Connect with us

  DAKSHINA KANNADA

  ಬೆಲೆ ಏರಿಕೆ ಬಗ್ಗೆ ತುಟಿ ಬಿಚ್ಚದ ಪ್ರಧಾನಿ ಆತಂಕವಾದ-ಸುರಕ್ಷತೆ ಬಗ್ಗೆ ಮಾತನಾಡುತ್ತಾರೆ: ಪ್ರಿಯಾಂಕ ವಾಗ್ದಾಳಿ

  Published

  on

  ಮಂಗಳೂರು: ಜನರು ಬೆಲೆ ಏರಿಕೆ ಉರಿಯಲ್ಲಿ ಬೆಂದು ಹೋಗಿದ್ದಾರೆ. ಇದರ ಬಗ್ಗೆ ತುಟಿ ಬಿಚ್ಚದ ಪ್ರಧಾನಿ ಮೋದಿ ಅವರು  ಚುನಾವಣೆ ವೇಳೆ ಆತಂಕವಾದ ಹಾಗೂ ಸುರಕ್ಷತೆ ಬಗ್ಗೆ ಮಾತನಾಡಿದರೆ ಏನು ಪ್ರಯೋಜನ. ರಾಜ್ಯದಲ್ಲಿ ಆತಂಕ ಇರುವುದು 40 ಪರ್ಸೆಂಟ್ ಸರ್ಕಾರದ ನಡೆಯ ಬಗ್ಗೆ, ಇದನ್ನು ಮೊದಲು ತಡೆಯಿರಿ.

  ರಾಜ್ಯದಲ್ಲಿ ಆತಂಕ ಇರುವುದು ಜನವಿರೋಧಿ ಸರ್ಕಾರದ ಹಗರಣಗಳ ಬಗ್ಗೆ, ಭ್ರಷ್ಟಾಚಾರ ಬಗ್ಗೆ ಯಾವುದೇ ಮಾತನಾಡದ ನೀವು ಜನರ ಮತ ಕೇಳುವ ನೈತಿಕ ಹಕ್ಕು ಕಳೆದುಕೊಂಡಿದ್ದಿರಿ ಎಂದು ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ಕಿಡಿಕಾರಿದರು.

  ದಕ್ಷಿಣ ಕನ್ನಡ ಜಿಲ್ಲೆಯ ಮೂಲ್ಕಿಯ ಕೊಳ್ನಾಡಿನಲ್ಲಿ ಭಾನುವಾರ ಕಾಂಗ್ರೆಸ್ ಅಭ್ಯರ್ಥಿಗಳ ಪರ ಪ್ರಚಾರ ಸಭೆಯಲ್ಲಿ ಮಾತನಾಡಿದರು. ಇದೇ ಮೊದಲ ಬಾರಿಗೆ ಕರಾವಳಿಗೆ ಆಗಮಿಸಿದ್ದ ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ತುಳುನಾಡಿನ ಸಮಸ್ತ ಜನತೆಗೆ ನಮಸ್ಕಾರಗಳು ಎಂದು ಮಾತು ಆರಂಭಿಸಿದರು.

  ಕರಾವಳಿ ದೈವದ ನಾಡು, ಬಪ್ಪನಾಡು ಕ್ಷೇತ್ರ, ಕಟೀಲು ದುರ್ಗಾಪರಮೇಶ್ವರಿಯ ಸನ್ನಿಧಾನವು ಸಂಪತ್ತು, ಶಾಂತಿಯ ತಾಣ ಎಂದು ವರ್ಣನೆ ಮಾಡಿದರು. ರಾಜ್ಯದಲ್ಲಿ ಡಬಲ್ ಎಂಜಿನ್ ಸರ್ಕಾರದಿಂದ ಜನರು ಸಂಪೂರ್ಣ ನೆಮ್ಮದಿ ಕಳೆದುಕೊಂಡಿದ್ದಾರೆ.

