Friday, August 12, 2022

ಕಣಿವೆಗೆ ಉರುಳಿದ ಶಾಲಾ ಬಸ್‌: 16 ವಿದ್ಯಾರ್ಥಿಗಳು ಕೊನೆಯುಸಿರು

ಕುಲು: ಶಾಲೆಗೆ ಮಕ್ಕಳನ್ನು ಕರೆದೊಯ್ಯುತ್ತಿದ್ದ ಬಸ್‌ ಕಣಿವೆಗೆ ಉರುಳಿ ಬಿದ್ದ ಪರಿಣಾಮ 16 ವಿದ್ಯಾರ್ಥಿಗಳು ಸಾವನ್ನಪ್ಪಿದ ಘಟನೆ ಹಿಮಾಚಲ ಪ್ರದೇಶದ ಕುಲು ಜಿಲ್ಲೆಯಲ್ಲಿ ಇಂದು ಬೆಳಿಗ್ಗೆ ಸಂಭವಿಸಿದೆ.


‘ಸಾಯಿಂಜ್‌ಗೆ ತೆರಳುತ್ತಿದ್ದ ಬಸ್ ಬೆಳಿಗ್ಗೆ 8.30ರ ಸುಮಾರಿಗೆ ಜಂಗ್ಲಾ ಗ್ರಾಮದ ಬಳಿ ಕಮರಿಗೆ ಬಿದ್ದಿದೆ’ ಎಂದು ಕುಲು ಜಿಲ್ಲಾಧಿಕಾರಿ ಅಶುತೋಷ್ ಗರ್ಗ್ ತಿಳಿಸಿದ್ದಾರೆ.

ಬಸ್‌ನಲ್ಲಿ 40 ವಿದ್ಯಾರ್ಥಿಗಳಿದ್ದರು ಎಂದು ತಿಳಿದು ಬಂದಿದೆ.

ಸಾವಿನ ಸಂಖ್ಯೆ ಹೆಚ್ಚಾಗುವ ಆತಂಕ ಹೆಚ್ಚಾಗಿದೆ.
ಜಿಲ್ಲೆಯ ಅಧಿಕಾರಿಗಳು ಮತ್ತು ರಕ್ಷಣಾ ತಂಡಗಳು ಸ್ಥಳಕ್ಕೆ ಧಾವಿಸಿದ್ದು,

ಗಾಯಾಳುಗಳನ್ನು ಹತ್ತಿರದ ಆಸ್ಪತ್ರೆಗೆ ಸಾಗಿಸಲಾಗುತ್ತಿದೆ ಎಂದು ಅವರು ಹೇಳಿದರು.

LEAVE A REPLY

Please enter your comment!
Please enter your name here

Hot Topics

ಹರ್ ಘರ್ ತಿರಂಗಾ ಅಭಿಯಾನದಲ್ಲಿ ರಾಷ್ಟ್ರಧ್ವಜ ಸಂಹಿತೆ ಪಾಲಿಸಲು ದ.ಕ ಡಿಸಿ ಸೂಚನೆ

ಮಂಗಳೂರು: ಆಗಸ್ಟ್ 13 ರಿಂದ 15ರ ವರೆಗೆ ದೇಶದ ಪ್ರತೀ ಮನೆಯಲ್ಲೂ ರಾಷ್ಟ್ರ ಧ್ವಜವನ್ನು ಹಾರಿಸಿ ದೇಶಭಕ್ತಿ ಬಿಂಬಿಸುವ ಮೂಲಕ ರಾಷ್ಟ್ರ ಪ್ರೇಮವನ್ನು ಅಭಿವ್ಯಕ್ತಗೊಳಿಸುವಂತೆ ಅಭಿಯಾನವನ್ನು ಹಮ್ಮಿಕೊಂಡಿದೆ.ಈ ಅಭಿಯಾನದ ಹಿನ್ನೆಲೆ ಸರ್ಕಾರಿ ಕಟ್ಟಡಗಳ...

ಮಂಗಳೂರಿನಲ್ಲಿ ಬೆಳ್ಳಂಬೆಳಗ್ಗೆ ಹಿಟ್‌ ಆ್ಯಂಡ್‌ ರನ್‌: ಓರ್ವ ಸ್ಪಾಟ್‌ ಡೆತ್‌, ಮತ್ತೋರ್ವನಿಗೆ ಗಾಯ

ಮಂಗಳೂರು: ರಾಷ್ಟ್ರೀಯ ಹೆದ್ದಾರಿ ಬದಿ ಹುಲ್ಲು ಕಟಾವು ಮಾಡುತ್ತಿದ್ದ ಕಾರ್ಮಿಕರಿಗೆ ಅಪರಿಚಿತ ವಾಹನವೊಂದು ಢಿಕ್ಕಿ ಹೊಡೆದು ಸ್ಥಳದಲ್ಲಿ ನಿಲ್ಲಿಸದೇ ಪರಾರಿಯಾದ ಘಟನೆ ಮಂಗಳೂರು ನಗರದ ಜೆಪ್ಪಿನಮೊಗರುವಿನ ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ಇಂದು...

ಶರತ್ ಮಡಿವಾಳ ಹತ್ಯೆಗೆ 5 ವರ್ಷ : ಇನ್ನೂ ಸಿಕ್ಕಿಲ್ಲ ಓರ್ವ ಆರೋಪಿ- ಅರೆಸ್ಟಾದವರೆಲ್ಲರೂ ರಿಲೀಸ್..!

ವಿಶೇಷ ವರದಿಮಂಗಳೂರು: ರಾಜ್ಯದಲ್ಲೇ ಸಂಚಲನ ಮೂಡಿಸಿದ್ದ ಹಾಗೂ ರಾಜ್ಯ ರಾಜಕೀಯ ಇತಿಹಾಸದಲ್ಲಿ ಹಲವರನ್ನು ಮನೆಗೆ ಕಳುಹಿಸಿ ಮತ್ತೆ ಕೆಲವರನ್ನು ವಿಧಾನಸಭೆಯ ಮೊಗಸಾಲೆಗೆ ಕಳುಹಿಸಿದ್ದ ಬಂಟ್ವಾಳ ಶರತ್ ಮಡಿವಾಳ ಕೊಲೆ ಪ್ರಕರಣ ನಡೆದು ಐದು...