ಮಂಗಳೂರು: ನಗರದ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ ವತಿಯಿಂದ ಖಾಸಗಿ ಕಂಪೆನಿಗಳ ನೇರ ಸಂದರ್ಶನವನ್ನು ಇದೇ ಏ.26ರ ಮಂಗಳವಾರ ಬೆಳಿಗ್ಗೆ 10 ಗಂಟೆಯಿಂದ ಆಯೋಜಿಸಲಾಗಿದೆ.
ಪಿ.ಯು.ಸಿ, ಐ.ಟಿ.ಐ, ಡಿಪ್ಲೋಮಾ ಹಾಗೂ ಯಾವುದೇ ಪದವಿ ತೇರ್ಗಡೆಯಾದ (ಬಿ.ಇ ಮತ್ತು ಬಿ.ಸಿ.ಎ ಹೊರತುಪಡಿಸಿ) ಆಸಕ್ತ ಅಭ್ಯರ್ಥಿಗಳು ಸ್ವ ವಿವರವುಳ್ಳ ಬಯೋಡೇಟಾದೊಂದಿಗೆ ನಗರದ ಲಾಲ್‍ಭಾಗ್‍ನಲ್ಲಿರುವ ಮಂಗಳೂರು ಮಹಾನಗರ ಪಾಲಿಕೆ ಕಟ್ಟಡದಲ್ಲಿರುವ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯಲ್ಲಿ ಹಮ್ಮಿಕೊಂಡಿರುವ ನೇರ ಸಂದರ್ಶನದಲ್ಲಿ ಭಾಗವಹಿಸಬಹುದು.
ವಿವರ
ಜಯಲಕ್ಷ್ಮೀ ಸಿಲ್ಕ್ಸ್, ಗರೋಡಿ ಸ್ಟೀಲ್ಸ್, ಮೆಡ್ ಫ್ಲಸ್, ಪೈ ಇಂಟರ್‍ನ್ಯಾಷನಲ್, ಬ್ರೈಟ್ ಫ್ಲೆಕ್ಸ್ ಇಂಟರ್‍ನ್ಯಾಷನಲ್ ಪ್ರೈವೇಟ್ ಲಿಮಿಟೆಡ್, ಸಾಯಿ ರಾಧಾ ಟಿ.ವಿ.ಎಸ್. ಕಂಪೆನಿಗಳು ಭಾಗವಹಿಸಲಿದೆ.
ಹೆಚ್ಚಿನ ಮಾಹಿತಿಗಾಗಿ ದೂ.ಸಂಖ್ಯೆ:0824-2457139ಯನ್ನು ಸಂಪರ್ಕಿಸಬಹುದು ಎಂದು ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯ ಪ್ರಕಟಣೆ ತಿಳಿಸಿದೆ.