Connect with us

LATEST NEWS

ಬಾಡಿಗೆ ಮನೆಯಲ್ಲಿ ವೇಶ್ಯಾವಾಟಿಕೆ ನಡೆಯುತ್ತಿರುವುದು ಮನೆಯ ಮಾಲೀಕನಿಗೆ ಗೊತ್ತಿಲ್ಲದಿದ್ದರೆ ಆತನ ವಿರುದ್ಧ ಕೇಸ್‌ ದಾಖಲಿಸುವಂತಿಲ್ಲ: ಹೈಕೋರ್ಟ್‌

Published

on

ಬೆಂಗಳೂರು: ಬಾಡಿಗೆಗೆ ಕೊಟ್ಟಿರುವ ಮನೆಯಲ್ಲಿ ವೇಶ್ಯಾವಾಟಿಕೆ ನಡೆಯುತ್ತಿರುವುದು ಮನೆಯ ಮಾಲೀಕನಿಗೆ ಗೊತ್ತಿಲ್ಲದಿದ್ದರೆ ಆತನ ವಿರುದ್ಧ ಪ್ರಕರಣ ದಾಖಲಿಸುವಂತಿಲ್ಲ ಎಂದು ಹೈಕೋರ್ಟ್ ತೀರ್ಪು ನೀಡಿದೆ.


ಈ ಕುರಿತಂತೆ ತಮ್ಮ ವಿರುದ್ಧ ಚಂದ್ರಲೇಔಟ್ ಠಾಣೆ ಪೊಲೀಸರು ದಾಖಲಿಸಿರುವ ಎಫ್‌ಐಆರ್ ಹಾಗೂ ವಿಚಾರಣಾ ನ್ಯಾಯಾಲಯದ ಪ್ರಕ್ರಿಯೆ ರದ್ದುಪಡಿಸುವಂತೆ ಕೋರಿ ಬೆಂಗಳೂರಿನ ಪ್ರಭುರಾಜ್ ಎಂಬುವರು ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ನ್ಯಾ. ಎಂ.ನಾಗಪ್ರಸನ್ನ ಅವರಿದ್ದ ಪೀಠ ಈ ತೀರ್ಪು ಪ್ರಕಟಿಸಿದೆ.
ಪೀಠ ತನ್ನ ತೀರ್ಪಿನಲ್ಲಿ, ಮಾನವ ಕಳ್ಳಸಾಗಣೆ ತಡೆ ಕಾಯ್ದೆಯ ಸೆಕ್ಷನ್ 3(2)(ಬಿ) ಅನುಸಾರರ ಮನೆ ಅಥವಾ ಜಾಗದ ಮಾಲಿಕನಿಗೆ ಅಲ್ಲಿ ಏನು ನಡೆಯುತ್ತಿದೆ ಎಂಬುದರ ಕುರಿತು ಮಾಹಿತಿ ಇದ್ದಾಗ ಮಾತ್ರ ಆತನ ವಿರುದ್ಧ ಪ್ರಕರಣ ದಾಖಲಿಸಬಹುದು.

ಈ ಪ್ರಕರಣದಲ್ಲಿ ಅರ್ಜಿದಾರರಿಗೆ ತಮ್ಮ ಒಡೆತನದ ಜಾಗದಲ್ಲಿ ವೇಶ್ಯಾವಾಟಿಕೆ ನಡೆಯುತ್ತಿದ್ದ ಬಗ್ಗೆ ಮಾಹಿತಿ ಇಲ್ಲ. ದೋಷಾರೋಪಣೆಯಲ್ಲೂ ಪೊಲೀಸರು ಈ ಅಂಶ ಉಲ್ಲೇಖಿಸಿದ್ದಾರೆ. ಹೀಗಾಗಿ, ಅರ್ಜಿದಾರರ ವಿರುದ್ಧ ಕ್ರಮ ಜರುಗಿಸಲಾಗದು ಎಂದು ಅಭಿಪ್ರಾಯಪಟ್ಟಿದೆ.

ಅರ್ಜಿದಾರರಾದ ಪ್ರಭುರಾಜ್ ನಾಗರಭಾವಿಯ ತಮ್ಮ ಮನೆಯನ್ನು 2019ರ ಡಿಸೆಂಬರ್‌ 11ರಂದು ವ್ಯಕ್ತಿಯೊಬ್ಬರಿಗೆ (ಪ್ರಕರಣದ ಮೊದಲ ಆರೋಪಿ) ಬಾಡಿಗೆಗೆ ನೀಡಿದ್ದರು. 2020ರ ಜನವರಿ 25ರಂದು ಚಂದ್ರಲೇಔಟ್ ಠಾಣೆ ಪೊಲೀಸರು ಮನೆ ಮೇಲೆ ದಾಳಿ ನಡೆಸಿ,

