Connect with us

    LATEST NEWS

    ವಯನಾಡಿನಿಂದ ಪ್ರಿಯಾಂಕಾ ಗಾಂಧಿ ಸ್ಪರ್ಧೆ..!

    Published

    on

    ನವದೆಹಲಿ / ಮಂಗಳೂರು : ರಾಯ್‌ ಬರೇಲಿ ಹಾಗೂ ವಯನಾಡು ಎರಡೂ ಕಡೆಯಿಂದ ಗೆಲುವು ಸಾಧಿಸಿದ್ದ ರಾಹುಲ್ ಗಾಂಧಿ, ವಯನಾಡು ಕ್ಷೇತ್ರವನ್ನು ಬಿಟ್ಟುಕೊಟ್ಟಿದ್ದಾರೆ. ಈ ಮೂಲಕ ಪ್ರಿಯಾಂಕಾ ಗಾಂಧಿ ವಯನಾಡಿನಲ್ಲಿ ಚುನಾವಣೆ ಸ್ಪರ್ಧಿಸುವುದು ಖಚಿತವಾಗಿದೆ. ಈ ಬಗ್ಗೆ ಮಾಧ್ಯಮಗಳಿಗೆ ರಾಹುಲ್ ಗಾಂಧಿ ಮಾಹಿತಿ ನೀಡಿದ್ದಾರೆ.


    2019 ರ ಚುನಾವಣೆಯಲ್ಲಿ ರಾಹುಲ್‌ ಗಾಂಧಿಗೆ ಮರು ಜೀವ ನೀಡಿದ ಕ್ಷೇತ್ರ ವಯನಾಡು. ಅಮೇಠಿ ಹಾಗೂ ವಯನಾಡಿನಿಂದ ಸ್ಪರ್ಧೆ ಮಾಡಿದ್ದ ರಾಹುಲ್ ಗಾಂಧಿ ಅಮೇಠಿಯಲ್ಲಿ ಸೋಲು ಕಂಡಿದ್ದರು. ಬಿಜೆಪಿಯ ಸ್ಮೃತಿ ಇರಾನಿ ಗೆಲುವು ಸಾಧಿಸಿ ಸಚಿವೆ ಕೂಡಾ ಆಗಿದ್ದರು. 2024 ರ ಚುನಾವಣೆಯಲ್ಲಿ ಅಮೇಠಿಯಲ್ಲಿ ಗಾಂಧಿ ಕುಟುಂಬದ ಆಪ್ತ ಕಿಶೋರಿಲಾಲ್ ಶರ್ಮ ಸ್ಪರ್ಧೆ ಮಾಡಿ ಗೆಲುವು ಸಾಧಿಸಿದ್ದಾರೆ.
    ರಾಯಬರೇಲಿ ಕ್ಷೇತ್ರದಲ್ಲಿ ಸೋನಿಯಾ ಗಾಂಧಿ ಸ್ಪರ್ಧೆ ಮಾಡುತ್ತಿದ್ದು, ಈ ಬಾರಿ ಅವರು ರಾಜ್ಯಸಭೆಯಿಂದ ಸಂಸದರಾಗಿ ಕ್ಷೇತ್ರವನ್ನು ರಾಹುಲ್ ಗಾಂಧಿಗೆ ಬಿಟ್ಟುಕೊಟ್ಟಿದ್ದರು. ರಾಯಬರೇಲಿಯಲ್ಲಿ ರಾಹುಲ್‌ ಗಾಂಧಿ ನಾಲ್ಕು ಲಕ್ಷಕ್ಕೂ ಅಧಿಕ ಮತಗಳಿಂದ ಗೆಲುವು ಸಾಧಿಸಿದ್ದರು. ಇನ್ನು ವಯನಾಡಿನಲ್ಲೂ ನಿರೀಕ್ಷೆಯಂತೆ ಗೆಲುವು ಸಾಧಿಸಿದ್ದರು. ಇದೀಗ ವಯನಾಡು ಕ್ಷೇತ್ರವನ್ನು ರಾಹುಲ್ ಗಾಂಧಿ ಸಹೋದರಿ ಪ್ರಿಯಾಂಕಾ ಗಾಂಧಿಗೆ ಬಿಟ್ಟುಕೊಟ್ಟಿದ್ದಾರೆ.


