Wednesday, January 27, 2021

ಪ್ರಧಾನಿ ಕಾರ್ಯಾಲಯದಿಂದ ಮಂಗಳೂರಿನ ಖಾಸಗಿ ಆಸ್ಪತ್ರೆಗೆ 12 ಲರೂ ದಂಡ:  

ಪ್ರಧಾನಿ ಕಾರ್ಯಾಲಯದಿಂದ ಮಂಗಳೂರಿನ ಖಾಸಗಿ ಆಸ್ಪತ್ರೆಗೆ 12 ಲರೂ ದಂಡ: 

ಮಂಗಳೂರು: ಖಾಸಗಿ ಆಸ್ಪತ್ರೆಗಳು ಒಂದಿಲ್ಲೊಂದು ರೀತಿಯಲ್ಲಿ ಹಣ ಮಾಡುವ ದಂಧೆ ನಡೆಸುತ್ತಲೇ ಇರುತ್ತಾರೆ. ಇದೀಗ ಕೊರೊನಾ ಹಿನ್ನೆಲೆಯಲ್ಲಿ  ಜನರು ಆರ್ಥಿಕ ಸಂಕಷ್ಟದಲ್ಲಿರುವಾಗ ಅವರಿಂದ ಹಣ ಕೀಳೊದನ್ನ ಬಿಡ್ತಿಲ್ಲ ಖಾಸಗಿ ಆಸ್ಪತ್ರೆಗಳು.

ಮಂಗಳೂರಿನಲ್ಲಿನ  ಖಾಸಗಿ  ಆಸ್ಪತ್ರೆಗೆ ದಾಖಲಾಗಿದ್ದ ಬಡ ರೋಗಿಯನ್ನು ಸೂಕ್ತ ಚಿಕಿತ್ಸೆ ನೀಡಿ ಉಪಚರಿಸುವುದು ಬಿಟ್ಟು, ಲಕ್ಷಾಂತರ ರೂಪಾಯಿ ಬಿಲ್ ಮಾಡಿರುವ ಘಟನೆ ಬಗ್ಗೆ ಬಂದ ದೂರಿನ ಹಿನ್ನೆಲೆಯಲ್ಲಿ ಪ್ರಧಾನಿ ಕಾರ್ಯಾಲಯ ಆಸ್ಪತ್ರೆಗೆ 12,96,320ರೂಪಾಯಿ ದಂಡ ವಿಧಿಸಿರುವ ಘಟನೆ ನಡೆದಿದೆ.

ಮಂಗಳೂರು: ಖಾಸಗಿ ಆಸ್ಪತ್ರೆಗಳು ಒಂದಿಲ್ಲೊಂದು ರೀತಿಯಲ್ಲಿ ಹಣ ಮಾಡುವ ದಂಧೆ ನಡೆಸುತ್ತಲೇ ಇದ್ದಾರೆ. ಇದೀಗ ಕೊರೊನಾ ಹಿನ್ನೆಲೆಯಲ್ಲಿ  ಜನರು ಆರ್ಥಿಕ ಸಂಕಷ್ಟದಲ್ಲಿರುವಾಗ ಅವರಿಂದ ಹಣ ಕೀಳೊದನ್ನ ಬಿಡ್ತಿಲ್ಲ ಖಾಸಗಿ ಆಸ್ಪತ್ರೆಗಳು.  ಮಂಗಳೂರಿನಲ್ಲಿನ  ಖಾಸಗಿ  ಆಸ್ಪತ್ರೆಗೆ ದಾಖಲಾಗಿದ್ದ ಬಡ ರೋಗಿಯನ್ನು ಸೂಕ್ತ ಚಿಕಿತ್ಸೆ ನೀಡಿ ಉಪಚರಿಸುವುದು ಬಿಟ್ಟು, ಲಕ್ಷಾಂತರ ರೂಪಾಯಿ ಬಿಲ್ ಮಾಡಿರುವ ಘಟನೆ ಬಗ್ಗೆ ಬಂದ ದೂರಿನ ಹಿನ್ನೆಲೆಯಲ್ಲಿ ಪ್ರಧಾನಿ ಕಾರ್ಯಾಲಯ ಆಸ್ಪತ್ರೆಗೆ 12,96,320ರೂಪಾಯಿ ದಂಡ ವಿಧಿಸಿರುವ ಘಟನೆ ನಡೆದಿದೆ.