  ಅಭಿವೃದ್ಧಿ ಬಗ್ಗೆ ನೀವು ಮಾತನಾಡುವುದೇ ಇಲ್ಲ. ಉದ್ಯೋಗ ಸೃಷ್ಟಿ ಆಗುತ್ತಿಲ್ಲ. ಜಿಲ್ಲೆಯಲ್ಲಿನ ಬ್ಯಾಂಕ್ ಗಳನ್ನು ವಿಲೀನ ಮಾಡುವ ಮೂಲಕ ಇಲ್ಲಿನ ಜನರಿಗೆ ದ್ರೋಹ ಮಾಡಿದ್ದೀರಿ. ಈ ಬಾರಿ ಕರ್ನಾಟಕದ ಜನರು ಕಾಂಗ್ರೆಸ್ ಸರಕಾರ ತರುವುದಕ್ಕೆ ನಿರ್ಧಾರ ಮಾಡಿದ್ದಾರೆ. ಕಾಂಗ್ರೆಸ್ ಸರಕಾರದ ಅಧಿಕಾರದ ಅವಧಿಯಲ್ಲಿ ರಾಜೀವ್ ಗಾಂಧಿ ಅವರ ದೂರದರ್ಶಿತ್ವದಿಂದಾಗಿ ರಾಜ್ಯವು ಇಂದು ಐಟಿ ಕ್ಷೇತ್ರದಲ್ಲಿ ಮುಂಚೂಣಿಯಲ್ಲಿದೆ ಎಂದರು.

  ಪೆಟ್ರೋಲ್, ಡಿಸೇಲ್, ಅಡುಗೆ ಅನಿಲ್ ಬೆಲೆಗಳು ಏರಿಕೆ ಆಗಿವೆ. ಶಿಕ್ಷಣ, ಉದ್ಯೋಗಕ್ಕೆ ಡಬಲ್ ಎಂಜಿನ್ ಸರ್ಕಾರದ ಕೊಡುಗೆ ಶೂನ್ಯವಾಗಿದೆ.

  ಬಿಜೆಪಿ ಸರಕಾರದಲ್ಲಿ ಮುಖ್ಯಮಂತ್ರಿಗಳು ಬದಲಾವಣೆ ಆಗುತ್ತಿದ್ದಾರೆ. ಮುಖ್ಯಮಂತ್ರಿ ಹುದ್ದೆ ಕೋಟಿ ಕೋಟಿ ಮಾರಾಟ ಆಗುತ್ತಿದೆ. ಕಾಂಗ್ರೆಸ್ ಘೋಷಣೆ ಮಾಡಿರುವ ಗ್ಯಾರಂಟಿಗಳನ್ನು ಸಂಪೂರ್ಣ ಈಡೇರಿಸಲಿದೆ.

  ರಾಜ್ಯದಲ್ಲಿ ಖಾಲಿ ಹುದ್ದೆಗಳನ್ನು ಒಂದೇ ವರ್ಷದಲ್ಲಿ ಭರ್ತಿ ಮಾಡುತ್ತೇವೆ. ಮೀನುಗಾರರಿಗೆ ಡಿಸೇಲ್ ಸಹಾಯಧನ, ನಾರಾಯಣ ಗುರು ನಿಗಮಕ್ಕೆ ಅನುದಾನ, ಐಟಿ, ಗಾರ್ಮೆಂಟ್ ಕ್ಷೇತ್ರಗಳ ಸ್ಥಾಪನೆಗೆ ಕಾಂಗ್ರೆಸ್ ಸರ್ಕಾರವು ಒತ್ತು ನೀಡಲಿದೆ ಎಂದರು.

