ಸುಳ್ಯ: ಖಾಸಗಿ ಶಾಲೆಯಲ್ಲಿ ಕಾರ್ಯನಿರ್ವಹಿಸುತ್ತಿದ್ದ ಮಹಿಳೆಯೊಬ್ಬರು ಅನಾರೋಗ್ಯದಿಂದ ಸಾವನ್ನಪ್ಪಿದ ಘಟನೆ ಬೆಳ್ಳಾರೆಯ ಚಾರ್ವಾಕ ಗ್ರಾಮದಲ್ಲಿ ನಡೆದಿದೆ.
ಕರಂದ್ಲಾಜೆ ನಿವಾಸಿ ಉಮೇಶ್ ಅವರ ಪತ್ನಿ ಉಷಾ (37) ಮೃತ ದುರ್ದೈವಿ.
ಉಷಾ ಅವರು ಬೆಳ್ಳಾರೆಯ ಖಾಸಗಿ ಶಾಲೆಯಲ್ಲಿ ಕ್ಲರ್ಕ್ ಆಗಿದ್ದು ಅವರಿಗೆ ಎರಡನೇ ಮಗುವಿನ ಹೆರಿಗೆ ಸಮಯದಲ್ಲಿ ಅನಾರೋಗ್ಯ ಸಮಸ್ಯೆ ಕಾಣಿಸಿಕೊಂಡಿತ್ತು.
ಈ ಹಿನ್ನೆಲೆ ಉಷಾ ದೀರ್ಘಾವಧಿ ರಜೆ ಪಡೆದುಕೊಂಡು ಚಿಕಿತ್ಸೆಯನ್ನು ಪಡೆದುಕೊಳ್ಳುತ್ತಿದ್ದರು.
ಆದರೆ ಆರೋಗ್ಯದ ಸ್ಥಿತಿ ತೀವ್ರವಾಗಿ ಹದಗೆಟ್ಟಿದ್ದರಿಂದ ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಯಿತು.
ಆದರೂ ಕೂಡಾ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. ಮೃತರು ಪುತ್ರಿ, ಹತ್ತು ತಿಂಗಳ ಗಂಡು ಮಗು ಹಾಗೂ ಪತಿಯನ್ನು ಅಗಲಿದ್ದಾರೆ.