    ಈ ಎರಡೂ ಕ್ಷೇತ್ರಗಳ ಜನರ ಜೊತೆ ನನ್ನ ಉತ್ತಮ ಬಾಂಧವ್ಯವಿದ್ದು, ವಯನಾಡು ಕ್ಷೇತ್ರ ಬಿಟ್ಟಿರುವುದಕ್ಕೆ ತುಂಬಾ ಬೇಸರವಾಗಿದೆ. ಆದ್ರೆ, ನನ್ನ ಸಹೋದರಿ ಅಲ್ಲಿ ಗೆದ್ದು ಜನರ ಜೊತೆ ಇರಲಿದ್ದಾರೆ ಎಂದು ರಾಹುಲ್ ಗಾಂಧಿ ಹೇಳಿದ್ದಾರೆ.

    ಇದನ್ನು ಓದಿ:ಪ್ರತಿಭಟನೆ ವೇಳೆ ಸುಸ್ತಾದ ಬಿಜೆಪಿಯ ಹಿರಿಯ ನಾಯಕ ಭಾನುಪ್ರಕಾಶ್ ನಿಧನ

    LATEST NEWS

    500 ನೌಕರರನ್ನು ಕೆಲಸದಿಂದ ವಜಾಗೊಳಿಸಿದ Yes ಬ್ಯಾಂಕ್‌..!

    Published

    on

    ಮಂಗಳೂರು ( ಮುಂಬೈ ) : ದೇಶದಲ್ಲಿ ಹೆಸರು ಮಾಡಿರುವ ಖಾಸಗಿ ಬ್ಯಾಂಕ್ ಆಗಿರುವ Yes ಬ್ಯಾಂಕ್ ತನ್ನ 500 ನೌಕರರಿಗೆ ಮೂರು ತಿಂಗಳ ಸಮಾನ ವೇತನ ನೀಡಿ ಹೊರ ಹಾಕಿದೆ. ಬ್ಯುಸಿನೆಸ್ ಟುಡೆ ವರದಿ ಪ್ರಕಾರ ಯೆಸ್ ಬ್ಯಾಂಕ್‌ ಇನ್ನೂ ಅನೇಕ ನೌಕರರ ಲಿಸ್ಟ್‌ ತಯಾರಿಸಿದ್ದು, ಮುಂದಿನ ದಿನದಲ್ಲಿ ಅವರನ್ನೂ ವಜಾಗೊಳಿಸುವ ಸಾದ್ಯತೆ ಇದೆ ಎಂದು ಹೇಳಿದೆ. ಬಹುತೇಕ ಎಲ್ಲಾ ವಿಭಾಗದ ನೌಕರರು ಈ ಪಟ್ಟಿಯಲ್ಲಿ ಒಳಗೊಂಡಿದ್ದು, ನೌಕರರು ಅತಂತ್ರ ಸ್ಥಿತಿಯನ್ನು ಎದುರಿಸುತ್ತಿದ್ದಾರೆ.

    ಡಿಜಿಟಲೀಕರಣದಿಂದ ಕಾಸ್ಟ್‌ ಕಟ್ಟಿಂಗ್‌ ..!

