Thursday, October 21, 2021

ಅಮೇರಿಕಾದತ್ತ ಹೊರಟ ಪ್ರಧಾನಿ: ಉಪಾಧ್ಯಕ್ಷೆ ಕಮಲಾ ಹ್ಯಾರೀಸ್​ ಎದುರು ನೋಡುತ್ತಿದ್ದೇನೆ ಎಂದ ಮೋದಿ

ನವದೆಹಲಿ: ಬೈಡೆನ್ ಅಮೆರಿಕ ಅಧ್ಯಕ್ಷರಾದ ಬಳಿಕ ಪ್ರಧಾನಿ ನರೇಂದ್ರ ಮೋದಿ ಇದೇ ಮೊದಲ ಬಾರಿಗೆ ಅಮೆರಿಕಾ ಪ್ರವಾಸ ಕೈಗೊಂಡಿದ್ದಾರೆ. ದೆಹಲಿಯಿಂದ ಇಂದು ಅಮೆರಿಕಾಗೆ ಪ್ರಯಾಣ ಬೆಳಸಿರುವ ಮೋದಿ, ಕ್ವಾಡ್‌ ಶೃಂಗ ಸಮ್ಮೇ​ಳನ, ವಿಶ್ವ​ಸಂಸ್ಥೆ 76ನೇ ವಾರ್ಷಿಕ ಸಾಮಾನ್ಯ ಸಭೆ​ಯಲ್ಲಿ ಭಾಗವಹಿಸಲಿದ್ದಾರೆ. ಬಳಿಕ ಜೋ ಬೈಡೆನ್‌ ಜತೆ ದ್ವಿಪಕ್ಷೀಯ ಮಾತು​ಕತೆಯನ್ನೂ ನಡೆಸಲಿದ್ದಾರೆ. ಹೀಗಾಗಿ ಮೋದಿ-ಬೈಡೆನ್ ಭೇಟಿ ಮಹತ್ವ ಪಡೆದುಕೊಂಡಿದೆ.


ಈ ಹಿನ್ನೆಲೆಯಲ್ಲಿ ಮಾಹಿತಿ ನೀಡಿರುವ ಪ್ರಧಾನಿ ಮೋದಿ.

ಭೇಟಿ ವೇಳೆ ಗ್ಲೋಬಲ್ ಪಾರ್ಟನರ್​​ಶಿಪ್​​ ಬಗ್ಗೆ ಸಮಗ್ರವಾಗಿ ಅಧ್ಯಕ್ಷ ಜೋ ಬೈಡನ್​ ಜೊತೆ ಚರ್ಚಿಸುತ್ತೇನೆ.

ಪರಸ್ಪರ ಆಸಕ್ತಿ ವಿಷಯಗಳ ಜೊತೆಗೆ ಗ್ಲೋಬಲ್ ಸಮಸ್ಯೆ ಮತ್ತು ಪ್ರಾದೇಶಿಕ ವಿಚಾರಗಳ ಬಗ್ಗೆ ವಿನಿಮಯ ಮಾಡಿಕೊಳ್ಳುವುದು.
ಜೊತೆಗೆ ಯುಎಸ್​ಎ ಉಪಾಧ್ಯಕ್ಷೆ ಕಮಲಾ ಹ್ಯಾರೀಸ್​ ಅವರ ಭೇಟಿಯನ್ನೂ ಕೂಡ ಎದುರು ನೋಡುತ್ತಿದ್ದೇನೆ.

ಹ್ಯಾರಿಸ್ ಜೊತೆ ಜಾಗತಿಕ ವಿಚಾರಗಳು ಮತ್ತು ಎರಡು ದೇಶಗಳ ಪರಸ್ಪರ ಸಹಕಾರದ ಬಗ್ಗೆ ಚರ್ಚೆಯಾಗಲಿದೆ.

