ತುಮಕೂರು: ಖಾಸಗಿ ಬಸ್ ಒಂದು ಪಲ್ಟಿ ಆಗಿ ಸಂಭವಿಸಿದ ಭೀಕರ ಅಪಘಾತದಲ್ಲಿ 6 ಮಂದಿ ಸ್ಥಳದಲ್ಲೇ ಮೃತಪಟ್ಟ ಘಟನೆ ತುಮಕೂರಿನ ಪಾವಗಡದಲ್ಲಿ ಇಂದು ನಡೆದಿದೆ.
ಜಿಲ್ಲೆಯ ಪಾವಗಡ ತಾಲೂಕಿನ ಪಳವಳ್ಳಿ ಕಟ್ಟೆಯ ಬಳಿ ಅಪಘಾತ ಸಂಭವಿಸಿದೆ ಎಂದು ತಿಳಿದು ಬಂದಿದೆ.
ಬಸ್ಸಿನಲ್ಲಿದ್ದ 25ಕ್ಕೂ ಹೆಚ್ಚು ಮಂದಿ ಪ್ರಯಾಣಿಕರು ಗಂಭೀರ ಗಾಯಗೊಂಡಿದ್ದು, ಹೆಚ್ಚಿನ ಚಿಕಿತ್ಸೆಗೆ ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಪಾವಗಡ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.