  ವಿಧಾನ ಪರಿಷತ್ ಸದಸ್ಯ ಡಾ. ಮಂಜುನಾಥ ಭಂಡಾರಿ, ಜಿಲ್ಲಾ ಕಾಂಗ್ರೆಸ್ ಘಟಕದ ಅಧ್ಯಕ್ಷ ಹರೀಶ್ ಕುಮಾರ್, ಕಾಂಗ್ರೆಸ್ ಅಭ್ಯರ್ಥಿಗಳಾದ ಮಿಥುನ್ ರೈ, ಇನಾಯತ್ ಅಲಿ, ಮಾಜಿ ಸಚಿವ ಜನಾರ್ದನ ಪೂಜಾರಿ, ಅಜಯ್ ಕುಮಾರ್, ಅಭಯಚಂದ್ರ ಜೈನ್,  ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಪದ್ಮರಾಜ್ ಆರ್ ಹಲವರು ಇದ್ದರು.

  1 Comment

  1 Comment

  1. mshashidhar

   08/05/2023 at 3:38 PM

   ಬಣ್ಣ ಬಣ್ಣದ ವೇಷಭೂಷಣ ಮಾಡಿಕೊಂಡು ರೋಡಿನಲ್ಲಿ ಶೋ ಮಾಡಿಕೊಂಡು, ಜನರಿಂದ ಅರ್ಧ ಕಿಲೋಮೀಟರ್ ದೂರದಲ್ಲಿ ನಿಂತು ಬಣ್ಣದ ಭಾಷಣ ಮಾಡುವವರಿಗೆ,, ಗ್ಯಾಸ್ ಸಿಲಿಂಡರ್ ದರ ಏರಿಕೆ, ಗಗನಕ್ಕೇರಿದ ದಿನಸಿ ಪದಾರ್ಥಗಳ ಬೆಲೆ, ಯುವಜನರನ್ನು ಬೀದಿಯಲ್ಲಿ ನಿಲ್ಲಿಸಿದ ನಿರುದ್ಯೋಗ ದಾಖಲೆ ಮುಟ್ಟಿದೆ, ಗಡಿ ಸುರಕ್ಷತೆ ಬಗ್ಗೆ ಪುಂಖಾನುಪುಂಖವಾಗಿ ಸುಳ್ಳು ಹೇಳಿಕೊಂಡು ಓಡಾಡಿದರೆ ನಿಜವಾದ ಸ್ಥಿತಿ ಏನಿದೆ,,,ಬಡಹಿಂದೂಗಳ ಬದುಕು ಮೂರಾಬಟ್ಟೆ ಆಗುತ್ತಿದೆ ಇವರ ಚುನಾವಣೆ ವೈಭವಕ್ಕೆ ನೂರಾರು ಕೋಟಿ ಖರ್ಚು ಯಾವುದೇ ಅಡೆ ತಡೆ ಇಲ್ಲದೆ ನಡೆದಿದೆ,,, ಬಹುಶಃ ಇತಿಹಾಸದಲ್ಲಿ ಯಾವ ಪ್ರಧಾನಿಯೂ ಒಂದು ರಾಜ್ಯದ ಚುಣಾವಣೆ ಪ್ರಚಾರಕ್ಕೆ ಅಲ್ಲಿಯೇ ಠಿಕಾಣಿ ಹೂಡಿರುವುದು ಕಾಣಲಿಕ್ಕೆ,, ಎಷ್ಟೊಂದು ಅಧಿಕಾರದ ದಾಹ

  Leave a Reply

  Your email address will not be published. Required fields are marked *

  DAKSHINA KANNADA

  ಗಾಳಿಗೆ ಹಾರಿದ ಶಾಲೆಯ ಹೆಂಚು..! ರಜಾ ದಿನವಾದ ಕಾರಣ ತಪ್ಪಿದ ಅನಾಹುತ..!

  Published

  on

  ಮಂಗಳೂರು ( ಕಡಬ ) : ಕಡಬ ತಾಲೂಕಿನಲ್ಲಿ ಭಾನುವಾರ ಮದ್ಯಾಹ್ನ ಜೋರಾಗಿ ಬೀಸಿದ ಗಾಳಿಗೆ ಶಾಲೆಯೊಂದರ ಹೆಂಚುಗಳು ಹಾರಿ ಹೋದ ಘಟನೆ ನಡೆದಿದೆ. ಕಡಬ ತಾಲೂಕಿನ ಬಲ್ಯ ಗ್ರಾಮದಲ್ಲಿ ಈ ಘಟನೆ ನಡೆದಿದ್ದು, ರಜಾ ದಿನವಾದ ಕಾರಣ ಸಂಭವನೀಯ ಅನಾಹುತ ತಪ್ಪಿದಂತಾಗಿದೆ.