ಜೊತೆಗೆ ಅಧ್ಯಕ್ಷ ಜೋ ಬೈಡನ್ ನೇತೃತ್ವದಲ್ಲಿ ನಡೆಯಲಿರುವ ಕ್ವಾಡ್​ ಶೃಂಗಸಭೆಯಲ್ಲೂ ಭಾಗಿಯಾಗಲಿದ್ದೇನೆ.

ಇದೇ ಮೊದಲ ಬಾರಿಗೆ ಕ್ವಾಡ್​​ ಲೀಡರ್​ಗಳ ನೇತೃತ್ವದಲ್ಲಿ ನಡೆಯಲಿರುವ ಸಭೆಯಲ್ಲಿ ಭಾಗಿಯಾಗಲಿದ್ದೇನೆ ಎಂದು ತಿಳಿಸಿದ್ದಾರೆ.

Hot Topics

ಸಾಲದ ಹೊರೆ ತಾಳಲಾರದೆ ವೀಡಿಯೋ ಮೂಲಕ ಗುಡ್​ಬೈ ಹೇಳಿ ಶಿಕ್ಷಕ ದಂಪತಿ ಆತ್ಮಹತ್ಯೆ

ವಿಜಯವಾಡ: ಶಾಲೆ ನಡೆಸುತ್ತಿದ್ದ ಶಿಕ್ಷಕ ದಂಪತಿ ಸಾಲದ ಹೊರೆ ತಡೆಯಲಾರದೇ ವಿಷಸೇವಿಸಿ ಆತ್ಮಹತ್ಯೆ ಹಾದಿ ಹಿಡಿರುವ ದಾರುಣ ಘಟನೆ ಆಂಧ್ರ ಪ್ರದೇಶದ ಕರ್ನೂಲ್​ ಜಿಲ್ಲೆಯಲ್ಲಿ ನಡೆದಿದೆ. ಸಾವಿಗೂ ಮುನ್ನ ಶಿಕ್ಷಕ ದಂಪತಿ ತಮ್ಮ...

ಕಾಪುವಿನಲ್ಲಿ ಕಾರು ಅಪಘಾತ ಗಂಭೀರವಾಗಿ ಗಾಯಗೊಂಡಿದ್ದ ಯುವತಿ ಸಾವು..!

ಕಾಪುವಿನಲ್ಲಿ ಕಾರು ಅಪಘಾತ ಗಂಭೀರವಾಗಿ ಗಾಯಗೊಂಡಿದ್ದ ಯುವತಿ ಸಾವು..! ಉಡುಪಿ : ಉಡುಪಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಭಾರಿ ಮಳೆಯ ನಡುವೆ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಚಾಲಕನ ನಿಯಂತ್ರಣ ತಪ್ಪಿದ ಕಾರೊಂದು ಕಾಪು ಬಳಿ...

ಮಗು ಸೇರಿದಂತೆ ದಂಪತಿ ಸಾಮೂಹಿಕ ಆತ್ಮಹತ್ಯೆ ಹಳೆಯಂಗಡಿಯಲ್ಲಿ ಹೃದಯ ವಿದ್ರಾವಕ ಘಟನೆ..!

ಮಗು ಸೇರಿದಂತೆ ದಂಪತಿ ಸಾಮೂಹಿಕ ಆತ್ಮಹತ್ಯೆ ಹಳೆಯಂಗಡಿಯಲ್ಲಿ ಹೃದಯ ವಿದ್ರಾವಕ ಘಟನೆ..! ಮಂಗಳೂರು:  ಎಂಟು ವರ್ಷದ ಮಗು ಸೇರಿದಂತೆ ದಂಪತಿ ಸಾಮೂಹಿಕ ಆತ್ಮಹತ್ಯೆ ಮಾಡಿರುವ ದಾರುಣ ಘಟನೆ ಹಳೆಯಂಗಡಿ ಬಳಿಯ ಕಲ್ಲಾಪು ರೈಲ್ವೇ ಗೇಟ್...