Connect with us

STATE

ಪ್ರಿಯಾಂಕ್ ಖರ್ಗೆ ಮನೆಗೆ ಮುತ್ತಿಗೆ; ಬಿಜೆಪಿಯವರಿಗೆ ಎಳನೀರು, ಮಜ್ಜಿಗೆ

Published

on

ಮಂಗಳೂರು/ಕಲಬುರಗಿ : ಸಚಿನ್ ಪಾಂಚಾಳ್ ಆತ್ಮಹತ್ಯೆ ಪ್ರಕರಣವನ್ನು ಸಿಬಿಐಗೆ ವಹಿಸಿ, ಸಚಿವ ಪ್ರಿಯಾಂಕ್ ಖರ್ಗೆ ರಾಜೀನಾಮೆ ನೀಡುವಂತೆ ಬಿಜೆಪಿ ಆಗ್ರಹಿಸಿದೆ. ಈ ಹಿನ್ನೆಲೆಯಲ್ಲಿ ಶನಿವಾರ(ಡಿ.4) ಪ್ರಿಯಾಂಕ್ ಖರ್ಗೆ ಮನೆಗೆ ಮುತ್ತಿಗೆ ಹಾಕಲು ಸಜ್ಜಾಗಿರುವ ಬಿಜೆಪಿ ಕಾರ್ಯಕರ್ತರಿಗೆ ಎಳನೀರು, ಮಜ್ಜಿಗೆ, ನೀರಿನ ವ್ಯವಸ್ಥೆಯನ್ನು ಕಾಂಗ್ರೆಸ್ ಕಾರ್ಯಕರ್ತರು ಸಿದ್ಧತೆ ಮಾಡಿದ್ದಾರೆ.

ನಗರದ ಐವಾನ್ ಇ ಶಾಹಿ ಅತಿಥಿ ಗೃಹ ಸಮೀಪದ ಪ್ರಿಯಾಂಕ್ ಖರ್ಗೆ ಮನೆಯ ಮುಂದೆ ಕೈ ಕಾರ್ಯಕರ್ತರು  ನೀರಿನ ಬಾಟಲ್, ಎಳನೀರು, ಮಜ್ಜಿಗೆ, ಟೀ  ಇರಿಸಿದ್ದಾರೆ. ಪ್ರಿಯಾಂಕ್‌ಗೆ ಸಂಬಂಧವೇ ಇಲ್ಲದ ಪ್ರಕರಣವನ್ನು ಮುಂದಿಟ್ಟು ಪ್ರತಿಭಟನೆಯ ನಾಟಕ ಮಾಡುತ್ತಿದ್ದಾರೆ. ಬಿಸಿಲಿಗೆ ದಣಿದು ಬರುತ್ತಾರೆ. ಹಾಗಾಗಿ ನೀರು, ನಜ್ಜಿಗೆ, ಎಳನೀರಿನ ವ್ಯವಸ್ಥೆ ಮಾಡಿದ್ದೇವೆ ಎಂದು ಕಾಂಗ್ರೆಸ್ ಕಾರ್ಯಕರ್ತರು ವ್ಯಂಗ್ಯ ಮಾಡಿದ್ದಾರೆ.

ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ನೇತೃತ್ವದಲ್ಲಿ ನಡೆಯುವ ಪ್ರತಿಭಟನೆಯಲ್ಲಿ ವಿಧಾನಸಭೆ ಪ್ರತಿಪಕ್ಷ ನಾಯಕ ಆರ್ ಅಶೋಕ್, ಛಲವಾದಿ ನಾರಾಯಣಸ್ವಾಮಿ, ಸಿ ಟಿ ರವಿ, ಎನ್ ರವಿಕುಮಾರ್ ಸೇರಿದಂತೆ ಹಲವರು  ಪ್ರತಿಭಟನೆಯಲ್ಲಿ ಪಾಲ್ಗೊಳ್ಳಲಿದ್ದಾರೆ.

ಇದನ್ನೂ ಓದಿ : ಆಕಾಶದಿಂದ ಬಿತ್ತು 500 ಕೆಜಿ ತೂಕದ ಹೊಳೆಯುವ ರಿಂಗ್..! ಏನಿದು ವಿಚಿತ್ರ..?

