Connect with us

LATEST NEWS

ನವದೆಹಲಿ: ನೂತನ ಸಂಸತ್ ಭವನ ಲೋಕರ್ಪಣೆ -ಸೆಂಗೋಲ್ ಪ್ರತಿಷ್ಠಾಪನೆ ಮಾಡಿದ ಪ್ರಧಾನಿ ನರೇಂದ್ರ ಮೋದಿ

Published

on

ಭಾರತದ ನೂತನ ಸಂಸತ್ ಭವನದ ಉದ್ಘಾಟನೆಗೆ ಪ್ರಧಾನಿ ನರೇಂದ್ರ ಮೋದಿ ಮತ್ತು ಲೋಕಸಭೆ ಸ್ಪೀಕರ್ ಓಂ ಬಿರ್ಲ ಅವರು ಆಗಮಿಸಿದ್ದಾರೆ.

ನವದೆಹಲಿ: ಭಾರತದ ನೂತನ ಸಂಸತ್ ಭವನದ ಉದ್ಘಾಟನೆಗೆ ಪ್ರಧಾನಿ ನರೇಂದ್ರ ಮೋದಿ ಮತ್ತು ಲೋಕಸಭೆ ಸ್ಪೀಕರ್ ಓಂ ಬಿರ್ಲ ಅವರು ಆಗಮಿಸಿದ್ದಾರೆ.

ಈ ನೂತನ ಸಂಸತ್ ಭವನ ಲೋಕರ್ಪಣೆ 2 ಹಂತದಲ್ಲಿ ನಡೆಯುತಿದ್ದು, ಇದೀಗ ಮೊದಲ ಹಂತ ನಡೆದಿದೆ.

ಮೊದಲ ಹಂತದದಲ್ಲಿ ಮೋದಿಯವರು ಲೋಕಸಭಾ ಸ್ಪೀಕರ್​ ಆಸನದ ಬಳಿ​ ಸೆಂಗೋಲ್ ಪ್ರತಿಷ್ಠಾಪನೆ ಮಾಡಿದ್ದಾರೆ.

ಸಂಸತ್ ಭವನಕ್ಕೆ ಪ್ರಧಾನಿ ಮೋದಿ ಅವರೊಂದಿಗೆ ಲೋಕಸಭಾ ಸ್ಪೀಕರ್ ಓಂ ಬಿರ್ಲಾ ಅವರು ಸಾಥ್ ನೀಡಿದ್ದಾರೆ.

ಸಂಸತ್ ಭವನವು ಬೆಳಿಗ್ಗೆ 7 ಗಂಟೆಗೆ ಕಟ್ಟಡದ ಹೊರಗೆ ಪೂಜೆ ಹವನ ನಡೆದಿತ್ತು.

ಮೊದಲು ಗಾಂಧಿಯವರ ಪ್ರತಿಮೆಗೆ ಪುಷ್ಪಾರ್ಚನೆ ಮಾಡಿ, ಬಳಿಕ ಪೂಜೆಯಲ್ಲಿ ಭಾಗಿಯಾಗಿದ್ದರು.

ಹೊಸ ಸಂಸತ್ ಭವನ ನಿರ್ಮಾಣಕ್ಕೆ ಹಗಲಿರುಳು ದುಡಿದ ಕಾರ್ಮಿಕರನ್ನು ಪ್ರಧಾನಿ ನರೇಂದ್ರ ಮೋದಿ ಅವರು ಸನ್ಮಾನಿಸಿ ಗೌರವಿಸಿದರು.

ಎರಡನೇ ಹಂತದ ಕಾರ್ಯಕ್ರಮವು ಮಧ್ಯಾಹ್ನ 12 ಗಂಟೆ ನಂತರ ನಡೆಯಲಿದೆ.

ಈ ಕಾರ್ಯಕ್ರಮದಲ್ಲಿ ದೇಶದ ವಿವಿಧ ಪಕ್ಷಗಳ ನಾಯಕರು ಭಾಗಿಯಾಗಲಿದ್ದಾರೆ.

ಈ ಸಂಸತ್ 1200 ಕೋಟಿ ರೂ. ವೆಚ್ಚದಲ್ಲಿ ನಿರ್ಮಾಣವಾಗಿದ್ದು,  39.6 ಮೀಟರ್ ಎತ್ತರದಲ್ಲಿ ನಾಲ್ಕು ಅಂತಸ್ತಿನಲ್ಲಿದ್ದು, 1272 ಆಸನ ಸಾಮರ್ಥ್ಯವನ್ನು ಇದು ಹೊಂದಿದೆ.