ವೇಶ್ಯಾವಾಟಿಕೆ ನಡೆಸುತ್ತಿರುವ ಕುರಿತಂತೆ ಎಫ್ಐಆರ್ ದಾಖಲಿಸಿದ್ದರು. ಈ ವೇಳೆ ಮನೆ ಬಾಡಿಗೆಗೆ ಪಡೆದಿದ್ದ ವ್ಯಕ್ತಿ ಜತೆ ಮನೆ ಮಾಲೀಕರ ವಿರುದ್ಧವೂ ಮಾನವ ಕಳ್ಳ ಸಾಗಣೆ ತಡೆ ಕಾಯ್ದೆಯಡಿ ಎಫ್‌ಐಆರ್ ದಾಖಲಿಸಿದ್ದರು.

ತನಿಖೆ ವೇಳೆ ಮನೆ ಮಾಲಿಕರು, ಬಾಡಿಗೆದಾರ ವ್ಯಕ್ತಿ ವೇಶ್ಯವಾಟಿಕೆ ನಡೆಸುತ್ತಿದ್ದ ಬಗ್ಗೆ ಯಾವುದೇ ಮಾಹಿತಿ ಇರಲಿಲ್ಲ ಎಂದು ಸ್ಪಷ್ಟಪಡಿಸಿದ್ದರೂ,

ಪೊಲೀಸರು ದೋಷಾರೋಪಣೆಯಲ್ಲಿ ಮನೆ ಮಾಲಿಕರನ್ನೂ ಆರೋಪಿಯಾಗಿಸಿದ್ದರು. ಈ ಹಿನ್ನೆಲೆಯಲ್ಲಿ ಪ್ರಭುರಾಜ್ ಪ್ರಕರಣದಲ್ಲಿ ತಮ್ಮನ್ನು ಕೈಬಿಡುವಂತೆ ಕೋರಿ ಹೈಕೋರ್ಟ್ ಮೆಟ್ಟಿಲೇರಿದ್ದರು.

DAKSHINA KANNADA

ಪತ್ನಿ ಮಗಳೊಂದಿಗೆ ಸರತಿ ಸಾಲಿನಲ್ಲಿ ನಿಂತು ಮತ ಚಲಾಯಿಸಿದ ಪದ್ಮರಾಜ್ ಪೂಜಾರಿ

Published

on

ಮಂಗಳೂರು: ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಪೂಜಾರಿ ಮಂಗಳೂರಿನಲ್ಲಿ ತಮ್ಮ ಮತ ಚಲಾಯಿಸಿದ್ದಾರೆ. ಮಂಗಳೂರಿನ ಕಪಿತಾನಿಯೋ ಶಾಲೆಯ ಮತಗಟ್ಟೆಗೆ ತನ್ನ ಪತ್ನಿ ಹಾಗೂ ಮಗಳ ಜೊತೆ ಆಗಮಿಸಿ ಮತ ಚಲಾಯಿಸಿದ್ದಾರೆ.

ಮುಂಜಾನೆ ಏಳುಗಂಟೆಗೆ ಮತಗಟ್ಟೆಗೆ ಆಗಮಿಸಿದ ಪದ್ಮರಾಜ್ ಅವರು ಬರುವ ವೇಳೆಗೆ ಜನರು ಮತದಾನಕ್ಕೆ ಸರತಿ ಸಾಲಿನಲ್ಲಿ ನಿಂತಿದ್ದರು. ಹೀಗಾಗಿ ಪದ್ಮರಾಜ್ ಹಾಗೂ ಅವರ ಪತ್ನಿ ಮತ್ತು ಮಗಳು ಸರತಿ ಸಾಲಿನಲ್ಲಿ ನಿಂತೇ ಮತ ಚಲಾಯಿಸಿದ್ದಾರೆ. ಪದ್ಮರಾಜ್ ಆಗಮಿಸುವ ವೇಳೆ ಅವರ ಸಾಕಷ್ಟು ಅಭಿಮಾನಿಗಳು ಮತಗಟ್ಟೆಯ  ಹೊರಗೆ ನಿಂತು ಅವರಿಗೆ ಶುಭ ಕೋರಿದ್ದಾರೆ.

ಮತದಾನ ಮಾಡಿದ ಪದ್ಮರಾಜ್ ಬಳಿಕ ಕ್ಷೇತ್ರದಲ್ಲಿ ಮತದಾನ ಪ್ರಕ್ರಿಯೆ ವೀಕ್ಷಣೆಗೆ ತೆರಳಿದ್ದಾರೆ.

