Connect with us

    LATEST NEWS

    ಕನ್ನಡ ರಾಜ್ಯೋತ್ಸವಕ್ಕೆ ಕನ್ನಡದಲ್ಲೇ ಶುಭಾಶಯ ಕೋರಿದ ಪ್ರಧಾನಿ ಮೋದಿ

    Published

    on

    ದೆಹಲಿ: ರಾಜ್ಯಾದ್ಯಂತ 69ನೇ ಕನ್ನಡ ರಾಜ್ಯೋತ್ಸವ ಆಚರಿಸಲಾಗುತ್ತಿದೆ. ಈ ಸಂದರ್ಭದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಕರ್ನಾಟಕದ ಜನತೆಗೆ ಕನ್ನಡದಲ್ಲೇ ರಾಜ್ಯೋತ್ಸವಕ್ಕೆ ಶುಭಾಶಯ ಕೋರಿದ್ದಾರೆ.

    ಶುಭಾಶಯ ಕೋರಿ ಪ್ರಧಾನಿ ಕನ್ನಡದಲ್ಲೇ ಟ್ವೀಟ್ ಮಾಡಿದ್ದು, ಕನ್ನಡ ರಾಜ್ಯೋತ್ಸವವು ಅತ್ಯಂತ ವಿಶೇಷವಾದ ಸಂದರ್ಭವಾಗಿದ್ದು, ಇದು ಕರ್ನಾಟಕದ ಅನುಕರಣೀಯ ಸಂಸ್ಕೃತಿ ಮತ್ತು ಸಂಪ್ರದಾಯಗಳನ್ನು ಗುರುತಿಸುತ್ತದೆ. ರಾಜ್ಯವು ಮಹಾನ್ ವ್ಯಕ್ತಿಗಳನ್ನು ಪಡೆದಿದ್ದು, ಅವರು ಎಲ್ಲಾ ಕ್ಷೇತ್ರಗಳಲ್ಲಿ ಅಭಿವೃದ್ಧಿ ಮತ್ತು ನಾವೀನ್ಯತೆಗೆ ಶಕ್ತಿ ತುಂಬುತ್ತಿದ್ದಾರೆ. ಕರ್ನಾಟಕದ ಜನರು ಸದಾ ಸಂತೋಷ ಮತ್ತು ಯಶಸ್ಸಿನಿಂದ ಕೂಡಿರಲಿ ಎಂದು ಹಾರೈಸಿದ್ದಾರೆ.

    Click to comment

    Leave a Reply

    Your email address will not be published. Required fields are marked *

    FILM

    ಇಂದು ಮಧ್ಯಾಹ್ನ 1.30 ಕ್ಕೆ ನಟ ದರ್ಶನ್ ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲು..!

    Published

    on

    ಬೆಂಗಳೂರು: ಚಿತ್ರದುರ್ಗದ ಕೊಲೆ ಪ್ರಕರಣದಲ್ಲಿ ಜೈಲು ಪಾಲಾಗಿದ್ದ ನಟ ದರ್ಶನ್ ಅವರು ಜಾಮೀನಿನ ಮೇಲೆ ಬಿಡುಗಡೆಯಾಗಿದ್ದು, ಇಂದು ಮಧ್ಯಾಹ್ನ 1.30 ಕ್ಕೆ ಆಸ್ಪತ್ರೆಗೆ ದಾಖಲಾಗಲಿದ್ದಾರೆ ಎನ್ನಲಾಗಿದೆ.

    ತೀವ್ರ ಬೆನ್ನು ನೋವಿನಿಂದ ಬಳಲುತ್ತಿರುವ ನಟ ದರ್ಶನ್ ಇಂದು ಮಧ್ಯಾಹ್ನ 2 ಗಂಟೆಗೆ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆಗಾಗಿ ದಾಖಲಾಗಲಿದ್ದಾರೆ. ಚಿಕಿತ್ಸೆ ಪಡೆದ 6 ವಾರಗಳ ಬಳಿಕ ಅವರು ಮತ್ತೆ ವಿಚಾರಣಾ ಕೋರ್ಟ್ ಗೆ ಸರೆಂಡರ್ ಆಗಬೇಕಿದೆ. ಈ ಹಿನ್ನೆಲೆಯಲ್ಲಿ ಅವರು ಇಂದೇ ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯಲಿದ್ದಾರೆ ಎನ್ನಲಾಗಿದೆ.

