LATEST NEWS
ಬಾಕ್ಸ್‌ನಲ್ಲಿ ಬಿರಿಯಾನಿ ತಂದ ಕಾರಣಕ್ಕೆ ನರ್ಸರಿ ವಿದ್ಯಾರ್ಥಿಯನ್ನು ಅಮಾನತುಗೊಳಿಸಿದ ಪ್ರಾಂಶುಪಾಲ
Published
3 months agoon
By
NEWS DESK2ಲಕ್ನೋ: ಶಾಲೆಗೆ ಊಟದ ಬಾಕ್ಸ್‌ನಲ್ಲಿ ಬಿರಿಯಾನಿ ತಂದ ಆರೋಪದ ಮೇಲೆ ನರ್ಸರಿ ವಿದ್ಯಾರ್ಥಿಯನ್ನು ಪ್ರಾಂಶುಪಾಲರು ಅಮಾನತುಗೊಳಿಸಿರುವ ಘಟನೆ ಉತ್ತರ ಪ್ರದೇಶದ ಅಮ್ರೋಹಾದ ಖಾಸಗಿ ಶಾಲೆಯಲ್ಲಿ ನಡೆದಿದೆ. ಪ್ರಾಂಶುಪಾಲರ ಜೊತೆಗೆ ಮಗುವಿನ ತಾಯಿ ತೀವ್ರ ವಾಗ್ವಾದ ನಡೆಸಿದ ವಿಡಿಯೋ ವೈರಲ್ ಆದ ಬಳಿಕ ಘಟನೆ ಬೆಳಕಿಗೆ ಬಂದಿದೆ.
ನಮ್ಮ ದೇವಸ್ಥಾನಗಳನ್ನು ಕೆಡವಿ ಶಾಲೆಗೆ ನಾನ್ ವೆಜ್ ತರುವ ಇಂತಹ ಮಕ್ಕಳಿಗೆ ನೈತಿಕತೆಯನ್ನು ಕಲಿಸಲು ನಾವು ಬಯಸುವುದಿಲ್ಲ ಎಂದು ಪ್ರಾಂಶುಪಾಲರು ತಾಯಿಗೆ ಹೇಳುವುದು ವಿಡಿಯೋದಲ್ಲಿ ರೆಕಾರ್ಡ್ ಆಗಿದೆ. ಎಲ್ಲರಿಗೂ ನಾನ್ ವೆಜ್ ತಿನ್ನಿಸಿ ಅವರನ್ನು ಇಸ್ಲಾಂಗೆ ಪರಿವರ್ತಿಸುವ ಬಗ್ಗೆ ಬಾಲಕ ಮಾತನಾಡಿದ್ದಾನೆ ಎಂದು ಅವರು ಆರೋಪಿಸಿದ್ದಾರೆ.
ಮಹಿಳೆ ಪ್ರಾಂಶುಪಾಲರ ಆರೋಪಗಳನ್ನು ತಳ್ಳಿಹಾಕಿದ್ದಾರೆ. ತನ್ನ ಮಗನಂತಹ 7 ವರ್ಷದ ಹುಡುಗ ಅಂತಹ ವಿಷಯಗಳ ಬಗ್ಗೆ ಮಾತನಾಡಲು ಸಾಧ್ಯವಿಲ್ಲ ಎಂದು ಹೇಳಿದ್ದಾರೆ, ಅದಕ್ಕೆ ಪ್ರಾಂಶುಪಾಲರು ಮಗು ಮನೆಯಲ್ಲಿ ಎಲ್ಲವನ್ನೂ ಕಲಿಯುತ್ತದೆ, ಅವರ ಪೋಷಕರು ಕಲಿಸುತ್ತಾರೆ. ಇತರ ವಿದ್ಯಾರ್ಥಿಗಳ ಪೋಷಕರಿಗೆ ಸಮಸ್ಯೆ ಇದ್ದ ಕಾರಣ ಶಾಲೆಯ ರಿಜಿಸ್ಟರ್‌ನಿಂದ ವಿದ್ಯಾರ್ಥಿಯ ಹೆಸರನ್ನು ತೆಗೆದುಹಾಕಲಾಗಿದೆ ಎಂದು ಪ್ರಾಂಶುಪಾಲರು ಹೇಳಿದ್ದಾರೆ.