Click to comment

Leave a Reply

Your email address will not be published. Required fields are marked *

LATEST NEWS

ಅಯೋಧ್ಯೆಯ ಅಂಗಳದಲ್ಲಿ ಶೂಟಿಂಗ್ ಮಾಡಿದ ಮೊಟ್ಟ ಮೊದಲ ಕನ್ನಡ ಸೀರಿಯಲ್ ಇದು?

Published

on

ಮಹಿಳೆಯರಿಗೆ ಸೀರಿಯಲ್ ನೋಡುವುದಂದರೆ ಒಂತಾರ ಹುಚ್ಚು. ಮನೆಯಲ್ಲೇ ಇರುವ ಮಹಿಳೆಯರು ಕೆಲವೊಮ್ಮೆ ಬೆಳಗ್ಗೆಯಿಂದ ಸಂಜೆಯವರೆಗೆ ಟಿವಿಯಲ್ಲಿ ಸೀರಿಯಲ್ ನೋಡುತ್ತಾ ಇರುತ್ತಾರೆ. ಸೀರಿಯಲ್ ನೋಡೊದು ಮಾತ್ರ ಅಲ್ಲ ಅದರ ಬಗ್ಗೆ ಸಂವಾದ ಕೂಡ ಮನೆಯವರಲ್ಲಿ ಮಾಡುತ್ತಾ ಇರುತ್ತಾರೆ.

ಈ ನಡುವೆ ಅಯೋಧ್ಯೆ ರಾಮಮಂದಿರ ನಿರ್ಮಾಣದ ನಂತರ ದೇಶದ ಜನರು ತುಂಬಾ ಸಂತೋಷದಲ್ಲಿದ್ದಾರೆ. ಅದೆಷ್ಟೋ ಜನ ಹಿಂದೂಗಳ ಕನಸು ನನಸಾದ ಕ್ಷಣ ಎಂದು ಹೇಳಬಹುದು. ಒಮ್ಮೆಯಾದ್ರೂ ಅಯೋಧ್ಯೆಗೆ ಹೋಗಿಬರಬೇಕು ಅಂತಾ ಪ್ಲಾನ್ ಅಂತೂ ಮಾಡ್ತಾ ಇರೋದು ಕಂಡಿತ. ಕೆಲವರು ಹೋಗಿ ಬಂದಿದ್ದಾರೆ ಕೂಡ ಆದರೆ ಇನ್ನು ಕೆಲವರು ಇನ್ನು ಹೋಗಬೇಕು. ಇದುವರೆಗೆ ಅಯೋಧ್ಯೆ ರಾಮಮಂದಿರದಲ್ಲಿ ಯಾವೂದೇ ರೀತಿದ ಫಿಲ್ಮ್ ಶೂಟಿಂಗ್, ಸೀರಿಯಲ್, ಕಿರುಚಿತ್ರ ಯಾವೂದು ಶೂಟಿಂಗ್ ಆಗಲಿಲ್ಲ. ಆದರೇ ಇದೇ ಮೊದಲ ಬಾರಿಗೇ ಕನ್ನಡ ಸೀರಿಯಲ್ ಇಂಡಸ್ಟ್ರಿಯಲ್ಲಿ ಕನ್ಯಾದಾನ ಸೀರಿಯಲ್ ಹೊಸ ದಾಖಲೆ ಬರೆದಿದೆ.

ಉದಯ ಟಿವಿಯಲ್ಲಿ ಪ್ರಸಾರವಾಗೋ ಕನ್ಯಾದಾನ ಧಾರಾವಾಹಿ ಈಗ ಹೊಸ ದಾಖಲೆ ಬರೆದಿದ್ದಾರೆ. ಕನ್ನಡ ಟೆಲಿವಿಷನ್ ಇತಿಹಾಸದಲ್ಲಿ ಪ್ರಪ್ರಥಮ ಬಾರಿಗೆ ಅಯೋಧ್ಯೆಯಲ್ಲಿ ಚಿತ್ರೀಕರಣಗೊಂಡ ಮೊಟ್ಟ ಮೊದಲ ಸೀರಿಯಲ್ ಎಂಬ ಹೆಗ್ಗಳಿಕೆಗೆ ಕನ್ಯಾದಾನ ಧಾರಾವಾಹಿ ಪಾತ್ರವಾಗಿದೆ.