    ಬಳ್ಳಾರಿ ಜೈಲಿನಲ್ಲಿರುವ ಕೊಲೆ ಆರೋಪಿ ದರ್ಶನ್ ಬೆನ್ನುನೋವಿನಿಂದ ಬಳಲುತ್ತಿರುವ ಹಿನ್ನೆಲೆಯಲ್ಲಿ ಜಾಮೀನು ನೀಡುವಂತೆ ಕೋರಿ ಹೈಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದರು. ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್ ನಟ ದರ್ಶನ್ ಗೆ 6 ವಾರಗಳ ಕಾಲ ಮಧ್ಯಂತರ ಜಾಮೀನು ಮಂಜೂರು ಮಾಡಿದೆ.

    Continue Reading

    LATEST NEWS

    69ನೇ ಕನ್ನಡ ರಾಜ್ಯೋತ್ಸವ: ನಾಡದೇವತೆ ಭುವನೇಶ್ವರಿಗೆ ಪುಷ್ಪಾರ್ಚನೆ, ಧ್ವಜಾರೋಹಣ

    Published

    on

    ಬೆಂಗಳೂರು : ಇಂದು 69ನೇ ಕನ್ನಡ ರಾಜ್ಯೋತ್ಸವದ ಸಡಗರ. ಬೆಂಗಳೂರಿನ ಕಂಠೀರವ ಕ್ರೀಡಾಂಗಣದಲ್ಲಿ ಕನ್ನಡ ರಾಜ್ಯೋತ್ಸವದ ಸಂಭ್ರಮ ಮನೆ ಮಾಡಿದೆ.

    ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ತಾಯಿ ಭುವನೇಶ್ವರಿಗೆ ಪುಷ್ಪ ನಮನ ಸಲ್ಲಿಸಿ, ರಾಷ್ಟ್ರ ಧ್ವಜ ಹಾಗೂ ಕನ್ನಡ ಧ್ವಜಾರೋಹಣ ನೆರವೇರಿಸಿದರು. ಬಳಿಕ ವಿವಿಧ ಕನ್ನಡ ನಾಡಿನ ಸಂಸ್ಕೃತಿ ಬಿಂಬಿಸುವ ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ಚಾಲನೆ ನೀಡಲಾಯಿತು.
    ಇದನ್ನೂ ಓದಿ : ‘ಇಷ್ಟರಲ್ಲೇ ಮದುವೆ ಆಗ್ತೀನಿ’ ; ಡಾಲಿ ಧನಂಜಯ್ ಕಡೆಯಿಂದ ಗುಡ್ ನ್ಯೂಸ್

    ರಾಜ್ಯದ್ಯಂತ ಹಲವು ಶಾಲೆಗಳ ಶಾಲಾ ಮಕ್ಕಳು ಪಾಲ್ಗೊಂಡಿದ್ದು, ಕನ್ನಡ ಗೀತೆಗಳಿಗೆ ನೃತ್ಯ ಮಾಡುವ ಮೂಲಕ ಪ್ರೇಕ್ಷಕರ ಮನರಂಜಿಸಿದರು. ಸಮಾರಂಭದಲ್ಲಿ ಉಪ ಮುಖ್ಯಮಂತ್ರಿ ಡಿಕೆ.ಶಿವಕುಮಾರ್, ಶಿಕ್ಷಣ ಸಚಿವ ಮಧು ಬಂಗಾರಪ್ಪ ಮೊದಲಾದವರು ಉಪಸ್ಥಿತರಿದ್ದರು.

    Continue Reading

    LATEST NEWS

    ಮೀನಿನ ತಲೆ ತಿನ್ನುವುದರಿಂದ ಸಿಗಲಿವೆ ಈ ಎಲ್ಲಾ ಪ್ರಯೋಜನಗಳು..!

    Published

    on

    ಮಾಂಸಾಹಾರಿಗಳು ಚಿಕನ್ ಅನ್ನು ಸೇವಿಸುತ್ತಾರೆ ಆದರೆ ಹೆಚ್ಚಿನ ಮಾಂಸಾಹಾರಿಗಳು ಮೀನುಗಳನ್ನು ಸೇವಿಸಲು ಬಯಸುತ್ತಾರೆ ಮತ್ತು ಮೀನುಗಳನ್ನು ಸೇವಿಸುವುದರಿಂದ ದೇಹಕ್ಕೆ ಹಲವಾರು ಪ್ರಯೋಜನಗಳಿವೆ.