ಪಣಂಬೂರಿನ ವ್ಯಕ್ತಿಯೊಬ್ಬರು ಫೆಬ್ರವರಿ ತಿಂಗಳಿನಲ್ಲಿ ಅಪಘಾತಕ್ಕೊಳಗಾಗಿ ನಗರದ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದರು. ಆದರೆ ಆಯುಷ್ಮಾನ್ ಯೋಜನೆಯಡಿ ಆಸ್ಪತ್ರೆ ಅವರನ್ನು ದಾಖಲಿಸಿ ಚಿಕಿತ್ಸೆ ನೀಡಬೇಕಾಗಿತ್ತು.

ಆದರೆ ರೋಗಿಯನ್ನು ದಾಖಲಿಸಲು ನಿರಾಕರಿಸಿ ಬದಲಿಗೆ ಖಾಸಗಿಯಾಗಿ ಚಿಕಿತ್ಸೆ ನೀಡಿ ೮ ಲಕ್ಷ ರೂಪಾಯಿ ಬಿಲ್ ಮಾಡಲಾಗಿತ್ತು. ಈ ಬಗ್ಗೆ ಕಾಟಿಪಳ್ಳದ ಅಭ್ಯುದಯ ಭಾರತೀ ಸೇವಾ ಟ್ರಸ್ಟ್ ಆಸ್ಪತ್ರೆಯ ವಿರುದ್ಧ ಪ್ರಧಾನಿ ಕಾರ್ಯಾಲಯಕ್ಕೆ ದೂರು ಸಲ್ಲಿಸಿದ್ದರು.

ಸುವರ್ಣ ಆರೋಗ್ಯ ಸುರಕ್ಷಾ ಟ್ರಸ್ಟ್ ಮುಖಾಂತರ ದಂಡ ವಿಧಿಸಬೇಕೆಂದು ಕೇಂದ್ರ ಸರಕಾರ ಹೇಳಿದೆ. ಆಯುಷ್ಮಾನ್ ಭಾರತ್ ಆರೋಗ್ಯ ಕರ್ನಾಟಕ ಯೋಜನೆ ಪರಿಗಣಿಸದ ಆರೋಪದಲ್ಲಿ ಇದೇ ಆಸ್ಪತ್ರೆಗೆ ಪ್ರಧಾನಿ ಕಾರ್ಯಾಲಯ ದಂಡ ವಿಧಿಸಿದೆ.

ಅನಾರೋಗ್ಯದ ಹಿನ್ನೆಲೆಯಲ್ಲಿ ಆಸ್ಪತ್ರೆಗೆ ದಾಖಲಾಗಿದ್ದ ಇಬ್ಬರು ರೋಗಿಗಳನ್ನು ಸೂಕ್ತ ರೀತಿಯಲ್ಲಿ ಉಪಚರಿಸುವುದು ಬಿಟ್ಟು ಸರಕಾರಿ ಯೋಜನೆಗಳಡಿ ಚಿಕಿತ್ಸೆಯನ್ನೂ ನೀಡದೇ ಖಾಸಗಿಯಾಗಿ ಚಿಕಿತ್ಸೆ ಕೊಟ್ಟು ಲಕ್ಷಾಂತರ ರೂಪಾಯಿ ಬಿಲ್ ಮಾಡಿದ ದೂರಿನ ಹಿನ್ನೆಲೆಯಲ್ಲಿ ಖಾಸಗಿ ಆಸ್ಪತ್ರೆಗೆ ಪ್ರಧಾನಿ ಕಾರ್ಯಾಲಯವು ಒಟ್ಟು ೧೨,೯೬,೩೨೦ ರೂಪಾಯಿಗಳ ದಂಡ ವಿಧಿಸಿದೆ. ಅಲ್ಲದೆ ರೋಗಿಗಳು ಪಾವತಿಸಿರುವ ಹಣವನ್ನು ಕೂಡಾ ಅವರಿಗೆ ಪಾವತಿಸುವಂತೆ ಸೂಚಿಸಿದೆ.