  ಭಾನುವಾರ ಜೋರಾದ ಗಾಳಿಯ ಜೊತೆ ಮಳೆ ಬರುವ ಸಾಧ್ಯತೆ ಬಗ್ಗೆ ಹವಾಮಾನ ಇಲಾಖೆ ಮುನ್ಸೂಚನೆ ನೀಡಿತ್ತು. ಅದರಂತೆ ಮದ್ಯಾಹ್ನದ ವೇಳೆಗೆ ಕಡಬ ತಾಲೂಕಿನ ಬಲ್ಯ ಗ್ರಾಮದಲ್ಲಿ ಜೋರಾದ ಗಾಳಿ ಬೀಸಿದೆ. ಇದರ ಪರಿಣಾಮವಾಗಿ ಬಲ್ಯ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಹೆಂಚುಗಳು ಹಾರಿ ಹೋಗಿದೆ. ಒಂದಷ್ಟು ಹೆಂಚುಗಳು ಶಾಲೆಯ ಹೊರಾಂಗಣದಲ್ಲಿ ಬಿದ್ದಿದ್ದರೆ, ಇನ್ನೂ ಕೆಲವು ಹೆಂಚುಗಳು ಶಾಲೆಯ ಕೊಠಡಿಯ ಒಳಗೆ ಬಿದ್ದಿದೆ. ಶಾಲೆಗೆ ಬಹುತೇಕ ಎಲ್ಲಾ ಕೊಠಡಿಯ ಹೆಂಚುಗಳು ಗಾಳಿಗೆ ಹಾರಿ ಹೋಗಿದೆ. ಅದೃಷ್ಟವಶಾತ್ ಭಾನುವಾರವಾದ ಕಾರಣ ಶಾಲೆಯಲ್ಲಿ ಮಕ್ಕಳು ಇರದ ಕಾರಣ ಯಾವುದೇ ಅನಾಹುತ ನಡೆದಿಲ್ಲ.


  ಬೀಸಿದ ಗಾಳಿಗೆ ಶಾಲೆಯ ಹೆಂಚಿನ ಜೊತೆಗೆ ಗ್ರಾಮದ ಕೃಷಿಕರ ಅಡಿಕೆ ತೋಟಕ್ಕೂ ಹಾನಿಯಾಗಿದೆ. ಹಲವು ಅಡಿಕೆ ಮರಗಳು ತುಂಡಾಗಿ ಬಿದ್ದಿದ್ದು, ಕೆಲವೆಡೆ ವಿದ್ಯುತ್ ತಂತಿಯ ಮೇಲೆ ಬಿದ್ದ ಕಾರಣ ವಿದ್ಯುತ್ ಕಂಬಕ್ಕೂ ಕೂಡಾ ಹಾನಿ ಸಂಭವಿಸಿದೆ.
  ಜುಲೈ 15 ಮತ್ತು 16 ರಂದು ಕೂಡಾ ಜೋರಾದ ಗಾಳಿಯ ಜೊತೆ ಮಳೆ ಸುರಿಯುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ.

  Continue Reading

  DAKSHINA KANNADA

  ನಾಳೆ, ನಾಡಿದ್ದು ದ.ಕ, ಉಡುಪಿ ಜಿಲ್ಲೆಗಳಲ್ಲಿ ರೆಡ್ ಅಲರ್ಟ್ ಘೋಷಣೆ

  Published

  on

  ಮಂಗಳೂರು: ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆ ಸೇರಿದಂತೆ ಕರಾವಳಿಯ ಮೂರು ಜಿಲ್ಲೆಗಳಲ್ಲಿ ಭಾರೀ ಮಳೆಯಾಗುತ್ತಿದೆ. ಭಾರತೀಯ ಹವಾಮಾನ ಇಲಾಖೆಯು ಇಂದು, ನಾಳೆ ಮತ್ತು ನಾಡಿದ್ದು(ಜು.15,16,17) ಈ ಮೂರು ಜಿಲ್ಲೆಗಳಿಗೆ ರೆಡ್‌ ಅಲರ್ಟ್ ಘೋಷಿಸಿದೆ.

