ಶ್ರೀ ಕೃಷ್ಣ ಜನ್ಮಾಷ್ಟಮಿ ಹಿನ್ನೆಲೆಯಲ್ಲಿ ಮಂಗಳೂರಿನ ಕಲ್ಕೂರಾ ಪ್ರತಿಷ್ಠಾನದ ಆಶ್ರಯದಲ್ಲಿ ಕದ್ರಿ ದೇಗುಲ ವಠಾರದಲ್ಲಿ ನಡೆದ 41ನೇ ವರ್ಷದ ರಾಷ್ಟ್ರೀಯ ಮಕ್ಕಳ ಉತ್ಸವ ಕೃಷ್ಣ ವೇಷ ಸ್ಪರ್ಧೆ ಈ ಬಾರಿಯೂ ಸಂಭ್ರಮದಿಂದ ನಡೆದಿದ್ದು, ಶಾರದಾ ವಿದ್ಯಾಲಯದ ಧ್ಯಾನ ಮಂದಿರದಲ್ಲಿ ಬಹುಮಾನ ವಿತರಣೆ ನಡೆಯಿತು.
ಮಂಗಳೂರು: ಶ್ರೀ ಕೃಷ್ಣ ಜನ್ಮಾಷ್ಟಮಿ ಹಿನ್ನೆಲೆಯಲ್ಲಿ ಮಂಗಳೂರಿನ ಕಲ್ಕೂರಾ ಪ್ರತಿಷ್ಠಾನದ ಆಶ್ರಯದಲ್ಲಿ ಕದ್ರಿ ದೇಗುಲ ವಠಾರದಲ್ಲಿ ನಡೆದ 41ನೇ ವರ್ಷದ ರಾಷ್ಟ್ರೀಯ ಮಕ್ಕಳ ಉತ್ಸವ ಕೃಷ್ಣ ವೇಷ ಸ್ಪರ್ಧೆ ಈ ಬಾರಿಯೂ ಸಂಭ್ರಮದಿಂದ ನಡೆದಿದ್ದು, ಶಾರದಾ ವಿದ್ಯಾಲಯದ ಧ್ಯಾನ ಮಂದಿರದಲ್ಲಿ ಬಹುಮಾನ ವಿತರಣೆ ನಡೆಯಿತು.
ಬಹುಮಾನ ವಿತರಣೆ ಜೊತೆಗೆ ಸ್ಪರ್ಧಾ ತೀರ್ಪುಗಾರರು, ಸಹಕರಿಸಿದವರನ್ನು ಕಾರ್ಯಕ್ರಮಕ್ಕೆ ಆಹ್ವಾನಿಸಲಾಗಿತ್ತು.
ಮುಖ್ಯ ಅತಿಥಿಯಾಗಿ ಕಟೀಲು ಕ್ಷೇತ್ರದ ಹಿರಿಯ ಅರ್ಚಕ ಹರಿನಾರಾಯಣ ದಾಸ ಆಸ್ರಣ್ಣ ಉಪಸ್ಥಿತರಿದ್ದರು.
ಈ ವೇಳೆ ಸಂದೇಶ ನೀಡಿದ ಅವರು, ಸನಾತನ ಸಂಸ್ಕೃತಿಯೇ ವಿಭಿನ್ನ.
ಇಲ್ಲಿ ಋಷಿಮುನಿಗಳಿಂದ ಬೆಳೆದು ಬಂದಿರುವುದೇ ನಮ್ಮ ಸಂಸ್ಕೃತಿ, ಒಳ್ಳೆಯ ವಿಚಾರಗಳನ್ನು ನಾವು ನಮ್ಮ ಜೀವನದಲ್ಲಿ ಅಳವಡಿಸಿಕೊಳ್ಳುವುದರಿಂದ ಕೊನೆಗೆ ಮೋಕ್ಷಕ್ಕೆ ದಾರಿಯಾಗುತ್ತದೆ ಎಂದು ನುಡಿದರು.
ರಾಷ್ಟ್ರೀಯ ಮಕ್ಕಳ ಉತ್ಸವದ ರೂವಾರಿ ಪ್ರದೀಪ್ ಕುಮಾರ್ ಕಲ್ಕೂರಾ ತಮ್ಮ ಅನಿಸಿಕೆ ವ್ಯಕ್ತಪಡಿಸಿ, ಏಕಕಾಲದಲ್ಲಿ 8 ವೇದಿಕೆಗಳಲ್ಲಿ ಈ ಸ್ಪರ್ಧೆಯನ್ನು ಆಯೋಜನೆ ಮಾಡಲಾಗಿತ್ತು.