DAKSHINA KANNADA
ಸಿದ್ಧಕಟ್ಟೆ ಕೊಡಂಗೆ ‘ವೀರ – ವಿಕ್ರಮ’ ಜೋಡುಕರೆ ಕಂಬಳ; 166 ಜೊತೆ ಕೋಣಗಳು ಭಾಗಿ
Published
21 minutes agoon
25/11/2024By
NEWS DESK4ಮಂಗಳೂರು : ಈ ವರ್ಷದ ಕಂಬಳ ಸೀಸನ್ ನ ಮೊದಲ ಕಂಬಳ ನವೆಂಬರ್ 22 ಮತ್ತು 23 ರಂದು ಸಿದ್ದಕಟ್ಟೆಯಲ್ಲಿ ನಡೆಯಿತು. ಇದು ಎರಡನೇ ವರ್ಷದ ಸಿದ್ಧಕಟ್ಟೆ ಕೊಡಂಗೆ ‘ವೀರ – ವಿಕ್ರಮ’ ಜೋಡುಕರೆ ಕಂಬಳ ಆಗಿದ್ದು, ಬರೋಬ್ಬರಿ 166 ಜೊತೆ ಕೋಣಗಳು ಭಾಗವಹಿಸಿದ್ದವು. ಕನೆಹಲಗೆ 6 ಜೊತೆ, ಅಡ್ಡಹಲಗೆ 6 ಜೊತೆ, ಹಗ್ಗ ಹಿರಿಯ 15 ಜೊತೆ, ನೇಗಿಲು ಹಿರಿಯ 34 ಜೊತೆ, ಹಗ್ಗ ಕಿರಿಯ 27 ಜೊತೆ, ನೇಗಿಲು ಕಿರಿಯ 78 ಜೊತೆ ಕೋಣಗಳು ಪಾಲ್ಗೊಂಡಿದ್ದವು.
ಪ್ರಶಸ್ತಿ ವಿವರ :
ಕನೆಹಲಗೆ ವಿಭಾಗದಲ್ಲಿ ಬೋಳಾರ ತ್ರಿಶಾಲ್ ಕೆ. ಪೂಜಾರಿ ಪ್ರಥಮ, ವಾಮಂಜೂರು ತಿರುವೈಲು ಗುತ್ತು ಅಭಿಷೇಕ್ ನವೀನ್ ಚಂದ್ರ ಆಳ್ವ ದ್ವಿತೀಯ ಸ್ಥಾನ ಪಡೆದರು. ಅಡ್ಡ ಹಲಗೆ ವಿಭಾಗದಲ್ಲಿ ನಾರಾವಿ ಯುವರಾಜ್ ಜೈನ್ ಪ್ರಥಮ ಹಾಗೂ ಆಲದ ಪದವು ಮೇಗಿನ ಮನೆ ಅಜ್ಜಾಡಿ ಬಾಬು ರಾಜೇಂದ್ರ ಶೆಟ್ಟಿ ‘ಬಿ’ ಅವರು ದ್ವಿತೀಯ ಸ್ಥಾನಿಯಾದರು.
ಹಗ್ಗ ಹಿರಿಯ ವಿಭಾಗದಲ್ಲಿ ನಂದಳಿಕೆ ಶ್ರೀಕಾಂತ್ ಭಟ್ ‘ಎ’ ಕೋಣಗಳು ಪ್ರಥಮ ಹಾಗೂ ಕೊಳಕೆ ಇರ್ವತ್ತೂರು ಭಾಸ್ಕರ ಎಸ್ ಕೋಟ್ಯಾನ್ ದ್ವಿತೀಯ ಸ್ಥಾನ ಪಡೆದರು. ಹಗ್ಗ ಕಿರಿಯ ವಿಭಾಗದಲ್ಲಿ ಬೆಳುವಾಯಿ ಪೆರೋಡಿ ಪುತ್ತಿಗೆ ಗುತ್ತು ಕೌಶಿಕ್ ದಿನಕರ ಬಿ. ಶೆಟ್ಟಿ ಪ್ರಥಮ, ಸುರತ್ಕಲ್ ಪಾಂಚಜನ್ಯ ಯೋಗೀಶ್ ಪೂಜಾರಿ ‘ಎ’ ಕೋಣಗಳು ದ್ವಿತೀಯ ಸ್ಥಾನ ಪಡೆದಿವೆ.
