Wednesday, May 18, 2022

ಉತ್ತರ ಪ್ರದೇಶ ಕಾಂಗ್ರೆಸ್ ಪಕ್ಷದ ಸಿಎಂ ಅಭ್ಯರ್ಥಿಯಾಗಿ ಪ್ರಿಯಾಂಕಾ ಗಾಂಧಿ..!?

ಉತ್ತರಪ್ರದೇಶ : ಉತ್ತರಪ್ರದೇಶ ವಿಧಾನಸಭೆ ಚುನಾವಣಾ ಕಣ ದಿನದಿಂದ ದಿನಕ್ಕೆ ರಂಗೇರುತ್ತಿದೆ. ತನ್ನ ಹಾಲಿ ಕೋಟೆಯನ್ನು ಉಳಿಸಲು ಬಿಜೆಪಿ ಮತ್ತು ಬಿಜೆಪಿ ಕೋಟೆಯನ್ನು ಒಡೆಯಲು ಕೈ – ಕಮಲ ಭಾರಿ ಪೈಪೋಟಿ ನಡೆಸುತ್ತಿದೆ.

ಬಿಜೆಪಿ , ಕಾಂಗ್ರೆಸ್​ ತಮ್ಮ ತಮ್ಮ ಅಭ್ಯರ್ಥಿಗಳ ಲಿಸ್ಟ್ ಕೂಡ ರಿಲೀಸ್ ಮಾಡಿವೆ. ಇದರ ಮಧ್ಯೆ ಪ್ರಿಯಾಂಕಾ ಗಾಂಧಿ ನೀಡಿರುವ ಹೇಳಿಕೆ ಬಿಜೆಪಿ ಪಾಳಯದಲ್ಲಿ ತಳಮಳ ಸೃಷ್ಟಿಸಿದೆ.

ಉತ್ತರ ಪ್ರದೇಶ ಚುನಾವಣೆ ಹಿನ್ನೆಲೆಯಲ್ಲಿ ಕಾಂಗ್ರೆಸ್​ ಪಕ್ಷ ಇಂದು ಯುವಕರು ಮತ್ತು ಯುವತಿಯರಿಗೋಸ್ಕರ ಪ್ರತ್ಯೇಕ ಪ್ರಣಾಳಿಕೆ ರಿಲೀಸ್ ಮಾಡುವ ಕಾರ್ಯಕ್ರಮದಲ್ಲಿ ಪಾಲ್ಗೊಂಡ  ಕಾಂಗ್ರೆಸ್​​ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ಮಾಧ್ಯಮದವರು ಕೇಳಿರುವ ಪ್ರಶ್ನೆಗೆ ನೀಡಿದ ಉತ್ತರ ಉತ್ತರ ಪ್ರದೇಶದ ರಾಜಕೀಯ ವಲಯದಲ್ಲಿ ತಳಮಳ ಸೃಷ್ಟಿಸಿದೆ.

ಉತ್ತರಪ್ರದೇಶದ ಕಾಂಗ್ರೆಸ್ ಸಿಎಂ ಅಭ್ಯರ್ಥಿ ಯಾರು ಎಂದು ಕೇಳಿರುವ ಪ್ರಶ್ನೆಗೆ ಉತ್ತರಿಸಿದ ಪ್ರಿಯಾಂಕಾ ಗಾಂಧಿ, ‘ನಿಮಗೆ ಬೇರೆ ಮುಖ ಸಿಎಂ ಸ್ಥಾನಕ್ಕೆ ಕಾಣುತ್ತಿದೆಯೇ? ಸಿಎಂ ಅಭ್ಯರ್ಥಿಯಾಗಿ ನನ್ನ ಮುಖವನ್ನು ನೋಡಬಹುದು’ ಅಲ್ಲವೇ ಎಂದು ಹೇಳಿದ್ದಾರೆ.

ಈ ಮೂಲಕ ಯುಪಿ ವಿಧಾನಸಭಾ ಚುನಾವಣೆಯಲ್ಲಿ ಪಕ್ಷದ ಮುಖ್ಯಮಂತ್ರಿ ಅಭ್ಯರ್ಥಿ ತಾವು ಎಂಬ ಸುಳಿವು ನೀಡಿದ್ದಾರೆ.

