Saturday, August 20, 2022

ರೈತ ಪರ ಹೋರಾಟಗಾರ ಬಿ.ವಿ.ಪೂಜಾರಿ ಪೆರ್ಡೂರು ವಿಧಿವಶ

ಉಡುಪಿ: ಪ್ರಗತಿಪರ ರೈತ, ರೈತರ ಪರವಾಗಿ ಹಲವು ಹೋರಾಟಗಳನ್ನು ನಡೆಸಿದ್ದ, ಭಾರತೀಯ ಕಿಸಾನ್ ಸಂಘದ ಉಡುಪಿ ಜಿಲ್ಲಾ ಅಧ್ಯಕ್ಷರಾಗಿದ್ದ ಬಿ.ವಿ. ಪೂಜಾರಿ ಪೆರ್ಡೂರು ಅವರು ವಯೋಸಹಜ ಅನಾರೋಗ್ಯದಿಂದ ನಿಧನರಾಗಿದ್ದಾರೆ.


ಅವರಿಗೆ 78 ವರ್ಷ ವಯಸ್ಸಾಗಿತ್ತು.ಉಡುಪಿ ಜಿಲ್ಲಾ ಭಾರತೀಯ ಕಿಸಾನ್ ಸಂಘದಲ್ಲಿ ಮೂರು ಅವಧಿಗೆ ಅಧ್ಯಕ್ಷರಾಗಿ ಕಾರ್ಯನಿರ್ವಹಿಸಿದ್ದ ಬಿ.ವಿ.ಪೂಜಾರಿ ಜಿಲ್ಲೆಯಲ್ಲಿ ರೈತರನ್ನು ಸಂಘಟಿಸುವಲ್ಲಿ ಪ್ರಮುಖ ಪಾತ್ರ ವಹಿಸಿದ್ದರು.

ಇದರೊಂದಿಗೆ ಜಿಲ್ಲೆಯ ರೈತರ ಪ್ರಮುಖ ಸಮಸ್ಯೆಗಳಾದ ಕಾಡುಪ್ರಾಣಿಗಳ ಹಾವಳಿ, ವಿದ್ಯುತ್ ಸಮಸ್ಯೆ, ಹಣ್ಣು ಬಿಡುವ ಮರಬೆಳೆಸುವಂತೆ ರೈತರನ್ನು ಪ್ರೇರೇಪಿಸುವುದು, ಜಿಲ್ಲೆಯಲ್ಲಿನ ನೀರಿನ ಸಮಸ್ಯೆ ಮೊದಲಾದವುಗಳ ಬಗ್ಗೆ ಅತೀವ ಕಾಳಜಿಯನ್ನು ಹೊಂದಿ ನಿರಂತರ ಹೋರಾಟಗಳನ್ನು ನಡೆಸಿದ್ದರು.

ಸ್ವತ: ಪ್ರಗತಿಪರ ರೈತರಾಗಿದ್ದ ಇವರು ಕೃಷಿಯಲ್ಲಿ ತಾವು ನಡೆಸಿದ ಪ್ರಯೋಗ ಗಳನ್ನು ಉಳಿದವರಿಗೂ ನಡೆಸಲು ಪ್ರೇರೇಪಿಸುತಿದ್ದರು.

ಜಿಲ್ಲೆಯ ರೈತರು ಎದುರಿಸುವ ಪ್ರಮುಖ ಸಮಸ್ಯೆಯಾದ ಕಾಡುಪ್ರಾಣಿಗಳ ಹಾವಳಿ ಬಗ್ಗೆ ಜೋರಾದ ಧ್ವನಿ ಎತ್ತುತಿದ್ದ ಇವರು ಇವುಗಳ ಪರಿಹಾರಕ್ಕಾಗಿ ನಿರಂತರವಾಗಿ ಪ್ರಯತ್ನ ನಡೆಸುತ್ತಲೇ ಇದ್ದರು.

ಮೃತ ಬಿ.ವಿ.ಪೂಜಾರಿಯವರು ಪತ್ನಿ ಹಾಗೂ ಇಬ್ಬರು ಪುತ್ರರನ್ನು ಅಗಲಿದ್ದಾರೆ.

LEAVE A REPLY

Please enter your comment!
Please enter your name here

Hot Topics

E-Court ಸೇವೆಯಲ್ಲಿ ತಾಂತ್ರಿಕ ವ್ಯತ್ಯಯ: ಲೋಪ ಸರಿಪಡಿಸಲು ಮಂಗಳೂರು ವಕೀಲರ ಸಂಘ ಮನವಿ

ಮಂಗಳೂರು: ಕಳೆದ ಸುಮಾರು 3-4 ವಾರಗಳಿಂದ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಇ-ಕೋರ್ಟ್ ಸೇವೆ ವ್ಯತ್ಯಯ ಉಂಟಾಗಿದೆ. ಈ ಸಮಸ್ಯೆಯಿಂದ ಸಾವಿರಾರು ವಕೀಲರಿಗೆ ಹಾಗೂ ಕಕ್ಷಿದಾರರಿಗೆ ಅಗತ್ಯ ಮಾಹಿತಿಯನ್ನು ಪಡೆದುಕೊಳ್ಳಲು ಅಡ್ಡಿಯಾಗಿದೆ. ಆದ್ದರಿಂದ ಕೇಂದ್ರ...

ಸಿದ್ದರಾಮಯ್ಯಗೆ ಮೊಟ್ಟೆ ಎಸೆತ ಪ್ರಕರಣ: 9 ಮಂದಿಯ ಬಂಧನ

ಕುಶಾಲನಗರ: ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರ ಕಾರಿನ ಮೇಲೆ ಕೋಳಿ ಮೊಟ್ಟೆ ಎಸೆದ ಘಟನೆ ಕುರಿತು ವಶಕ್ಕೆ ತೆಗೆದುಕೊಳ್ಳಲಾದ 9 ಮಂದಿಯ ವಿರುದ್ಧ ಪ್ರಕರಣ ದಾಖಲಿಸಿರುವ ಕುಶಾಲನಗರ ಗ್ರಾಮಾಂತರ ಠಾಣೆ ಪೊಲೀಸರು...

“ಸಾವರ್ಕರ್ ಬಗ್ಗೆ ಹೇಳಿಕೆ ಕೊಡುವಾಗ ಪ್ರತಿಭಟನೆಯನ್ನು ಸಹಿಸುವ ಶಕ್ತಿಯೂ ಇರಬೇಕು”

ಉಡುಪಿ: ಸಾವರ್ಕರ್‌ ಬಗ್ಗೆ ಬೇಕಾ ಬಿಟ್ಟಿ ಹೇಳಿಕೆ ನೀಡುತ್ತಿರುವ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಇಂಧನ ಮತ್ತು ಕನ್ನಡ ಸಂಸ್ಕೃತಿ ಸಚಿವ ಸುನಿಲ್ ಕುಮಾರ್ ಕಿಡಿ ಕಾರಿದ್ದಾರೆ.ಸಿದ್ದರಾಮಯ್ಯ ವಿರುದ್ಧ ಬಿಜೆಪಿ ಕಾರ್ಯಕರ್ತರು ಮಡಿಕೇರಿಯಲ್ಲಿ...