ಇದನ್ನೂ ಓದಿ: WATCH : ಚಲಿಸುತ್ತಿದ್ದ ರೈಲಿನಿಂದ ಹಾರಿದ ಮಹಿಳೆಯ ರಕ್ಷಿಸಿದ ರೈಲ್ವೇ ಸಿಬ್ಬಂದಿ
ನೇಗಿಲು ಹಿರಿಯ ವಿಭಾಗದಲ್ಲಿ ಹೊಸ್ಮಾರು ಸೂರ್ಯ ಶ್ರೀ ರತ್ನ ಸದಾಶಿವ ಶೆಟ್ಟಿ ಪ್ರಥಮ ಹಾಗೂ ಕಕ್ಕೆಪದವು ಪೆಂರ್ಗಾಲು ಬಾಬು ತನಿಯಪ್ಪ ಗೌಡ ದ್ವಿತೀಯ ಸ್ಥಾನ ಗೆದ್ದಿದ್ದಾರೆ. ನೇಗಿಲು ಕಿರಿಯ ವಿಭಾಗದಲ್ಲಿ ಮುನಿಯಾಲು ಉದಯ ಕುಮಾರ್ ಶೆಟ್ಟಿ ಪ್ರಥಮ ಹಾಗೂ ಎರ್ಮಾಳ್ ಪುಚ್ಚೊಟ್ಟು ಬೀಡು ಬಾಲಚಂದ್ರ ಲೋಕಯ್ಯ ಶೆಟ್ಟಿ ‘ಎ’ ಕೋಣಗಳು ದ್ವಿತೀಯ ಸ್ಥಾನ ಪಡೆದಿವೆ.
LATEST NEWS
ಬಾವಿಯ ಪೊಟರೆಯಲ್ಲಿ ಅವಿತು ಕುಳಿತುಕೊಂಡಿದ್ದ ಚಿರತೆ ಸೆರೆ
Published
51 minutes agoon
25/11/2024By
NEWS DESK4ಉಡುಪಿ : ಉಡುಪಿ ಜಿಲ್ಲೆಯ ಅರಣ್ಯದ ಅಂಚಿನ ಪ್ರದೇಶಗಳಲ್ಲಿ ಚಿರತೆಯ ಕಾಟ ಜೋರಾಗಿದೆ. ಆಹಾರ ಅರಸಿ ಬರುವ ಚಿರತೆಗಳು ಗ್ರಾಮಸ್ಥರಿಗೆ ದೊಡ್ಡ ತಲೆ ನೋವಾಗಿ ಪರಿಣಮಿಸಿವೆ.
ಕಾರ್ಕಳ ತಾಲೂಕಿನ ನಿಟ್ಟೆ ಗ್ರಾಮದ ಎರ್ಮಂಜಪಲ್ಲ ಬಳಿಯ ಬಾಗಿ ಎನ್ನುವವರ ಮನೆಯ ಬಾವಿಗೆ ರಾತ್ರಿ ಚಿರತೆಯೊಂದು ಬಿದ್ದಿತ್ತು. ಬಾವಿಯ ಪೊಟರೆಯಲ್ಲಿ ಅವಿತು ಕುಳಿತುಕೊಂಡಿದ್ದ ಚಿರತೆಯನ್ನು ಮೇಲಕ್ಕೆ ಬರುವಂತೆ ಮಾಡಲು, ಅರಣ್ಯ ಇಲಾಖೆ ಹರ ಸಾಹಸ ಪಡುವಂತಾಯ್ತು.