ಜನವರಿ 22ರಂದು ಅಂದ್ರೆ ರಾಮಮಂದಿರದಲ್ಲಿ ಪ್ರಾಣ ಪ್ರತಿಷ್ಠಾಪನೆಯಾದ ನಂತರ ಇಲ್ಲಿಯವೆರೆಗೂ ಯಾವುದೇ ಸಿನಿಮಾವಾಗ್ಲಿ, ಅಥವಾ ಸೀರಿಯಲ್ ಆಗ್ಲಿ ಶೂಟ್ ಮಾಡಿರಲಿಲ್ಲ. ಆದ್ರೆ, ಕನ್ಯಾದಾನ ಧಾರವಾಹಿ ತಂಡ ಫಸ್ಟ್‌ಟೈಮ್‌ ಅಯೋಧ್ಯೆಗೆ ಹೋಗಿ ಚಿತ್ರೀಕರಣ ಮಾಡಿದೆ.

ಈ ಸೀರಿಯಲ್‌ನಲ್ಲಿ ಬಹುತೇಕ ಪಾತ್ರಗಳು ಒಂದಲ್ಲ ಒಂದು ಸಮಸ್ಯೆ ಎದುರಿಸ್ತಿವೆ. ಹಾಗಾಗಿ ರಾಮನ ದರ್ಶನ ಪಡೆದು ಆ ಕಷ್ಟಗಳಿಂದ ಹೊರಬರಬೇಕು ಎಂದು ನಿರ್ಧರಿಸಿ, ರಾಮಮಂದಿರಕ್ಕೆ ಹೋಗಿ ಬಾಲರಾಮನ ದರ್ಶನ ಪಡೆದಿದ್ದಾರೆ. ಅಯೋಧ್ಯೆಯಲ್ಲಿ ಶೂಟಿಂಗ್ ಮಾಡಿರೋ ಬಗ್ಗೆ ಸೀರಿಯಲ್​ ತಂಡ ಸಂತಸ ಹಂಚಿಕೊಂಡಿದೆ.

Continue Reading

LATEST NEWS

ಕೊಡಗು: ಮದುವೆ ಊಟ ಸೇವಿಸಿ ಅಸ್ವಸ್ಥ.. ಆಸ್ಪತ್ರೆ ಸೇರಿದ 150ಕ್ಕೂ ಹೆಚ್ಚು ಜನರು

Published

on

ಕೊಡಗು: ಮದುವೆಯಲ್ಲಿ ಊಟ ಮಾಡಿದ ನೂರಾರು ಜನತೆ ಅಸ್ವಸ್ಥಗೊಂಡ ಘಟನೆ ಪಿರಿಯಾಪಟ್ಟಣ ತಾಲೂಕಿನ ಕೊಪ್ಪ ಗ್ರಾಮದಲ್ಲಿ ನಡೆದಿದೆ. ಪರಿಣಾಮ ಸುಮಾರು 150 ಕ್ಕೂ ಹೆಚ್ಚು ಜನರು ಆಸ್ಪತ್ರೆ ಸೇರಿದ್ದಾರೆ.

ನಿನ್ನೆ ಮಧ್ಯಾಹ್ನ ಕೊಪ್ಪ ಗ್ರಾಮದಲ್ಲಿ ನಡೆದ ಮದುವೆಯಲ್ಲಿ ಊಟ ಜನರು ಸೇವಿಸಿದ್ದಾರೆ. ಊಟ ಸೇವಿಸಿದ ಬಳಿಕ ಸಂಜೆಯ ವೇಳೆಗೆ ಹಲವರಲ್ಲಿ ವಾಂತಿ ಕಾಣಿಸಿಕೊಂಡಿದೆ. ಅಸ್ವಸ್ಥಗೊಂಡ ಜನರು ಕೊಡಗಿನ ಕುಶಾಲನಗರ ಆಸ್ಪತ್ರೆಗೆ ದೌಡಾಯಿಸಿದ್ದಾರೆ. ಕುಶಾಲನಗರ ಸರಕಾರಿ ಆಸ್ಪತ್ರೆಯಲ್ಲಿ ಸುಮಾರು 150 ಕ್ಕೂ ಹೆಚ್ಚು ಜನರಿಗೆ ಚಿಕಿತ್ಸೆ ನೀಡಲಾಗುತ್ತಿದೆ. ಇನ್ನು ಕೆಲವರು ಕುಶಾಲನಗರ ಖಾಸಗಿ ಆಸ್ಪತ್ರೆಯಲ್ಲೂ ಚಿಕಿತ್ಸೆ ಪಡೆಯುತ್ತಿದ್ದಾರೆ.