  ಬಂಟ್ವಾಳದ ನೇತ್ರಾವತಿ ನದಿಯಲ್ಲಿ ನೀರಿನ‌ ಮಟ್ಟ ಹೆಚ್ಚಳ

  ಜುಲೈ 17 ರಿಂದ 19 ರ ವರೆಗೆ ಆರೆಂಜ್‌ ಅಲರ್ಟ್‌ ಘೋಷಿಸಲಾಗಿದೆ. ದಕ್ಷಿಣ ಕನ್ನಡ ಜಿಲ್ಲಾದ್ಯಂತ ಇಂದು ದಿನವಿಡೀ ಉತ್ತಮ ಮಳೆ ಬಂದಿದೆ. ಮಳೆಯ ಜತೆಗೆ ಬಲವಾದ ಗಾಳಿಯೂ ಬೀಸುತ್ತಿದೆ. ಸಮುದ್ರದಲ್ಲಿ ಅಬ್ಬರದ ಅಲೆಗಳು ಕಂಡು ಬರುತ್ತಿವೆ. ಗಾಳಿಯ ರಭಸಕ್ಕೆ ಅಲ್ಲಲ್ಲಿ ಮರ ಬಿದ್ದು ಸಂಚಾರ ಅಸ್ತವ್ಯಸ್ತ, ವಿದ್ಯುತ್‌ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಿದೆ. ಇಂದು ಬೆಳಗ್ಗೆ ಬೀಸಿದ ಬಲವಾದ ಗಾಳಿಗೆ ಉಳ್ಳಾಲ ತಾಲೂಕಿನ ಕೋಟೆಕಾರು ಬಳಿ ಬೀರಿ- ಪ್ರವಾಸಿ ಬಂಗ್ಲೆ ಕ್ರಾಸ್‌ ಸರ್ವೀಸ್‌ ರಸ್ತೆಯಲ್ಲಿ ಭಾರೀ ಗಾತ್ರದ ಮೇ ಫ್ಲವರ್‌ ಮರವೊಂದು ಉರುಳಿ ಬಿದ್ದ ಘಟನೆ ಸಂಭವಿಸಿದೆ. ಇದರಿಂದಾಗಿ ಈ ರಸ್ತೆಯಲ್ಲಿ ಕೆಲವು ಗಂಟೆಗಳ ಕಾಲ ವಾಹನ ಸಂಚಾರ ಅಸ್ತವ್ಯಸ್ತಗೊಂಡಿತ್ತು. ರಸ್ತೆ ಬದಿ ನಿಲ್ಲಿಸಿದ್ದ ಎರಡು ಲಾರಿಗಳ ಮಧ್ಯೆಮರ ಬಿದ್ದ ಕಾರಣ ಅಪಾಯ ತಪ್ಪಿದೆ. ಅಲ್ಲದೆ ಇಂದು ಭಾನುವಾರ ಆಗಿದ್ದ ಕಾರಣ ಈ ರಸ್ತೆಯಲ್ಲಿ ವಾಹನ ಮತ್ತು ಜನ ಸಂಚಾರ ಕಡಿಮೆ ಇತ್ತು.