ಹಲವು ಗಂಟೆಗಳ ಕಾರ್ಯಾಚರಣೆ ಬಳಿಕ ಬೋನಿನ ಮೂಲಕ ಚಿರತೆ ಸೆರೆ ಹಿಡಿಯುವಲ್ಲಿ ಅರಣ್ಯ ಇಲಾಖೆ ಸಿಬ್ಬಂದಿ ಯಶಸ್ಸು ಕಂಡಿದ್ದಾರೆ. ಅರಣ್ಯ ಇಲಾಖೆಯ ಕಾರ್ಯ ದಕ್ಷತೆಗೆ ವ್ಯಾಪಕ ಪ್ರಶಂಸೆ ವ್ಯಕ್ತವಾಗಿದೆ.
LATEST NEWS
ಕದ್ದ ಚಿನ್ನಾಭಾರಣಗಳನ್ನು ಮನೆಯ ಜಗಲಿಯ ಮೇಲೆ ಇಟ್ಟು ಹೋದ ಕಳ್ಳರು !
Published
1 hour agoon
25/11/2024By
NEWS DESK3ಮಂಗಳೂರು/ಮಂಡ್ಯ: ರಾಜ್ಯದಲ್ಲಿ ಕಳ್ಳತನ ಎನ್ನುವುದು ಸಾಮಾನ್ಯವಾಗಿದೆ. ಕಳ್ಳರು ಕದ್ದ ಚಿನ್ನಾಭಾರಣಗಳನ್ನು ಎಲ್ಲಿಯಾದರೂ ಮಾರಿ ಬಿಡುತ್ತಾರೆ. ಆದರೆ ಕಳ್ಳರಲ್ಲೂ ಪ್ರಾಮಾಣಿಕತೆ ಇದೆ ಎಂದು ಮಂಡ್ಯದಲ್ಲಿ ಸಾಕ್ಷಿಯಾಗಿದೆ.
ಈ ಘಟನೆ ಮಂಡ್ಯ ತಾಲೂಕಿನ ರಾಗಿಮುದ್ದನಹಳ್ಳಿ ಗ್ರಾಮದಲ್ಲಿ ನಡೆದಿದೆ. ಗ್ರಾಮದ ಸಿದ್ದೇಗೌಡ ಎಂಬುವವರ ಕುಟುಂಬ ಮನೆದೇವರ ಪೂಜೆಗೆಂದು ಹೋಗಿದ್ದರು. ಈ ವೇಳೆ ಮನೆಯ ಹೆಂಚುಗಳನ್ನು ತೆಗೆದು ಒಳನುಗ್ಗಿದ್ದ ಕಳ್ಳರು ಬೀರುವನ್ನು ಒಡೆದು ಕಳ್ಳತನ ಮಾಡಿದ್ದರು. ಈ ವೇಳೆ 50 ಗ್ರಾಂ ಚಿನ್ನದ ಸರ, 10 ಗ್ರಾಂ ಚೈನ್, 15 ಗ್ರಾಂನ ಮೂರು ಜೊತೆ ಓಲೆಗಳು ಸೇರಿ ಒಟ್ಟು 75 ಗ್ರಾಂನಷ್ಟು ಚಿನ್ನಾಭರಣ ಕದ್ದಿದ್ದರು.
ಇದನ್ನೂ ಓದಿ: ಚಲಿಸುತ್ತಿದ್ದ ರೈಲಿನಿಂದ ಹಾರಿದ ಮಹಿಳೆಯ ರಕ್ಷಿಸಿದ ರೈಲ್ವೇ ಸಿಬ್ಬಂದಿ
ಈ ಸಂಬಂಧ ಮಂಡ್ಯ ಗ್ರಾಮಾಂತರ ಠಾಣೆಯಲ್ಲಿ ದೂರು ಕೂಡ ನೀಡಿದ್ದರು. ಕಳ್ಳರಿಗೆ ಪೊಲೀಸರ ಭಯವೋ ಅಥವಾ ಮನೆದೇವರ ಆಶೀರ್ವಾದವೋ ಗೊತ್ತಿಲ್ಲ, ಪೊಲೀಸರಿಗೆ ದೂರು ನೀಡಿದ ಎರಡು ದಿನಗಳ ನಂತರ ಕಳ್ಳರು ಮನೆಯ ಮುಂಭಾಗದ ಜಗಲಿಯ ಮೇಲೆ ಚಿನ್ನಾಭರಣಗಳನ್ನು ಇಟ್ಟು ಹೋಗಿದ್ದಾರೆ.
