HomeLATEST NEWSನಾಳೆ ಬೆಂಗಳೂರಿಗೆ ಆಗಮಿಸಲಿರುವ ಪ್ರಧಾನಿ ಮೋದಿ-ಕೆಂಪೇಗೌಡರ ಬೃಹತ್ ಕಂಚಿನ ಪ್ರತಿಮೆ ಲೋಕಾರ್ಪಣೆ- ಕಾರ್ಯಕ್ರಮದ ಸಿದ್ಧತೆ ಮತ್ತು...

ನಾಳೆ ಬೆಂಗಳೂರಿಗೆ ಆಗಮಿಸಲಿರುವ ಪ್ರಧಾನಿ ಮೋದಿ-ಕೆಂಪೇಗೌಡರ ಬೃಹತ್ ಕಂಚಿನ ಪ್ರತಿಮೆ ಲೋಕಾರ್ಪಣೆ- ಕಾರ್ಯಕ್ರಮದ ಸಿದ್ಧತೆ ಮತ್ತು ವ್ಯವಸ್ಥೆಗಳ ಪರಿಶೀಲಿಸಿದ ಸಿಎಂ..! 

ನಾಳೆ ಪ್ರಧಾನಿ ನರೇಂದ್ರ ಮೋದಿ ಬೆಂಗಳೂರಿಗೆ ಆಗಮಿಸಲಿದ್ದು ನಾಡಪ್ರಭು ಕೆಂಪೇಗೌಡರ ಬೃಹತ್ ಕಂಚಿನ ಪ್ರತಿಮೆ ಲೋಕಾರ್ಪಣೆ ಸೇರಿದಂತೆ ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸಲಿದ್ದಾರೆ.

ಬೆಂಗಳೂರು : ನಾಳೆ ಪ್ರಧಾನಿ ನರೇಂದ್ರ ಮೋದಿ ಬೆಂಗಳೂರಿಗೆ ಆಗಮಿಸಲಿದ್ದು ನಾಡಪ್ರಭು ಕೆಂಪೇಗೌಡರ ಬೃಹತ್ ಕಂಚಿನ ಪ್ರತಿಮೆ ಲೋಕಾರ್ಪಣೆ ಸೇರಿದಂತೆ ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸಲಿದ್ದಾರೆ. 

ಈ ಹಿನ್ನೆಲೆಯಲ್ಲಿ ಸಿಎಂ ಬಸವರಾಜ ಬೊಮ್ಮಾಯಿ ಅವರು ಇಂದು ಕೆಂಪೇಗೌಡರ ಕಂಚಿನ ಪ್ರತಿಮೆ ಲೋಕಾರ್ಪಣೆ ಮತ್ತು ಪ್ರಧಾನಿ ನರೇಂದ್ರ ಮೋದಿ ಅವರ ಸಾರ್ವಜನಿಕ ಸಭಾ ವೇದಿಕೆ ಕಾರ್ಯಕ್ರಮದ ಸಿದ್ಧತೆ ಮತ್ತು ವ್ಯವಸ್ಥೆಗಳ ಪರಿಶೀಲನೆ ನಡೆಸಿದರು.

ಈ ಸಂದರ್ಭದಲ್ಲಿ ರಾಜ್ಯ ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್, ಸಚಿವರಾದ ಡಾ‌. ಸಿ‌. ಎನ್. ಅಶ್ವತ್ಥ್ ನಾರಾಯಣ, ಆರ್. ಅಶೋಕ್ , ಸಿ‌.ಸಿ. ಪಾಟೀಲ್ ಹಾಗೂ ಮತ್ತಿತರರು ಹಾಜರಿದ್ದರು.

ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದ ಅವರು ನಮ್ಮ ಹೆಮ್ಮೆಯ ನಾಡಪ್ರಭುಗಳ ಹೆಸರಿನಲ್ಲಿರುವ ವಿಮಾನ ನಿಲ್ದಾಣದಲ್ಲಿ 108 ಅಡಿ ಎತ್ತರದ ಪ್ರಗತಿ ಪ್ರತಿಮೆ ಅಭಿವೃದ್ಧಿಗೆ ಪ್ರೇರಣೆಯಾಗುವ ದೃಷ್ಟಿಯಿಂದ ನಿರ್ಮಿಸಲಾಗಿದೆ.

ಕೆಂಪೇಗೌಡರ ಪ್ರಗತಿ ಪ್ರತಿಮೆಯನ್ನು ನಿರ್ಮಿಸಿದವರು ರಾಮ್ ಸುತಾರಾ. ಇಡೀ ಭಾರತದಲ್ಲಿ ಅತ್ಯಂತ ಶ್ರೇಷ್ಠ ಶಿಲ್ಪಿ.

ಅಹಮದಾಬಾದ್‍ನಲ್ಲಿರುವ ವಲ್ಲಭಭಾಯಿ ಪಟೇಲ್ ಅವರ ಐಕ್ಯತಾ ಮೂರ್ತಿಯನ್ನೂ ಹಾಗೂ ಅಂಬೇಡ್ಕರ್ ಅವರ ಅತಿ ಎತ್ತರದ ಮೂರ್ತಿಯನ್ನು ನಿರ್ಮಿಸಿದ ಖ್ಯಾತಿ ಅವರದ್ದು.

ನಾಳೆ ಪ್ರಧಾನಿಮಂತ್ರಿಗಳು ಅವರಿಗೆ ಅಭಿನಂದನೆ ಸಲ್ಲಿಸಲಿದ್ದಾರೆ.

ಅವರ ಕೈಚಳಕದಿಂದ ಇಷ್ಟು ಬೃಹತ್ ಮೂರ್ತಿ ಮೈದಳೆದಿದೆ. ಸಮಸ್ತ ಕನ್ನಡ ನಾಡಿನ ಜನತೆಯ ಪರವಾಗಿ ಅವರಿಗೆ ಅಭಿನಂದನೆಗಳನ್ನು ಸಲ್ಲಿಸುವುದಾಗಿ ಹೇಳಿದರು.

ಪ್ರಧಾನಮಂತ್ರಿಗಳು ನಾಳೆ ಬೆಳಿಗ್ಗೆ 9.00 ಗಂಟೆಗೆ ಹೆ.ಚ್.ಎ.ಎಲ್ ವಿಮಾನ ನಿಲ್ದಾಣಕ್ಕೆ ಆಗಮಿಸಿ, ಅಲ್ಲಿಂದ ಹೆಲಿಕಾಪ್ಟರ್ ಮೂಲಕ ಶಾಸಕರ ಭವನದ ಆವರಣದಲ್ಲಿರುವ ಕನಕದಾಸರ ಪ್ರತಿಮೆಗೆ ಪುಷ್ಪ ನಮನ ಮಾಡಲಿದ್ದಾರೆ.

ನಂತರ ರೈಲ್ವೇ ನಿಲ್ದಾಣದಲ್ಲಿ ವಂದೇ ಭಾರತ್ – ಹೈಸ್ಪೀಡ್ ರೈಲಿನ ಉದ್ಘಾಟನೆ ನೆರವೇರಿಸಲಿದ್ದಾರೆ.

ನಂತರ ವಿಮಾನನಿಲ್ದಾಣಕ್ಕೆ ಆಗಮಿಸಿ 2 ನೇ ಟರ್ಮಿನಲ್ ಉದ್ಘಾಟಿಸಲಿದ್ದಾರೆ.

