಿದ್ದ ಯುವಕ ಮೃತ್ಯು ಕೂಪಕ್ಕೆ: ವಿಟ್ಲದಲ್ಲಿ ಹೃದಯ ವಿದ್ರಾವಕ ಘಟನೆ..! 

ಫೋನಿನಲ್ಲಿ ಮಾತಾಡುತ್ತಿದ್ದ ಯುವಕ ಮೃತ್ಯು ಕೂಪಕ್ಕೆ ವಿಟ್ಲದಲ್ಲಿ ಹೃದಯ ವಿದ್ರಾವಕ ಘಟನೆ..!  ಮಂಗಳೂರು: ಟೆರೇಸ್ ನಲ್ಲಿ ಫೋನ್ ನಲ್ಲಿ ಮಾತನಾಡುತ್ತಿದ್ದ ವೇಳೆ ಆಯತಪ್ಪಿ ಕೆಳಗೆ ಬಿದ್ದು ಯುವಕ ಸಾವನ್ನಪ್ಪಿರುವ ಘಟನೆ ವಿಟ್ಲದ ಕೇಪು ಎಂಬಲ್ಲಿ...