ಚಿನ್ನಾಭರಣ ವಾಪಸ್ಸು ಸಿಕ್ಕ ಖುಷಿಯಲ್ಲಿ ಸಿದ್ದೇಗೌಡರ ಕುಟುಂಬ ನಿರಾಳವಾಗಿದೆ.
LATEST NEWS
WATCH : ಚಲಿಸುತ್ತಿದ್ದ ರೈಲಿನಿಂದ ಹಾರಿದ ಮಹಿಳೆಯ ರಕ್ಷಿಸಿದ ರೈಲ್ವೇ ಸಿಬ್ಬಂದಿ
ಮಸ್ಕತ್ ನಲ್ಲಿ ಬಿರುವ ಜವನೆರ್ ಸಂಯೋಜನೆಯ ಕ್ರೀಡಾಕೂಟ
ಚಾರ್ಜರ್ ಕೇಬಲ್ ಗೆ ಗಮ್ ಟೇಪ್ ಸುತ್ತಿ ಚಾರ್ಜ್ ಮಾಡುವವರು ಇದನ್ನು ಓದಲೇ ಬೇಕು !
ಕಾಮೆಂಟ್ ಮೂಲಕ ಹಿಂದೂ ಧರ್ಮದ ದೇವರುಗಳ ಬಗ್ಗೆ ಅವಹೇಳನ: ದೂರು ದಾಖಲು
ಬಿಗ್ ಬಾಸ್ ನಿಂದ ಧರ್ಮ ಎಲಿಮಿನೆಟ್ ಆಗಿದ್ದು ಯಾಕೆ ಗೊತ್ತಾ ?
ಸ್ನೇಹಿತನಿಗೆ ಥಳಿಸಿ ಅ*ಪ್ರಾಪ್ತೆ ಮೇಲೆ ಅ*ತ್ಯಾಚಾ*ರ ಎಸಗಿದ ಟ್ರಕ್ ಚಾಲಕ
Trending
- LATEST NEWS5 days ago
ಪ್ರತಿದಿನ ಈ ಹಣ್ಣನ್ನು ತಿಂದರೆ ತೂಕ ಕಡಿಮೆಯಾಗುತ್ತೆ!
- Baindooru3 days ago
ಯಾವುದೇ ಕಾರಣಕ್ಕೂ ಕೂಡ ಇಂತಹ ಹಣ್ಣುಗಳನ್ನು ಫ್ರಿಡ್ಜ್ ನಲ್ಲಿ ಮಾತ್ರ ಇಡಬೇಡಿ!
- LIFE STYLE AND FASHION4 days ago
ಚಿಕನ್ ಪ್ರಿಯರೇ ಗಮನಿಸಿ; ಕೋಳಿ ಮಾಂಸದ ಈ ಭಾಗವನ್ನು ತಿನ್ನಲೇಬೇಡಿ
- LATEST NEWS7 days ago
ಮನೆಯ ಈ ಜಾಗದಲ್ಲಿ ನವಿಲು ಗರಿ ಇಟ್ಟು ನೋಡಿ; ಹಣದ ಸಮಸ್ಯೆಯೇ ಬರುವುದಿಲ್ಲ..!
Pingback: ಬೈಕ್ ಹರಿದು ನಾಲ್ವರು ಯುವಕರು ಸಾ*ವು - NAMMAKUDLA NEWS - ನಮ್ಮಕುಡ್ಲ ನ್ಯೂಸ್