ಜಗತ್ ವೃತ್ತದಲ್ಲಿ ಬೃಹತ್ ವೇದಿಕೆಯಲ್ಲಿ ಮಾತನಾಡಿದ ಮುಖಂಡರು ಸಚಿವ ಪ್ರಿಯಾಂಕ್ ಖರ್ಗೆ ಹಾಗೂ ಸರ್ಕಾರದ ವಿರುದ್ಧ ಕಿಡಿಕಾರಿದ್ದಾರೆ. ಪಾಂಚಾಳ ಆತ್ಮಹತ್ಯೆ ಪ್ರಕರಣ ಸಿಬಿಐಗೆ ಒಪ್ಪಿಸಬೇಕೆಂದು ಆಗ್ರಹಿಸಿದರು‌. ಪ್ರತಿಭಟನೆ ಹಿನ್ನೆಲೆ ಬೆಳಿಗ್ಗೆಯಿಂದಲೇ ಪೊಲೀಸ್ ಬಂದೋಬಸ್ತ್ ಮಾಡಲಾಗಿದೆ.

LATEST NEWS

ಶಿಕ್ಷಕಿಗೆ ನೋಟ್ಸ್ ತೋರಿಸುವಾಗ ಕುಸಿದುಬಿ*ದ್ದು ಮೂರನೇ ತರಗತಿ ವಿದ್ಯಾರ್ಥಿನಿ ಸಾ*ವು

Published

on

ಮಂಗಳೂರು/ಚಾಮರಾಜನಗರ : ಇತ್ತೀಚೆಗೆ ಹೃದಯಾ*ಘಾತ ಪ್ರಕರಣಗಳು ಹೆಚ್ಚುತ್ತಿವೆ. ಚಿಕ್ಕ ಮಕ್ಕಳಿಂದ ಹಿಡಿದು ಹಿರಿಯರೂ ಹೃದಯಾ*ಘಾತಕ್ಕೆ ಬ*ಲಿಯಾಗುತ್ತಿದ್ದಾರೆ. ಇದೀಗ ಮತ್ತೊಂದು ಪ್ರಕರಣ ನಡೆದಿದೆ.

ಶಿಕ್ಷಕಿಗೆ ನೋಟ್ಸ್ ತೋರಿಸುವಾಗ ಕುಸಿದುಬಿ*ದ್ದು ಮೂರನೇ ತರಗತಿ ವಿದ್ಯಾರ್ಥಿನಿ ಇಹಲೋಕ ತ್ಯಜಿಸಿರುವ ಘಟನೆ ಚಾಮರಾಜನಗರದ ಸೇಂಟ್ ಫ್ರಾನ್ಸಿಸ್ ಶಾಲೆಯಲ್ಲಿ ನಡೆದಿದೆ. ಚಾಮರಾಜನಗರ ತಾಲೂಕಿನ ಬದನಗುಪ್ಪೆ ಗ್ರಾಮದ ನಿವಾಸಿ ಲಿಂಗರಾಜು, ಶ್ರುತಿ ದಂಪತಿಯ ಏಕೈಕ ಪುತ್ರಿ ತೇಜಸ್ವಿನಿ ಮೃ*ತ ಬಾಲಕಿ.

ಇದನ್ನೂ ಓದಿ : ಇಬ್ಬರು ಮಕ್ಕಳನ್ನು ಕೊಂ*ದು ನೇ*ಣಿಗೆ ಶರಣಾದ ದಂಪತಿ

ತೇಜಸ್ವಿನಿ ಎಂದಿನಂತೆ ಶಾಲೆಗೆ ಹೋಗಿದ್ದು, ತರಗತಿಯಲ್ಲಿ ಶಿಕ್ಷಕಿಗೆ ನೋಟ್ಸ್ ತೋರಿಸಲು ನಿಂತಿದ್ದಳು. ಈ ವೇಳೆ ಕುಸಿದುಬಿದ್ದಿದ್ದಾಳೆ. ಅಲ್ಲೇ ಮೂತ್ರ ವಿಸರ್ಜನೆ ಮಾಡಿಕೊಂಡಿದ್ದಾಳೆ. ತಕ್ಷಣ ಆಕೆಯನ್ನು ಶಾಲಾ ಸಿಬ್ಬಂದಿ ಆಸ್ಪತ್ರೆಗೆ ಕರೆದೊಯ್ದಿದ್ದಾರೆ. ಆದರೆ, ಅಷ್ಟರಲ್ಲಾಗಲೇ ತೇಜಸ್ವಿನಿ ಕೊ*ನೆಯುಸಿರೆಳೆದಿದ್ದಳು ಎಂದು ತಿಳಿದುಬಂದಿದೆ. ಇದ್ದೊಬ್ಬ ಮಗಳನ್ನು ಕಳೆದುಕೊಂಡ ತಂದೆ – ತಾಯಿ ಶೋಕಸಾಗರದಲ್ಲಿ ಮುಳುಗಿದ್ದಾರೆ.