ನಂತರ ಪ್ರಗತಿ ಪ್ರತಿಮೆ ಅನಾವರಣ ಮಾಡಿ ಸಾರ್ವಜನಿಕ ಸಭೆಗೆ ತೆರಳುತ್ತಾರೆ. ಅಲ್ಲಿ ಭಾಷಣ ಮುಗಿಸಿ ಮುಂದಿನ ಪ್ರಯಾಣ ಮಾಡಲಿದ್ದಾರೆ ಎಂದು ಮುಖ್ಯಮಂತ್ರಿಗಳು ವಿವರ ನೀಡಿದರು.

Latest articles

ಕೆಲಸ ಇಲ್ಲದವನು ಎಂದು ಬೈಯುತ್ತಿದ್ದ ಅಜ್ಜಿಯನ್ನು ಕೊಂದು ಸುಟ್ಟು ಹಾಕಿದ ಕಿರಾತಕ ಮೊಮ್ಮಗ

ಮೈಸೂರು: ದುಡಿಯುವ ವಯಸ್ಸಿನಲ್ಲಿ ಪುಂಡ ಪೋಕರಿಯಂತೆ ಅಲೆಯುತ್ತಿದ್ದುದಕ್ಕೆ ಬೈಯುತ್ತಿದ್ದ ಅಜ್ಜಿಯನ್ನು ಸ್ವಂತ ಮೊಮ್ಮಗನೇ ಕೊಂದು ಸುಟ್ಟು ಹಾಕಿ ಶವವನ್ನು...

ಚಿತ್ರದುರ್ಗ : ಸಿಸಿಟಿವಿ ಕ್ಯಾಮರಾದಲ್ಲಿ ಸೆರೆಯಾಯ್ತು ಅಕ್ರಮ ಗೋಸಾಗಾಟ- ಆರೋಪಿಗಳ ವಿರುದ್ಧ ಕ್ರಮಕ್ಕೆ ಆಗ್ರಹ..!

ಚಿತ್ರದುರ್ಗದಲ್ಲಿ ರಾತ್ರಿ ವೇಳೆ ಕಳ್ಳರು ಬೀದಿ ಬದಿಯ ಗೋವುಗಳನ್ನು ಕಳ್ಳತನ ಮಾಡಿ ಟೆಂಪೋದಲ್ಲಿ ತುಂಬಿಸಿಕೊಂಡು ಹೋಗುತ್ತಿರುವ ದೃಶ್ಯ ಸಿಸಿಟಿವಿ...

ಕೇರಳಕ್ಕೆಮುಂಗಾರು ಪ್ರವೇಶ- ಮಂಗಳೂರಿನಲ್ಲಿ ಸಂಜೆ ಬಿರುಸಿನ ಮಳೆ..!

ಕೇರಳದಲ್ಲಿ ಇಂದು ಮುಂಗಾರು ಪ್ರವೇಶಿಸಿದ್ದು ಈ ಹಿನ್ನೆಲೆಯಲ್ಲಿ ಕರಾವಳಿಯ ಬಂದರು ನಗರ ಮಂಗಳೂರಿನಲ್ಲಿ ಇಂದು ಸಂಜೆ ಬಿರುಸಿನ ಮಳೆಯಾಗಿದೆ.ಮಂಗಳೂರು...

ಬೆಂಗಳೂರು: ಉಪರಾಷ್ಟ್ರಪತಿ ಜಗದೀಪ್ ಧನ್ಕರ್ ರನ್ನು ಭೇಟಿಯಾದ ಸ್ಪೀಕರ್ ಯು.ಟಿ.ಖಾದರ್

ರಾಜ್ಯ ವಿಧಾನಸಭೆಯ ಸಭಾಧ್ಯಕ್ಷರಾಗಿ ಆಯ್ಕೆಯಾದ ಸ್ಪೀಕರ್ ಯು.ಟಿ.ಖಾದರ್ ಅವರು ಮೊದಲ ಬಾರಿಗೆ ದೆಹಲಿಯಲ್ಲಿ ಉಪರಾಷ್ಟ್ರಪತಿ ಜಗದೀಪ್ ಧನ್ಕರ್ ಅವರನ್ನು...