Wednesday, May 31, 2023

ಒಳ‌ಮೀಸಲಾತಿ ಕಡಿತ ಖಂಡಿಸಿ ಪ್ರತಿಭಟನೆ: ಯಡಿಯೂರಪ್ಪರ ನಿವಾಸಕ್ಕೆ ಮುತ್ತಿಗೆ ಯತ್ನ, ಕಲ್ಲು ತೂರಾಟ..!

ಒಳ‌ ಮೀಸಲಾತಿ ಕಡಿತ ಖಂಡಿಸಿ ಶಿವಮೊಗ್ಗ ಜಿಲ್ಲೆಯ ಶಿಕಾರಿಪುರದಲ್ಲಿ ನಡೆಯುತ್ತಿರುವ ಪ್ರತಿಭಟನೆ ತೀವ್ರ ಸ್ವರೂಪ ಪಡೆದಿದೆ. ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪರ ನಿವಾಸಕ್ಕೆ ಮುತ್ತಿಗೆ ಹಾಕಲು ಯತ್ನಿಸಿದ ಪ್ರತಿಭಟನಾಕಾರರು ಮನೆಗೆ ಕಲ್ಲು ತೂರಾಟ ನಡೆಸಿದ್ದಾರೆ.

ಶಿವಮೊಗ್ಗ : ಒಳ‌ ಮೀಸಲಾತಿ ಕಡಿತ ಖಂಡಿಸಿ ಶಿವಮೊಗ್ಗ ಜಿಲ್ಲೆಯ ಶಿಕಾರಿಪುರದಲ್ಲಿ ನಡೆಯುತ್ತಿರುವ ಪ್ರತಿಭಟನೆ ತೀವ್ರ ಸ್ವರೂಪ ಪಡೆದಿದೆ. ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪರ ನಿವಾಸಕ್ಕೆ ಮುತ್ತಿಗೆ ಹಾಕಲು ಯತ್ನಿಸಿದ ಪ್ರತಿಭಟನಾಕಾರರು ಮನೆಗೆ ಕಲ್ಲು ತೂರಾಟ ನಡೆಸಿದ್ದಾರೆ.

ಒಳಮೀಸಲಾತಿ ಜಾರಿಗೆ ಬಂಜಾರ ಸಮುದಾಯದಿಂದ ತೀವ್ರ ವಿರೋಧ ವ್ಯಕ್ತ ಹಿನ್ನೆಲೆ ಜಿಲ್ಲೆಯ ಶಿಕಾರಿಪುರ ಪಟ್ಟಣದಲ್ಲಿರುವ ಮಾಜಿ ಸಿಎಂ ಯಡಿಯೂರಪ್ಪ ಅವರ ಮೈತ್ರಿ ನಿವಾಸದ ಮೇಲೆ ಕಲ್ಲು ತೂರಿ ಆಕ್ರೋಶ ವ್ಯಕ್ತಪಡಿಸಲಾಗಿದೆ.

ಪ್ರತಿಭಟನಾಕಾರರು ಯಡಿಯೂರಪ್ಪ ಮನೆಯ ಕಿಟಕಿ ಗಾಜು ಒಡೆದು ಹಾಕಿದ್ದಾರೆ. ಪ್ರತಿಭಟನಾಕಾರರು ಮತ್ತು ಪೊಲೀಸರ ನಡುವೆ ವಾಗ್ವಾದ, ತಳ್ಳಾಟ ನೂಕಾಟ ಉಂಟಾಗಿದ್ದು, ಪ್ರತಿಭಟನಾಕಾರರು ಪೊಲೀಸರ ಮೇಲೆಯೇ ಚಪ್ಪಲಿ, ಕಲ್ಲು ತೂರಿದ್ದಾರೆ.

ಘಟನೆಯಲ್ಲಿ ಕೆಲವು ಪೊಲೀಸ್​ ಸಿಬ್ಬಂದಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಸ್ಥಳೀಯ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗಿದೆ.

ಉದ್ರಿಕ್ತರನ್ನು ನಿಯಂತ್ರಿಸಲು ಪೊಲೀಸರಿಂದ ಲಘು ಲಾಠಿ ಪ್ರಹಾರ ಮಾಡಲಾಗಿದೆ. ಶಿಕಾರಿಪುರ ತಾಲೂಕು ಕಚೇರಿ ಎದುರು ಪ್ರತಿಭಟನೆ ಮುಂದುವರೆದಿದೆ. ಸ್ಥಳಕ್ಕೆ ಹೆಚ್ಚುವರಿ ಪೊಲೀಸ್ ಅಧಿಕಾರಿ, ಸಿಬ್ಬಂದಿಗಳ ರವಾನೆ ಮಾಡಲಾಗಿದೆ.

ಪ್ರತಿಭಟನಾಕಾರರು ಅಂಬೇಡ್ಕರ್ ಸರ್ಕಲ್‌ನಿಂದ ತಾಲೂಕು ಕಚೇರಿಯವರೆಗೆ ಪ್ರತಿಭಟನಾ ಮೆರವಣಿಗೆ ನಡೆಸಿದರು.

ಶಿಕಾರಿಪುರದಲ್ಲಿ ಕೆಲವರು ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ಮನೆಗೆ ಮುತ್ತಿಗೆ ಹಾಕಲು ಯತ್ನಿಸಿದರು‌.
ಈ ವೇಳೆ ಯಡಿಯೂರಪ್ಪ ಅವರ ಮನೆಯತ್ತ ಕಲ್ಲು ತೂರಾಟ ಮಾಡಲಾಗಿದೆ. ಕಲ್ಲು ತೂರಾಟದಿಂದ ಮನೆಯ ಕಿಟಕಿ ಗಾಜಿಗೆ ಹಾನಿಯಾಗಿದೆ. ಪೊಲೀಸರತ್ತಲೂ ಕಲ್ಲು ತೂರಾಟ ಮಾಡಲಾಗಿದೆ.

ಪ್ರತಿಭಟನಾಕಾರರನ್ನು ನಿಯಂತ್ರಿಸಲು ಪೊಲೀಸರು ಲಘು ಲಾಠಿ ಪ್ರಹಾರ ನಡೆಸಿದರು‌.ಘಟನೆಯಲ್ಲಿ ಪ್ರತಿಭಟನಾಕಾರರು ಮತ್ತು ಕೆಲವು ಪೊಲೀಸರು ಗಾಯಗೊಂಡಿದ್ದಾರೆ ಎಂದು ತಿಳಿದು ಬಂದಿದೆ.

LEAVE A REPLY

Please enter your comment!
Please enter your name here

Hot Topics