ಒಟ್ನಲ್ಲಿ ಈ ಪ್ರಕರಣದಿಂದ ಎಲ್ಲ ಖಾಸಗೀ ಆಸ್ಪತ್ರೆಗಳು ಎಚ್ಚೆತ್ತುಕೊಂಡರೆ ಉತ್ತಮ…

Hot Topics

ಕಾಪುವಿನಲ್ಲಿ ಕಾರು ಅಪಘಾತ ಗಂಭೀರವಾಗಿ ಗಾಯಗೊಂಡಿದ್ದ ಯುವತಿ ಸಾವು..!

ಕಾಪುವಿನಲ್ಲಿ ಕಾರು ಅಪಘಾತ ಗಂಭೀರವಾಗಿ ಗಾಯಗೊಂಡಿದ್ದ ಯುವತಿ ಸಾವು..! ಉಡುಪಿ : ಉಡುಪಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಭಾರಿ ಮಳೆಯ ನಡುವೆ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಚಾಲಕನ ನಿಯಂತ್ರಣ ತಪ್ಪಿದ ಕಾರೊಂದು ಕಾಪು ಬಳಿ...

ಮಗು ಸೇರಿದಂತೆ ದಂಪತಿ ಸಾಮೂಹಿಕ ಆತ್ಮಹತ್ಯೆ ಹಳೆಯಂಗಡಿಯಲ್ಲಿ ಹೃದಯ ವಿದ್ರಾವಕ ಘಟನೆ..!

ಮಗು ಸೇರಿದಂತೆ ದಂಪತಿ ಸಾಮೂಹಿಕ ಆತ್ಮಹತ್ಯೆ ಹಳೆಯಂಗಡಿಯಲ್ಲಿ ಹೃದಯ ವಿದ್ರಾವಕ ಘಟನೆ..! ಮಂಗಳೂರು:  ಎಂಟು ವರ್ಷದ ಮಗು ಸೇರಿದಂತೆ ದಂಪತಿ ಸಾಮೂಹಿಕ ಆತ್ಮಹತ್ಯೆ ಮಾಡಿರುವ ದಾರುಣ ಘಟನೆ ಹಳೆಯಂಗಡಿ ಬಳಿಯ ಕಲ್ಲಾಪು ರೈಲ್ವೇ ಗೇಟ್...

ಫೋನಿನಲ್ಲಿ ಮಾತಾಡುತ್ತಿದ್ದ ಯುವಕ ಮೃತ್ಯು ಕೂಪಕ್ಕೆ: ವಿಟ್ಲದಲ್ಲಿ ಹೃದಯ ವಿದ್ರಾವಕ ಘಟನೆ..! 

ಫೋನಿನಲ್ಲಿ ಮಾತಾಡುತ್ತಿದ್ದ ಯುವಕ ಮೃತ್ಯು ಕೂಪಕ್ಕೆ ವಿಟ್ಲದಲ್ಲಿ ಹೃದಯ ವಿದ್ರಾವಕ ಘಟನೆ..!  ಮಂಗಳೂರು: ಟೆರೇಸ್ ನಲ್ಲಿ ಫೋನ್ ನಲ್ಲಿ ಮಾತನಾಡುತ್ತಿದ್ದ ವೇಳೆ ಆಯತಪ್ಪಿ ಕೆಳಗೆ ಬಿದ್ದು ಯುವಕ ಸಾವನ್ನಪ್ಪಿರುವ ಘಟನೆ ವಿಟ್ಲದ ಕೇಪು ಎಂಬಲ್ಲಿ...
Copy Protected by Chetans WP-Copyprotect.