ಚಾಮರಾಜನಗರ: ತುಮಕೂರು ಜಿಲ್ಲೆಯಲ್ಲಿ ನಿನ್ನೆಯಷ್ಟೇ ಭೀಕರ ಬಸ್ ಅಪಘಾತ ಸಂಭವಿಸಿ ಐದು ಮಂದಿ ಸಾವನ್ನಪ್ಪಿದ್ದಾರೆ.
ಇದರ ಬೆನ್ನಲ್ಲೇ ಬೈಕ್ಗೆ ಡಿಕ್ಕಿ ತಪ್ಪಿಸಲು ಹೋಗಿ ಖಾಸಗಿ ಬಸ್ಸೊಂದು ಪಲ್ಟಿಯಾಗಿರುವ ಘಟನೆ ಹನೂರು ತಾಲೂಕಿನ ಕಾಮಗೆರೆ ಸಮೀಪ ಇಂದು ಸಂಭವಿಸಿದೆ.
ಘಟನೆಯಲ್ಲಿ 10 ಮಂದಿಗೆ ಸಣ್ಣಪುಟ್ಟ ಗಾಯಗಳಾಗಿದ್ದರೆ, ಈ ಪೈಕಿ ಮೂವರಿಗೆ ತೀವ್ರಪೆಟ್ಟು ಬಿದ್ದಿದೆ ಎಂದು ತಿಳಿದುಬಂದಿದೆ.
ಹನೂರಿನಿಂದ ಮೈಸೂರಿಗೆ ತೆರಳುತ್ತಿದ್ದ ಬಸ್ ಇದಾಗಿದ್ದು, ಏಕಾಏಕಿ ಬೈಕ್ ಸವಾರನೋರ್ವ ನುಗ್ಗಿ ಬಂದಿದ್ದರಿಂದ ಡಿಕ್ಕಿ ತಪ್ಪಿಸಲು ಹೋಗಿ ಬಲಭಾಗದ ಹಳ್ಳಕ್ಕೆ ಬಸ್ ಪಲ್ಟಿಯಾಗಿದೆ ಎನ್ನಲಾಗ್ತಿದೆ.
ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗೆ ಸೇರಿಸಲಾಗಿದ್ದು, ಎಲ್ಲರೂ ಸುರಕ್ಷಿತವಾಗಿದ್ದಾರೆ ಎಂಬುದು ತಿಳಿದು ಬಂದಿದೆ. ಹನೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.
ಇದು ಒಂದೇ ವಾರದಲ್ಲಿ ರಾಜ್ಯದಲ್ಲಿ ನಡೆದ ನಾಲ್ಕನೇ ಪ್ರಕರಣವಾಗಿದ್ದು, ಹನೂರು ತಾಲೂಕಿನಲ್ಲಿ ಒಂದೇ ವಾರದಲ್ಲಿ ಸಂಭವಿಸಿದ ಎರಡನೇ ಘಟನೆ ಇದಾಗಿದೆ.