ಇದಕ್ಕೆ ಆಹ್ವಾನ ಪತ್ರಿಕೆಯನ್ನು ಮಾಡಿರಲಿಲ್ಲ. ಆದರೂ ಜನ ಸೇರಿರುವುದನ್ನು ಕಂಡಾಗ ನಮಗೆ ಭಾರೀ ಆನಂದವಾಗಿತ್ತು.
ಹಲವು ವಿಭಾಗಗಳಲ್ಲಿ ನಮ್ಮ ಸ್ಪರ್ಧೆಗೆ ನಿರೀಕ್ಷೆಗೂ ಮೀರಿ ಸ್ಪರ್ಧಾಳುಗಳು ಬಂದಿದ್ದರು ಎಂದು ಹರ್ಷ ವ್ಯಕ್ತಪಡಿಸಿದರು.
ಶಾರದ ಕಾಲೇಜಿನ ಪ್ರಾಂಶುಪಾಲ ದಯಾನಂದ ಕಟೀಲು ಸ್ಪರ್ಧೆಗಳ ಕುರಿತಂತೆ ವಿವರಿಸಿದರು.
ಇದೇ ವೇಳೆ ಸ್ಪರ್ಧಾ ವಿಜೇತರಿಗೆ, ತೀರ್ಪುಗಾರರು, ಸಂಯೋಜಕರು, ನಿರ್ವಹಣೆಗಾರರು, ಸ್ಪರ್ಧೆಯಲ್ಲಿ ಸಹಕರಿಸಿದ ಸರ್ವರನ್ನೂ ಗೌರವಿಸಲಾಯಿತು.
ಕಾರ್ಯಕ್ರಮದಲ್ಲಿ ಸುಧಾಕರ ರಾವ್ ಪೇಜಾವರ, ತಾರಾನಾಥ ಬೋಳಾರ, ಜನಾರ್ದನ ಹಂದೆ, ವಿಜಯ ಲಕ್ಷ್ಮೀ, ತಮ್ಮ ಲಕ್ಷ್ಮಣ, ವಿನಯಾನಂದ, ರವಿ ಅಲೆವೂರಾಯ, ಮಂಜುಳಾ, ಸಂಘಟಕ ಕದ್ರಿ ನವನೀತ ಶೆಟ್ಟಿ ನಿರೂಪಿಸಿದರು.
ಬಂಟ್ವಾಳ: ಬೈಕ್ ಗಳ ನಡುವೆ ಭೀ*ಕರ ಅ*ಪಘಾ*ತ ಸಂಭವಿಸಿ ಬೈಕ್ ನಲ್ಲಿ ಸಹ ಪ್ರಯಾಣಿಕೆಯಾಗಿದ್ದ ಬಾಲಕಿ ಮೃ*ತಪಟ್ಟ ಘಟನೆ ಮಂಗಳೂರು ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ರಾಮಲ್ ಕಟ್ಟೆ ಎಂಬಲ್ಲಿ ನಿನ್ನೆ (ಜ.14) ರಾತ್ರಿ ನಡೆದಿದೆ.
ಕುಕ್ಕಿಪಾಡಿ ಗ್ರಾಮದ ಕೊಡಂಬೆಟ್ಟು ನಿವಾಸಿ ಇಸ್ಮತ್ ಆಯಿಶಾ (13) ಮೃ*ತ ಬಾಲಕಿ ಎಂದು ಗುರುತಿಸಲಾಗಿದೆ.
ಬಾಲಕಿಯ ತಂದೆ ಬೈಕ್ ಚಾಲಕ ಅಬ್ದುಲ್ ರಹಮಾನ್ ಕೂಡ ಗಾ*ಯಗೊಂಡಿದ್ದು ಮಂಗಳೂರು ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ರಾಮಲ್ ಕಟ್ಟೆಯಿಂದ ಹೆದ್ದಾರಿಯಲ್ಲಿ ರಾಂಗ್ ಸೈಡ್ ನಲ್ಲಿ ಬಂದ ನೆತ್ತರಕೆರೆ ನಿವಾಸಿ ರಂಜಿತ್ ಎಂಬಾತ ಬಿ.ಸಿ ರೋಡಿನ ಕಡೆಯಿಂದ ತುಂಬೆ ಕಡೆಗೆ ಸರಿಯಾದ ದಿಕ್ಕಿನಲ್ಲಿ ಬರುತ್ತಿದ್ದ ಬೈಕ್ ಗೆ ಡಿ*ಕ್ಕಿ ಹೊಡೆದಿದ್ದಾನೆ. ರಂಜಿತ್ ಗೆ ಕೂಡ ಗಾ*ಯವಾಗಿದ್ದು, ಆಸ್ಪತ್ರೆಯಲ್ಲಿ ದಾಖಲಾಗಿದ್ದಾನೆ.