    Yes ಬ್ಯಾಂಕ್‌ ಡಿಜಿಟಲೀಕರಣದೊಂದಿಗೆ ಗ್ರಾಹಕರ ಜೊತೆ ನೇರ ಸಂಪರ್ಕ ಮಾಡುತ್ತಿದ್ದು, ನಡುವಿನಲ್ಲಿ ಅನಗತ್ಯ ನೌಕರರ ಅಗತ್ಯ ಇಲ್ಲ ಎಂದು ಈ ತೀರ್ಮಾನಕ್ಕೆ ಬಂದಿದೆ ಎಂದು ವರದಿ ಹೇಳಿದೆ. ಬ್ಯಾಂಕ್ ತೆಗೆದುಕೊಂಡಿರುವ ಈ ನಿರ್ಧಾರದಿಂದ ಬ್ಯಾಂಕ್‌ನ ನಿರ್ವಹಣಾ ವೆಚ್ಚವನ್ನು ಸರಿದೂಗಿಸಲು ಸಾಧ್ಯವಾಗಲಿದೆ. ಬ್ಯಾಂಕ್ ವೇಗವಾಗಿ ಡಿಜಿಟಲೀಕರಣವಾಗುತ್ತಿರುವುದರಿಂದ ನೌಕರರ ಅಗತ್ಯವೂ ಕಡಿಮೆಯಾಗುತ್ತಿರುವುದಾಗಿ ಬ್ಯಾಂಕ್ ಮೂಲಗಳು ತಿಳಿಸಿದೆ. 2023 -24 ರಲ್ಲಿ Yes ಬ್ಯಾಂಕ್ ನೌಕರರಿಗೆ ನೀಡಿದ ಸ್ಯಾಲರಿ ಹಾಗೂ ಭತ್ತೆಗಳು ರೂ.3363 ಕೋಟಿಯಿಂದ ರೂ.3774 ಕೋಟಿಗಳಿಗೆ ಏರಿಕೆಯಾಗಿದೆ. ಇದೀಗ ಅನಗತ್ಯ ನೌಕರರ ವಜಾದಿಂದ ಈ ಏರಿಕೆಯನ್ನು ತಡೆಯಲು ಬ್ಯಾಂಕ್ ಮುಂದಾಗಿದೆ.

    Yes ಬ್ಯಾಂಕ್‌ನ ಈ ನಿರ್ಧಾರ ಕೇವಲ ನೌಕರರ ಮೇಲೆ ಮಾತ್ರವಲ್ಲದೆ ಶೇರ್ ಮಾರುಕಟ್ಟೆಯಲ್ಲೂ ಪ್ರಭಾವ ಬೀರಿದ್ದು Yes ಬ್ಯಾಂಕ್ ಶೇರು ಬೆಲೆ ಕುಸಿತವಾಗಿದೆ. ಮಂಗಳವಾರ 24.02 ರೂಗಳಲ್ಲಿ ಅಂತ್ಯವಾಗಿದ್ದ Yes ಬ್ಯಾಂಕ್ ಶೇರ್ ಬುಧವಾರ ನೌಕರರನ್ನು ವಜಾಗೊಳಿಸಿದ ವಿಚಾರ ಬಹಿರಂಗವಾಗುತ್ತಿದ್ದಂತೆ 23.90 ರೂಪಾಯಿಗೆ ಕುಸಿತವಾಗಿದೆ.

    Continue Reading

    LATEST NEWS

    ಪ್ರಜ್ವಲ್ ರೇವಣ್ಣಗೆ ಬಿಗ್ ಶಾಕ್; ಜಾಮೀನು ಅರ್ಜಿ ವಜಾಗೊಳಿಸಿದ ನ್ಯಾಯಾಲಯ

    Published

    on

    ಬೆಂಗಳೂರು : ಹಾಸನ ಜೆಡಿಎಸ್​​ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಜಾಮೀನು ಅರ್ಜಿ ವಜಾಗೊಳಿಸಿ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ಕೋರ್ಟ್ ಆದೇಶಿಸಿದೆ. ಹೊಳೆನರಸೀಪುರ ಪೊಲೀಸ್ ಠಾಣೆಯಲ್ಲಿ ದಾಖಲಾಗಿರುವ ಲೈಂ*ಗಿಕ ದೌ*ರ್ಜನ್ಯ ಪ್ರಕರಣದಲ್ಲಿ ಬಂಧಿತರಾಗಿರುವ ಪ್ರಜ್ವಲ್ ರೇವಣ್ಣ ಜಾಮೀನಿಗಾಗಿ ಅರ್ಜಿ ಸಲ್ಲಿಸಿದ್ದರು. ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ಕೋರ್ಟ್  ಬುಧವಾರ (ಜೂನ್ 26) ಅರ್ಜಿ ವಿಚಾರಣೆ ನಡೆಸಿದ್ದು, ಪ್ರಜ್ವಲ್ ರೇವಣ್ಣ ಜಾಮೀನು ಅರ್ಜಿ ವಜಾಗೊಳಿಸಿದೆ.


