Thursday, September 29, 2022

‘ಜೊತೆಜೊತೆಯಲಿ’ ಸೀರಿಯಲ್‌ನಿಂದ ಹೊರ ನಡೆದ್ರಾ ಆರ್ಯವರ್ಧನ್..!?

ಬೆಂಗಳೂರು: ಜೀ ಕನ್ನಡದಲ್ಲಿ ಪ್ರಸಾರವಾಗುತ್ತಿರುವ ಜೊತೆ ಜೊತೆಯಲಿ ಧಾರಾವಾಹಿಯಲ್ಲಿ ಇದೀಗ ಕೋಲಾಹಲ ಎದ್ದಿದೆ. ಅದರ ನಾಯಕ ಅನಿರುದ್ಧ್ ಹಾಗೂ ಧಾರಾವಾಹಿ ತಂಡದ ನಡುವೆ ಗಲಾಟೆ ನಡೆದಿದ್ದು. ನಟ ಅನಿರುದ್ಧ ಸೀರಿಯಲ್​ನಿಂದ ಹೊರ ನಡೆದಿದ್ದಾರೆ ಸುದ್ದಿ ನಿನ್ನೆಯಿಂದಲೂ ಸಖತ್ ಸದ್ದು ಮಾಡುತ್ತಿದೆ.


ಮತ್ತೊಂದೆಡೆ ಅನಿರುದ್ಧ್ ಅವರೇ ಸೀರಿಯಲ್​ನಿಂದ ಹೊರ ನಡೆಯುತ್ತಿದ್ದಾರೆ ಎಂದು ಸಹ ಹೇಳಲಾಗ್ತಿದೆ. ಎರಡೂ ಕಡೆ ಈ ಕುರಿತು ಸ್ಪಷ್ಟ ಮಾಹಿತಿ ಇಲ್ಲ.

ಧಾರಾವಾಹಿ ತಂಡದ ಸದಸ್ಯರು ಕೂಡಾ ಈ ಕುರಿತು ಯಾವುದೇ ಅಧಿಕೃತ ಮಾಹಿತಿ ನೀಡಿಲ್ಲ. ಆದರೆ, ಅನಿರುದ್ಧ ಈ ಬೆಳವಣಿಗೆ ಕುರಿತು ಮಾತನಾಡಿ ‘ ನಿರ್ದೇಶಕ ಜಗದೀಶ್ ಅಥವಾ ಚಾನಲ್ ಕಡೆಯಿಂದ ನನ್ನ ಮೇಲೆ ಆರೋಪ ಬಂದರೆ ನಾನು ಸ್ಪಷ್ಟೀಕರಣ ಕೊಡಲು ಸಿದ್ಧ. ಅನಿವಾರ್ಯ ಆದರೆ ಪತ್ರಿಕಾಗೋಷ್ಠಿ ಕರೆದು ವಿವರಣೆ ನೀಡುತ್ತೇನೆ’ ಎಂದು ಹೇಳಿದ್ದಾರೆ.


ಜೊತೆ ಜೊತೆಯಲಿ ಧಾರಾವಾಹಿಯಿಂದ ಅನಿರುದ್ಧ್ ಅವರನ್ನು ತೆಗೆದು ಹಾಕಲು ಧಾರಾವಾಹಿ ನಿರ್ಮಾಪಕರೂ ಆಗಿರುವ ಆರೂರು ಜಗದೀಶ್ ನಿರ್ಧರಿಸಿದ್ದಾರೆ ಎನ್ನಲಾಗುತ್ತಿದೆ.


ಅನಿರುದ್ಧ್ ವರ್ತನೆ ವಿರುದ್ಧ ಕನ್ನಡ ಕಿರುತೆರೆ ನಿರ್ಮಾಪಕರ ಸಂಘಕ್ಕೂ ದೂರು ಹೋಗಿದೆ.

ಇದೇ ವಿಚಾರಕ್ಕೆ ಸಂಬಂಧಿಸಿದಂತೆ ಇದೀಗ ಕನ್ನಡ ಕಿರುತೆರೆ ನಿರ್ಮಾಪಕರ ಸಂಘದಲ್ಲಿ ಸಭೆ ನಡೆಯುತ್ತಿದೆ ಅಂತ ಮೂಲಗಳು ತಿಳಿಸಿವೆ.

