ಬಾಂಗ್ಲಾದೇಶ: ತನ್ನ ಪ್ರವಾಸದ ಕೊನೆಯ ದಿನ ಪ್ರಧಾನಿ ನರೇಂದ್ರ ಮೋದಿ ಬಾಂಗ್ಲಾದೇಶಕ್ಕೆ 1.2ಮಿಲಿಯನ್ ಡೋಸ್ ಕೊರೊನಾ ಲಸಿಕೆಗಳನ್ನು ಉಡುಗೊರೆಯಾಗಿ ಬಾಂಗ್ಲಾ ಪ್ರಧಾನಿ ಶೇಖ್ ಹಸೀನಾಗೆ ಹಸ್ತಾಂತರಿಸಿದ್ದಾರೆ.
ಬಾಂಗ್ಲಾದೇಶ ಕಳೆದ ನವೆಂಬರ್‌ನಲ್ಲಿ ಭಾರತಕ್ಕೆ ಸೇರಮ್ ಇನ್‌ಸ್ಟಿಟ್ಯೂಟ್ ಜೊತೆಗೆ 3 ಕೋಟಿ ಆಸ್ಟ್ರಾಜೆನಿಕ್ ಡೋಸ್ ಖರೀದಿಗೆ ಒಪ್ಪಂದ ಮಾಡಿಕೊಂಡಿದ್ದು,
90 ಲಕ್ಷ ಡೋಸ್ ಲಸಿಕೆಯನ್ನು ಈಗಾಗಲೇ ಸ್ವೀಕರಿಸಿದೆ. ಕೋವಿಡ್ ನಂತರ ಪ್ರಧಾನಿ ಮೋದಿ ಅವರ ಮೊದಲ ವಿದೇಶ ಪ್ರವಾಸವಾಗಿದ್ದು, ದ್ವಿಪಕ್ಷೀಯ ಸಹಕಾರ ಮತ್ತು ಪರಸ್ಪರ ಹಿತಾಸಕ್ತಿ ಕುರಿತ ಮಾತುಕತೆಗಳನ್ನು ನಡೆಸಿದ್ದಾರೆ.
ಉಭಯ ನಾಯಕರು ಸಂಪರ್ಕ, ಇಂಧನ, ವ್ಯಾಪಾರ, ಆರೋಗ್ಯ ಮತ್ತು ಸಹಕಾರ ಅಭಿವೃದ್ಧಿ ಮೊದಲಾದ ಕ್ಷೇತ್ರಗಳಲ್ಲಿ ಪ್ರಗತಿ ಬಗ್ಗೆ ಚರ್ಚೆ ನಡೆಸಿದ್ದಾರೆ. ಅಲ್ಲದೆ ದ್ವಿಪಕ್ಷೀಯ ಸಹಕಾರದ ಕುರಿತ ಐದು ಒಪ್ಪಂದಗಳಿಗೆ ಸಹಿ ಹಾಕಿದ್ದಾರೆ.
ಬಾಂಗ್ಲಾ ದೇಶ ವಿಮೋಚನಾ 50ನೇ ವರ್ಷಾಚರಣೆ ಸಂಭ್ರಮಾಚರಣೆಯಲ್ಲಿ ಭಾಗಿಯಾದ ಪ್ರಧಾನಿ ಮೋದಿ, ಶುಕ್ರವಾರ ಹುತಾತ್ಮ ಸೈನಿಕರಿಗೆ ಗೌರವ ನಮನ ಸಲ್ಲಿಸಿದ್ದಾರೆ. ಇದೇ ವೇಳೆ ಬಾಂಗ್ಲಾ ವಿಮೋಚನೆಗೆ ಹೋರಾಡಿದ ಭಾರತೀಯ ಸೈನಿಕರನ್ನು ಸ್ಮರಿಸಿದ್ದಾರೆ.