Continue Reading

LATEST NEWS

ಇಬ್ಬರು ಮಕ್ಕಳನ್ನು ಕೊಂ*ದು ನೇ*ಣಿಗೆ ಶರಣಾದ ದಂಪತಿ

Published

on

ಬೆಂಗಳೂರು : ಇಬ್ಬರು ಮಕ್ಕಳನ್ನು ಕೊಂ*ದು ದಂಪತಿ ಆ*ತ್ಮಹ*ತ್ಯೆ ಮಾಡಿಕೊಂಡಿರುವ ಘಟನೆ ಬೆಂಗಳೂರಿನ ಸದಾಶಿವ ನಗರದ ಆರ್.ಎಂ.ವಿ ಎರಡನೇ ಹಂತದ ಟೆಂಪಲ್ ರಸ್ತೆಯಲ್ಲಿ ನಡೆದಿದೆ. ಪತಿ ಅನೂಪ್‌ (38), ರಾಖಿ(35), ಅನುಪ್ರಿಯಾ (5) ವರ್ಷ ಮತ್ತು ಪ್ರಿಯಾಂಶ್ (2) ಮೃ*ತಪಟ್ಟವರು.

ರಾತ್ರಿ(ಜ.5) ಇಬ್ಬರು ಮಕ್ಕಳನ್ನು ಹ*ತ್ಯೆ ಮಾಡಿದ ದಂಪತಿ ಬಳಿಕ ಮನೆಯಲ್ಲೇ ನೇ*ಣಿಗೆ ಶರಣಾಗಿದ್ದಾರೆ. ಘಟನೆಗೆ ಕಾರಣ ತಿಳಿದು ಬಂದಿಲ್ಲ. ಘಟನಾ ಸ್ಥಳಕ್ಕೆ ಸದಾಶಿವ ನಗರ ಪೊಲೀಸರು ಭೇಟಿ ಪರಿಶೀಲನೆ ನಡೆಸುತ್ತಿದ್ದಾರೆ.

ಕಾರಣ ಏನು?

ಅನೂಪ್‌ ಉತ್ತರ ಪ್ರದೇಶ ಮೂಲದವರಾಗಿದ್ದು, ಖಾಸಗಿ ಕಂಪನಿಯಲ್ಲಿ ಸಾಫ್ಟ್‌ವೇರ್‌ ಕನ್ಸಲ್ಟೆಂಟ್‌ ಆಗಿ ಕೆಲಸ ಮಾಡುತ್ತಿದ್ದರು. ಮೊದ ಮಗು ಅನುಪ್ರಿಯಾಗೆ ಆರೋ*ಗ್ಯ ಸಮಸ್ಯೆ ಇತ್ತು. ಈ ವಿಚಾರಕ್ಕೆ ದಂಪತಿ ಬಹಳ ಬೇಸರದಲ್ಲಿದ್ದರು ಎನ್ನಲಾಗಿದೆ.

ಮನೆಗೆ ಮೂರು ಜನ ಕೆಲಸಗಾರರನ್ನು ನೇಮಿಸಲಾಗಿತ್ತು. ಇಬ್ಬರು ಅಡುಗೆಗೆ ನಿಯೋಜನೆಗೊಂಡಿದ್ದರೆ, ಒಬ್ಬರು ಮಗು ನೋಡಿಕೊಳ್ಳಲು ಇದ್ದರು. ಇಂದು ಬೆಳಗ್ಗೆ 11 ಗಂಟೆಗೆ ಪಾಂಡಿಚೇರಿಗೆ ಹೋಗಲಿದ್ದೇವೆ. ಬೇಗ ಕೆಲಸಕ್ಕೆ ಬನ್ನಿ ಎಂದು ಕೆಲಸದವರಿಗೆ ಅನೂಪ್ ಹೇಳಿದ್ದರಂತೆ. ಹೀಗಾಗಿ ಇಂದು(ಜ.6) ಬೆಳಗ್ಗೆ ಕೆಲಸದವರು ಮನೆಗೆ ಬಂದಿದ್ದಾರೆ. ಈ ವೇಳೆ ಘಟನೆ ಬೆಳಕಿಗೆ ಬಂದಿದೆ. ಭಾನುವಾರವೂ ಪ್ಯಾಕಿಂಗ್ ಮಾಡಲು ಕೆಲಸದವರನ್ನು ಕರೆಸಿಕೊಂಡಿದ್ದರಂತೆ.