    ಹೊಳೆನರಸೀಪುರ ಪೊಲೀಸ್ ಠಾಣೆಯಲ್ಲಿ ದಾಖಲಾಗಿರುವ ಮೊದಲನೇ ಪ್ರಕರಣದಲ್ಲಿ ಪ್ರಜ್ವಲ್ ರೇವಣ್ಣ ಪರ ವಕೀಲರು ಜಾಮೀನಿಗಾಗಿ ಅರ್ಜಿ ಸಲ್ಲಿಸಿದ್ದರು. ಈ ಅರ್ಜಿ ವಿಚಾರಣೆ ನಡೆಸಿದ್ದ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ಕೋರ್ಟ್, ಜಾಮೀನು ಆದೇಶ ಕಾಯ್ದಿರಿಸಿತ್ತು. ಆದರೆ, ನ್ಯಾಯಾಧೀಶ ಸಂತೋಷ್ ಗಜಾನನ ಭಟ್ ಅವರು ಪ್ರಜ್ವಲ್ ಜಾಮೀನು ಅರ್ಜಿಯನ್ನು ವಜಾ ಮಾಡಿ ಆದೇಶ ಹೊರಡಿಸಿದ್ದಾರೆ. ಇನ್ನು ಜಾಮೀನಿಗಾಗಿ ಪ್ರಜ್ವಲ್​ ಹೈಕೋರ್ಟ್​ ಮೆಟ್ಟಿಲೇರಬೇಕಿದೆ.

    ಇದನ್ನೂ ಓದಿ : ಖ್ಯಾತ ನಟ ಜಯಂ ರವಿ – ಆರತಿ ದಾಂಪತ್ಯ ಜೀವನದಲ್ಲಿ ಬಿರುಕು!?

    ಲೈಂ*ಗಿಕ ದೌರ್ಜ*ನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ 42ನೇ ಎಸಿಎಂಎಂ ನ್ಯಾಯಾಲಯವು ಮಾಜಿ ಸಂಸದ ಪ್ರಜ್ವಲ್​ ರೇವಣ್ಣ ಅವರನ್ನು ಜೂನ್ 29ರ ವರೆಗೂ ಎಸ್​ಐಟಿ ಕಸ್ಟಡಿಗೆ ನೀಡಿದೆ.

    Continue Reading

    DAKSHINA KANNADA

    ಜಪ್ಪಿನಮೊಗರು ದೊಂಪದಬಲಿ ಗದ್ದೆ ಸಮೀಪ ಮನೆಗಳು ಜಲಾವೃತ

    Published

    on

    ಮಂಗಳೂರು ಹೊರವಲಯದ ಜಪ್ಪಿನಮೊಗೆರು ಪ್ರದೇಶದಲ್ಲಿ ಮಳೆಯಿಂದಾಗಿ ಹಲವು ರಸ್ತೆಗಳು ಹಾಗೂ ಮನೆಗಳು ಜಲಾವೃತಗೊಂಡಿದೆ. ಇಲ್ಲಿನ ದೊಂಪದಬಲಿ ಎಂಬಲ್ಲಿನ ರಾಜಾಕಾಲುವೆ ಬ್ಲಾಕ್ ಆಗಿ ನೀರು ನದಿ ಸೇರದೆ ಈ ಕೃತಕ ನೆರೆ ಉಂಟಾಗಿದೆ.