  Continue Reading

  DAKSHINA KANNADA

  ಎಂಎಸ್‌ಇಝೆಡ್‌ ನಲ್ಲಿರುವ ಮೀನು ಸಂಸ್ಕರಣಾ ಘಟಕದಲ್ಲಿ ಭಾರಿ ಅ*ಗ್ನಿ ಅವಘಡ

  Published

  on

  ಮಂಗಳೂರು : ಮಂಗಳೂರು ವಿಶೇಷ ಆರ್ಥಿಕ ವಲಯದಲ್ಲಿರುವ ಮೀನು ಸಂಸ್ಕರಣಾ ಘಟಕದಲ್ಲಿ ಭಾರಿ ಅ*ಗ್ನಿ ಅನಾಹುತ ಸಂಭವಿಸಿದೆ. ಹೊತ್ತಿ ಉರಿದ ಘಟಕದಲ್ಲಿ ಭಾರಿ ಪ್ರಮಾಣದಲ್ಲಿ ಬೆಂ*ಕಿ ಕಾಣಿಸಿಕೊಂಡಿದ್ದು ದಟ್ಟ ಹೊಗೆ ಆಕಾಶದೆತ್ತರಕ್ಕೆ ಏರಿದೆ. ಘಟನೆ ಸ್ಥಳೀಯ ಜನರ ಗಮನಕ್ಕೆ ಬಂದ ತಕ್ಷಣ ಸಮೀಪದ ಗ್ರಾಮದ ಜನರು ಆತಂಕಗೊಂಡಿದ್ದಾರೆ.


  ಎಂಎಸ್‌ಇಝೆಡ್‌ ವ್ಯಾಪ್ತಿಯಲ್ಲಿ ಅನೇಕ ಕೆಮಿಕಲ್ ಫ್ಯಾಕ್ಟರಿ, ಪೆಟ್ರೋಲಿಯಂ ಉತ್ಪನ್ನಗಳ ಫ್ಯಾಕ್ಟರಿ ಇರುವುದು ಈ ಆತಂಕಕ್ಕೆ ಕಾರಣವಾಗಿದೆ. ಫ್ಯಾಕ್ಟರಿಯಲ್ಲಿ ಬೆಂ*ಕಿ ಅವಘ*ಡ ಸಂಭವಿಸಿದ ತಕ್ಷಣ ಅಲರ್ಟ್ ಆದ ಅ*ಗ್ನಿಶಾಮಕ ತಂಡ ಬೆಂ*ಕಿ ನಂದಿಸುವ ಕಾರ್ಯಕ್ಕೆ ಮುಂದಾಗಿದೆ.

  ಇದನ್ನೂ ಓದಿ :  ಜಗತ್ತಿನ ದೊಡ್ಡಣ್ಣನಲ್ಲಿ ಹ*ತ್ಯೆಯಾದ ಅಧ್ಯಕ್ಷರುಗಳು ಇವರು..!

  ಎಂಎಸ್ಇಝೆಡ್‌, ಎಂಆರ್‌ಪಿಎಲ್ ಹಾಗೂ ಜಿಎಂಪಿಎಲ್‌ನ ಅ*ಗ್ನಿ ಶಾಮಕ ವಾಹನಗಳು ಫ್ಯಾಕ್ಟರಿಯಲ್ಲಿನ ಬೆಂ*ಕಿ ನಂದಿಸುವ ಕಾರ್ಯದಲ್ಲಿ ತೊಡಗಿಸಿಕೊಂಡಿದೆ. ಎಸ್‌ಇಝೆಡ್‌ ವ್ಯಾಪ್ತಿಯಲ್ಲಿ ಸಣ್ಣ ಪುಟ್ಟ ಅ*ಗ್ನಿ ಅವಘಡಗಳು ನಡಿತಾ ಇದ್ರೂ ಇದೊಂದು ಭಾರಿ ಅ*ಗ್ನಿ ಅವಘ*ಡವಾಗಿದೆ. ಆದ್ರೆ ಈ ಅವಘಡದಲ್ಲಿ ಯಾವುದೇ ಪ್ರಾಣ ಹಾನಿ ಅಥವಾ ಗಾಯಗಳು ಸಂಭವಿಸಿಲ್ಲ ಎಂದು ಮಾಹಿತಿ ಲಭ್ಯವಾಗಿದೆ.

  Continue Reading

  LATEST NEWS

  Trending