ಇದನ್ನೂ ಓದಿ : ಬಾಯ್ ಫ್ರೆಂಡ್ ಗಾಗಿ ಹುಡುಗಿಯರಿಬ್ಬರ ಬೀದಿ ಜಗಳ

ಮೊದಲ ಮಗು ವಿಶೇಷ ಚೇತನವಾಗಿದ್ದ ಕಾರಣ ದಂಪತಿ ಬಹಳ ಕುಗ್ಗಿ ಹೋಗಿದ್ದರು. ನಿನ್ನೆ ರಾತ್ರಿ 10 ಗಂಟೆಯವರೆಗೂ ದಂಪತಿ ಖುಷಿಯಾಗಿಯೇ ಇದ್ದರು ಎಂದು ಕೆಲಸದವರು ತಿಳಿಸಿರುವ ಬಗ್ಗೆ ವರದಿಯಾಗಿದೆ.

Continue Reading

LATEST NEWS

ಸೆಂಟ್ರಿಂಗ್ ಮರದ ತುಂಡು ಬಿದ್ದು ಬಾಲಕಿ ಸಾವು ಕೇಸ್: ಎಂಜಿನಿಯರ್ ಪೊಲೀಸ್ ವಶಕ್ಕೆ

Published

on

ಬೆಂಗಳೂರಲ್ಲಿ ಶಾಲೆ ಮುಗಿಸಿಕೊಂಡು ಮನೆಗೆ ತೆರಳುವ ವೇಳೆ ನಿರ್ಮಾಣ ಹಂತದ ಕಟ್ಟಡದ ಸೆಂಟ್ರಿಂಗ್ ಮರದ ತುಂಡು ಬಿದ್ದು 15 ವರ್ಷದ ಬಾಲಕಿ ತೇಜಸ್ವಿನಿ ಸಾವನಪ್ಪಿದ್ದ ಪ್ರಕರಣಕ್ಕೆ ಸಂಬಂಧಪಟ್ಟಂತೆ, ಇದೀಗ ಕಟ್ಟಡದ ಇಂಜಿನಿಯರ್ ಚಂದ್ರಶೇಖರ್ ಎನ್ನುವವರನ್ನು ವಿವಿ ಪುರಂ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.

ಹೌದು ಕಟ್ಟಡ ನಿರ್ಮಾಣ ಮಾಡುತ್ತಿರುವ ಇಂಜಿನಿಯರ್ ಅನ್ನು ವಿವಿ ಪುರಂ ಠಾಣೆ ಪೋಲಿಸಿರುವ ಅವಶ್ಯಕತೆ ಪಡೆದುಕೊಂಡು ಸದ್ಯ ವಿಚಾರಣೆ ನಡೆಸುತ್ತಿದ್ದಾರೆ.ಘಟನೆ ಸಂಬಂಧ ತೇಜಸ್ವಿನಿ ತಂದೆ ಸುಧಾಕರ್‌ ರಾವ್‌ ಅವರು ನೀಡಿದ ದೂರಿನ ಮೇರೆಗೆ ಕಟ್ಟಡ ಮಾಲಿಕ, ಗುತ್ತಿಗೆದಾರ, ಎಂಜಿನಿಯರ್‌, ಬಿಬಿಎಂಪಿ ಅಧಿಕಾರಿಗಳು ವಿರುದ್ಧ ಎಫ್‌ಐಆರ್‌ ದಾಖಲಾಗಿದೆ.

ಇನ್ನು ಕಟ್ಟಡ ಮಾಲಿಕ, ಗುತ್ತಿಗೆದಾರ ಹಾಗೂ ಘಟನೆ ವೇಳೆ ಕೆಲಸ ಮಾಡುತ್ತಿದ್ದ ಕಟ್ಟಡ ಕಾರ್ಮಿಕರು ನಾಪತ್ತೆಯಾಗಿದ್ದಾರೆ. ಇನ್ನು ಕಟ್ಟಡ ನಿರ್ಮಾಣ ಮಾಡಲು ಅನುಮತಿ ನೀಡಿದ ಬಿಬಿಎಂಪಿ ಅಧಿಕಾರಿಗಳು ಸುರಕ್ಷತಾ ಕ್ರಮಗಳ ಬಗ್ಗೆ ಪರಿಶೀಲಿಸಿಲ್ಲ ಎಂಬುದು ಗೊತ್ತಾಗಿದೆ. ಎಲ್ಲಾ ಆರೋಪಿಗಳನ್ನು ಸದ್ಯದಲ್ಲೇ ವಶಕ್ಕೆ ಪಡೆದು ವಿಚಾರಣೆ ನಡೆಸಲಾಗುತ್ತದೆ ಎಂದು ಪೊಲೀಸರು ಹೇಳಿದರು.

Continue Reading

LATEST NEWS

Trending

Exit mobile version