LEAVE A REPLY

Please enter your comment!
Please enter your name here

Hot Topics

ಪುತ್ತೂರಿನಲ್ಲಿ ಜಾಗದ ತಕರಾರು: V.A ಕಚೇರಿಗೆ ನುಗ್ಗಿ ದಾಂಧಲೆ-ಮಾರಕಾಸ್ತ್ರಗಳಿಂದ ಹತ್ಯೆ ಯತ್ನ

ಪುತ್ತೂರು: ಜಾಗದ ತಕರಾರಿಗೆ ಸಂಬಂಧಪಟ್ಟಂತೆ ವ್ಯಕ್ತಿಯೊಬ್ಬ ಸವಣೂರು ಕಂದಾಯ ಕಛೇರಿಗೆ ನುಗ್ಗಿ ತಲವಾರಿನಿಂದ ಹಲ್ಲೆಗೆ ಮುಂದಾಗಿ, ಕಲ್ಲು ಎತ್ತುಹಾಕಿ ಕೊಲೆಗೆ ಯತ್ನಿಸಿದ ಘಟನೆ ಪುತ್ತೂರಿನ ಸವಣೂರು ಜಂಕ್ಷನ್ ನಲ್ಲಿ ಇಂದು ನಡೆದಿದೆ.ಸವಣೂರು ಗ್ರಾಮದ...

ಪುತ್ತೂರು: PFI ಪ್ರಧಾನ ಕಛೇರಿಗೆ ಬೆಳಿಗ್ಗೆಯಿಂದಲೇ ಬೀಗ-ಗುಪ್ತಸಭೆ ನಡೆಸುತ್ತಿದ್ದ ಆರೋಪ

ಪುತ್ತೂರು: ದೇಶದಾದ್ಯಂತ ಪಿಎಫ್ಐ ಹಾಗೂ ಅದರ ಬೆಂಬಲಿತ ಸಂಘಟನೆಗಳಿಗೆ ಕೇಂದ್ರ ಗೃಹ ಸಚಿವಾಲಯ ನಿಷೇಧ ಹೇರಿರುವ ಮಧ್ಯೆ ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ನಗರದ ಹೃದಯ ಭಾಗದಲ್ಲಿ ಕಾರ್ಯಾಚರಿಸುತ್ತಿರುವ ಪಿಎಫ್ಐ ನ ಪ್ರಧಾನ...

ಕೇರಳದಲ್ಲಿ ಸಿನಿಮಾ ಪ್ರಚಾರಕ್ಕೆ ತೆರಳಿದ ನಟಿಯರ ಮೇಲೆ ಅಭಿಮಾನಿಯಿಂದ ಲೈಂಗಿಕ ದೌರ್ಜನ್ಯ : ನಟಿಯಿಂದ ಅಭಿಮಾನಿಗೆ ದಂಡಂ ದಶಗುಣಂ..!

ಅಭಿಮಾನಿಯೋರ್ವ ನಟಿಯನ್ನು ಎಳೆದುಕೊಂಡು ಖಾಸಗಿ ಭಾಗಗಳನ್ನು ಮುಟ್ಟಿದ್ದಾನೆ. ಈ ಬಗ್ಗೆ ನಟಿಯರು ಸೋಶಿಯಲ್ ಮೀಡಿಯಾದಲ್ಲಿ ಬರೆದುಕೊಂಡಿದ್ದು ಮುಟ್ಟಬಾರದ ಜಾಗಗಳಿಗೆ ಕೈ ಹಾಕಿದ್ದಾರೆ ಎಂದು ಆರೋಪಿಸಿದ್ದಾರೆ. ಕೋಯಿಕ್ಕೋಡ್ : ಸಿನಿಮಾ ಪ್ರಚಾರಕ್ಕೆ ತೆರಳಿದ ಮಲಯಾಳಂ ನಟಿಯರ...