Friday, March 24, 2023

ಪ್ರಧಾನಿ ಕಾರ್ಯಕ್ರಮ: ಮಂಗಳೂರಿಗೆ ಆಗಮಿಸಿದ ಸಿಎಂ ಬೊಮ್ಮಾಯಿ

ಮಂಗಳೂರು: ಪ್ರಧಾನಮಂತ್ರಿಗಳು ಬಹಳ ದಿನಗಳ ನಂತರ ಕರ್ನಾಟಕದ ಕರಾವಳಿ ಪ್ರದೇಶಕ್ಕೆ ಭೇಟಿ ನೀಡುತ್ತಿದ್ದಾರೆ. ಬರುವಾಗ ಹಲವಾರು ಯೋಜನೆಗಳಿಗೆ ಮಂಜೂರಾತಿ ಕೂಡಾ ನೀಡಿದ್ದಾರೆ. ಕರಾವಳಿ ಅಭಿವೃದ್ಧಿಗೆ ಅತ್ಯಂತ ದೊಡ್ಡ ಶಕ್ತಿಯನ್ನು ಪ್ರಧಾನಮಂತ್ರಿಗಳು ತುಂಬಲಿದ್ದಾರೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ವಿಶ್ವಾಸ ವ್ಯಕ್ತಪಡಿಸಿದರು.


ಪ್ರಧಾನಿ ಮಂಗಳೂರಿಗೆ ಆಗಮಿಸುತ್ತಿರುವ ಹಿನ್ನೆಲೆ ಇಂದು ಮಂಗಳೂರು ವಿಮಾನ ನಿಲ್ದಾಣದಲ್ಲಿ ಬಂದಿಳಿದ ಮುಖ್ಯಮಂತ್ರಿ ಬೊಮ್ಮಾಯಿ ಅವರು ಮಾಧ್ಯಮದವರೊಂದಿಗೆ ಮಾತನಾಡಿ ‘3800 ಕೋಟಿ ರೂ.ಗಳ ಯೋಜನೆಗಳ ಲೋಕಾರ್ಪಣೆ ಹಾಗೂ ಶಿಲಾನ್ಯಾಸ ನೆರವೇರಿಸಲಿದ್ದಾರೆ.

ಕರಾವಳಿಯ ಅಭಿವೃದ್ಧಿಗೆ ಪೂರಕವಾಗಿರುವ ಯೋಜನೆಗಳಾಗಿದ್ದು, ಆರ್ಥಿಕ ಚಟುವಟಿಕೆ ಮತ್ತು ಬಂದರುಗಳ ಸಾಮರ್ಥ್ಯ ಹಾಗೂ ವ್ಯವಹಾರಗಳನ್ನು ಹೆಚ್ಚಿಸುವ ಹಾಗೂ ಉದ್ಯೋಗವನ್ನು ವೃದ್ಧಿಸುವ ಯೋಜನೆಗಳಾಗಿವೆ.

ಕರ್ನಾಟಕಕ್ಕೆ 100 ಆಳ ಸಮುದ್ರ ಮೀನುಗಾರಿಕೆ ದೋಣಿಗಳನ್ನು ಪ್ರಧಾನ ಮಂತ್ರಿ ಮತ್ಸ್ಯ ಸಂಪದ ಯೋಜನೆಯಡಿ ಮಂಜೂರು ಮಾಡಿದ್ದಾರೆ.

ಮೀನುಗಾರರಿಗೆ ಕಿಸಾನ್ ಕ್ರೆಡಿಟ್ ಕಾರ್ಡ್ ವಿಸ್ತರಣೆ ಮಾಡಿದ್ದಾರೆ.

ರಾಜ್ಯ ಸರ್ಕಾರವೂ ಹಲವಾರು ಯೋಜನೆಗಳನ್ನು ಈ ಭಾಗಕ್ಕೆ ಜಾರಿ ಮಾಡಿದ್ದು ಈ ಎಲ್ಲಾ ಯೋಜನೆಗಳಿಗೆ ಇಂದು ಚಾಲನೆ ದೊರೆಯಲಿದೆ ಎಂದರು.

LEAVE A REPLY

Please enter your comment!
Please enter your name here

Hot Topics