Continue Reading

DAKSHINA KANNADA

ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ

Published

on

ಬೆಂಗಳೂರು: ರಾಜ್ಯದ 14 ಲೋಕಸಭಾ ಕ್ಷೇತ್ರಗಳ ಮೊದಲನೇ ಹಂತದ ಮತದಾನ ಇಂದು ಬೆಳಗ್ಗೆ 7 ಗಂಟೆಯಿಂದಲೇ ಆರಂಭಗೊಂಡಿದೆ.

ಲೋಕಸಭಾ ಚುನಾವಣೆಯ ಎರಡನೇ ಹಂತದ ಮತದಾನ ಇದಾಗಿದ್ದು, ಕರ್ನಾಟಕದಲ್ಲಿ ಇಂದು ಮೊದಲ ಹಂತದ ಮತದಾನವಾಗಿದೆ. ಮತದಾರರು ತಮ್ಮ ತಮ್ಮ ಮತ ಕ್ಷೇತ್ರಗಳಲ್ಲಿ ಬೆಳಿಗ್ಗೆಯಿಂದಲೇ ಸರತಿ ಸಾಲಿನಲ್ಲಿ ನಿಂತು ಶಾಂತಿಯುತವಾಗಿ ಮತದಾನ ಮಾಡುತ್ತಿದ್ದಾರೆ.

ಅದರಂತೆ ಬೆಂಗಳೂರು ಉತ್ತರ, ಬೆಂಗಳೂರು ದಕ್ಷಿಣ, ಬೆಂಗಳೂರು ಸೆಂಟ್ರಲ್, ಬೆಂಗಳೂರು ಗ್ರಾಮಾಂತರ, ಮೈಸೂರು-ಕೊಡಗು, ಚಾಮರಾಜನಗರ, ಮಂಡ್ಯ, ತುಮಕೂರು, ಕೋಲಾರ, ಹಾಸನ, ಉಡುಪಿ-ಚಿಕ್ಕಮಗಳೂರು, ಚಿಕ್ಕಬಳ್ಳಾಪುರ, ದಕ್ಷಿಣ ಕನ್ನಡ, ಚಿತ್ರದುರ್ಗ ಕ್ಷೇತ್ರಗಳಲ್ಲಿ ಬೆಳಿಗ್ಗೆಯಿಂದಲೇ ಮತದಾನ ಆರಂಭವಾಗಿದ್ದು ಸಂಜೆ 6 ಗಂಟೆಯವರೆಗೆ ಮತದಾನ ಪ್ರಕ್ರಿಯೆ ನಡೆಯಲಿದೆ.

Continue Reading

DAKSHINA KANNADA

ನರ್ಸ್‌ಗೆ ಶಾಕ್ ನೀಡಿದ ಅಂಬ್ಯುಲೆನ್ಸ್‌..! ಇದು ಮನಕಲಕುವ ಘಟನೆ..!

Published

on

ನಿರಂಜಿನಿ… ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನ ಕೆವಿಜಿ ಮೆಡಿಕಲ್ ಕಾಲೇಜಿನಲ್ಲಿರೋ ಆಸ್ಪತ್ರೆಯ ತುರ್ತು ಸೇವಾ ವಿಭಾಗದಲ್ಲಿ ಕೆಲಸ ಮಾಡುತ್ತಿರುವ ಯುವತಿ. ಮುಂಜಾನೆ ಆಸ್ಪತ್ರೆಗೆ ಬಂದ್ರೆ ಡ್ಯೂಟಿ ಮುಗಿಸಿ ಮತ್ತೆ ಮನೆಗೆ ವಾಪಾಸಾಗೋದು ಸಂಜೆಯ ವೇಳೆಗೆ. ಆಸ್ಪತ್ರೆಯಲ್ಲಿರೋ ಆಕೆಗೆ ಸಾವು ನೋವು ಎಲ್ಲವನ್ನೂ ನೋಡಿ ಅಭ್ಯಾಸ ಆಗಿದೆ. ಆದ್ರೆ ಇಂದು ಮಾತ್ರ ಅಂಬ್ಯುಲೆನ್ಸ್‌ನಲ್ಲಿ ಬಂದಿರೋ ಮೃತ ದೇಹ ನೋಡಿ ಆಕೆಯ ಆಕ್ರಂದನ ಮುಗಿಲು ಮುಟ್ಟಿದೆ. ಆಕೆಯ ಆಕ್ರಂದನ ನೋಡಿ ಶಾಕ್ ಆದ ಇತರ ಸಿಬ್ಬಂದಿ ವಿಚಾರ ತಿಳಿದ ಬಳಿಕ ತಾವೂ ಕಂಬನಿ ಮಿಡಿದಿದ್ದಾರೆ.