    ಹಲವಾರು ವರ್ಷಗಳಿಂದ ಇಲ್ಲಿ ರಸ್ತೆ ಸಮಸ್ಯೆ ಇದ್ದು, ಇತ್ತೀಚೆಗೆ ನೂತನ ಕಾಂಕ್ರೀಟ್ ರಸ್ತೆ ನಿರ್ಮಾಣ ಮಾಡಲಾಗಿದೆ. ಆದ್ರೆ ಕಾಂಕ್ರೀಟ್ ರಸ್ತೆಯ ಇಕ್ಕೆಲೆಗಳಲ್ಲಿ ನಿರ್ಮಿಸಬೇಕಾದ ಚರಂಡಿಯನ್ನು ನಿರ್ಮಾಣ ಮಾಡದೆ ಇರುವುದು ಇದಕ್ಕೆ ಕಾರಣ ಎಂದು ಸ್ಥಳಿಯರು ದೂರಿದ್ದಾರೆ. ಮೊದಲೇ ತಗ್ಗು ಪ್ರದೇಶದಲ್ಲಿ ಇರುವ ದೊಂಪದ ಬಲಿ ಪ್ರದೇಶ ರಸ್ತೆಗಿಂತ ಕೆಳಗೆ ಇರುವ ಕಾರಣ ರಸ್ತೆಯಲ್ಲಿ ಹರಿಯುವ ನೀರು ನೇರ ಜನವಸತಿ ಪ್ರದೇಶಕ್ಕೆ ನುಗ್ಗುತ್ತಿದೆ. ಚರಂಡಿ ನಿರ್ಮಾಣ ಮಾಡಿದ್ದೇ ಆಗಿದ್ದಲ್ಲಿ ಈ ರೀತಿಯ ಸಮಸ್ಯೆ ಆಗುತ್ತಿರಲಿಲ್ಲ ಎಂದು ಸ್ಥಳೀಯರು ಆರೋಪಿಸಿದ್ದಾರೆ.

    ಸ್ಥಳಕ್ಕೆ ಭೇಟಿ ನೀಡಿ ಕಾರ್ಪೋರೇಟರ್ ವೀಣಾಮಂಗಳ ಸ್ಥಳೀಯ ನಿವಾಸಿಗಳು ತ್ಯಾಜ್ಯ ವಿಲೇವಾರಿಯಲ್ಲಿ ಸಹಕರಿಸದೇ ಇರುವುದು ಈ ಸಮಸ್ಯೆಗೆ ಮೂಲಕ ಕಾರಣ ಎಂದು ಹೇಳಿದ್ದಾರೆ. ಎಲ್ಲಾ ತ್ಯಾಜ್ಯಗಳನ್ನು ಇಲ್ಲಿನ ಚರಂಡಿಗೆ ಎಸೆಯುವ ಕಾರಣ ರಾಜಾಕಾಲುವೆಯಲ್ಲಿ ಶೇಖರಣೆಯಾಗಿ ಈ ರೀತಿ ಅವಾಂತರ ಸೃಷ್ಟಿಯಾಗಿದೆ ಎಂದು ಹೇಳಿದ್ದಾರೆ.

    ಇಷ್ಟೇ ಅಲ್ಲದೆ ನೀರು ಸರಾಗವಾಗಿ ಹರಿದು ರಾಜಕಾಲುವ ಸೇರಲು ಚರಂಡಿ ನಿರ್ಮಾಣದ ವೇಳೆ ಕೆಲವರು ಅನಗತ್ಯವಾಗಿ ಸ್ಟೇ ತಂದು ಕಾಮಾಗಾರಿ ತಡೆ ಹಿಡಿದಿದ್ದಾರೆ ಎಂದು ಸ್ಥಳಿಯರ ಅಸಹಕಾರದಿಂದ ಈ ರೀತಿ ಆಗಿದೆ ಎಂದು ಹೇಳಿದ್ದಾರೆ.

    Continue Reading

    LATEST NEWS

    Trending