ಪಿರಿಯಾಪಟ್ಟಣ ಆಸ್ಪತ್ರೆಯಲ್ಲೂ ಹಲವರಿಗೆ ಚಿಕಿತ್ಸೆ ನೀಡಲಾಗುತ್ತಿದೆ. ಕೊಡಗು ಆರೋಗ್ಯಾಧಿಕಾರಿ ಕುಶಾಲನಗರ ಆಸ್ಪತ್ರೆಗೆ ಭೇಟಿ ಪರಿಶೀಲನೆ ನಡೆಸಿದ್ದಾರೆ. ಸದ್ಯ ಮದುವೆ ಊಟದಿಂದಾಗಿ ಕುಶಾಲನಗರದ ಆಸ್ಪತ್ರೆ ಕ್ಲೀನಿಕ್ ಗಳು ಫುಲ್ ಆಗಿವೆ. ಅತ್ತ ರೋಗಿಗಳಿಗೆ ಸರಿಯಾದ ಚಿಕಿತ್ಸೆ ಸಿಗದೆ ಮಡಿಕೇರಿಯ ಜಿಲ್ಲಾ ಆಸ್ಪತ್ರೆಗೂ ಹೊಗಿದ್ದಾರೆ. ಆಸ್ಪತ್ರೆಗೆ ಮಡಿಕೇರಿ ಕ್ಷೇತ್ರದ ಶಾಸಕ ಮಂತರ್ ಗೌಡ ಭೇಟಿ‌ ನೀಡಿ ಜನರ ಆರೋಗ್ಯ ವಿಚಾರಿಸಿದ್ದಾರೆ.

Continue Reading

DAKSHINA KANNADA

ಮಂಗಳೂರು: 30.98% ಮತದಾರರಿಂದ ಮತ ಚಲಾವಣೆ

Published

on

ಮಂಗಳೂರು: 17-ದ.ಕ ಲೋಕಸಭಾ ಕ್ಷೇತ್ರದಲ್ಲಿ ಬೆಳಿಗ್ಗೆ 9 ಗಂಟೆಯವರೆಗೆ 30.98 ಪ್ರತಿಶತ ಮತದಾರರು ಮತ ಚಲಾವಣೆ ಮಾಡಿದ್ದಾರೆ.

ಸುಳ್ಯದಲ್ಲಿ ಅತಿ ಹೆಚ್ಚು ಮತ ಚಲಾವಣೆಯಾಗಿದ್ದು, 16.46 ಪ್ರತಿಶತ ಮತದಾರರು ಮತ ಚಲಾವಣೆ ಮಾಡಿದ್ದಾರೆ. ಮೂಡುಬಿದಿರೆ ಕ್ಷೇತ್ರದಲ್ಲಿ ಅತಿ ಕನಿಷ್ಠ ಮತ ಚಲಾವಣೆಯಾಗಿದ್ದು, 12.2 ಪ್ರತಿಶತ ಮತದಾರರು ಮತ ಚಲಾಯಿಸಿದ್ದಾರೆ.

ಇನ್ನು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಬಿಸಿಲಿನ ಬೇಗೆಗೆ ಕಾರ್ ಸ್ಟ್ರೀಟ್ ಸರ್ಕಾರಿ ಬಾಲಕಿಯರ ಎಪಿಯು ಕಾಲೇಜಿನಲ್ಲಿ ಮತದಾರರು ಬಿಸಿಲಿನಿಂದ ತಪ್ಪಿಸಿಕೊಳ್ಳಲು ಛತ್ರಿ ಹಿಡಿದು ಮತದಾನ ಮಾಡಲು ಸರತಿ ಸಾಲಿನಲ್ಲಿ ನಿಂತ ದೃಶ್ಯ ಕಂಡುಬಂತು.

Continue Reading

LATEST NEWS

Trending