ಇಂದು ನಿರಂಜಿನಿ ಆಸ್ಪತ್ರೆಗೆ ಬಂದು ತುರ್ತು ಚಿಕಿತ್ಸಾ ವಿಭಾಗದಲ್ಲಿ ಡ್ಯೂಟಿಯಲ್ಲಿದ್ದ ವೇಳೆ ಅಂಬ್ಯುಲೆನ್ಸ್ ಒಂದು ವೇಗವಾಗಿ ಬಂದು ಗಂಭೀರವಾಗಿದ್ದ ಇಬ್ಬರನ್ನು ತುರ್ತು ಚಿಕಿತ್ಸಾ ವಿಭಾಗಕ್ಕೆ ಶಿಫ್ಟ್‌ ಮಾಡಿದೆ. ದೇಹ ಜರ್ಜರಿತವಾಗಿದ್ದ ಒಂದು ದೇಹವನ್ನು ಅಂಬ್ಯುಲೆನ್ಸ್‌ನಿಂದ ಇಳಿಸಿದಾಗ ಅದಾಗಲೇ ಆ ವ್ಯಕ್ತಿಯ ಪ್ರಾಣ ಪಕ್ಷಿ ಹಾರಿ ಹೋಗಿತ್ತು. ಮತ್ತೊಂದು ಮಹಿಳೆಯೂ ಗಂಭೀರವಾಗಿದ್ದು ತಕ್ಷಣ ಅವರನ್ನು ತುರ್ತು ಚಿಕಿತ್ಸೆಗೆ ದಾಖಲಿಸಲಾಗಿತ್ತು. ಈ ವೇಳೆ ಮೃತ ದೇಹವನ್ನು ನೋಡಿದ ನಿರಂಜನಿ ಇದ್ದಕ್ಕಿದ್ದಂತೆ ಜೋರಾಗಿ ಅಳಲು ಆರಂಭಿಸಿದ್ದಾಳೆ. ಆಕೆಯ ಅಳುವಿಗೆ ಕಾರಣವಾಗಿದ್ದು ಅಲ್ಲಿದ್ದ ಮೃತ ದೇಹ ಆಕೆಯ ತಂದೆಯದೇ ಆಗಿದ್ದು.

ಮುಂಜಾನೆ ತಂದೆ ತಾಯಿ ಇಬ್ಬರೂ ಅಜ್ಜಾವರ ಗ್ರಾಮದಲ್ಲಿನ ಕೆಎಫ್‌ಡಿಸಿಗೆ ಕೆಲಸಕ್ಕೆ ಹೋಗಿ ವಾಪಾಸಾಗುವಾಗ ಜೀಪ್ ಒಂದು ಇವರ ಬೈಕ್‌ಗೆ ಡಿಕ್ಕಿ ಹೊಡೆದಿದೆ.  ಜೀಪ್ ಅಡಿಗೆ ಬಿದ್ದಿದ್ದ ತಂದೆ ವಿನಾಯಕ ಮೂರ್ತಿ ಮೃ*ತ ಪಟ್ಟಿದ್ದರೆ, ತಾಯಿ ಮಂಜುಳ ಕೂಡಾ ಗಂಭೀರವಾಗಿ ಗಾಯಗೊಂಡಿದ್ದಾರೆ. ಆದ್ರೆ ಇದ್ಯಾವುದು ವಿಚಾರ ಗೊತ್ತಿಲ್ಲದ ನಿರಂಜಿನಿ ಎಂದಿನಂತೆ ಇದೂ ಒಂದು ಅಕ್ಸಿಡೆಂಟ್ ಕೇಸ್ ಅಂತ ಅಟೆಂಡ್ ಮಾಡಲು ಹೋಗಿದ್ದಾಳೆ. ಅಂಬ್ಯುಲೆನ್ಸ್‌ನಲ್ಲಿ ತಂದೆಯ ಮೃತ ದೇಹ ಹಾಗೂ ಪ್ರಜ್ಞಾ ಹೀನ ಸ್ಥಿತಿಯಲ್ಲಿ ತಾಯಿಯನ್ನ ನೋಡಿದ್ರೆ ಮಗಳ ಪರಿಸ್ಥಿತಿ ಹೇಗಿರಬಹುದು ಅನ್ನೋದು ಊಹಿಸಲೂ ಅಸಾದ್ಯ. ತಾಯಿ ಮಂಜುಳ ಪರಿಸ್ಥಿತಿ ಕೂಡಾ ಗಂಭೀರವಾಗಿದ್ದು, ಬೆನ್ನು ಮೂಳೆಗೆ ಗಾಯವಾದ ಮಾಹಿತಿ ಇದೆ. ಹೀಗಾಗಿ ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರು ಆಸ್ಪತ್ರೆಗೆ ದಾಖಲಿಸಲಾಗಿದೆ.

Continue Reading

LATEST NEWS

Trending