ಉತ್ತರ ಪ್ರದೇಶ ಕಾಂಗ್ರೆಸ್​ ಸಿಎಂ ಅಭ್ಯರ್ಥಿಯಾಗಿ ಪ್ರಿಯಾಂಕಾ ಗಾಂಧಿ ಕಣಕ್ಕಿಳಿಯಲಿದ್ದಾರೆಂಬ ಮಾತು ಈ ಹಿಂದಿನಿಂದಲೂ ಕೇಳಿ ಬರುತ್ತಿವೆ. ಇದಕ್ಕೆ ಪುಷ್ಟಿ ನೀಡುವ ರೀತಿಯಲ್ಲಿ ಚುನಾವಣೆಯಲ್ಲಿ ಮಹಿಳೆಯರಿಗೆ ಪಕ್ಷ ಹೆಚ್ಚಿನ ಆದ್ಯತೆ ನೀಡುತ್ತಿದೆ.

ಕಾಂಗ್ರೆಸ್ ಪಕ್ಷ ಅಭ್ಯರ್ಥಿಗಳ ಪಟ್ಟಿಯಲ್ಲಿ 60ಕ್ಕೂ ಅಧಿಕ ಮಹಿಳಾ ಅಭ್ಯರ್ಥಿಗಳಿಗೆ ಟಿಕೆಟ್ ನೀಡಿದೆ.

 

LEAVE A REPLY

Please enter your comment!
Please enter your name here

Hot Topics

ಛೀ ಅಸಹ್ಯ: ಮಂಗಳೂರಿನಲ್ಲಿ ಗುದನಾಳದಲ್ಲಿಟ್ಟು ಸಾಗಿಸುತ್ತಿದ್ದ ಚಿನ್ನ ವಶಕ್ಕೆ

ಮಂಗಳೂರು: ಬೈಂದೂರಿನ ಪ್ರಯಾಣಿಕನೋರ್ವ ಬಹರೈನ್‌ನಿಂದ ಅಕ್ರಮವಾಗಿ ಸಾಗಿಸುತ್ತಿದ್ದ ಚಿನ್ನವನ್ನು ಕಸ್ಟಮ್ಸ್ ಅಧಿಕಾರಿಗಳು ವಶಪಡಿಸಿಕೊಂಡ ಘಟನೆ ಸೋಮವಾರ ಮಂಗಳೂರು ವಿಮಾನ ನಿಲ್ದಾಣದಲ್ಲಿ ನಡೆದಿದೆ.ಪ್ರಯಾಣಿಕನೋರ್ವ 736 ಗ್ರಾಂ ಚಿನ್ನವನ್ನು ಗುದನಾಳದಲ್ಲಿಟ್ಟು ಸಾಗಿಸುತ್ತಿದ್ದ ವೇಳೆ ಅಧಿಕಾರಿಗಳು ಪತ್ತೆ...

ರಾಜ್ಯ ಸರ್ಕಾರ ನಮ್ಮ ಅಧಿಕಾರ ಕಸಿದುಕೊಂಡಿದೆ: ಹೈಕೋರ್ಟ್‌ ಮುಂದೆ ಚುನಾವಣಾ ಆಯೋಗ ಅಳಲು

ಬೆಂಗಳೂರು: ರಾಜ್ಯದ ಜಿಲ್ಲಾ ಪಂಚಾಯತ್‌ ಮತ್ತು ತಾಲೂಕು ಪಂಚಾಯತ್‌ಗಳಿಗೆ ಚುನಾವಣೆ ನಡೆಸಲು ಸಾಧ್ಯವಾಗದ ರೀತಿಯಲ್ಲಿ ರಾಜ್ಯ ಸರ್ಕಾರ ನಮ್ಮ ಅಧಿಕಾರ ಕಸಿದುಕೊಂಡಿದೆ ಎಂದು ರಾಜ್ಯ ಚುನಾವಣಾ ಆಯೋಗವು ಹೈಕೋರ್ಟ್‌ ಮುಂದೆ ತನ್ನ ಅಸಹಾಯಕತೆ...

ಉಡುಪಿ: ಬೈಕ್ ಸ್ಕಿಡ್ ಆಗಿ ಹಿಂಬದಿ ಸವಾರೆ ದಾರುಣ ಸಾವು

ಉಡುಪಿ: ಬೈಕ್ ನಲ್ಲಿ ಹೋಗುವಾಗ ಬೈಕ್ ಸ್ಕಿಡ್ ಆಗಿ ಹಿಂಬದಿ ಸವಾರೆ ಮೃತಪಟ್ಟಂತಹ ಘಟನೆ ಉಡುಪಿ ಜಿಲ್ಲೆಯ ಕುಂದಾಪುರ ತಾಲೂಕಿನ ಬೈಂದೂರಿನ ಕಾಲ್ತೋಡು ಗ್ರಾಮದ ಮುರೂರು ಎಂಬಲ್ಲಿ ನಡದಿದೆ.ಕಾಲ್ತೋಡು ಗ್ರಾಮ ಪಂಚಾಯತ್ ಅಧ್ಯಕ್ಷೆ...