ಅ*ಪಘಾ*ತ ನಡೆದ ರಭಸಕ್ಕೆ ಬೈಕ್ ಸಂಪೂರ್ಣ ಜ*ಖಂಗೊಂಡಿದೆ. ಘಟನಾ ಸ್ಥಳಕ್ಕೆ ಪಾಣೆಮಂಗಳೂರು ಟ್ರಾಫಿಕ್ ಎಸ್.ಐ ಸುತೇಶ್ ಭೇಟಿ ನೀಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಮಂಗಳೂರು : ನಗರದ ಜೈಲಿನಲ್ಲಿ ಕೈದಿಗಳು ಜೈಲು ಅಧಿಕಾರಿಗಳ ಕರ್ತವ್ಯಕ್ಕೆ ಅಡ್ಡಿ ಪಡಿಸಿ ಹ*ಲ್ಲೆಗೆ ಯತ್ನಿಸಿದ ಘಟನೆ ನಡೆದಿದ್ದು, ಬರ್ಕೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಮಂಗಳೂರಿನ ಜಿಲ್ಲಾ ಕಾರಾಗೃಹದ ‘ಎ’ ಬ್ಲಾಕ್‌ನ ಸೆಲ್‌ಗಳಲ್ಲಿ ನಿಷೇಧಿತ ವಸ್ತುಗಳಿರುವ ಶಂಕೆಯ ಹಿನ್ನೆಲೆಯಲ್ಲಿ ಸೋಮವಾರ ರಾತ್ರಿ ಜೈಲು ಸಿಬಂದಿ ತಪಾಸಣೆಗೆ ತೆರಳಿದ್ದರು. ಈ ವೇಳೆ ವಿಚಾರಣಾಧೀನ ಕೈದಿಗಳು ಬೆದರಿಕೆಯೊಡ್ಡಿ ಕರ್ತವ್ಯಕ್ಕೆ ಅಡ್ಡಿ ಮಾಡಿದ್ದಾರೆ ಎಂದು ಆರೋಪಿಸಲಾಗಿದೆ.
ಜೈಲಿನಲ್ಲಿ ಮೊಬೈಲ್, ಗಾಂಜಾ ಮೊದಲಾದ ನಿಷೇಧಿತ ವಸ್ತುಗಳಿರುವ ಶಂಕೆಯಿಂದ ಜೈಲು ಅಧೀಕ್ಷಕ ಎಂ.ಎಚ್.ಆಶೇಖಾನ್ ನೇತೃತ್ವದಲ್ಲಿ ತಪಾಸಣೆಗೆ ಮುಂದಾಗಿದ್ದರು. ಆಗ ಪಾತ್ರೆ ಮತ್ತಿತರ ವಸ್ತುಗಳಿಂದ ವಿಚಾರಣಾ ಕೈದಿಗಳು ಹಲ್ಲೆಗೆ ಮುಂದಾಗಿದ್ದಾರೆ. ಅಲ್ಲದೆ ಅ*ವಾಚ್ಯ ಶಬ್ದಗಳಿಂದ ಬೈ*ದು ಬೆದರಿಕೆ ಒಡ್ಡಿ ಕರ್ತವ್ಯಕ್ಕೆ ಅಡ್ಡಿಪಡಿಸಿದ್ದಾರೆ ಎಂದು ಬರ್ಕೆ ಪೊಲೀಸ್ ಠಾಣೆಗೆ ನೀಡಿದ ದೂರಿನಲ್ಲಿ ತಿಳಿಸಲಾಗಿದೆ.
ಮಂಗಳೂರು/ಬೆಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯ ಹಲವೆಡೆ ನಿನ್ನೆ ಸಂಜೆ ಮತ್ತು ರಾತ್ರಿ ಮಳೆಯಾಗಿದ್ದು, ಕೆಲವೆಡೆ ಮಳೆಗಾಲದಂತೆ ಜೋರಾಗಿ ಮಳೆಯಾಗಿದೆ.
ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತದಿಂದಾಗಿ ದಕ್ಷಿಣ ಕನ್ನಡ, ಬೆಂಗಳೂರು ಸೇರಿದಂತೆ ರಾಜ್ಯದ ಹಲವೆಡೆ ಸಾಧಾರಣ ಮಳೆ ಆಗಿದ್ದು, ಇನ್ನೂ ಮುಂದಿನ 2 ದಿನ ಮಳೆಯಾಗಲಿದೆ ಎಂದ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಕೊಮೊರಿನ್ ಪ್ರದೇಶ ಮತ್ತು ನೆರೆಹೊರೆಗಳಲ್ಲಿ ಚಂಡಮಾರುತದ ಪರಿಚಲನೆಯು ಈಗ ಅಗ್ನೇಯ ಅರೇಬಿಯನ್ ಸಮುದ್ರ ಮತ್ತು ಪಕ್ಕದ ಸಮಭಾಜಕ ವೃತ್ತದ ಹಿಂದೂ ಮಹಾಸಾಗರದ ಮೇಲೆ ಸರಾಸರಿ ಸಮುದ್ರ ಮಟ್ಟದಿಂದ 0.9 ಕಿ.ಮೀ. ಎತ್ತರದಲ್ಲಿದೆ. ಇದರಿಂದ ಕೆಲ ಜಿಲ್ಲೆಗಳಲ್ಲಿ ಮಳೆಯಾಗಲಿದೆ ಎಂದು ಇಲಾಖೆ ತಿಳಿಸಿದೆ.
ಯಾವ ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ?
ಹಾಸನ, ಚಾಮರಾಜನಗರ, ಕೊಡಗು, ಮೈಸೂರು, ಚಿಕ್ಕಮಗಳೂರು, ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಗಳ ಕೆಲವೆಡೆ ಮಳೆಯಾಗುವ ಸಾಧ್ಯತೆ ಇದ್ದು, ಇನ್ನು ಉತ್ತರ ಒಳನಾಡಿನ ಪ್ರತ್ಯೇಕ ಸ್ಥಳಗಳಲ್ಲಿ ಮಂಜು ಬೀಳುವ ಸಾಧ್ಯತೆ ಇದೆ. ಜನವರಿ 20 ರವರೆಗೂ ಇದೇ ಹವಾಮಾನ ಮುಂದುವರಿಯಲಿದೆ.
ಮುಂದಿನ 24 ಗಂಟೆಗಳ ಕಾಲ ಬೆಂಗಳೂರು ಹಾಗೂ ನೆರೆಯ ಜಿಲ್ಲೆಗಳಲ್ಲಿ ಭಾಗಶಃ ಮೋಡ ಕವಿದ ವಾತಾವರಣ ಇರಲಿದೆ. ಗರಿಷ್ಠ ಮತ್ತು ಕನಿಷ್ಠ ತಾಪಮಾನ ಕ್ರಮವಾಗಿ 28 ಡಿ.ಸೆ ಮತ್ತು 20 ಡಿ. ಸೆ ಇರುವ ಸಾಧ್ಯತೆ ಇದ್ದು, ನಾಳೆಯೂ ಹೀಗೆ ಇರಲಿದೆ.
ಬೆಂಗಳೂರು ನಗರ ಸೇರಿದಂತೆ ದಕ್ಷಿಣ ಒಳನಾಡಿನ ಕೆಲವು ಜಿಲ್ಲೆಗಳಲ್ಲಿ ಸೋಮವಾರ ಹಗುರ ಮಳೆಯಾಗಿದೆ. ವಿಜಯಪುರದಲ್ಲಿ ಕನಿಷ್ಠ ತಾಪಮಾನ 14.6 ಡಿ. ಸೆ ಹಾಗೂ ಉತ್ತರ ಕನ್ನಡ ಜಿಲ್ಲೆ ಹೊನ್ನಾವರದಲ್ಲಿ ಗರಿಷ್ಠ ತಾಪಮಾನ 32.8 ಡಿ. ಸೆ ದಾಖಲಾಗಿದೆ. ಇನ್ನು ಬೆಂಗಳೂರಿನಲ್ಲಿ ಇನ್ನೆರಡು ದಿನ 20 ಡಿಗ್ರಿ ಸೆಲ್ಸಿಯಸ್ ತಾಪಮಾನ ಮುಂದುವರಿಯುವ ಸಾಧ್ಯತೆ ಇದೆ.