    ಮೀನಿನ ಸೇವನೆಯಿಂದ ದೇಹಕ್ಕೆ ಹಲವಾರು ಪ್ರಯೋಜನಗಳು ಸಿಗುತ್ತವೆ ಎಂಬುದು ಎಲ್ಲರಿಗೂ ಗೊತ್ತು, ಆದರೆ ಮೀನಿನ ಎಣ್ಣೆಯನ್ನು ಸೇವಿಸುವುದರಿಂದ ನಿಮ್ಮ ದೇಹಕ್ಕೆ ಎಷ್ಟು ಲಾಭವಾಗುತ್ತದೆ ಎಂಬುದು ಹೆಚ್ಚಿನವರಿಗೆ ತಿಳಿದಿಲ್ಲ.
    ಹಾಗಾಗಿ ಇಂದು ನಾನು ನಿಮಗೆ ಮೀನಿನ ತಲೆಗಳನ್ನು ತಿನ್ನುವ ಪ್ರಯೋಜನಗಳ ಬಗ್ಗೆ ಹೇಳುತ್ತೇನೆ.

    ಕಣ್ಣುಗಳು ತೀಕ್ಷ್ಣವಾಗಿರಬೇಕು – ಮಕ್ಕಳು ಮತ್ತು ವೃದ್ಧರು ಮೀನಿನ ತಲೆಯನ್ನು ತಿನ್ನಬೇಕು. ಮೀನಿನ ತಲೆಯಲ್ಲಿ ವಿಟಮಿನ್ ಎ ಸಮೃದ್ಧವಾಗಿರುವ ಕಾರಣ ಇದು ಕಣ್ಣುಗಳಿಗೆ ತುಂಬಾ ಪ್ರಯೋಜನಕಾರಿಯಾಗಿದೆ, ಮೀನಿನ ತಲೆಯನ್ನು ಸೇವಿಸುವುದರಿಂದ ಕಣ್ಣಿನ ಸಂಬಂಧಿತ ಇತರ ಸಮಸ್ಯೆಗಳೂ ದೂರವಾಗುತ್ತವೆ. ಆದ್ದರಿಂದ, ಮೀನಿನ ತಲೆಯನ್ನು ವಾರಕ್ಕೊಮ್ಮೆ ಸೇವಿಸಬೇಕು.

    ನಿಮ್ಮ ಮೆದುಳನ್ನು ಚುರುಕುಗೊಳಿಸಿ- ಮೀನಿನ ತಲೆಯನ್ನು ತಿನ್ನುವುದರಿಂದ ದೇಹಕ್ಕೆ ಮತ್ತು ನಿಮ್ಮ ಮೆದುಳಿಗೆ ಅನೇಕ ಪ್ರಯೋಜನಗಳಿವೆ. ನೀವು ಆಗಾಗ್ಗೆ ವಿಸ್ಮೃತಿಯಿಂದ ಬಳಲುತ್ತಿದ್ದರೆ, ನೀವು ಮೀನಿನ ತಲೆಯನ್ನು ತಿನ್ನಬೇಕು ಏಕೆಂದರೆ ಮೀನಿನ ತಲೆಯಲ್ಲಿ ಒಮೆಗಾ 3 ಸಮೃದ್ಧವಾಗಿದೆ. ಇದರಿಂದ ನಿಮ್ಮ ಮನಸ್ಸು ಚುರುಕಾಗುತ್ತದೆ ಮತ್ತು ಏನನ್ನೂ ನೆನಪಿಟ್ಟುಕೊಳ್ಳುವ ನಿಮ್ಮ ಸಾಮರ್ಥ್ಯ ಹೆಚ್ಚುತ್ತದೆ.

    ಕಲ್ಲುಗಳ ಸಮಸ್ಯೆಯನ್ನು ಹೋಗಲಾಡಿಸಲು- ಇತ್ತೀಚಿನ ದಿನಗಳಲ್ಲಿ, ಅನೇಕ ಜನರು ಕಲ್ಲುಗಳಿಂದ ತೊಂದರೆಗೊಳಗಾಗುತ್ತಾರೆ. ಆದರೆ ಬೇಕಿದ್ದರೆ ಮೀನಿನ ತಲೆಯ ಸೇವನೆಯಿಂದ ಕಿಡ್ನಿ ಕಲ್ಲುಗಳ ಸಮಸ್ಯೆಯಿಂದ ಮುಕ್ತಿ ಪಡೆಯಬಹುದು. ಏಕೆಂದರೆ ಮೀನಿನಲ್ಲಿ ಇಂತಹ ಹಲವು ಗುಣಗಳಿದ್ದು ಕಲ್ಲುಗಳ ಸಮಸ್ಯೆಯನ್ನು ಹೋಗಲಾಡಿಸುತ್ತದೆ.

    Continue Reading

    LATEST NEWS

    Trending